2 ಅರಸುಗಳು 15:29 in Kannada

ಕನ್ನಡ ಕನ್ನಡ ಬೈಬಲ್ 2 ಅರಸುಗಳು 2 ಅರಸುಗಳು 15 2 ಅರಸುಗಳು 15:29

2 Kings 15:29
ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.

2 Kings 15:282 Kings 152 Kings 15:30

2 Kings 15:29 in Other Translations

King James Version (KJV)
In the days of Pekah king of Israel came Tiglathpileser king of Assyria, and took Ijon, and Abelbethmaachah, and Janoah, and Kedesh, and Hazor, and Gilead, and Galilee, all the land of Naphtali, and carried them captive to Assyria.

American Standard Version (ASV)
In the days of Pekah king of Israel came Tiglath-pileser king of Assyria, and took Ijon, and Abel-beth-maacah, and Janoah, and Kedesh, and Hazor, and Gilead, and Galilee, all the land of Naphtali; and he carried them captive to Assyria.

Bible in Basic English (BBE)
In the days of Pekah, king of Israel, Tiglath-pileser, king of Assyria, came and took Ijon and Abel-beth-maacah and Janoah and Kedesh and Hazor and Gilead and Galilee and all the land of Naphtali; and he took the people away to Assyria.

Darby English Bible (DBY)
In the days of Pekah king of Israel, Tiglath-Pileser king of Assyria came and took Ijon, and Abel-Beth-Maachah, and Janoah, and Kedesh, and Hazor, and Gilead, and Galilee, all the land of Naphtali, and carried them captive to Assyria.

Webster's Bible (WBT)
In the days of Pekah king of Israel came Tiglath-pileser king of Assyria, and took Ijon, and Abel-beth-maachah, and Janoah, and Kedesh, and Hazor, and Gilead, and Galilee, all the land of Naphtali, and carried them captive to Assyria.

World English Bible (WEB)
In the days of Pekah king of Israel came Tiglath Pileser king of Assyria, and took Ijon, and Abel Beth Maacah, and Janoah, and Kedesh, and Hazor, and Gilead, and Galilee, all the land of Naphtali; and he carried them captive to Assyria.

Young's Literal Translation (YLT)
In the days of Pekah king of Israel hath Tiglath-Pileser king of Asshur come, and taketh Ijon, and Abel-Beth-Maachah, and Janoah, and Kedesh, and Hazor, and Gilead, and Galilee, all the land of Naphtali, and removeth them to Asshur.

In
the
days
בִּימֵ֞יbîmêbee-MAY
of
Pekah
פֶּ֣קַחpeqaḥPEH-kahk
king
מֶֽלֶךְmelekMEH-lek
of
Israel
יִשְׂרָאֵ֗לyiśrāʾēlyees-ra-ALE
came
בָּא֮bāʾba
Tiglath-pileser
תִּגְלַ֣תtiglatteeɡ-LAHT
king
פִּלְאֶסֶר֮pilʾeserpeel-eh-SER
of
Assyria,
מֶ֣לֶךְmelekMEH-lek
and
took
אַשּׁוּר֒ʾaššûrah-SHOOR

וַיִּקַּ֣חwayyiqqaḥva-yee-KAHK
Ijon,
אֶתʾetet
and
Abel-beth-maachah,
עִיּ֡וֹןʿiyyônEE-yone
Janoah,
and
וְאֶתwĕʾetveh-ET
and
Kedesh,
אָבֵ֣לʾābēlah-VALE
and
Hazor,
בֵּֽיתbêtbate
Gilead,
and
מַעֲכָ֡הmaʿăkâma-uh-HA
and
Galilee,
וְאֶתwĕʾetveh-ET
all
יָ֠נוֹחַyānôaḥYA-noh-ak
land
the
וְאֶתwĕʾetveh-ET
of
Naphtali,
קֶ֨דֶשׁqedešKEH-desh
and
carried
them
captive
וְאֶתwĕʾetveh-ET
to
Assyria.
חָצ֤וֹרḥāṣôrha-TSORE
וְאֶתwĕʾetveh-ET
הַגִּלְעָד֙haggilʿādha-ɡeel-AD
וְאֶתwĕʾetveh-ET
הַגָּלִ֔ילָהhaggālîlâha-ɡa-LEE-la
כֹּ֖לkōlkole
אֶ֣רֶץʾereṣEH-rets
נַפְתָּלִ֑יnaptālînahf-ta-LEE
וַיַּגְלֵ֖םwayyaglēmva-yahɡ-LAME
אַשּֽׁוּרָה׃ʾaššûrâah-shoo-ra

Cross Reference

1 ಪೂರ್ವಕಾಲವೃತ್ತಾ 5:26
ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್‌ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.

2 ಅರಸುಗಳು 17:6
ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.

