1 ತಿಮೊಥೆಯನಿಗೆ 5:3 in Kannada

ಕನ್ನಡ ಕನ್ನಡ ಬೈಬಲ್ 1 ತಿಮೊಥೆಯನಿಗೆ 1 ತಿಮೊಥೆಯನಿಗೆ 5 1 ತಿಮೊಥೆಯನಿಗೆ 5:3

1 Timothy 5:3
ನಿಜವಾಗಿಯೂ ವಿಧವೆಯಾಗಿರುವವರನ್ನು ಗೌರ ವಿಸು; ಅವರು ವಿಧವೆಯರಾಗಿದ್ದಾರಲ್ಲಾ.

1 Timothy 5:21 Timothy 51 Timothy 5:4

1 Timothy 5:3 in Other Translations

King James Version (KJV)
Honour widows that are widows indeed.

American Standard Version (ASV)
Honor widows that are widows indeed.

Bible in Basic English (BBE)
Give honour to widows who are truly widows.

Darby English Bible (DBY)
Honour widows who are really widows;

World English Bible (WEB)
Honor widows who are widows indeed.

Young's Literal Translation (YLT)
honour widows who are really widows;

Honour
ΧήραςchērasHAY-rahs
widows
τίμαtimaTEE-ma

τὰςtastahs
that
are
widows
ὄντωςontōsONE-tose
indeed.
χήραςchērasHAY-rahs

Cross Reference

ಅಪೊಸ್ತಲರ ಕೃತ್ಯಗ 9:39
ಪೇತ್ರನು ಎದು ಅವರ ಜೊತೆಯಲ್ಲಿ ಹೋದನು. ಅವನು ಬಂದಾಗ ಅವರು ಅವನನ್ನು ಮೇಲಂತಸ್ತಿನ ಕೊಠಡಿಗೆ ಕರೆದು ಕೊಂಡುಹೋದರು. ಅಲ್ಲಿ ವಿಧವೆಯರೆಲ್ಲರೂ ಅಳುತ್ತಾ ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಮೇಲಂಗಿಗಳನ್ನೂ ಒಳಂಗಿಗಳನ್ನೂ ತೋರಿಸಿ

ವಿಮೋಚನಕಾಂಡ 20:12
ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು.

ಧರ್ಮೋಪದೇಶಕಾಂಡ 10:18
ಆತನು ತಂದೆ ಇಲ್ಲದವರಿಗೂ ವಿಧವೆ ಯರಿಗೂ ನ್ಯಾಯತೀರಿಸುತ್ತಾನೆ; ಪರದೇಶಿಯನ್ನು ಪ್ರೀತಿಮಾಡಿ ಅನ್ನ ವಸ್ತ್ರ ಕೊಡುತ್ತಾನೆ.

ಧರ್ಮೋಪದೇಶಕಾಂಡ 14:29
ಆಗ (ನಿನ್ನ ಸಂಗಡ ಪಾಲನ್ನೂ ಸ್ವಾಸ್ತ್ಯವನ್ನೂ ಹೊಂದದ) ಲೇವಿಯನೂ ನಿನ್ನ ಬಾಗಲು ಗಳಲ್ಲಿರುವ ಅನ್ಯದೇಶದವನೂ ದಿಕ್ಕಿಲ್ಲದವನೂ ವಿಧ ವೆಯೂ ಬಂದು ನಿನ್ನ ದೇವರಾದ ಕರ್ತನು ನಿನ್ನನ್ನು ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಆಶೀರ್ವದಿಸುವ ಹಾಗೆ ತಿಂದು ತೃಪ್ತರಾಗಲಿ.

ಧರ್ಮೋಪದೇಶಕಾಂಡ 16:11
ಆಗ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಬಾಗಲು ಗಳಲ್ಲಿರುವ ಲೇವಿಯನೂ ನಿನ್ನ ಮಧ್ಯದಲ್ಲಿರುವ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ಸಂತೋಷ ಪಡಬೇಕು.

ಧರ್ಮೋಪದೇಶಕಾಂಡ 16:14
ಆ ಹಬ್ಬದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳಲ್ಲಿರುವ ಲೇವಿಯನೂ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ಸಂತೋಷಪಡಬೇಕು.

ಧರ್ಮೋಪದೇಶಕಾಂಡ 27:19
ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ನ್ಯಾಯ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ.

