ಯೆರೆಮಿಯ 51:8 in Kannada

ಕನ್ನಡ ಕನ್ನಡ ಬೈಬಲ್ ಯೆರೆಮಿಯ ಯೆರೆಮಿಯ 51 ಯೆರೆಮಿಯ 51:8

Jeremiah 51:8
ಇದ್ದಕ್ಕಿದ್ದ ಹಾಗೆ ಬಾಬೆಲ್‌ ಬಿದ್ದು ಮುರಿಯಲ್ಪಟ್ಟಿದೆ; ಅದರ ವಿಷಯ ಗೋಳಾ ಡಿರಿ; ಅದರ ನೋವಿಗೆ ತೈಲ ತಕ್ಕೊಳ್ಳಿರಿ; ಒಂದು ವೇಳೆ ವಾಸಿಯಾದೀತು.

Jeremiah 51:7Jeremiah 51Jeremiah 51:9

Jeremiah 51:8 in Other Translations

King James Version (KJV)
Babylon is suddenly fallen and destroyed: howl for her; take balm for her pain, if so be she may be healed.

American Standard Version (ASV)
Babylon is suddenly fallen and destroyed: wail for her; take balm for her pain, if so be she may be healed.

Bible in Basic English (BBE)
Sudden is the downfall of Babylon and her destruction: make cries of grief for her; take sweet oil for her pain, if it is possible for her to be made well.

Darby English Bible (DBY)
Babylon is suddenly fallen and ruined. Howl over her; take balm for her pain, if so be she may be healed.

World English Bible (WEB)
Babylon is suddenly fallen and destroyed: wail for her; take balm for her pain, if so be she may be healed.

Young's Literal Translation (YLT)
Suddenly hath Babylon fallen, Yea, it is broken, howl ye for it, Take balm for her pain, if so be it may be healed.

Babylon
פִּתְאֹ֛םpitʾōmpeet-OME
is
suddenly
נָפְלָ֥הnoplânofe-LA
fallen
בָבֶ֖לbābelva-VEL
destroyed:
and
וַתִּשָּׁבֵ֑רwattiššābērva-tee-sha-VARE
howl
הֵילִ֣ילוּhêlîlûhay-LEE-loo
for
עָלֶ֗יהָʿālêhāah-LAY-ha
her;
take
קְח֤וּqĕḥûkeh-HOO
balm
צֳרִי֙ṣŏriytsoh-REE
for
her
pain,
לְמַכְאוֹבָ֔הּlĕmakʾôbāhleh-mahk-oh-VA
be
so
if
אוּלַ֖יʾûlayoo-LAI
she
may
be
healed.
תֵּרָפֵֽא׃tērāpēʾtay-ra-FAY

Cross Reference

ಯೆರೆಮಿಯ 46:11
ಐಗುಪ್ತದ ಮಗಳಾದ ಕನ್ಯಾಸ್ತ್ರೀಯೇ, ಗಿಲ್ಯಾದಿಗೆ ಹೋಗಿ ತೈಲವನ್ನು ತಕ್ಕೋ! ನೀನು ಬಹಳ ಮದ್ದು ತಕ್ಕೊಳ್ಳುವದು ವ್ಯರ್ಥವಾಗಿದೆ; ನಿನಗೆ ಗುಣವಾಗು ವದಿಲ್ಲ.

ಯೆಶಾಯ 21:9
ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ ಮತ್ತು ಪ್ರತ್ಯುತ್ತರ ವಾಗಿ--ಬಾಬೆಲ್‌ ಬಿತ್ತು, ಆದರೆ ಕೆತ್ತಿದ ದೇವತೆಗಳ ವಿಗ್ರಹಗಳನ್ನು ಮುರಿದು ನೆಲಸಮ ಮಾಡಿಬಿಟ್ಟರು ಎಂದು ಹೇಳಿದನು.