2 ಅರಸುಗಳು 16:7
ಆದರೆ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇ ಸೆರನಿಗೆ--ನಾನು ನಿನ್ನ ಸೇವಕನೂ ನಿನ್ನ ಮಗನೂ ಆಗಿದ್ದೇನೆ; ನನಗೆ ವಿರೋಧವಾಗಿ ಎದ್ದ ಅರಾಮ್ಯರ ಅರಸನ ಕೈಗೂ ಇಸ್ರಾಯೇಲಿನ ಅರಸನ ಕೈಗೂ ನನ್ನನ್ನು ತಪ್ಪಿಸಿ ರಕ್ಷಿಸುವ ಹಾಗೆ ಬರ ಹೇಳು ಅಂದನು.

1 ಅರಸುಗಳು 15:20
ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನಗುಂಟಾದ ಸೈನ್ಯಗಳ ಅಧಿಪತಿ ಗಳನ್ನು ಕಳುಹಿಸಿ ಇಯ್ಯೋನ್‌, ದಾನ್‌, ಆಬೇಲ್ಬೇ ತ್ಮಾಕಾ ಸಮಸ್ತ ಕಿನ್ನೆರೋತ್‌, ಸಮಸ್ತ ನಫ್ತಾಲಿ ದೇಶವು, ಇವುಗಳನ್ನು ಹೊಡೆದುಬಿಟ್ಟನು.

ಯೆಹೋಶುವ 20:7
ಹಾಗೆಯೇ ಅವರು ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ ಎಫ್ರಾ ಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಯೂದದ ಬೆಟ್ಟಗಳಲ್ಲಿರುವ ಹೆಬ್ರೋನ್‌ ಎಂಬ ಕಿರ್ಯರ್ತ್‌ಬ ವನ್ನೂ ನೇಮಿಸಿದರು.

ಯೆಹೋಶುವ 11:1
ಹಾಚೋರಿನ ಅರಸನಾದ ಯಾಬೀನನು ಇವುಗಳನ್ನು ಕೇಳಿದಾಗ ಆದದ್ದೇನಂದರೆ, ಅವನು ಮಾದೋನಿನ ಅರಸನಾದ ಯೋಬಾಬನ ಬಳಿಗೂ ಶಿಮ್ರೋನಿನ ಅರಸನ ಬಳಿಗೂ ಅಕ್ಷಾಫಿನ ಅರಸನ ಬಳಿಗೂ

ಯೆಹೋಶುವ 19:37
ಕೆದೆಷ್‌, ಎದ್ರೈ, ಎನ್‌ಹಾಚೊರ್‌,

ನ್ಯಾಯಸ್ಥಾಪಕರು 4:2
ಆದದರಿಂದ ಕರ್ತನು ಅವರನ್ನು ಹಾಚೋರಿನಲ್ಲಿ ಆಳುವ ಕಾನಾನಿನ ಅರಸನಾದ ಯಾಬೀನನ ಕೈಗೆ ಮಾರಿಬಿಟ್ಟನು. ಅವನ ಸೈನ್ಯಕ್ಕೆ ಜನಾಂಗಗಳ ಪಟ್ಟಣವಾದ ಹರೋಷೆತಿನಲ್ಲಿ ವಾಸವಾಗಿರುವ ಸೀಸೆರನು ಅಧಿಪತಿಯಾಗಿದ್ದನು.

2 ಸಮುವೇಲನು 20:14
ಅವನು ಇಸ್ರಾಯೇಲಿನ ಎಲ್ಲಾ ಗೋತ್ರಗಳಲ್ಲಿ ಹಾದು ಆಬೇಲ್ಬೇತ್ಮಾಕಾ ಮಟ್ಟಿಗೂ ಎಲ್ಲಾ ಬೇರಿಯ ಬಳಿಗೂ ಹೋದನು. ಆಗ ಅವರು ಕೂಡಿಕೊಂಡು ಅವನ ಸಂಗಡ ಹೋದರು.

1 ಪೂರ್ವಕಾಲವೃತ್ತಾ 5:6
ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನಿಂದ ಸೆರೆಯಾಗಿ ಒಯ್ಯಲ್ಪಟ್ಟ ಇವನ ಮಗನಾದ ಬೇರನು; ಇವನೇ ರೂಬೇನ್ಯರಲ್ಲಿ ಪ್ರಭುವಾಗಿದ್ದನು.

