Bible

1 Peter 2 - YLT (Kannada)

1 Having put aside, then, all evil, and all guile, and hypocrisies, and envyings, and all evil speakings,ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ.

2 as new-born babes the word's pure milk desire ye, that in it ye may grow,ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ.

3 if so be ye did taste that the Lord `is' gracious,ಕರ್ತನು ಕೃಪಾಳುವೆಂದು ನೀವು ರುಚಿ ನೋಡಿದ್ದೀರಲ್ಲಾ.

4 to whom coming -- a living stone -- by men, indeed, having been disapproved of, but with God choice, precious,ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು.

5 and ye yourselves, as living stones, are built up, a spiritual house, a holy priesthood, to offer up spiritual sacrifices acceptable to God through Jesus Christ.ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.

6 Wherefore, also, it is contained in the Writing: `Lo, I lay in Zion a chief corner-stone, choice, precious, and he who is believing on him may not be put to shame;'ಇದಲ್ಲದೆ--ಇಗೋ, ಚೀಯೋನಿನಲ್ಲಿ ಮೂಲೆ ಗಲ್ಲನ್ನು ಇಡುತ್ತೇನೆ; ಅದು ಆಯಲ್ಪಟ್ಟದ್ದು, ಅಮೂಲ್ಯ ವಾದದ್ದು; ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗ ಪಡುವದೇ ಇಲ್ಲ ಎಂದು ಬರಹದಲ್ಲಿ ಇರುತ್ತದೆ.

7 to you, then, who are believing `is' the preciousness; and to the unbelieving, a stone that the builders disapproved of, this one did become for the head of a corner,ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.

8 and a stone of stumbling and a rock of offence -- who are stumbling at the word, being unbelieving, -- to which also they were set;ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.

9 and ye `are' a choice race, a royal priesthood, a holy nation, a people acquired, that the excellences ye may shew forth of Him who out of darkness did call you to His wondrous light;ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.

10 who `were' once not a people, and `are' now the people of God; who had not found kindness, and now have found kindness.ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ.

11 Beloved, I call upon `you', as strangers and sojourners, to keep from the fleshly desires, that war against the soul,ಅತಿ ಪ್ರಿಯರೇ, ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

12 having your behaviour among the nations right, that in that which they speak against you as evil-doers, of the good works having beheld, they may glorify God in a day of inspection.ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.

13 Be subject, then, to every human creation, because of the Lord, whether to a king, as the highest,ಮನುಷ್ಯನ ಪ್ರತಿಯೊಂದು ಕಟ್ಟಳೆಗೂ ಕರ್ತನ ನಿಮಿತ್ತ ನೀವು ಅಧೀನರಾಗಿರ್ರಿ. ಅರಸನು ಸರ್ವಾಧಿಕಾರಿ ಎಂತಲೂ

14 whether to governors, as to those sent through him, for punishment, indeed, of evil-doers, and a praise of those doing good;ಅಧಿಪತಿಗಳು ಕೆಟ್ಟವರನ್ನು ದಂಡಿಸು ವದಕ್ಕೂ ಒಳ್ಳೆಯವರನ್ನು ಪ್ರೋತ್ಸಾಹಪಡಿಸುವದಕ್ಕೂ (ಅರಸನಿಂದ) ಅವರು ಕಳುಹಿಸಲ್ಪಟ್ಟವರೆಂತಲೂ ತಿಳಿದು ಅವರಿಗೆ ಅಧೀನರಾಗಿರ್ರಿ.

15 because, so is the will of God, doing good, to put to silence the ignorance of the foolish men;ನೀವು ಒಳ್ಳೇ ನಡತೆಯಿಂದ ತಿಳುವಳಿಕೆಯಿಲ್ಲದ ಮೂಢಜನರ ಬಾಯಿ ಮುಚ್ಚುವಂತೆ ಮಾಡುವದೇ ದೇವರ ಚಿತ್ತ.

16 as free, and not having the freedom as the cloak of the evil, but as servants of God;ಸ್ವತಂತ್ರರಾಗಿರ್ರಿ; ಆದರೆ ಕೆಟ್ಟತನವನ್ನು ಮರೆಮಾಡು ವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ; ನೀವು ದೇವರ ದಾಸರಾಗಿದ್ದೀರಿ.

17 to all give ye honour; the brotherhood love ye; God fear ye; the king honour ye.ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.

18 The domestics! be subjecting yourselves in all fear to the masters, not only to the good and gentle, but also to the cross;ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಭಯದಿಂದ ಅಧೀನ ರಾಗಿರ್ರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯ ರಾಗಿರ್ರಿ.

19 for this `is' gracious, if because of conscience toward God any one doth endure sorrows, suffering unrighteously;ಒಬ್ಬನು ಅನ್ಯಾಯವಾಗಿ ಬಾಧೆಪಡುವವ ನಾಗಿದ್ದು ದೇವರ ವಿಷಯವಾದ ಮನಸ್ಸಾಕ್ಷಿಗೋಸ್ಕರ ಆ ದುಃಖವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ.

20 for what renown `is it', if sinning and being buffeted, ye do endure `it'? but if, doing good and suffering `for it', ye do endure, this `is' gracious with God,ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆ ಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೇ ದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿ ದ್ದರೆ ಇದು ದೇವರಿಗೆ ಅಂಗೀಕೃತವಾಗಿದೆ.

21 for to this ye were called, because Christ also did suffer for you, leaving to you an example, that ye may follow his steps,ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು.

22 who did not commit sin, nor was guile found in his mouth,ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.

23 who being reviled -- was not reviling again, suffering -- was not threatening, and was committing himself to Him who is judging righteously,ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.

24 who our sins himself did bear in his body, upon the tree, that to the sins having died, to the righteousness we may live; by whose stripes ye were healed,ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.

25 for ye were as sheep going astray, but ye turned back now to the shepherd and overseer of your souls.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.

Kannada Bible