Deuteronomy 33 - WEB (Kannada)
1 This is the blessing, with which Moses the man of God blessed the children of Israel before his death.ದೇವರ ಮನುಷ್ಯನಾದ ಮೋಶೆ ಸಾಯುವದಕ್ಕಿಂತ ಮುಂಚೆ ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ಆಶೀರ್ವಾದವು ಯಾವದಂದರೆ--
2 He said, Yahweh came from Sinai, Rose from Seir to them; He shined forth from Mount Paran, He came from the ten thousands of holy ones: At his right hand was a fiery law for them.ಕರ್ತನು ಸೀನಾಯಿ ಬೆಟ್ಟದಿಂದ ಬಂದನು, ಸೇಯಾರಿನಿಂದ ಅವರಿಗೆ ಉದಯಿಸಿದನು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದನು, ಹತ್ತು ಸಾವಿರ ಪರಿಶುದ್ಧರ ಸಂಗಡ ಬಂದನು. ಆತನ ಬಲಪಾರ್ಶ್ವದಿಂದ ಅವರಿಗೆ ಬೆಂಕಿಯ ನ್ಯಾಯಪ್ರಮಾಣವು ಹೊರಟಿತು.
3 Yes, he loves the people; All his saints are in your hand: They sat down at your feet; [Everyone] shall receive of your words.ಹೌದು, ಆತನು ಜನಗಳನ್ನು ಪ್ರೀತಿಮಾಡಿದನು. ಆತನ ಪರಿಶುದ್ಧರೆಲ್ಲರು ನಿನ್ನ ಕೈಯಲ್ಲಿ ಇದ್ದಾರೆ. ಅವರು ನಿನ್ನ ಪಾದದ ಬಳಿಯಲ್ಲಿ ಕೂತುಕೊಂಡು ನಿನ್ನ ವಾಕ್ಯಗಳನ್ನು ಹೊಂದುತ್ತಾರೆ.
4 Moses commanded us a law, An inheritance for the assembly of Jacob.ಮೋಶೆ ನಮಗೆ ನ್ಯಾಯಪ್ರಮಾಣವನ್ನು ಆಜ್ಞಾಪಿ ಸಿದ್ದಾನೆ. ಅದೇ ಯಾಕೋಬನ ಸಭೆಯ ಬಾಧ್ಯತೆಯು.
5 He was king in Jeshurun, When the heads of the people were gathered, All the tribes of Israel together.ಜನರ ಮುಖ್ಯಸ್ಥರೂ ಇಸ್ರಾಯೇಲಿನ ಗೋತ್ರ ಗಳೂ ಕೂಡಿಕೊಂಡಿದ್ದಾಗ ಆತನು ಯೆಶುರೂನಿನಲ್ಲಿ ಅರಸನಾಗಿದ್ದನು.
6 Let Reuben live, and not die; Nor let his men be few.ರೂಬೇನನು ಸಾಯದೆ ಬದುಕಲಿ; ಅವನ ಜನ ಸ್ವಲ್ಪವಾಗದಿರಲಿ.
7 This is [the blessing] of Judah: and he said, Hear, Yahweh, the voice of Judah, Bring him in to his people. With his hands he contended for himself; You shall be a help against his adversaries.ಯೂದನ ಆಶೀರ್ವಾದವು ಇದೇ; ಕರ್ತನೇ, ಯೂದನ ಶಬ್ದವನ್ನು ಕೇಳು; ಅವನನ್ನು ತನ್ನ ಜನರ ಬಳಿಗೆ ಸೇರಿಸು; ತನ್ನ ಕೈಗಳು ಅವನಿಗೆ ಸಾಕಾಗಿವೆ. ಅವನ ವೈರಿಗಳ ವಿಷಯದಲ್ಲಿ ಅವನಿಗೆ ಸಹಾಯ ವಾಗಿರು ಎಂದು ಹೇಳಿದನು.
