Bible

John 14 - DBY (Kannada)

1 Let not your heart be troubled; ye believe on God, believe also on me.1 ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.

2 In my Father's house there are many abodes; were it not so, I had told you: for I go to prepare you a place;ನನ್ನ ತಂದೆಯ ಮನೆಯಲ್ಲಿ ಬಹಳ ಭವನ ಗಳಿವೆ; ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು, ನಾನು ನಿಮಗೆ ಸ್ಥಳವನ್ನು ಸಿದ್ಧಮಾಡುವದಕ್ಕೆ ಹೋಗು ತ್ತೇನಲ್ಲಾ.

3 and if I go and shall prepare you a place, I am coming again and shall receive you to myself, that where I am ye also may be.ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಮಾಡಿ ತಿರಿಗಿ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಆಗ ನಾನಿರುವಲ್ಲಿ ನೀವು ಸಹ ಇರುವಿರಿ.

4 And ye know where I go, and ye know the way.ನಾನು ಎಲ್ಲಿಗೆ ಹೋಗುತ್ತೇನೆಂಬದು ನಿಮಗೆ ತಿಳಿದದೆ; ಮಾರ್ಗವೂ ನಿಮಗೆ ಗೊತ್ತಿದೆ ಅಂದನು.

5 Thomas says to him, Lord, we know not where thou goest, and how can we know the way?ತೋಮನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀಯೋ ನಮಗೆ ತಿಳಿಯದು; ನಮಗೆ ಮಾರ್ಗವು ಹೇಗೆ ಗೊತ್ತಾದೀತು ಅಂದನು.

6 Jesus says to him, I am the way, and the truth, and the life. No one comes to the Father unless by me.ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.

7 If ye had known me, ye would have known also my Father, and henceforth ye know him and have seen him.ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನು ಸಹ ತಿಳಿದವರಾಗಿ ರುತ್ತಿದ್ದಿರಿ; ಈಗಿನಿಂದ ನೀವು ಆತನನ್ನು ತಿಳಿದಿದ್ದೀರಿ; ಆತನನ್ನು ನೋಡಿದವರಾಗಿದ್ದೀರಿ ಎಂದು ಹೇಳಿದನು.

8 Philip says to him, Lord, shew us the Father and it suffices us.ಫಿಲಿಪ್ಪನು ಆತನಿಗೆ--ಕರ್ತನೇ, ತಂದೆಯನ್ನು ನಮಗೆ ತೋರಿಸು, ನಮಗೆ ಅಷ್ಟೇ ಸಾಕು ಅಂದನು.

9 Jesus says to him, Am I so long a time with you, and thou hast not known me, Philip? He that has seen me has seen the Father; and how sayest thou, Shew us the Father?ಯೇಸು ಅವನಿಗೆ--ಫಿಲಿಪ್ಪನೇ, ನಾನು ನಿಮ್ಮ ಸಂಗಡ ಇಷ್ಟು ಕಾಲ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲವೋ? ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ; ಹಾಗಾದರೆ ತಂದೆಯನ್ನು ನಮಗೆ ತೋರಿಸು ಎಂದು ನೀನು ಹೇಳುವದು ಹೇಗೆ?

10 Believest thou not that I [am] in the Father, and that the Father is in me? The words which I speak to you I do not speak from myself; but the Father who abides in me, he does the works.ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಮಾತನಾಡುವದಿಲ್ಲ; ಆದರೆ ನನ್ನಲ್ಲಿ ವಾಸಿಸುತ್ತಿರುವ ತಂದೆಯೇ ಆ ಕಾರ್ಯಗಳನ್ನು ಮಾಡುತ್ತಾನೆ.

11 Believe *me* that I [am] in the Father and the Father in me; but if not, believe me for the works' sake themselves.ನಾನು ತಂದೆ ಯಲ್ಲಿದ್ದೇನೆಂತಲೂ ತಂದೆಯು ನನ್ನಲ್ಲಿದ್ದಾನೆಂತಲೂ ನನ್ನನ್ನು ನಂಬಿರಿ. ಇಲ್ಲದಿದ್ದರೆ ಆ ಕ್ರಿಯೆಗಳ ನಿಮಿತ್ತವಾದರೂ ನನ್ನನ್ನು ನಂಬಿರಿ.

