Lamentations 3 - BBE (Kannada)
1 I am the man who has seen trouble by the rod of his wrath.ಆತನ ಕೋಪದ ಕೋಲಿನಿಂದ ಕಷ್ಟವನ್ನು ನೋಡಿದ ಮನುಷ್ಯನು ನಾನೇ.
2 By him I have been made to go in the dark where there is no light.ಆತನು ನನ್ನನ್ನು ಕರೆತಂದು ನಡಿಸಿದ್ದು ಕತ್ತಲೆಗೇ ಹೊರತು ಬೆಳಕಿಗಲ್ಲ.
3 Truly against me his hand has been turned again and again all the day.ನಿಶ್ಚಯವಾಗಿ ಆತನು ನನಗೆ ವಿರೋಧ ವಾಗಿ ತಿರುಗಿದ್ದಾನೆ ದಿನವೆಲ್ಲಾ ತನ್ನ ಕೈಯನ್ನು ನನಗೆ ವಿರೋಧವಾಗಿ ತಿರುಗಿಸಿದ್ದಾನೆ.
4 My flesh and my skin have been used up by him and my bones broken.ಆತನು ನನ್ನ ಮಾಂಸ ಚರ್ಮವನ್ನೂ ಎಲುಬುಗಳನ್ನೂ ಮುರಿದಿದ್ದಾನೆ.
5 He has put up a wall against me, shutting me in with bitter sorrow.ಆತನು ನನಗೆ ವಿರೋಧವಾಗಿ ಕಟ್ಟಿದ್ದಾನೆ, ವಿಷದಿಂದಲೂ ಸಂಕಟದಿಂದಲೂ ಸುತ್ತಿಕೊಂಡಿದ್ದಾನೆ.
6 He has kept me in dark places, like those who have been long dead.ಆತನು ನನ್ನನ್ನು ಬಹು ಕಾಲದ ಹಿಂದೆ ಸತ್ತವರ ಹಾಗೆ ಕತ್ತಲೆಯ ಸ್ಥಳಗಳಲ್ಲಿ ಇರಿಸಿದ್ದಾನೆ.
7 He has put a wall round me, so that I am not able to go out; he has made great the weight of my chain.ನಾನು ಹೊರಗೆ ಬಾರದ ಹಾಗೆ ಆತನು ನನ್ನ ಸುತ್ತಲೂ ಬೇಲಿ ಹಾಕಿದ್ದಾನೆ; ಆತನು ನನ್ನ ಸಂಕೋಲೆಯ ಭಾರವನ್ನು ಹೆಚ್ಚಿಸಿದ್ದಾನೆ.
8 Even when I send up a cry for help, he keeps my prayer shut out.ನಾನು ಮೊರೆಯಿಟ್ಟು ಕೂಗಿದರೂ ಆತನು ನನ್ನ ಪ್ರಾರ್ಥನೆ ಯನ್ನು ಲಾಲಿಸುವದಿಲ್ಲ.
9 He has put up a wall of cut stones about my ways, he has made my roads twisted.ಕೆತ್ತಿದ ಕಲ್ಲಿನಿಂದ ನನ್ನ ಮಾರ್ಗಗಳನ್ನು ಮುಚ್ಚಿ ಆತನು ನನ್ನ ದಾರಿಗಳನ್ನು ಡೊಂಕು ಮಾಡಿದ್ದಾನೆ.
10 He is like a bear waiting for me, like a lion in secret places.ಆತನು ನನಗೆ ಹೊಂಚುಹಾಕುವ ಕರಡಿಯ ಹಾಗೆಯೂ ಗುಪ್ತಸ್ಥಳಗಳಲ್ಲಿರುವ ಸಿಂಹದ ಹಾಗೆಯೂ ಇದ್ದಾನೆ.
11 By him my ways have been turned on one side and I have been pulled in bits; he has made me waste.ಆತನು ನನ್ನ ಮಾರ್ಗಗಳನ್ನು ತಪ್ಪಿಸಿ ನನ್ನನ್ನು ತುಂಡುಗಳನ್ನಾಗಿ ಕತ್ತರಿಸಿ ಹಾಳುಮಾಡಿದ್ದಾನೆ.