2 ಪೂರ್ವಕಾಲವೃತ್ತಾ 16:4
ಬೆನ್ಹದ ದನು ಅರಸನಾದ ಆಸನ ಮಾತು ಕೇಳಿ ತನ್ನ ಸೈನ್ಯಾಧಿ ಪತಿಗಳನ್ನು ಇಸ್ರಾಯೇಲಿನ ಪಟ್ಟಣಗಳ ಮೇಲೆ ಕಳು ಹಿಸಿದನು. ಅವರು ಇಯ್ಯೋನನ್ನೂ ದಾನನನ್ನೂ ಅಬೇ ಲ್ಮಯಿಮ್‌ವನ್ನೂ ನಫ್ತಾಲಿಯನ್ನು ಸಮಸ್ತ ಉಗ್ರಾಣ ಗಳ ಪಟ್ಟಣಗಳನ್ನೂ ಸಂಹರಿಸಿದರು.

ಮತ್ತಾಯನು 4:15
ಯೊರ್ದನಿನ ಆಚೆ ಸಮುದ್ರದ ಮಾರ್ಗದಲ್ಲಿರುವ ಜೆಬುಲೋನ್‌ ಪ್ರಾಂತ್ಯದಲ್ಲಿಯೂ ನೆಫ್ತಲೀಮ್‌ ಪ್ರಾಂತ್ಯ ಮತ್ತು ಅನ್ಯಜನರ ಗಲಿಲಾಯದಲ್ಲಿಯೂ

ಆಮೋಸ 1:13
ಕರ್ತನು ಹೀಗೆ ಹೇಳುತ್ತಾನೆ--ಅಮ್ಮೋನಿನ ಮಕ್ಕಳ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ವಾಗಿ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವ ದಿಲ್ಲ; ತಮ್ಮ ಮೇರೆಯನ್ನು ವಿಸ್ತಾರ ಮಾಡುವದಕ್ಕಾಗಿ ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿದ್ದಾರೆ.

ಆಮೋಸ 1:3
ಕರ್ತನು ಹೀಗೆ ಹೇಳುತ್ತಾನೆ--ದಮಸ್ಕದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅವರನ್ನು ದಂಡಿಸದೆ ಹಿಂತಿರುಗುವದಿಲ್ಲ; ಅವರು ಕಬ್ಬಿಣದ ಆಯುಧಗಳಿಂದ ಗಿಲ್ಯಾದನ್ನು ಬಡಿದಿರುವರು.

ಯೆಶಾಯ 9:1
ಆದಾಗ್ಯೂ ಸಂಕಟಪಟ್ಟ ದೇಶಕ್ಕೆ ಅಂಧ ಕಾರವಿನ್ನಿಲ್ಲ. ಹಿಂದಿನ ಕಾಲದಲ್ಲಿ ಜೆಬು ಲೋನ್‌ ಮತ್ತು ನಫ್ತಾಲೀ ಸೀಮೆಗಳನ್ನು ಆತನು ಅವಮಾನಕ್ಕೆ ಗುರಿಮಾಡಿ ಅನಂತರ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ ಈ ಪ್ರಾಂತ್ಯ ವನ್ನೆಲ್ಲಾ ಘನಪಡಿಸಿದ್ದಾನೆ.

ಯೆಶಾಯ 7:20
ಅದೇ ದಿನದಲ್ಲಿ ಕರ್ತನು ನದಿಯ ಆಚೆಗಿರುವ ಅಶ್ಯೂರದ ರಾಜನೆಂಬವನಿಂದ ಬಾಡಿಗೆ ಕ್ಷೌರದ ಕತ್ತಿ ಯಿಂದ (ಯೆಹೂದದ) ತಲೆಯನ್ನು ಕಾಲುಕೂದ ಲನ್ನು ಬೋಳಿಸುವನು ಗಡ್ಡವನ್ನು ತೆಗೆದುಬಿಡುವನು.

ಯೆಶಾಯ 1:7
ನಿಮ್ಮ ದೇಶವು ಹಾಳಾಗಿದೆ; ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ; ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿ ಬಿಡು ತ್ತಿದ್ದಾರೆ. ಅದು ಅನ್ಯರಿಂದ ಕೆಡವಲ್ಪಟ್ಟಂತೆ ಹಾಳಾ ಗಿದೆ.

ಯಾಜಕಕಾಂಡ 26:38
ಜನಾಂಗಗ ಳೊಳಗೆ ನಾಶವಾಗುವಿರಿ; ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ತಿಂದುಬಿಡುವದು.

ಅರಣ್ಯಕಾಂಡ 32:1
ಇದಲ್ಲದೆ ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಬಹಳ ಅಧಿಕವಾದ ಪಶುಗಳು ಇದ್ದವು; ಅವರು ಯಗ್ಜೇರೂ ಗಿಲ್ಯಾದೂ ಎಂಬ ದೇಶ ಗಳನ್ನು ನೋಡಿದಾಗ ಅಗೋ, ಆ ಸ್ಥಳವು ಪಶುಗಳ ಸ್ಥಳವಾಗಿತ್ತು.

ಅರಣ್ಯಕಾಂಡ 32:40
ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನಿಗೆ ಕೊಟ್ಟದ್ದರಿಂದ ಅವನು ಅದರಲ್ಲಿ ವಾಸಿ ಸಿದನು.