12 Verily, verily, I say to you, He that believes on me, the works which I do shall he do also, and he shall do greater than these, because I go to the Father.ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನನ್ನು ನಂಬುವವನು ನಾನು ಮಾಡುವ ಕ್ರಿಯೆ ಗಳನ್ನು ಸಹ ಮಾಡುವನು; ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಅವನು ಮಾಡುವನು; ಯಾಕಂದರೆ ನಾನು ನನ್ನ ತಂದೆಯ ಬಳಿಗೆ ಹೋಗುತ್ತೇನೆ.

13 And whatsoever ye shall ask in my name, this will I do, that the Father may be glorified in the Son.ನನ್ನ ಹೆಸರಿನಲ್ಲಿ ನೀವು ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ಮಗನಲ್ಲಿ ತಂದೆಯು ಮಹಿಮೆ ಹೊಂದುವನು.

14 If ye shall ask anything in my name, I will do it.ನೀವು ನನ್ನ ಹೆಸರಿನಲ್ಲಿ ಏನಾದರೂ ಕೇಳಿಕೊಂಡರೆ ನಾನು ಅದನ್ನು ಮಾಡುವೆನು.

15 If ye love me, keep my commandments.ನೀವು ನನ್ನನ್ನು ಪ್ರೀತಿಸುವದಾದರೆ ನನ್ನ ಆಜ್ಞೆ ಗಳನ್ನು ಕೈಕೊಳ್ಳಿರಿ.

16 And I will beg the Father, and he will give you another Comforter, that he may be with you for ever,ನಾನು ತಂದೆಯನ್ನು ಬೇಡಿ ಕೊಳ್ಳುವೆನು; ಆಗ ಆತನು ನಿಮಗೆ ಬೇರೊಬ್ಬ ಆದರಿ ಕನನ್ನು ಸದಾಕಾಲವೂ ನಿಮ್ಮ ಸಂಗಡ ಇರುವದಕ್ಕೆ ಕೊಡುವನು.

17 the Spirit of truth, whom the world cannot receive, because it does not see him nor know him; but ye know him, for he abides with you, and shall be in you.ಆತನು ಸತ್ಯದ ಆತ್ಮನೇ; ಲೋಕವು ಆತನನ್ನು ನೋಡದೆಯೂ ತಿಳಿಯದೆಯೂ ಇರುವದ ರಿಂದ ಆತನನ್ನು ಹೊಂದಲಾರದು. ಆದರೆ ನೀವು ಆತನನ್ನು ಬಲ್ಲಿರಿ. ಯಾಕಂದರೆ ಆತನು ನಿಮ್ಮೊಂದಿಗೆ ವಾಸಿಸುತ್ತಾನೆ ಮತ್ತು ನಿಮ್ಮೊಳಗಿರುವನು.

18 I will not leave you orphans, I am coming to you.ನಾನು ನಿಮ್ಮನ್ನು ಆದರಣೆಯಿಲ್ಲದೆ ಬಿಡುವದಿಲ್ಲ; ನಿಮ್ಮ ಬಳಿಗೆ ನಾನು ಬರುವೆನು.

19 Yet a little and the world sees me no longer; but ye see me; because I live ye also shall live.ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ; ನಾನು ಜೀವಿಸುವ ದರಿಂದ ನೀವು ಸಹ ಜೀವಿಸುವಿರಿ.

20 In that day ye shall know that I [am] in my Father, and ye in me, and I in you.ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮ ಲ್ಲಿಯೂ ಇರುವೆನೆಂದು ನೀವು ಆ ದಿನದಲ್ಲಿ ತಿಳಿದು ಕೊಳ್ಳುವಿರಿ.

21 He that has my commandments and keeps them, he it is that loves me; but he that loves me shall be loved by my Father, and I will love him and will manifest myself to him.ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು.

