1 Peter 3:5
ಪೂರ್ವಕಾಲದಲ್ಲಿ ದೇವರ ಮೇಲೆ ನಂಬಿಕೆಯಿಟ್ಟ ಪರಿಶುದ್ಧ ಸ್ತ್ರೀಯರು ಸಹ ಹೀಗೆಯೇ ತಮ್ಮನ್ನು ಆಲಂಕರಿಸಿಕೊಂಡರು; ಅವರು ತಮ್ಮ ತಮ್ಮ ಗಂಡಂ ದಿರಿಗೆ ಅಧೀನರಾಗಿದ್ದರು.
1 Peter 3:5 in Other Translations
King James Version (KJV)
For after this manner in the old time the holy women also, who trusted in God, adorned themselves, being in subjection unto their own husbands:
American Standard Version (ASV)
For after this manner aforetime the holy women also, who hoped in God, adorned themselves, being in subjection to their own husbands:
Bible in Basic English (BBE)
And these were the ornaments of the holy women of the past, whose hope was in God, being ruled by their husbands:
Darby English Bible (DBY)
For thus also the holy women who have hoped in God heretofore adorned themselves, being subject to their own husbands;
World English Bible (WEB)
For this is how the holy women before, who hoped in God, also adorned themselves, being in subjection to their own husbands:
Young's Literal Translation (YLT)
for thus once also the holy women who did hope on God, were adorning themselves, being subject to their own husbands,
| For | οὕτως | houtōs | OO-tose |
| after this manner | γάρ | gar | gahr |
| time old the in | ποτε | pote | poh-tay |
| the | καὶ | kai | kay |
| holy | αἱ | hai | ay |
| women | ἅγιαι | hagiai | A-gee-ay |
| also, | γυναῖκες | gynaikes | gyoo-NAY-kase |
| αἱ | hai | ay | |
| trusted who | ἐλπίζουσαι | elpizousai | ale-PEE-zoo-say |
| in | ἐπὶ | epi | ay-PEE |
| τὸν | ton | tone | |
| God, | θεὸν | theon | thay-ONE |
| adorned | ἐκόσμουν | ekosmoun | ay-KOH-smoon |
| themselves, | ἑαυτάς | heautas | ay-af-TAHS |
| subjection in being | ὑποτασσόμεναι | hypotassomenai | yoo-poh-tahs-SOH-may-nay |
| τοῖς | tois | toos | |
| unto their own | ἰδίοις | idiois | ee-THEE-oos |
| husbands: | ἀνδράσιν | andrasin | an-THRA-seen |
Cross Reference
1 ತಿಮೊಥೆಯನಿಗೆ 5:5
ನಿಜವಾಗಿಯೂ ದಿಕ್ಕಿಲ್ಲದ ವಿಧವೆಯು ದೇವರ ಮೇಲೆ ನಿರೀಕ್ಷೆಯನ್ನಿಟ್ಟು ಹಗಲಿರುಳು ವಿಜ್ಞಾಪನೆಗಳ ಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.
ತೀತನಿಗೆ 2:3
ಅದೇ ಪ್ರಕಾರ ವೃದ್ಧಸ್ತ್ರೀಯರು ನಡತೆಯಲ್ಲಿ ಪರಿಶುದ್ಧತೆಗೆ ತಕ್ಕ ಹಾಗೆ ಇರುವವರಾಗಿದ್ದು ಸುಳ್ಳಾಗಿ ದೂರುವವರೂ ಹೆಚ್ಚಾಗಿ ಮದ್ಯಪಾನ ಮಾಡುವವರೂ ಆಗಿರದೆ
1 ಪೇತ್ರನು 3:2
ನಿಮ್ಮ ನಿರ್ಮಲವಾದ ಮತ್ತು ಭಯಭರಿತವಾದ ನಡತೆಯನ್ನು ಅವರು ನೋಡಲಿ.
ಇಬ್ರಿಯರಿಗೆ 11:11
ಇದಲ್ಲದೆ ಸಾರಳು ಸಹ ವಾಗ್ದಾನ ಮಾಡಿದಾತ ನನ್ನು ನಂಬತಕ್ಕವನೆಂದು ತೀರ್ಮಾನಿಸಿ ತಾನು ಪ್ರಾಯ ವಿಾರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿ ಯಾಗುವದಕ್ಕೆ ಶಕ್ತಿಯನ್ನು ಹೊಂದಿ ಒಂದು ಮಗುವನ್ನು ಹೆತ್ತಳು.
