Deuteronomy 5:1-21 in Kannada
Deuteronomy 5:1
ಆಗ ಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವರಿಗೆ--ಓ ಇಸ್ರಾಯೇಲೇ, ನಾನು ಈಹೊತ್ತು ನಿಮಗೆ ಹೇಳುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿರಿ; ಅವುಗಳನ್ನು ಕಲಿತು ಕೈಕೊಂಡು ನಡೆಯಬೇಕು.
Deuteronomy 5:2
ನಮ್ಮ ದೇವರಾದ ಕರ್ತನು ಹೋರೇ ಬಿನಲ್ಲಿ ನಮ್ಮ ಸಂಗಡ ಆ ಒಡಂಬಡಿಕೆಯನ್ನು ಮಾಡಿದನು.
Deuteronomy 5:3
ಕರ್ತನು ಆ ಒಡಂಬಡಿಕೆಯನ್ನು ನಮ್ಮ ಪಿತೃಗಳ ಸಂಗಡ ಅಲ್ಲ, ನಮ್ಮ ಸಂಗಡವೇ ಮಾಡಿದನು. ನಾವೆಲ್ಲರೂ ಈಹೊತ್ತು ಇಲ್ಲಿ ಜೀವಿತರಾಗಿದ್ದೇವೆ.
Deuteronomy 5:4
ಮುಖಾಮುಖಿಯಾಗಿ ಕರ್ತನು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಮಾತನಾಡಿದನು.
Deuteronomy 5:5
(ಆ ಕಾಲದಲ್ಲಿ ನಾನು ಕರ್ತನ ವಾಕ್ಯವನ್ನು ನಿಮಗೆ ತಿಳಿಸುವ ಹಾಗೆ ಕರ್ತನಿಗೂ ನಿಮಗೂ ನಡುವೆ ನಿಂತಿದ್ದೆನು; ನೀವು ಆ ಬೆಂಕಿಗೆ ಭಯಪಟ್ಟು ಬೆಟ್ಟದ ಮೇಲೆ ಏರಲಿಲ್ಲ.) ಆತನು ಹೇಳಿದ್ದೇನಂದರೆ--
Deuteronomy 5:6
ನಿನ್ನನ್ನು ಐಗುಪ್ತದೇಶದೊಳಗಿಂದ ಅಂದರೆ ದಾಸ ತ್ವದ ಮನೆಯೊಳಗಿಂದ ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಾನೇ.
Deuteronomy 5:7
ನನ್ನ ಮುಂದೆ ನಿನಗೆ ಬೇರೆ ದೇವರುಗಳು ಇರಬಾರದು.
Deuteronomy 5:8
ಮೇಲಿನ ಆಕಾಶ ದಲ್ಲಾಗಲಿ ಕೆಳಗಿನ ಭೂಮಿಯಲ್ಲಾಗಲಿ ಭೂಮಿಯ ಕೆಳಗಿನ ನೀರುಗಳಲ್ಲಾಗಲಿ ಇರುವಂಥ ಯಾವ ದೊಂದರ ರೂಪದ ವಿಗ್ರಹವನ್ನು ನಿನಗೆ ಮಾಡಿ ಕೊಳ್ಳಬಾರದು,
Deuteronomy 5:9
ಅವುಗಳಿಗೆ ಅಡ್ಡಬೀಳಲೂಬಾರದು, ಸೇವಿಸಲೂಬಾರದು. ಯಾಕಂದರೆ ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆಮಾಡುವವರಲ್ಲಿ ಪಿತೃಗಳ ಅಕ್ರಮವನ್ನು ಮಕ್ಕಳ ಮೇಲೆ ಮೂರನೆಯ ನಾಲ್ಕನೆಯ ತಲಾಂತರದ ವರೆಗೆ ನ್ಯಾಯತೀರಿಸುತ್ತೇನೆ.
Deuteronomy 5:10
ಆದರೆ ನನ್ನನ್ನು ಪ್ರೀತಿ ಮಾಡಿ ನನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಸಾವಿರಗಳ ವರೆಗೆ ಕರುಣೆ ತೋರಿಸುತ್ತೇನೆ.
Deuteronomy 5:11
ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬೇಡ; ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿಯೆಂದು ಎಣಿಸುವದಿಲ್ಲ.
Deuteronomy 5:12
ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದಂತೆ ಸಬ್ಬತ್ ದಿವಸವನ್ನು ಪರಿಶುದ್ಧಮಾಡುವದಕ್ಕೆ ಅದನ್ನು ಕಾಪಾಡು.
Deuteronomy 5:13
ಆರು ದಿವಸಗಳಲ್ಲಿ ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಬೇಕು.
Deuteronomy 5:14
ಏಳನೇ ದಿವಸವು ನಿನ್ನ ದೇವರಾದ ಕರ್ತನ ಸಬ್ಬತ್ ದಿವಸವೇ; ಅದ ರಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಎತ್ತೂ ಕತ್ತೆಯೂ ಎಲ್ಲಾಪಶುಗಳೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಯೂ ಯಾವ ಕೆಲಸ ವನ್ನೂ ಮಾಡಬಾರದು. ನಿನ್ನ ದಾಸನೂ ದಾಸಿಯೂ ನಿನ್ನ ಹಾಗೆ ವಿಶ್ರಮಿಸಿಕೊಳ್ಳಬೇಕು.
Deuteronomy 5:15
ನೀನು ಐಗುಪ್ತ ದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಹೊರಗೆ ಬರಮಾಡಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದಕಾರಣ ನಿನ್ನ ದೇವರಾದ ಕರ್ತನು ನಿನಗೆ ಸಬ್ಬತ್ ದಿವಸವನ್ನು ಆಚರಿಸಬೇಕೆಂದು ಆಜ್ಞಾಪಿಸಿದ್ದಾನೆ.
Deuteronomy 5:16
ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ ನಿನ್ನ ತಾಯಿಯನ್ನೂ ಸನ್ಮಾನಿಸು.
Deuteronomy 5:17
ಕೊಲ್ಲಬೇಡ
Deuteronomy 5:18
ವ್ಯಭಿಚಾರ ಮಾಡಬೇಡ.
Deuteronomy 5:19
ಕದಿಯಬೇಡ.
Deuteronomy 5:20
ನಿನ್ನ ನೆರೆಯವನ ಮೇಲೆ ಸುಳ್ಳುಸಾಕ್ಷಿ ಹೇಳಬೇಡ.
Deuteronomy 5:21
ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ; ನೆರೆಯವನ ಮನೆಯನ್ನೂ ಅವನ ಹೊಲವನ್ನೂ ದಾಸ ದಾಸಿಯರನ್ನೂ ಪಶು ಕತ್ತೆಗಳನ್ನೂ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬೇಡ ಎಂದು ಹೇಳಿದನು.
Kannada Bible