ಧರ್ಮೋಪದೇಶಕಾಂಡ 3:15
ಗಿಲ್ಯಾದನ್ನು ಮಾಕೀರನಿಗೆ ಕೊಟ್ಟೆನು.

ಧರ್ಮೋಪದೇಶಕಾಂಡ 4:26
ನಾನು ಈ ದಿನ ಆಕಾಶ ವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆದು ನಿಮಗೆ ಹೇಳುವ ದೇನಂದರೆ--ನೀವು ಯೊರ್ದನನ್ನು ದಾಟಿ ಸ್ವಾಧೀನ ಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ ಸಂಪೂರ್ಣ ವಾಗಿ ನಶಿಸುವಿರಿ.

ಧರ್ಮೋಪದೇಶಕಾಂಡ 28:25
ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ.

ಧರ್ಮೋಪದೇಶಕಾಂಡ 28:64
ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ.

ಯೆಹೋಶುವ 11:10
ಆ ಕಾಲದಲ್ಲಿ ಯೆಹೋಶುವನು ತಿರಿಗಿಕೊಂಡು ಹಾಚೋರನ್ನು ಹಿಡಿದು ಅದರ ಅರಸನನ್ನು ಕತ್ತಿ ಯಿಂದ ಹೊಡೆದುಬಿಟ್ಟನು. ಯಾಕಂದರೆ ಹಾಚೋರು ಮೊದಲು ಆ ರಾಜ್ಯಗಳಿಗೆಲ್ಲಾ ತಲೆಯಾಗಿತ್ತು.

ಯೆಹೋಶುವ 11:13
ಆದರೆ ತಮ್ಮ ದಿನ್ನೆಯ ಮೇಲೆ ನಿಂತಿರುವ ಪಟ್ಟಣ ಗಳನ್ನೆಲ್ಲಾ ಇಸ್ರಾಯೇಲ್‌ ಸುಟ್ಟು ಬಿಡಲಿಲ್ಲ. ಹಾಚೋರನ್ನು ಮಾತ್ರ ಯೆಹೋಶುವನು ಸುಟ್ಟು ಬಿಟ್ಟನು.

ಯೆಹೋಶುವ 12:19
ಮಾದೋನಿನ ಅರಸನು ಒಬ್ಬನು; ಹಾಚೋರಿನ ಅರಸನು ಒಬ್ಬನು;

ಯೆಹೋಶುವ 16:6
ಪಶ್ಚಿಮದ ಮೇರೆ ಮಿಕ್ಮೆತಾತಿನಿಂದ ಉತ್ತರಕ್ಕೆ ಹೊರಟು ಮೂಡಣಕ್ಕೆ ತಾನತ್‌ ಶೀಲೋವಿಗೆ ತಿರುಗಿ ಯಾನೋಹಕ್ಕೆ ಮೂಡಣ ಕಡೆಯಾಗಿ ಹಾದು ಹೋಗಿ

1 ಅರಸುಗಳು 9:11
ಇಪ್ಪತ್ತು ವರುಷಗಳಾದ ತರುವಾಯ ಸೊಲೊಮೋನನು ಆ ಎರಡು ಮನೆಗಳನ್ನು, ಅಂದರೆ ಕರ್ತನ ಮನೆಯನ್ನೂ ಅರಮನೆಯನ್ನೂ ಕಟ್ಟಿಸಿ ತೀರಿಸಿ ದನು. ಆಗ ಸೊಲೊಮೋನನು ಗಲಿಲಾಯ ದೇಶದಲ್ಲಿ ಹೀರಾಮನಿಗೆ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.

2 ಅರಸುಗಳು 17:23
ಹೀಗೆಯೇ ಇಸ್ರಾ ಯೇಲಿನವರು ಇಂದಿನ ವರೆಗೂ ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಯಾಗಿ ಒಯ್ಯಲ್ಪಟ್ಟರು.

2 ಪೂರ್ವಕಾಲವೃತ್ತಾ 28:20
ಆಗ ಅಶ್ಶೂರಿನ ಅರಸನಾದ ತಿಗ್ಲತ್ಪಿಲೆಸರನು ಅವನ ಬಳಿಗೆ ಬಂದು ಅವನನ್ನು ಬಲಪಡಿಸದೆ ಬಾಧೆಪಡಿಸಿ ದನು.

ಯಾಜಕಕಾಂಡ 26:32
ನಾನು ದೇಶವನ್ನು ಹಾಳುಮಾಡುವೆನು; ಅದರಲ್ಲಿ ವಾಸ ವಾಗುವ ನಿಮ್ಮ ಶತ್ರುಗಳು ಅದಕ್ಕೆ ಆಶ್ಚರ್ಯಪಡುವರು.