1 ತಿಮೊಥೆಯನಿಗೆ 5:10
ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡ ವಳೂ ಆಗಿರಬೇಕು; ಆಕೆಯು ಮಕ್ಕಳನ್ನು ಸಾಕಿದವಳಾ ಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ಪರಿಶುದ್ಧರ ಪಾದಗಳನ್ನು ತೊಳೆದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯ ಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲಿ ಆಸಕ್ತಿಯುಳ್ಳವಳಾಗಲಿ ಆಗಿರ
1 ತಿಮೊಥೆಯನಿಗೆ 2:15
ಆದರೂ ಅವರು ಸ್ವಸ್ಥ ಬುದ್ಧಿಯಿಂದೊಡಗೂಡಿದ ನಂಬಿಕೆಯ ಲ್ಲಿಯೂ ಪ್ರೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಆಕೆಯು ಮಗುವನ್ನು ಹೆರುವದರಲ್ಲಿ ರಕ್ಷಣೆ ಹೊಂದುವಳು.
1 ತಿಮೊಥೆಯನಿಗೆ 2:10
(ದೇವ ಭಕ್ತೆಯರೆನಿಸಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ) ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು.
ಅಪೊಸ್ತಲರ ಕೃತ್ಯಗ 9:36
ಯೊಪ್ಪದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು; ಆ ಹೆಸರಿಗೆ ದೊರ್ಕ ಎಂದರ್ಥ. ಆಕೆಯು ಸತ್ಕ್ರಿಯೆ ಗಳನ್ನೂ ದಾನಗಳನ್ನೂ ಬಹಳವಾಗಿ ಮಾಡುತ್ತಿದ್ದಳು.
ಅಪೊಸ್ತಲರ ಕೃತ್ಯಗ 1:14
ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆ ವಿಜ್ಞಾ ಪನೆಗಳಲ್ಲಿ ನಿರತರಾಗಿದ್ದರು. ಅವರೊಂದಿಗೆ ಸ್ತ್ರೀಯರೂ ಯೇಸುವಿನ ತಾಯಿಯಾದ ಮರಿಯಳೂ ಆತನ ಸಹೋದರರೂ ಇದ್ದರು.
ಲೂಕನು 8:2
ಇದಲ್ಲದೆ ದುರಾತ್ಮಗಳಿಂ ದಲೂ ರೋಗಗಳಿಂದಲೂ ಸ್ವಸ್ಥಮಾಡಲ್ಪಟ್ಟ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟು ಹೋಗಿದ್ದ ಮಗ್ದಲಿನ ಎಂದು ಕರೆಯಲ್ಪಟ್ಟ ಮರಿಯಳೂ
ಲೂಕನು 2:37
ಅವಳು ಹೆಚ್ಚು ಕಡಿಮೆ ಎಂಭತ್ತುನಾಲ್ಕು ವರುಷದ ವಿಧವೆ ಯಾಗಿದ್ದು ದೇವಾಲಯವನ್ನು ಬಿಟ್ಟು ಹೋಗದೆ ರಾತ್ರಿ ಹಗಲು ಉಪವಾಸಗಳಿಂದಲೂ ಪ್ರಾರ್ಥನೆಗಳಿಂ ದಲೂ ದೇವರನ್ನು ಸೇವಿಸುತ್ತಿದ್ದಳು.
ಯೆರೆಮಿಯ 49:11
ನಿನ್ನ ದಿಕ್ಕಿಲ್ಲದ ಮಕ್ಕಳನ್ನು ಬಿಡು; ನಾನೇ ರಕ್ಷಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ನಂಬಿಕೆ ಇಡಲಿ.
ಙ್ಞಾನೋಕ್ತಿಗಳು 31:30
ಸೌಂದ ರ್ಯವು ಮೋಸಕರ; ಲಾವಣ್ಯವು ವ್ಯರ್ಥ; ಕರ್ತನಿಗೆ ಭಯಪಡುವವಳು ಹೊಗಳಲ್ಪಡುವಳು.
ಙ್ಞಾನೋಕ್ತಿಗಳು 31:10
ಗುಣವತಿಯಾದ ಸ್ತ್ರೀಯನ್ನು ಯಾವನು ಕಂಡು ಕೊಂಡಾನು? ಅವಳ ಕ್ರಯ ಹವಳಕ್ಕಿಂತಲೂ ಅಮೂ ಲ್ಯವೇ.
1 ಸಮುವೇಲನು 2:1
ಹನ್ನಳು ಪ್ರಾರ್ಥಿಸಿ ಹೇಳಿದ್ದೇನಂದರೆನನ್ನ ಹೃದಯವು ಕರ್ತನಲ್ಲಿ ಸಂತೋಷಿ ಸಿತು, ನನ್ನ ಕೊಂಬು ಕರ್ತನಲ್ಲಿ ಉನ್ನತವಾಯಿತು; ನನ್ನ ಶತ್ರುಗಳ ಮೇಲೆ ನನ್ನ ಬಾಯಿ ವಿಸ್ತಾರವಾಯಿತು, ಯಾಕಂದರೆ ನಾನು ನಿನ್ನ ರಕ್ಷಣೆಯಲ್ಲಿ ಸಂತೋಷ ಪಟ್ಟೆನು.