Exodus 38 - WEB (Kannada)
1 He made the altar of burnt offering of acacia wood. It was square. Its length was five cubits, its breadth was five cubits, and its height was three cubits.ಅವನು ಜಾಲೀ ಮರದಿಂದ ದಹನ ಬಲಿಪೀಠವನ್ನು ಮಾಡಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾ ಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು.
2 He made its horns on its four corners. Its horns were of one piece with it, and he overlaid it with brass.ಇದಲ್ಲದೆ ಅವನು ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಿದನು; ಅದರ ಕೊಂಬುಗಳು ಜಾಲೀ ಮರದ್ದೇ ಆಗಿದ್ದವು; ಅವನು ಅವುಗಳನ್ನು ಹಿತ್ತಾಳೆಯಿಂದ ಹೊದಿಸಿದನು.
3 He made all the vessels of the altar, the pots, the shovels, the basins, the flesh-hooks, and the fire pans. He made all its vessels of brass.ಅನಂತರ ಅವನು ಬಲಿಪೀಠದ ಎಲ್ಲಾ ಸಾಮಾನುಗಳನ್ನು ಮಾಡಿ ದನು: ಕೊಡಗಳು, ಸಲಿಕೆಗಳು, ಬೋಗುಣಿಗಳು, ಮಾಂಸ ಸಿಕ್ಕಿಸುವ ಕೊಂಡಿಗಳು, ಅಗ್ಗಿಷ್ಟಿಗೆಗಳು; ಇವೆಲ್ಲ ವುಗಳನ್ನು ಅವನು ಹಿತ್ತಾಳೆಯಿಂದ ಮಾಡಿದನು.
4 He made for the altar a grating of a network of brass, under the ledge around it beneath, reaching halfway up.ಬಲಿಪೀಠದ ಕೆಳಗಿನ ಆವರಣದಲ್ಲಿ ನೆಲದಿಂದ ಪೀಠದ ಮಧ್ಯದ ವರೆಗೆ ಬರುವಂತೆ ಜಾಲರೀ ಕೆಲಸದಿಂದ ಹಿತ್ತಾಳೆಯ ಬೆಂಕಿಗೂಡನ್ನು ಮಾಡಿದನು.
5 He cast four rings for the four ends of brass grating, to be places for the poles.ಆ ಹಿತ್ತಾಳೆ ಯ ಬೆಂಕಿಯ ಗೂಡನ್ನು ಹೊರುವಾಗ ಕೋಲು ಸಿಕ್ಕಿಸುವದಕ್ಕೋಸ್ಕರ ಅದರ ನಾಲ್ಕು ತುದಿಗಳಲ್ಲಿ ನಾಲ್ಕು ಉಂಗುರಗಳನ್ನು ಎರಕಹೊಯ್ದನು.
6 He made the poles of acacia wood, and overlaid them with brass.ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳಿಗೆ ಹಿತ್ತಾ ಳೆಯ ಹೊದಿಕೆಯನ್ನು ಹೊದಿಸಿದನು.
7 He put the poles into the rings on the sides of the altar, with which to carry it. He made it hollow with planks.ಬಲಿಪೀಠವನ್ನು ಹೊರುವದಕ್ಕೆ ಅದರ ಬದಿಯಲ್ಲಿ ಮಾಡಿದ ಉಂಗುರ ಗಳಲ್ಲಿ ಆ ಕೋಲುಗಳನ್ನು ಸಿಕ್ಕಿಸಿದನು; ಅವನು ಆ ಬಲಿಪೀಠವನ್ನು ಹಲಗೆಗಳಿಂದ ಪೊಳ್ಳಾಗಿ ಮಾಡಿದನು.
8 He made the basin of brass, and its base of brass, out of the mirrors of the ministering women who ministered at the door of the tent of meeting.ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಸೇರಿಬರು ತ್ತಿದ್ದ ಸ್ತ್ರೀಯರ ಕನ್ನಡಿಗಳಿಂದ ಅವನು ಹಿತ್ತಾಳೆಯ ಗಂಗಾಳವನ್ನೂ ಅದರ ಅಡ್ಡಣಿಗೆಯನ್ನು ಮಾಡಿದನು.