8 Of Levi he said, Your Thummim and your Urim are with your godly one, Whom you did prove at Massah, With whom you did strive at the waters of Meribah;ಲೇವಿಯ ವಿಷಯವಾಗಿ--ನಿನ್ನ ತುವಿಾ್ಮೇಮ್ ನಿನ್ನ ಊರೀಮ್ ಮಸ್ಸದಲ್ಲಿ ನೀನು ಶೋಧಿಸಿದಂಥ ಮೆರೀ ಬಾದ ನೀರಿನ ಬಳಿಯಲ್ಲಿ ನೀನು ವಿವಾದ ಮಾಡಿದಂಥ ನಿನ್ನ ಪರಿಶುದ್ಧನ ಬಳಿಯಲ್ಲಿ ಇರುವವು;
9 Who said of his father, and of his mother, I have not seen him; Neither did he acknowledge his brothers, Nor knew he his own children: For they have observed your word, Keep your covenant.ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ.
10 They shall teach Jacob your ordinances, Israel your law: They shall put incense before you, Whole burnt offering on your altar.ಅವರು ಯಾಕೋಬನಿಗೆ ನಿನ್ನ ನ್ಯಾಯಗಳನ್ನೂ ಇಸ್ರಾಯೇಲಿಗೆ ನಿನ್ನ ನ್ಯಾಯಪ್ರಮಾಣವನ್ನೂ ಬೋಧಿಸುವರು; ನಿನ್ನ ಮುಂದೆ ಧೂಪವನ್ನೂ ನಿನ್ನ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಇಡುವರು.
11 Bless, Yahweh, his substance, Accept the work of his hands: Smite through the loins of those who rise up against him, Of those who hate him, that they not rise again.ಕರ್ತನೇ, ಅವನ ಆಸ್ತಿಯನ್ನು ಆಶೀರ್ವದಿಸು; ಅವನ ಕೈಕೆಲಸವನ್ನು ಅಂಗೀಕರಿಸು. ಅವನಿಗೆ ವಿರೋಧ ವಾಗಿ ಏಳುವವರ ಮತ್ತು ಅವನನ್ನು ಹಗೆಮಾಡುವವರ ಸೊಂಟಗಳನ್ನು ಅವರು ತಿರಿಗಿ ಏಳದ ಹಾಗೆ ಹೊಡೆ ಅಂದನು.
12 Of Benjamin he said, The beloved of Yahweh shall dwell in safety by him; He covers him all the day long, He dwells between his shoulders.ಅವನು ಬೆನ್ಯಾವಿಾನನ ವಿಷಯವಾಗಿ--ಕರ್ತ ನಿಗೆ ಪ್ರಿಯನು ಸುರಕ್ಷಿತವಾಗಿ ಆತನ ಬಳಿಯಲ್ಲಿ ವಾಸ ಮಾಡುವನು; ಆತನು ಅವನಿಗೆ ದಿನವೆಲ್ಲಾ ಮರೆಯಾಗಿ ರುವನು; ಅವನು ಆತನ ಹೆಗಲುಗಳ ನಡುವೆ ವಾಸ ಮಾಡುವನು ಅಂದನು.
13 Of Joseph he said, Blessed of Yahweh be his land, For the precious things of the heavens, for the dew, For the deep that couches beneath,ಯೋಸೇಫನ ವಿಷಯವಾಗಿ--ಅವನ ದೇಶವು ಆಕಾಶದ ಅಮೂಲ್ಯವಾದವುಗಳಿಂದಲೂ ಮಂಜಿ ನಿಂದಲೂ ಕೆಳಗೆ ಮಲಗಿರುವ ಅಗಾಧದಿಂದಲೂ
14 For the precious things of the fruits of the sun, For the precious things of the growth of the moons,ಸೂರ್ಯನ ಆದಾಯದ ಅಮೂಲ್ಯವಾದ ಫಲಗಳಿಂದಲೂ ಚಂದ್ರನ ಆದಾಯದ ಅಮೂಲ್ಯವಾದ ವುಗಳಿಂದಲೂ
15 For the chief things of the ancient mountains, For the precious things of the everlasting hills,ಪೂರ್ವಕಾಲದ ಪರ್ವತಗಳ ಮುಖ್ಯವಾದವುಗ ಳಿಂದಲೂ ನಿತ್ಯವಾದ ಬೆಟ್ಟಗಳ ಅಮೂಲ್ಯವಾದ ವುಗಳಿಂದಲೂ
16 For the precious things of the earth and the fullness of it, The good will of him who lived in the bush. Let [the blessing] come on the head of Joseph, On the crown of the head of him who was separate from his brothers.ಭೂಮಿಯ ಅಮೂಲ್ಯವಾದವುಗಳಿಂದಲೂ ಅದರ ಸಂಪೂರ್ಣತೆಯಿಂದಲೂ ಕರ್ತನ ಕಡೆಯಿಂದ ಆಶೀರ್ವಾದ ಹೊಂದಲಿ; ಪೊದೆಯಲ್ಲಿ ವಾಸವಾಗಿ ದ್ದಾತನ ದಯೆಯು ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕವಾದವನ ತಲೆಯ ಮೇಲೆಯೂ ಬರಲಿ.