22 Judas, not the Iscariote, says to him, Lord, how is it that thou wilt manifest thyself to us and not to the world?ಯೂದನು (ಇಸ್ಕರಿಯೋತನಲ್ಲ)--ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಕಾಣಿಸಿ ಕೊಳ್ಳುವದು ಹೇಗೆ ಎಂದು ಆತನನ್ನು ಕೇಳಿದನು.

23 Jesus answered and said to him, If any one love me, he will keep my word, and my Father will love him, and we will come to him and make our abode with him.ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು.

24 He that loves me not does not keep my words; and the word which ye hear is not mine, but [that] of the Father who has sent me.ನನ್ನನ್ನು ಪ್ರೀತಿಸದವನು ನನ್ನ ಮಾತು ಗಳನ್ನು ಕೈಕೊಳ್ಳುವದಿಲ್ಲ; ನೀವು ಕೇಳಿದ ಮಾತು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದ ನನ್ನ ತಂದೆಯ ಮಾತೇ.

25 These things I have said to you, abiding with you;ನಾನು ಇನ್ನೂ ನಿಮ್ಮ ಬಳಿಯಲ್ಲಿ ಇರುವಾಗಲೇ ಈ ಸಂಗತಿಗಳನ್ನು ನಿಮಗೆ ಹೇಳಿದ್ದೇನೆ;

26 but the Comforter, the Holy Spirit, whom the Father will send in my name, *he* shall teach you all things, and will bring to your remembrance all the things which I have said to you.ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು.

27 I leave peace with you; I give *my* peace to you: not as the world gives do I give to you. Let not your heart be troubled, neither let it fear.ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.

28 Ye have heard that I have said unto you, I go away and I am coming to you. If ye loved me ye would rejoice that I go to the Father, for [my] Father is greater than I.ನಾನು ಹೋಗಿ ತಿರಿಗಿ ನಿಮ್ಮ ಬಳಿಗೆ ಬರುವದು ಹೇಗೆ ಎಂದು ನಾನು ನಿಮಗೆ ಹೇಳಿದ್ದನ್ನು ನೀವು ಕೇಳಿದ್ದೀರಿ; ನೀವು ನನ್ನನ್ನು ಪ್ರೀತಿಸಿದ್ದರೆ ನಾನು ನನ್ನ ತಂದೆಯ ಬಳಿಗೆ ಹೊಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದಿರಿ; ನನ್ನ ತಂದೆಯು ನನಗಿಂತಲೂ ದೊಡ್ಡವನಾಗಿದ್ದಾನೆ.

29 And now I have told you before it comes to pass, that when it shall have come to pass ye may believe.ಅದು ನಡೆಯುವಾಗ ನೀವು ನಂಬುವಂತೆ ನಡೆಯು ವದಕ್ಕಿಂತ ಮುಂಚೆಯೇ ಈಗ ನಾನು ನಿಮಗೆ ಹೇಳಿದ್ದೇನೆ.

30 I will no longer speak much with you, for the ruler of the world comes, and in me he has nothing;ಇನ್ನು ಮೇಲೆ ನಾನು ನಿಮ್ಮೊಂದಿಗೆ ಬಹಳವಾಗಿ ಮಾತನಾಡುವದಿಲ್ಲ; ಯಾಕಂದರೆ ಇಹ ಲೋಕದ ಅಧಿಪತಿಯು ಬರುತ್ತಾನೆ. ಅವನಿಗೆ ಸಂಬಂಧಪಟ್ಟದ್ದು ನನ್ನಲ್ಲಿ ಏನೂ ಇಲ್ಲ.

31 but that the world may know that I love the Father, and as the Father has commanded me, thus I do. Rise up, let us go hence.ನಾನು ತಂದೆಯನ್ನು ಪ್ರೀತಿಮಾಡುತ್ತೇನೆಂದು ಲೋಕವು ತಿಳಿಯುವ ಹಾಗೆ ತಂದೆಯು ನನಗೆ ಆಜ್ಞೆ ಕೊಟ್ಟಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ ಅಂದನು.

Kannada Bible