9 He made the court: for the south side southward the hangings of the court were of fine twined linen, one hundred cubits;ಅವನು ಅಂಗಳವನ್ನು ಮಾಡಿದನು: ಅಂಗಳದ ದಕ್ಷಿಣ ದಿಕ್ಕಿನ ಭಾಗದಲ್ಲಿದ್ದ ತೆರೆಗಳು ನಯವಾಗಿ ಹೊಸೆದ ನೂಲಿನ ಬಟ್ಟೆಯಿಂದ ಮಾಡಲ್ಪಟ್ಟಿದ್ದವು. ಅವು ನೂರು ಮೊಳ ಉದ್ದವಾಗಿದ್ದವು.
10 their pillars were twenty, and their sockets twenty, of brass; the hooks of the pillars and their fillets were of silver.ಅವುಗಳಿಗೆ ಇಪ್ಪತ್ತು ಸ್ತಂಭಗಳಿದ್ದವು, ಅವುಗಳಿಗೆ ಇಪ್ಪತ್ತು ಹಿತ್ತಾಳೆಯ ಕಾಲು ಕುಣಿಕೆಗಳಿದ್ದವು; ಆ ಸ್ತಂಭಗಳಿಗೆ ಇದ್ದ ಕೊಂಡಿ ಮತ್ತು ಅಲಂಕಾರದ ಪಟ್ಟಿಗಳು ಬೆಳ್ಳಿಯಿಂದ ಮಾಡಲ್ಪ ಟ್ಟಿದ್ದವು.
11 For the north side one hundred cubits, their pillars twenty, and their sockets twenty, of brass; the hooks of the pillars, and their fillets, of silver.ಉತ್ತರ ದಿಕ್ಕಿನ ತೆರೆಗಳು ನೂರು ಮೊಳ ಉದ್ದವಾಗಿದ್ದವು; ಅವುಗಳಿಗೆ ಇಪ್ಪತ್ತು ಸ್ತಂಭಗಳಿದ್ದು ಆ ಸ್ತಂಭಗಳಿಗೆ ಇಪ್ಪತ್ತು ಹಿತ್ತಾಳೆಯ ಕಾಲು ಕುಣಿಕೆ ಗಳಿದ್ದವು. ಆ ಸ್ತಂಭಗಳ ಕೊಂಡಿ ಮತ್ತು ಅಲಂಕಾರದ ಪಟ್ಟಿಗಳು ಬೆಳ್ಳಿಯದಾಗಿದ್ದವು.
12 For the west side were hangings of fifty cubits, their pillars ten, and their sockets ten; the hooks of the pillars, and their fillets, of silver.ಪಶ್ಚಿಮ ದಿಕ್ಕಿನ ತೆರೆಗಳು ಐವತ್ತು ಮೊಳ ಉದ್ದವಾಗಿದ್ದವು; ಅವುಗಳಿಗೆ ಹತ್ತು ಸ್ತಂಭಗಳಿದ್ದು ಆ ಸ್ತಂಭಗಳಿಗೆ ಹತ್ತು ಹಿತ್ತಾಳೆಯ ಕಾಲು ಕುಣಿಕೆಗಳಿದ್ದವು. ಆ ಸ್ತಂಭಗಳ ಕೊಂಡಿಗಳೂ ಮತ್ತು ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾಗಿದ್ದವು.
13 For the east side eastward fifty cubits.ಪೂರ್ವ ದಿಕ್ಕಿನ ಬದಿಗೆ ಐವತ್ತು ಮೊಳ.
14 The hangings for the one side were fifteen cubits; their pillars three, and their sockets three;ದ್ವಾರದ ಒಂದು ಬದಿಯ ತೆರೆಗಳು ಹದಿನೈದು ಮೊಳ ಉದ್ದ ವಾಗಿದ್ದವು; ಅವುಗಳಿಗೆ ಮೂರು ಸ್ತಂಭಗಳೂ ಆ ಸ್ತಂಭಗಳಿಗೆ ಮೂರು ಕಾಲುಕುಣಿಕೆಗಳೂ ಇದ್ದವು.