ಅಪೊಸ್ತಲರ ಕೃತ್ಯಗ 6:1
ಆ ದಿವಸಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚಾದಾಗ ಪ್ರತಿ ದಿನದ ಉಪಚಾರದಲ್ಲಿ ಗ್ರೀಕರ ವಿಧವೆಯರು ಅಲಕ್ಷ್ಯಮಾಡಲ್ಪಟ್ಟದ್ದರಿಂದ ಇಬ್ರಿಯ ರಿಗೆ ವಿರುದ್ಧವಾಗಿ ಅವರು ಗುಣುಗುಟ್ಟಿದರು.

1 ಪೇತ್ರನು 3:7
ಅದೇ ರೀತಿಯಾಗಿ ಪುರಷರೇ, ಸ್ತ್ರೀಯು ಬಲಹೀನ ಳೆಂಬದನ್ನು ತಿಳಿದು ನಿಮ್ಮ ಹೆಂಡತಿಯರ ಸಂಗಡ ವಿವೇಕದಿಂದ ಇರ್ರಿ. ಅವರು ಜೀವದ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವದಿಲ್ಲ.

1 ಪೇತ್ರನು 2:17
ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.

ಯಾಕೋಬನು 1:27
ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.

1 ತಿಮೊಥೆಯನಿಗೆ 5:16
ನಂಬುವವರಾದ ಪುರುಷನ ಇಲ್ಲವೆ ಸ್ತ್ರೀಯ ಅಧೀನತೆಯಲ್ಲಿ ವಿಧವೆಯರಿದ್ದರೆ ಅವರೇ ಅವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರಿಗೆ ಸಹಾಯಮಾಡಬೇಕಾಗಿರುವದರಿಂದ ವಿಧವೆಯರು ಆ ಭಾರವನ್ನು ಸಭೆಯ ಮೇಲೆ ಹಾಕಬಾರದು.

1 ತಿಮೊಥೆಯನಿಗೆ 5:9
ವಯಸ್ಸಿನಲ್ಲಿ ಅರುವತ್ತಕ್ಕೆ ಕಡಿಮೆಯಿದ್ದ ವಿಧವೆಯರನ್ನು ವಿಧವೆಯರ ಪಟ್ಟಿಯಲ್ಲಿ ಸೇರಿಸಬೇಡ. ಅಂಥವಳಾ ದರೂ ಒಬ್ಬ ಗಂಡನಿಗೆ ಮಾತ್ರ ಹೆಂಡತಿಯಾಗಿದ್ದವಳೂ

1 ತಿಮೊಥೆಯನಿಗೆ 5:4
ಆದರೆ ಯಾವ ವಿಧವೆಗಾದರೂ ಮಕ್ಕಳಾಗಲಿ, ಮೊಮ್ಮಕ್ಕಳಾ ಗಲಿ, ಇದ್ದರೆ ಅವರೇ ಮೊದಲು ತಮ್ಮ ಮನೆಯಲ್ಲಿ ಭಕ್ತಿ ತೋರಿಸುವದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪ ಕಾರ ಮಾಡುವದಕ್ಕೂ ಕಲಿತುಕೊಳ್ಳಲಿ; ಇದು ದೇವರ ದೃಷ್ಟಿಯಲ್ಲಿ ಯೋಗ್ಯವಾದದ್ದೂ ಮೆಚ್ಚಿಕೆಯಾದದ್ದೂ ಆಗಿದೆ.

1 ತಿಮೊಥೆಯನಿಗೆ 5:2
ವೃದ್ಧಸ್ತ್ರೀಯರನ್ನು ತಾಯಂದಿ ರೆಂದೂ ಯೌವನ ಸ್ತ್ರೀಯರನ್ನು ಪೂರ್ಣ ಪವಿತ್ರತೆ ಯಿಂದ ಸಹೋದರಿಯರೆಂದೂ ಎಣಿಸಿ ಅವರವರಿಗೆ ಬುದ್ಧಿಹೇಳು.

ಯೋಬನು 29:13
ನಾಶವಾಗುವದಕ್ಕೆ ಸಿದ್ಧವಾದವನ ಆಶೀರ್ವಾದವು ನನ್ನ ಮೇಲೆ ಬರು ತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ನಾನು ಮಾಡಿದೆನು.