ಪ್ರಕಟನೆ 14:8
ಅವನ ಹಿಂದೆ ಇನ್ನೊಬ್ಬ ದೂತನು ಬಂದು--ಬಾಬೆಲೆಂಬ ಆ ಮಹಾನಗರಿಯು ಬಿದ್ದಳು, ಬಿದ್ದಳು; ಯಾಕಂದರೆ ಅವಳು ತನ್ನ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಸಕಲ ಜನಾಂಗಗಳು ಕುಡಿಯುವಂತೆ ಮಾಡಿದಳು ಎಂದು ಹೇಳಿದನು.

ಪ್ರಕಟನೆ 18:2
ಅವನು ಗಟ್ಟಿ ಯಾದ ಶಬ್ದದಿಂದ ಕೂಗುತ್ತಾ--ಮಹಾಬಾಬೆಲ್‌ ಬಿದ್ದಳು, ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಪಂಜರವೂ ಆದಳು.

ಯೆರೆಮಿಯ 50:2
ಜನಾಂಗಗಳಿಗೆ ತಿಳಿಸಿರಿ, ಸಾರಿರಿ; ಧ್ವಜವನ್ನೆತ್ತಿರಿ; ಸಾರಿರಿ, ಮರೆಮಾಡಬೇಡಿರಿ, ಬಾಬೆಲು ಹಿಡಿಯ ಲ್ಪಟ್ಟಳು, ಬೇಲ್‌ನಿಗೆ ನಾಚಿಕೆಯಾಯಿತು, ಮೆರೋದಾ ಕನು ತುಂಡು ತುಂಡಾಗಿ ಮುರಿದು ಹೋದನು, ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಅವಳ ವಿಗ್ರಹಗಳು ಮುರಿದು ಹೋದವೆಂದು ಹೇಳಿರಿ;

ಯೆರೆಮಿಯ 48:20
ಮೋವಾಬು ನಾಚಿಕೆಪಡುತ್ತದೆ; ಮುರಿದು ಹೋಯಿತು; ಗೋಳಾಡಿರಿ, ಕೂಗಿರಿ; ಮೋವಾಬು ಸೂರೆಯಾಯಿತೆಂದು ಅರ್ನೋನಿನಲ್ಲಿ ಅದನ್ನು ತಿಳಿಸಿರಿ.

ಪ್ರಕಟನೆ 18:17
ಅಷ್ಟು ದೊಡ್ಡ ಐಶ್ವರ್ಯವು ಒಂದೇ ಗಳಿಗೆಯಲ್ಲಿ ಇಲ್ಲದೆ ಹೋಯಿತಲ್ಲಾ ಅನ್ನುವರು. ಇದಲ್ಲದೆ ಹಡಗುಗಳ ಯಜಮಾನರೂ ಹಡಗುಗಳಲ್ಲಿ ಜೊತೆಯಾಗಿರುವವರೂ ನಾವಿಕರೂ ಸಮುದ್ರದ ಮೇಲೆ ವ್ಯಾಪಾರ ಮಾಡುವವರೆಲ್ಲರೂ ದೂರದಲ್ಲಿ ನಿಂತು

ಪ್ರಕಟನೆ 18:8
ಆದದರಿಂದ ಅವಳಿಗೆ ಮರಣ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿ ಸುವವು; ಅವಳು ಬೆಂಕಿಯಿಂದ ಸಂಪೂರ್ಣವಾಗಿ ಸುಟ್ಟುಹೋಗುವಳು. ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ.

ನಹೂಮ 3:19
ನಿನ್ನ ಗಾಯವು ಗುಣಹೊಂದದು; ನಿನ್ನ ಗಾಯ ಕಠಿಣ ವಾದದ್ದು; ನಿನ್ನ ಸುದ್ದಿಯನ್ನು ಕೇಳುವವರೆಲ್ಲರು ನಿನಗೆ ಚಪ್ಪಾಳೆ ಹೊಡೆಯುವರು; ನಿನ್ನ ಕೆಟ್ಟತನವು ನಿತ್ಯವಾಗಿ ಯಾರ ಮೇಲೆ ಹಾದುಹೋಗದೆ ಇತ್ತು?

