ವಿಮೋಚನಕಾಂಡ 14:14 in Kannada

ಕನ್ನಡ ಕನ್ನಡ ಬೈಬಲ್ ವಿಮೋಚನಕಾಂಡ ವಿಮೋಚನಕಾಂಡ 14 ವಿಮೋಚನಕಾಂಡ 14:14

Exodus 14:14
ಕರ್ತನು ನಿಮ ಗೋಸ್ಕರ ಯುದ್ಧಮಾಡುವನು; ಆದರೆ ನೀವು ಸಮಾಧಾನವಾಗಿರ್ರಿ ಅಂದನು.

Exodus 14:13Exodus 14Exodus 14:15

Exodus 14:14 in Other Translations

King James Version (KJV)
The LORD shall fight for you, and ye shall hold your peace.

American Standard Version (ASV)
Jehovah will fight for you, and ye shall hold your peace.

Bible in Basic English (BBE)
The Lord will make war for you, you have only to keep quiet.

Darby English Bible (DBY)
Jehovah will fight for you, and ye shall be still.

Webster's Bible (WBT)
The LORD will fight for you, and ye shall hold your peace.

World English Bible (WEB)
Yahweh will fight for you, and you shall be still."

Young's Literal Translation (YLT)
Jehovah doth fight for you, and ye keep silent.'

The
Lord
יְהוָ֖הyĕhwâyeh-VA
shall
fight
יִלָּחֵ֣םyillāḥēmyee-la-HAME
ye
and
you,
for
לָכֶ֑םlākemla-HEM
shall
hold
your
peace.
וְאַתֶּ֖םwĕʾattemveh-ah-TEM
תַּֽחֲרִשֽׁוּן׃taḥărišûnTA-huh-ree-SHOON

Cross Reference

ಧರ್ಮೋಪದೇಶಕಾಂಡ 3:22
ನೀವು ಅವುಗಳಿಗೆ ಭಯಪಡಬೇಡಿರಿ; ಯಾಕಂದರೆ ನಿಮ್ಮ ದೇವರಾದ ಕರ್ತನು ತಾನೇ ನಿಮಗೋಸ್ಕರ ಯುದ್ಧಮಾಡುತ್ತಾನೆ ಎಂಬದು.

ಧರ್ಮೋಪದೇಶಕಾಂಡ 20:4
ಯಾಕಂದರೆ ನಿಮ್ಮ ಶತ್ರುಗಳ ವಿರೋಧವಾಗಿ ನಿಮಗೋಸ್ಕರ ಯುದ್ಧಮಾಡಿ ನಿಮ್ಮನ್ನು ರಕ್ಷಿಸುವದಕ್ಕೆ ನಿಮ್ಮ ದೇವರಾದ ಕರ್ತನೇ ನಿಮ್ಮ ಸಂಗಡ ಹೋಗುತ್ತಾನೆ ಎಂದು ಹೇಳಬೇಕು.

ಧರ್ಮೋಪದೇಶಕಾಂಡ 1:30
ನಿಮ್ಮ ಮುಂದೆ ಹೋಗುವ ನಿಮ್ಮ ದೇವರಾದ ಕರ್ತನು, ಆತನೇ ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆಯೂ ಅರಣ್ಯದಲ್ಲಿಯೂ ನಿಮಗೆ ಮಾಡಿದ ಎಲ್ಲಾದರ ಪ್ರಕಾರ ನಿಮಗೋಸ್ಕರ ಯುದ್ಧಮಾಡುವನು.

ಯೆಹೋಶುವ 23:3
ನಿಮ್ಮ ದೇವರಾದ ಕರ್ತನು ನಿಮ ಗೋಸ್ಕರ ಈ ಸಕಲ ಜನಾಂಗಗಳಿಗೆ ಮಾಡಿ ದ್ದೆಲ್ಲವನ್ನೂ ನೋಡಿದ್ದೀರಿ; ನಿಮಗೋಸ್ಕರವಾಗಿ ಯುದ್ಧ ಮಾಡಿದಾತನು ನಿಮ್ಮ ದೇವರಾದ ಕರ್ತನು.