12 With his bow bent, he has made me the mark for his arrows.ಆತನು ತನ್ನ ಬಿಲ್ಲನ್ನು ಬಗ್ಗಿಸಿದ್ದಾನೆ ಮತ್ತು ನನ್ನನ್ನು ಬಾಣಕ್ಕೆ ಗುರಿಮಾಡಿದ್ದಾನೆ.
13 He has let loose his arrows into the inmost parts of my body.ಆತನು ತನ್ನ ಬತ್ತಳಿಕೆಯಲ್ಲಿನ ಬಾಣಗಳು ನನ್ನ ಅಂತರಂಗಗಳಲ್ಲಿ ತೂರಿಹೋಗುವ ಹಾಗೆ ಮಾಡಿ ದ್ದಾನೆ.
14 I have become the sport of all the peoples; I am their song all the day.ನಾನು ನನ್ನ ಎಲ್ಲಾ ಜನರಿಗೆ ಹಾಸ್ಯವೂ ದಿನವೆಲ್ಲವೂ ಅವರ ಹಾಡಾಗಿಯೂ ಇದ್ದೇನೆ.
15 He has made my life nothing but pain, he has given me the bitter root in full measure.ಆತನು ನನ್ನನ್ನು ಕಹಿಯಿಂದ ತುಂಬಿಸಿ ಮಾಚಿ ಪತ್ರೆಯಿಂದ ನನ್ನನ್ನು ಅಮಲೇರಿಸಿದ್ದಾನೆ.
16 By him my teeth have been broken with crushed stones, and I am bent low in the dust.ಆತನು ನುರುಜು ಕಲ್ಲುಗಳಿಂದ ನನ್ನ ಹಲ್ಲುಗಳನ್ನು ಮುರಿದು ನನ್ನನ್ನು ಬೂದಿಯಿಂದ ಮುಚ್ಚಿದ್ದಾನೆ.
17 My soul is sent far away from peace, I have no more memory of good.ನನ್ನ ಪ್ರಾಣವನ್ನು ಸಮಾಧಾನದಿಂದ ದೂರಮಾಡಿದ್ದಾನೆ; ನಾನು ಏಳಿಗೆಯನ್ನು ಮರೆತುಬಿಟ್ಟೆನು.
18 And I said, My strength is cut off, and my hope from the Lord.ನನ್ನ ಬಲವೂ ನಿರೀಕ್ಷೆಯೂ ಕರ್ತನಿಂದ ನಾಶವಾದವೆಂದು ಹೇಳಿ
19 Keep in mind my trouble and my wandering, the bitter root and the poison.ನನ್ನ ಸಂಕಟವನ್ನು ಹಿಂಸೆಯನ್ನು ಮಾಚಿಪತ್ರೆಯನ್ನು ವಿಷವನ್ನು ಇವುಗಳನ್ನು ಜ್ಞಾಪಕಮಾಡಿಕೊಂಡೆನು.
20 My soul still keeps the memory of them; and is bent down in me.ನನ್ನ ಪ್ರಾಣವು ಇನ್ನೂ ಅವುಗಳನ್ನು ಜ್ಞಾಪಿಸಿ ಕೊಳ್ಳುತ್ತಾ ನನ್ನೊಳಗೆ ಕುಂದಿಹೋಗಿದೆ.
21 This I keep in mind, and because of this I have hope.ಇದನ್ನು ನಾನು ನನ್ನ ಮನಸ್ಸಿಗೆ ತರುತ್ತೇನೆ, ಆದದರಿಂದ ನನಗೆ ನಿರೀಕ್ಷೆ ಇದೆ.
22 It is through the Lord's love that we have not come to destruction, because his mercies have no limit.ಕರ್ತನ ಕನಿಕರಗಳಿಂದಲೇ ನಾವು ನಾಶವಾಗ ಲಿಲ್ಲ, ಆತನ ಅಂತಃಕರುಣೆಯು ಮುಗಿಯುವದಿಲ್ಲ.
23 They are new every morning; great is your good faith.ಅವು ಪ್ರತಿ ಮುಂಜಾನೆಯೂ ಹೊಸದಾಗಿರುವವು; ನಿನ್ನ ನಂಬಿಗಸ್ತಿಕೆಯು ಮಹತ್ತಾದದ್ದು.
24 I said to myself, The Lord is my heritage; and because of this I will have hope in him.ಕರ್ತನೇ ನನ್ನ ಪಾಲೆಂದು ನನ್ನ ಪ್ರಾಣವು ಹೇಳುತ್ತದೆ, ಆದದರಿಂದ ನಾನು ಆತನಲ್ಲಿ ನಿರೀಕ್ಷೆ ಇಡುತ್ತೇನೆ.