15 and so for the other side: on this hand and that hand by the gate of the court were hangings of fifteen cubits; their pillars three, and their sockets three.ಅಂಗಳದ ಇನ್ನೊಂದು ಬದಿಯ ದ್ವಾರದ ಎರಡು ಕಡೆಗಳಲ್ಲಿ ಹದಿನೈದು ಮೊಳ ಉದ್ದವಾದ ತೆರೆಗಳಿದ್ದವು; ಅವುಗಳಿಗೆ ಮೂರು ಸ್ತಂಭಗಳೂ ಆ ಸ್ತಂಭಗಳಿಗೆ ಮೂರು ಕಾಲುಕುಣಿಕೆಗಳೂ ಇದ್ದವು.
16 All the hangings around the court were of fine twined linen.ಅಂಗಳದ ಸುತ್ತಲಿದ್ದ ಎಲ್ಲ ತೆರೆಗಳು ನಯವಾಗಿ ಹೊಸೆದ ನೂಲಿನ ಬಟ್ಟೆಯಿಂದ ಮಾಡಲ್ಪಟ್ಟಿದ್ದವು.
17 The sockets for the pillars were of brass. The hooks of the pillars and their fillets were of silver; and the overlaying of their capitals, of silver; and all the pillars of the court were filleted with silver.ಸ್ತಂಭಗಳ ಕಾಲು ಕುಣಿಕೆಗಳು ಹಿತ್ತಾಳೆಯವುಗಳು; ಆ ಸ್ತಂಭಗಳ ಕೊಂಡಿಯೂ ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾ ಗಿದ್ದವು; ಕಂಬದ ಬೋದಿಗಳು ಬೆಳ್ಳಿಯಿಂದ ಹೊದಿಸ ಲ್ಪಟ್ಟಿದ್ದವು; ಅಂಗಳದ ಎಲ್ಲಾ ಸ್ತಂಭಗಳು ಬೆಳ್ಳಿಯ ಅಲಂಕಾರದ ಪಟ್ಟಿಗಳಿಂದ ಸುತ್ತುವರಿಯಲ್ಪಟ್ಟಿದ್ದವು.
18 The screen for the gate of the court was the work of the embroiderer, of blue, purple, scarlet, and fine twined linen. Twenty cubits was the length, and the height in the breadth was five cubits, like to the hangings of the court.ಅಂಗಳ ದ್ವಾರದ ತೆರೆಯು ನಯವಾಗಿ ಹೊಸೆದ ನೂಲಿನ ಬಟ್ಟೆಯಾಗಿತ್ತು; ಅದರ ಮೇಲೆ ನೀಲಿ ಧೂಮ್ರ ರಕ್ತವರ್ಣ ದಾರಗಳಿಂದ ಕಸೂತಿ ಕೆಲಸ ಮಾಡಲಾಗಿತ್ತು; ಅವು ಇಪ್ಪತ್ತು ಮೊಳ ಉದ್ದವಾಗಿದ್ದು ಅಗಲ ಎತ್ತರಗಳಲ್ಲಿ ಅಂಗಳದ ಉಳಿದ ತೆರೆಗಳಿಗೆ ಸರಿಯಾಗುವಂತೆ ಐದು ಮೊಳ ಇತ್ತು.
19 Their pillars were four, and their sockets four, of brass; their hooks of silver, and the overlaying of their capitals, and their fillets, of silver.ಅವುಗಳಿಗೆ ನಾಲ್ಕು ಸ್ತಂಭಗಳು, ಆ ಸ್ತಂಭಗಳಿಗೆ ನಾಲ್ಕು ಹಿತ್ತಾಳೆಯ ಕಾಲು ಕುಣಿಕೆಗಳು ಇದ್ದವು; ಅವುಗಳ ಕೊಂಡಿಗಳು ಬೆಳ್ಳಿಯದಾಗಿದ್ದವು, ಅವುಗಳ ಬೋದಿಗಳ ಹೊದಿಕೆಯೂ ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾಗಿದ್ದವು.