ದಾನಿಯೇಲನು 5:31
ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು.

ದಾನಿಯೇಲನು 5:24
ಅದಕ್ಕಾಗಿಯೇ ಆತನಿಂದ ಕಳುಹಿಸಲ್ಪಟ್ಟ ಕೈಯ ಭಾಗವು ಬಂದು ಆ ಬರಹವನ್ನು ಬರೆಯಿತು.

ಯೆಹೆಜ್ಕೇಲನು 30:2
ಮನುಷ್ಯಪುತ್ರನೇ, ಪ್ರವಾದಿಸು ಮತ್ತು ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅಯ್ಯೋ! ದಿನವೇ ಎಂದು ಅರಚಿಕೊಳ್ಳಿರಿ.

ಯೆಹೆಜ್ಕೇಲನು 27:30
ನಿನ್ನ ನಿಮಿತ್ತ ದುಃಖದಿಂದ ಅರಚಿ ತಲೆಗೆ ದೂಳೆರೆಚಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡಿ;

ಯೆರೆಮಿಯ 51:41
ಶೇಷಕ್‌ ಹೇಗೆ ಹಿಡಿಯಲ್ಪಟ್ಟಿದೆ, ಸಮಸ್ತ ಭೂಮಿಯ ಹೊಗಳಿಕೆಯು ಆಶ್ಚರ್ಯಗೊಂಡಿದೆ; ಬಾಬೆಲ್‌ ಜನಾಂಗಗಳೊಳಗೆ ಹೀಗೆ ವಿಸ್ಮಯಗೊಳಗಾಯಿತು!

ಯೆರೆಮಿಯ 48:31
ಆದದರಿಂದ ನಾನು ಮೋವಾಬಿನ ನಿಮಿತ್ತ ಗೋಳಿಡುವೆನು; ಸಮಸ್ತ ಮೋವಾಬಿನ ನಿಮಿತ್ತ ಕೂಗುವೆನು; ಕೀರ್‌ ಹೆರೆಸಿನ ಮನುಷ್ಯರ ನಿಮಿತ್ತ ನನ್ನ ಹೃದಯವು ದುಃಖಿಸುವದು.

ಯೆರೆಮಿಯ 30:12
ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಗಾಯವು ಗುಣಹೊಂದದು ನಿನ್ನ ಬಾಸುಂಡೆಯು ಅಘೋರ ವಾದದ್ದು.

ಯೆರೆಮಿಯ 8:22
ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಮಗಳಿಗೆ ಯಾಕೆ ಸ್ವಸ್ಥವಾಗಲಿಲ್ಲ?

ಯೆಶಾಯ 47:9
ಒಂದೇ ದಿನದೊಳಗೆ ಒಂದು ಕ್ಷಣದಲ್ಲೇ, ಪುತ್ರ ಶೋಕ ಮತ್ತು ವಿಧವಾ ಸ್ಥಿತಿಯು ಇವೆರಡೂ ನಿನಗೆ ಬರುವವು; ನಿನ್ನ ಮಂತ್ರಗಳು ಬಹಳವಾಗಿರುವದ ರಿಂದಲೂ ನಿನ್ನ ಮಾಟಗಳು ಹೆಚ್ಚಾಗಿರುವದರಿಂದಲೂ ಅವು ಸಂಪೂರ್ಣವಾಗಿ ನಿನ್ನ ಮೇಲೆ ಬರುವವು.

ಯೆಶಾಯ 13:6
ನೀವು ಗೋಳಾ ಡಿರಿ, ಕರ್ತನ ದಿನವು ಸವಿಾಪವಾಯಿತು; ಅದು ಸರ್ವಶಕ್ತನಿಂದ ನಾಶನದಂತೆ ಬರುವದು.