ಯೆಶಾಯ 30:15
ಇಸ್ರಾಯೇಲಿನ ಪರಿಶುದ್ಧ ಕರ್ತನಾದ ದೇವರು ಹೇಳುವದೇನೆಂದರೆ--ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗು ವದು. ಶಾಂತರಾಗಿ ಭರವಸದಿಂದಿರುವದೇ ನಿಮಗೆ ಬಲ ಎಂದು ಹೇಳಿದ್ದರೂ ನೀವು ಒಪ್ಪಿಕೊಂಡಿಲ್ಲ.

2 ಪೂರ್ವಕಾಲವೃತ್ತಾ 20:17
ಇದರಲ್ಲಿ ನೀವು ಯುದ್ಧ ಮಾಡಲು ಅವಶ್ಯವಿಲ್ಲ; ನೀವು ನೆಲೆಯಾಗಿ ನಿಂತು ಕೊಂಡು ಕರ್ತನು ನಿಮಗೆ ಮಾಡುವ ರಕ್ಷಣೆಯನ್ನು ನೋಡಿರಿ; ಯೆಹೂದದವರೇ, ಯೆರೂಸಲೇಮಿನ ವರೇ, ಭಯಪಡಬೇಡಿರಿ, ಹೆದರಬೇಡಿರಿ; ಮಾರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ; ಕರ್ತನು ನಿಮ್ಮ ಸಂಗಡ ಇದ್ದಾನೆ ಅಂದನು.

ನೆಹೆಮಿಯ 4:20
ನೀವು ಎಲ್ಲಿ ತುತೂರಿಯ ಶಬ್ದವನ್ನು ಕೇಳುವಿರೋ ಅಲ್ಲಿ ಬಂದು ನಮ್ಮ ಸಂಗಡ ಕೂಡಿಕೊಳ್ಳಿರಿ. ನಮ್ಮ ದೇವರು ನಮಗೋಸ್ಕರ ಯುದ್ಧಮಾಡುವನು ಎಂದು ಹೇಳಿದೆನು.

2 ಪೂರ್ವಕಾಲವೃತ್ತಾ 20:29
ಕರ್ತನು ಇಸ್ರಾಯೇಲಿನ ಶತ್ರುಗಳ ಮೇಲೆ ಯುದ್ಧಮಾಡಿದನೆಂದು ಅವರು ಕೇಳಿದಾಗ ದೇವರ ಭಯವು ಆ ದೇಶಗಳ ಸಕಲ ರಾಜ್ಯಗಳ ಮೇಲೆ ಬಿತ್ತು.

ವಿಮೋಚನಕಾಂಡ 14:25
ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಐಗುಪ್ತ್ಯರು ಕಷ್ಟದಿಂದ ಹೋಗು ವಂತೆ ಮಾಡಿದನು. ಆಗ--ಇಸ್ರಾಯೇಲಿನ ಎದುರಿ ನಿಂದ ಓಡಿಹೋಗೋಣ. ಯಾಕಂದರೆ ಕರ್ತನು ಐಗುಪ್ತ್ಯರಿಗೆ ವಿರೋಧವಾಗಿ ಅವರಿಗೋಸ್ಕರ ಯುದ್ಧ ಮಾಡುತ್ತಾನೆಂದು ಹೇಳಿಕೊಂಡರು.

ಯೆಹೋಶುವ 23:10
ನಿಮ್ಮಲ್ಲಿ ಇರುವ ಒಬ್ಬನು ಸಾವಿರ ಮಂದಿಯನ್ನು ಹಿಂದಟ್ಟುವನು. ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಹಾಗೆ ಆತನೇ ನಿಮಗೋಸ್ಕರ ಯುದ್ಧಮಾಡುತ್ತಾನೆ.

ಯೆಹೋಶುವ 10:42
ಯೆಹೋಶುವನು ಈ ಸಮಸ್ತ ಅರಸುಗಳನ್ನೂ ಅವರ ದೇಶವನ್ನೂ ಒಂದೇ ಸಾರಿ ತೆಗೆದುಕೊಂಡನು. ಯಾಕಂದರೆ ಇಸ್ರಾಯೇಲಿನ ದೇವ ರಾದ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧ ಮಾಡಿದನು.