20 All the pins of the tent, and around the court, were of brass.ಗುಡಾರದ ಅಂಗಳ ಸುತ್ತಲೂ ಇರುವ ಗೂಟಗಳು ಹಿತ್ತಾಳೆಯದಾಗಿದ್ದವು.
21 This is the amount of material used for the tent, even the Tent of the Testimony, as they were counted, according to the commandment of Moses, for the service of the Levites, by the hand of Ithamar, the son of Aaron the priest.ಮೋಶೆಯ ಆಜ್ಞೆಯ ಮೇರೆಗೆ ಲೇವಿಯ ಸೇವೆಗಾಗಿ ಯಾಜಕನಾದ ಆರೋನನ ಮಗ ಈತಾಮಾರನ ಕೈಗೆ ಒಪ್ಪಿಸಿದ ಸಾಕ್ಷಿ ಗುಡಾರವನ್ನೊಳಗೊಂಡ ಗುಡಾ ರವನ್ನು ನಿರ್ಮಿಸಲು ಮಾಡಬೇಕಾದ ಒಟ್ಟು ಏರ್ಪಾಡುಗಳು ಇವೇ.
22 Bezalel the son of Uri, the son of Hur, of the tribe of Judah, made all that Yahweh commanded Moses.ಕರ್ತನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಯೂದಾ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲೇಲನು ಮಾಡಿದನು.
23 With him was Oholiab, the son of Ahisamach, of the tribe of Dan, an engraver, and a skillful workman, and an embroiderer in blue, in purple, in scarlet, and in fine linen.ಅವನ ಜೊತೆಯಲ್ಲಿ ದಾನ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲಿಯಾಬನೂ ಇದ್ದನು. ಇವನು ಕೆತ್ತನೆ ಕೆಲಸ ಮಾಡುವವನೂ ಕುಶಲ ಕೆಲಸಗಾರನೂ ನೀಲಿ ಧೂಮ್ರ ರಕ್ತವರ್ಣ ನಯವಾದ ನೂಲು ಇವುಗಳಿಂದ ಕಸೂತಿ ಕೆಲಸ ಮಾಡುವವನೂ ಆಗಿದ್ದನು.
24 All the gold that was used for the work in all the work of the sanctuary, even the gold of the offering, was twenty-nine talents, and seven hundred thirty shekels, after the shekel of the sanctuary.ಪರಿಶುದ್ಧಾಲಯ ನಿಯಮದ ಮೇರೆಗೆ ಪರಿಶುದ್ಧ ಕೆಲಸಕ್ಕೆ ಉಪಯೋಗಿಸಿದ ಎಲ್ಲಾ ಬಂಗಾರವು ಕಾಣಿಕೆಯ ಬಂಗಾರವನ್ನೊಳಗೊಂಡು ಒಟ್ಟು ಇಪ್ಪ ತ್ತೊಂಭತ್ತು ತಲಾಂತು ಮತ್ತು ಏಳುನೂರ ಮೂವತ್ತು ಶೆಕೆಲುಗಳಾಗಿತ್ತು.
25 The silver of those who were numbered of the congregation was one hundred talents, and one thousand seven hundred seventy-five shekels, after the shekel of the sanctuary:ಪರಿಶುದ್ಧಾಲಯ ನಿಯಮದ ಮೇರೆಗೆ ಸಭೆ ಯವರು ಎಣಿಸಿದ ಬೆಳ್ಳಿಯು ಒಂದು ನೂರು ತಲಾಂತು, ಒಂದು ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲು ಗಳಾಗಿತ್ತು.