ಯೋಬನು 31:16
ನಾನು ಬಡವರ ಇಷ್ಟವನ್ನು ಹಿಂತೆಗೆದಿದ್ದರೆ ವಿಧ ವೆಯ ಕಣ್ಣುಗಳನ್ನು ನಿರಾಶೆಪಡಿಸಿದ್ದರೆ,

ಕೀರ್ತನೆಗಳು 68:5
ದೇವರು ತನ್ನ ಪರಿಶುದ್ಧಸ್ಥಾನದಲ್ಲಿ ದಿಕ್ಕಿಲ್ಲದವರಿಗೆ ತಂದೆಯೂ ವಿಧವೆಯರಿಗೆ ನ್ಯಾಯಾಧಿಪತಿಯೂ ಆಗಿದ್ದಾನೆ.

ಕೀರ್ತನೆಗಳು 94:6
ವಿಧವೆಯನ್ನೂ ಪರ ದೇಶಸ್ಥನನ್ನೂ ಅವರು ಕೊಲ್ಲುತ್ತಾರೆ; ದಿಕ್ಕಿಲ್ಲದವರನ್ನು ಹತಮಾಡುತ್ತಾರೆ.

ಕೀರ್ತನೆಗಳು 146:9
ಕರ್ತನು ಪರದೇಶಸ್ಥರನ್ನು ಕಾಪಾಡುತ್ತಾನೆ; ದಿಕ್ಕಿಲ್ಲದ ವರನ್ನೂ ವಿಧವೆಯರನ್ನೂ ಪರಾಮರಿಸುತ್ತಾನೆ; ಆದರೆ ದುಷ್ಟರ ಮಾರ್ಗವನ್ನು ಡೊಂಕುಮಾಡುತ್ತಾನೆ.

ಯೆರೆಮಿಯ 49:11
ನಿನ್ನ ದಿಕ್ಕಿಲ್ಲದ ಮಕ್ಕಳನ್ನು ಬಿಡು; ನಾನೇ ರಕ್ಷಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ನಂಬಿಕೆ ಇಡಲಿ.

ಮತ್ತಾಯನು 15:6
ಅವನು ತನ್ನ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಸನ್ಮಾನಿಸುವದರಿಂದ ಬಿಡುಗಡೆಯಾಗಿದ್ದಾನೆಂದು ನೀವು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ನಿರರ್ಥಕ ಮಾಡಿದ್ದೀರಿ.

ಮತ್ತಾಯನು 23:13
ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.

ಲೂಕನು 2:37
ಅವಳು ಹೆಚ್ಚು ಕಡಿಮೆ ಎಂಭತ್ತುನಾಲ್ಕು ವರುಷದ ವಿಧವೆ ಯಾಗಿದ್ದು ದೇವಾಲಯವನ್ನು ಬಿಟ್ಟು ಹೋಗದೆ ರಾತ್ರಿ ಹಗಲು ಉಪವಾಸಗಳಿಂದಲೂ ಪ್ರಾರ್ಥನೆಗಳಿಂ ದಲೂ ದೇವರನ್ನು ಸೇವಿಸುತ್ತಿದ್ದಳು.

ಲೂಕನು 7:12
ಆತನು ಪಟ್ಟಣ ದ್ವಾರದ ಸವಿಾಪಕ್ಕೆ ಬಂದಾಗ ಇಗೋ, ಸತ್ತುಹೋಗಿದ್ದ ಒಬ್ಬ ಮನುಷ್ಯನನ್ನು ಹೊತ್ತುಕೊಂಡು ಹೋಗುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನು; ಆಕೆಯು ವಿಧವೆಯಾಗಿ ದ್ದಳು. ಪಟ್ಟಣದ ಬಹಳ ಜನರು ಆಕೆಯೊಂದಿಗೆ ಇದ್ದರು.

1 ಥೆಸಲೊನೀಕದವರಿಗೆ 2:6
ಇದಲ್ಲದೆ ನಾವು ಕ್ರಿಸ್ತನ ಅಪೊಸ್ತಲರಾಗಿರುವದರಿಂದ ನಮ್ಮನ್ನು ಸಂರಕ್ಷಿ ಸುವ ಭಾರವನ್ನು ನಿಮ್ಮ ಮೇಲೆ ಹಾಕಬಹುದಾಗಿದ್ದರೂ ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲೀ ಇತರರಿಂದಾಗಲೀ ಹೊಂದಲಪೇ ಕ್ಷಿಸುವವರಾಗಿಲ್ಲ.

ಯೋಹಾನನು 1:47
ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.