25 The Lord is good to those who are waiting for him, to the soul which is looking for him.ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ.
26 It is good to go on hoping and quietly waiting for the salvation of the Lord.ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು.
27 It is good for a man to undergo the yoke when he is young.ತನ್ನ ಯೌವನದಲ್ಲಿ ನೊಗವನ್ನು ಹೊರುವದು ಅವನಿಗೆ ಒಳ್ಳೆಯದು.
28 Let him be seated by himself, saying nothing, because he has put it on him.ಅವನು ಒಂಟಿಯಾಗಿ ಕೂತುಕೊಂಡು ಮೌನ ವಾಗಿರುವನು, ಯಾಕಂದರೆ ಆತನೇ ಅದನ್ನು ಅವನ ಮೇಲೆ ಹೊರಿಸಿದ್ದಾನೆ.
29 Let him put his mouth in the dust, if by chance there may be hope.ಒಂದು ವೇಳೆ ಅಲ್ಲಿ ನಿರೀಕ್ಷೆ ಇರುವದಾದರೆ ಅವನು ತನ್ನ ಬಾಯಿ ಯನ್ನು ದೂಳಿನಲ್ಲಿ ಇಡುತ್ತಾನೆ.
30 Let his face be turned to him who gives him blows; let him be full of shame.ಆತನು ತನ್ನನ್ನು ಹೊಡೆಯುವವನಿಗೆ ಕೆನ್ನೆ ಕೊಡುತ್ತಾನೆ ಆತನು ನಿಂದೆಯಿಂದಲೇ ತುಂಬಿದ್ದಾನೆ.
31 For the Lord does not give a man up for ever.ಕರ್ತನು ಎಂದೆಂದಿಗೂ ತಳ್ಳಿಬಿಡುವದಿಲ್ಲ;
32 For though he sends grief, still he will have pity in the full measure of his love.ಆತನು ದುಃಖಪಡಿಸಿದರೂ ತನ್ನ ಕೃಪಾತಿಶಯದಿಂದ ಕನಿಕರಿಸುವನು.
33 For he has no pleasure in troubling and causing grief to the children of men.ಆತನು ಇಷ್ಟಪೂರ್ವಕವಾಗಿ ಮನುಷ್ಯರ ಮಕ್ಕಳನ್ನು ಬಾಧಿಸುವದು ಇಲ್ಲ ದುಃಖಿಸು ವದೂ ಇಲ್ಲ.
34 In a man's crushing under his feet all the prisoners of the earth,ಭೂಲೋಕದ ಸೆರೆಯವರನ್ನೆಲ್ಲಾ ಕಾಲುಗಳ ಕೆಳಗೆ ತುಳಿಯುವದನ್ನೂ
35 In his turning away the right of a man before the face of the Most High.ಮಹೋನ್ನತನ ಸನ್ನಿಧಿಯಲ್ಲಿ ಮನುಷ್ಯನ ನ್ಯಾಯವನ್ನು ತಿರುಗಿಸು ವದನ್ನೂ
36 In his doing wrong to a man in his cause, the Lord has no pleasure.ಮನುಷ್ಯನನ್ನು ಅವನ ವ್ಯಾಜ್ಯದಲ್ಲಿ ಕೆಡಿಸುವದನ್ನೂ ಕರ್ತನು ಮೆಚ್ಚುವದಿಲ್ಲ.
37 Who is able to say a thing, and give effect to it, if it has not been ordered by the Lord?ಕರ್ತನು ಆಜ್ಞಾಪಿಸದಿರು ವಾಗ ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?
38 Do not evil and good come from the mouth of the Most High?ಮಹೋನ್ನತನ ಬಾಯಿಂದ ಕೆಟ್ಟದ್ದೂ ಒಳ್ಳೆಯದೂ ಹೊರಡುವದಿಲ್ಲವೇ?
39 What protest may a living man make, even a man about the punishment of his sin?ಬದುಕುವ ಮನುಷ್ಯನು ತನ್ನ ಪಾಪಗಳ ಶಿಕ್ಷೆಗಾಗಿ ಗುಣು ಗುಟ್ಟುವದೇಕೆ?