17 The firstborn of his herd, majesty is his; His horns are the horns of the wild-ox: With them he shall push the peoples all of them, [even] the ends of the earth: They are the ten thousands of Ephraim, They are the thousands of Manasseh.ಅವನ ಚೊಚ್ಚಲ ಹೋರಿಯಂತೆ ಅವನಿಗೆ ಪ್ರಭೆ ಇರುವದು; ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇವೆ. ಅವುಗಳಿಂದ ಜನಗಳನ್ನು ಒಟ್ಟಿಗೆ ಭೂಮಿಯ ಅಂತ್ಯಗಳ ವರೆಗೆ ನೂಕುತ್ತಾನೆ. ಇವು ಎಫ್ರಾಯಾಮನ ಹತ್ತು ಸಾವಿರಗಳೂ ಇವು ಮನಸ್ಸೆಯ ಸಹಸ್ರವೂ ಆಗಿವೆ ಎಂದು ಹೇಳಿದನು.
18 Of Zebulun he said, Rejoice, Zebulun, in your going out; Issachar, in your tents.ಅವನು ಜೆಬುಲೂನನ ವಿಷಯವಾಗಿ--ಜೆಬು ಲೂನನೇ, ನೀನು ಹೊರಡುವದರಲ್ಲಿ ಸಂತೋಷ ಪಡು. ಇಸ್ಸಾಕಾರನೇ ನಿನ್ನ ಗುಡಾರಗಳಲ್ಲಿ ಸಂತೋಷ ಪಡು.
19 They shall call the peoples to the mountain; There shall they offer sacrifices of righteousness: For they shall suck the abundance of the seas, The hidden treasures of the sand.ಅವರು ಜನಗಳನ್ನು ಬೆಟ್ಟಕ್ಕೆ ಕರೆಯುವರು. ಅಲ್ಲಿ ನೀತಿಯ ಬಲಿಗಳನ್ನು ಅರ್ಪಿಸುವರು. ಯಾಕಂದರೆ ಸಮುದ್ರಗಳ ಉಗ್ರಾಣವನ್ನೂ ಮರಳಿನ ಗುಪ್ತವಾದ ದ್ರವ್ಯವನ್ನೂ ಹೀರಿಕೊಳ್ಳುವರು ಎಂದು ಹೇಳಿದನು.
20 Of Gad he said, Blessed be he who enlarges Gad: He dwells as a lioness, Tears the arm, yes, the crown of the head.ಗಾದನ ವಿಷಯವಾಗಿ--ಗಾದನನ್ನು ವಿಸ್ತರಿಸ ಮಾಡಿದಾತನು ಸ್ತುತಿಹೊಂದಲಿ; ಅವನು ಸಿಂಹದಂತೆ ಮಲಗಿಕೊಂಡು ತೋಳನ್ನೂ ನೆತ್ತಿಯನ್ನೂ ಕೀಳುತ್ತಾನೆ.
21 He provided the first part for himself, For there was the lawgiver's portion reserved; He came [with] the heads of the people; He executed the righteousness of Yahweh, His ordinances with Israel.ಅವನು ಮೊದಲನೇ ಪಾಲನ್ನು ತನಗೆ ಒದಗಿಸಿ ಕೊಂಡನು; ಯಾಕಂದರೆ ಅಲ್ಲಿ ನ್ಯಾಯಾಧಿಪತಿಯ ಭಾಗ ನೇಮಿಸಲ್ಪಟ್ಟದೆ; ಜನರ ಮುಖ್ಯಸ್ಥರ ಸಂಗಡ ಬಂದು ಕರ್ತನ ನೀತಿಯನ್ನೂ ಇಸ್ರಾಯೇಲಿನ ಸಂಗಡ ಆತನ ನ್ಯಾಯಗಳನ್ನೂ ತೀರಿಸಿದನು ಎಂದು ಹೇಳಿದನು.