ವಿಮೋಚನಕಾಂಡ 15:3
ಕರ್ತನು ಯುದ್ಧ ಶೂರನು; ಕರ್ತನು ಎಂಬದೇ ಆತನ ಹೆಸರು.

ಯೆಹೋಶುವ 10:14
ಕರ್ತನು ಒಬ್ಬ ಮನುಷ್ಯನ ಮಾತನ್ನು ಕೇಳಿದಂಥಾ ಆ ದಿನಕ್ಕೆ ಸಮಾನ ವಾದ ದಿನವು ಪೂರ್ವದಲ್ಲಿಯೂ ಇಲ್ಲ, ಮುಂದೆಯೂ ಇಲ್ಲ; ಯಾಕಂದರೆ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದನು.

ಕೀರ್ತನೆಗಳು 50:3
ನಮ್ಮ ದೇವರು ಬರುತ್ತಾನೆ, ಮೌನವಾಗಿರನು; ಬೆಂಕಿಯು ಆತನ ಮುಂದೆ ದಹಿಸುವದು; ಅದು ಆತನ ಸುತ್ತಲು ದೊಡ್ಡ ಬಿರುಗಾಳಿಯಂತಿರುವದು.

ನ್ಯಾಯಸ್ಥಾಪಕರು 5:20
ಆಕಾಶದಲ್ಲಿ ಇರುವ ವುಗಳು ಯುದ್ಧಮಾಡಿದವು; ನಕ್ಷತ್ರಗಳು ತಮ್ಮ ಓಟಗ ಳಲ್ಲಿ ಸೀಸೆರನಿಗೆ ವಿರೋಧವಾಗಿ ಯುದ್ಧಮಾಡಿದವು.

ಯೆಹೋಶುವ 10:10
ಆಗ ಕರ್ತನು ಅವರನ್ನು ಇಸ್ರಾಯೇಲಿನ ಮುಂದೆ ಗಲಿಬಿಲಿಮಾಡಿ ಅವರನ್ನು ಗಿಬ್ಯೋನಿನಲ್ಲಿ ದೊಡ್ಡ ಸಂಹಾರದಿಂದ ಸಂಹರಿಸಿ ಬೇತ್‌ಹೋರೋನಿಗೆ ಹೋಗುವ ಮಾರ್ಗದಲ್ಲಿ ಹಿಂದಟ್ಟಿ ಅಜೇಕ ಮಕ್ಕೇದದ ವರೆಗೂ ಹೊಡೆದನು.

ಕೀರ್ತನೆಗಳು 83:1
1 ಓ ದೇವರೇ, ಮೌನವಾಗಿರಬೇಡ; ಓ ದೇವರೇ, ಮೌನವಾಗಿರಬೇಡ; ಸುಮ್ಮ ನಿರಬೇಡ.

ಯೆಶಾಯ 31:4
ಕರ್ತನು ನನಗೆ ಹೀಗೆ ಹೇಳಿದ್ದಾನೆ -- ಸಿಂಹವು, ಪ್ರಾಯದ ಸಿಂಹವು ಬೇಟೆಯ ಮೇಲೆ ಬಿದ್ದು ಗುರು ಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ ಹೇಗೆ ಅವರ ಶಬ್ದಕ್ಕೆ ಭಯಪಡದೆ ಇಲ್ಲವೆ ಅವರ ಗದ್ದಲಕ್ಕೆ ಕುಂದಿಹೋಗದೆ ಇರುವದೋ ಹಾಗೆಯೇ ಸೈನ್ಯಗಳ ಕರ್ತನು ಚೀಯೋನ್‌ ಪರ್ವತ ಕ್ಕೋಸ್ಕರವೂ ಅದರ ಗುಡ್ಡಕ್ಕೋಸ್ಕರವೂ ಯುದ್ಧ ಮಾಡಲು ಇಳಿದು ಬರುವನು.