26 a beka a head, that is, half a shekel, after the shekel of the sanctuary, for everyone who passed over to those who were numbered, from twenty years old and upward, for six hundred three thousand five hundred fifty men.ಪರಿಶುದ್ಧಾಲಯ ನಿಯಮದ ಮೇರೆಗೆ ತಲಾ ಒಂದು ಬೆಕಾ, ಅಂದರೆ ಅರ್ಧ ಶೆಕೆಲಿನಂತೆ ಇಪ್ಪತ್ತು ಮೊದಲುಗೊಂಡು ಅದಕ್ಕೆ ಮೇಲಿನ ಪ್ರಾಯ ದವರನ್ನು ಲೆಕ್ಕ ಮಾಡಲಾಗಿ ಆರು ಲಕ್ಷ ಮೂರು ಸಾವಿರದ ಐದು ನೂರ ಐವತ್ತು ಗಂಡಸರ ಸಂಖ್ಯೆ ಇತ್ತು.
27 The one hundred talents of silver were for casting the sockets of the sanctuary, and the sockets of the veil; one hundred sockets for the one hundred talents, a talent for a socket.ಪರಿಶುದ್ಧಾಲಯದ ಕುಣಿಕೆಗಳಿಗೆ ಮತ್ತು ತೆರೆಗಳ ಕುಣಿಕೆಗಳಿಗೆ ಎರಕ ಹೊಯ್ಯಲು ಒಂದು ನೂರು ತಲಾಂತು ಬೆಳ್ಳಿ ಹಿಡಿಯಿತು; ಒಂದು ಕುಣಿಕೆಗೆ ಒಂದು ತಲಾಂತಿನಂತೆ ನೂರು ಕುಣಿಕೆಗಳಿಗೆ ನೂರು ತಲಾಂತು ಬೆಳ್ಳಿ ಆಯಿತು.
28 Of the one thousand seven hundred seventy-five shekels he made hooks for the pillars, overlaid their capitals, and made fillets for them.ಒಂದು ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲಿನಿಂದ ಅವನು ಕಂಬಗಳಿಗೆ ಕೊಂಡಿಗಳನ್ನೂ ಕಂಬದ ಬೋದಿಗೆ ಮೇಲ್ಹೊದಿಕೆ ಯನ್ನೂ ಅಲಂಕಾರದ ಪಟ್ಟಿಗಳನ್ನೂ ಮಾಡಿದನು.
29 The brass of the offering was seventy talents, and two thousand four hundred shekels.ಕಾಣಿಕೆಯಾಗಿ ಬಂದ ಹಿತ್ತಾಳೆಯು ಎಪ್ಪತ್ತು ತಲಾಂತು ಮತ್ತು ಎರಡು ಸಾವಿರದ ನಾಲ್ಕುನೂರು ಶೆಕೆಲುಗಳಾಗಿತ್ತು.
30 With this he made the sockets to the door of the tent of meeting, the brazen altar, the brazen grating for it, all the vessels of the altar,ಆ ಹಿತ್ತಾಳೆಯಿಂದ ಅವನು ಸಭಾಗುಡಾರದ ದ್ವಾರಗಳಿಗೆ ಕುಣಿಕೆಗಳನ್ನೂ ಬಲಿ ಪೀಠವನ್ನೂ ಅದಕ್ಕೆ ಜಾಲರಿಯನ್ನೂ ಬಲಿಪೀಠದ ಸಮಸ್ತ ಪ್ರಾತ್ರೆಗಳನ್ನೂ ಮಾಡಿದನು.
31 the sockets around the court, the sockets of the gate of the court, all the pins of the tent, and all the pins around the court.ಸುತ್ತಲಿನ ಅಂಗಳದ ಕುಣಿಕೆಗಳನ್ನೂ ಗುಡಾರದ ಗೂಟಗಳನ್ನೂ ಅಂಗಳದ ಸುತ್ತಲಿನ ಎಲ್ಲಾ ಗೂಟಗಳನ್ನೂ ಮಾಡಿದನು.
Kannada Bible