22 Of Dan he said, Dan is a lion's cub, That leaps forth from Bashan.ಅವನು ದಾನನ ವಿಷಯವಾಗಿ--ದಾನನು ಸಿಂಹದ ಮರಿಯೇ, ಬಾಶಾನಿನಿಂದ ಹಾರಿ ಬರುವನು ಎಂದು ಹೇಳಿದನು.
23 Of Naphtali he said, Naphtali, satisfied with favor, Full with the blessing of Yahweh, Possess you the west and the south.ಅವನು ನಫ್ತಾಲಿಯ ವಿಷಯವಾಗಿ--ಓ ನಫ್ತಾಲಿಯೇ, ಅನುಗ್ರಹದಿಂದ ತೃಪ್ತನೇ, ಕರ್ತನ ಆಶೀರ್ವಾದದಿಂದ ತುಂಬಿದವನೇ, ಪಶ್ಚಿಮವನ್ನೂ ದಕ್ಷಿಣವನ್ನೂ ಸ್ವಾಧೀನಮಾಡಿಕೋ ಎಂದು ಹೇಳಿದನು.
24 Of Asher he said, Blessed be Asher with children; Let him be acceptable to his brothers, Let him dip his foot in oil.ಅವನು ಆಶೇರನ ವಿಷಯವಾಗಿ--ಆಶೇರನು ಮಕ್ಕಳ ಆಶೀರ್ವಾದವನ್ನು ಹೊಂದಲಿ. ತನ್ನ ಸಹೋದ ರರ ಅಂಗೀಕಾರವನ್ನು ಹೊಂದಲಿ. ಅವನ ಕಾಲು ಎಣ್ಣೆಯಲ್ಲಿ ಅದ್ದಿರಲಿ.
25 Your bars shall be iron and brass; As your days, so shall your strength be.ಕಬ್ಬಿಣವೂ ತಾಮ್ರವೂ ನಿನ್ನ ಪಾದರಕ್ಷೆಯಾಗಿರಲಿ. ನಿನ್ನ ದಿವಸಗಳ ಪ್ರಕಾರ ನಿನ್ನ ಬಲವು ಇರಲಿ ಎಂದು ಹೇಳಿದನು.
26 There is none like God, Jeshurun, Who rides on the heavens for your help, In his excellency on the skies.ಯೆಶುರೂನನ ದೇವರ ಹಾಗೆ ಯಾರೂ ಇಲ್ಲ. ಆತನು ನಿನ್ನ ಸಹಾಯಕ್ಕೆ ಪರಲೋಕದಲ್ಲಿಯೂ ತನ್ನ ಘನತೆಯಲ್ಲಿಯೂ ಆಕಾಶದ ಮೇಲೆಯೂ ಬರುತ್ತಾನೆ.
27 The eternal God is [your] dwelling-place, Underneath are the everlasting arms. He thrust out the enemy from before you, Said, Destroy.ನಿತ್ಯನಾದ ದೇವರು ನಿನ್ನ ಆಶ್ರಯವು; ಆತನ ನಿತ್ಯವಾದ ತೋಳುಗಳು ಕೆಳಗಿವೆ, ಶತ್ರುವನ್ನು ನಿನ್ನ ಮುಂದೆ ಹೊರಡಿಸಿ--ಅವರನ್ನು ನಾಶಮಾಡು ಎಂದು ಹೇಳುವನು.
28 Israel dwells in safety, The fountain of Jacob alone, In a land of grain and new wine; Yes, his heavens drop down dew.ಇಸ್ರಾಯೇಲು ಒಂಟಿಯಾಗಿ ಭರವಸದಿಂದ ಸುರಕ್ಷಿತವಾಗಿ ವಾಸಿಸುವದು. ಧಾನ್ಯ ದ್ರಾಕ್ಷಾರಸಗಳ ದೇಶದಲ್ಲಿ ಯಾಕೋಬನ ಬುಗ್ಗೆ ಇರುವದು. ಅವನ ಆಕಾಶಗಳು ಸಹ ಮಂಜನ್ನು ಸುರಿಸುವವು.
29 Happy are you, Israel: Who is like you, a people saved by Yahweh, The shield of your help, The sword of your excellency! Your enemies shall submit themselves to you; You shall tread on their high places.ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.
Kannada Bible