40 Let us make search and put our ways to the test, turning again to the Lord;ನಾವು ನಮ್ಮ ಮಾರ್ಗಗಳನ್ನು ಶೋಧಿಸಿ ಪರೀಕ್ಷಿಸಿ ಕೊಂಡು ಮತ್ತೆ ಕರ್ತನ ಬಳಿಗೆ ತಿರುಗಿಕೊಳ್ಳೋಣ.
41 Lifting up our hearts with our hands to God in the heavens.ನಮ್ಮ ಹೃದಯವನ್ನು ಕೈಗಳೊಂದಿಗೆ ಪರಲೋಕದ ದೇವರ ಕಡೆಗೆ ಎತ್ತಿಕೊಳ್ಳೋಣ.
42 We have done wrong and gone against your law; we have not had your forgiveness.ನಾವು ದ್ರೋಹಮಾಡಿ ಎದುರು ಬಿದ್ದಿದ್ದೇವೆ; ನೀನು ಮನ್ನಿಸಲಿಲ್ಲ.
43 Covering yourself with wrath you have gone after us, cutting us off without pity;ಕೋಪದಲ್ಲಿ ನಮ್ಮನ್ನು ಮುಚ್ಚಿ, ಹಿಂಸಿಸಿದ್ದೀ; ಕನಿಕರಿಸದೆ ಕೊಂದುಹಾಕಿರುವಿ.
44 Covering yourself with a cloud, so that prayer may not get through.ನಮ್ಮ ಪ್ರಾರ್ಥ ನೆಯು ನಿನಗೆ ಮುಟ್ಟದಂತೆ ನಿನ್ನನ್ನು ಮೇಘದಿಂದ ಮುಚ್ಚಿ ಕೊಂಡಿದ್ದೀ.
45 You have made us like waste and that for which there is no use, among the peoples.ನೀನು ನಮ್ಮನ್ನು ಜನರ ಮಧ್ಯದಲ್ಲಿ ಕಲ್ಮಷವನ್ನಾಗಿಯೂ ಕಸವನ್ನಾಗಿಯೂ ಮಾಡಿದ್ದೀ.
46 The mouths of all our haters are open wide against us.ನಮ್ಮ ಎಲ್ಲಾ ಶತ್ರುಗಳು ನಮಗೆ ವಿರುದ್ಧವಾಗಿ ಅವರ ಬಾಯಿಗಳನ್ನು ತೆರೆದಿದ್ದಾರೆ.
47 Fear and deep waters have come on us, wasting and destruction.ಭಯವೂ ಬೋನೂ ನಾಶನವೂ ಸಂಹಾರವೂ ನಮ್ಮ ಮೇಲೆ ಬಂದಿವೆ.
48 Rivers of water are running down from my eyes, for the destruction of the daughter of my people.ನನ್ನ ಜನರ ಕುಮಾರಿಯ ನಾಶನದ ನಿಮಿತ್ತವಾಗಿ ನನ್ನ ಕಣ್ಣಿನಿಂದ ನೀರು ನದಿಯಾಗಿ ಹರಿದುಹೋಗುತ್ತದೆ.
49 My eyes are streaming without stopping, they have no rest,ಕರ್ತನು ಕಟಾಕ್ಷಿಸಿ ಪರಲೋಕದಿಂದ ನೋಡುವ ತನಕ ನೇತ್ರವು ಎಡೆಬಿಡದೆ ಕಣ್ಣೀರು ಸುರಿಸುತ್ತದೆ;
50 Till the Lord's eye is turned on me, till he sees my trouble from heaven.ವಿಶ್ರಮಿಸಿಕೊಳ್ಳುವದೂ ಇಲ್ಲ.
51 The Lord is unkind to my soul, more than all the daughters of my town.ನನ್ನ ನಗರದ ಕುಮಾರ್ತೆಯರೆಲ್ಲರ ನಿಮಿತ್ತವಾಗಿ ನನ್ನ ಕಣ್ಣು ನನ್ನ ಹೃದಯವನ್ನು ಪೀಡಿಸಿದೆ.
52 They who are against me without cause have gone hard after me as if I was a bird;ನನ್ನ ಶತ್ರುಗಳು ಕಾರಣವಿಲ್ಲದೆ ಪಕ್ಷಿಯಂತೆ ನನ್ನನ್ನು ಕಠೋರವಾಗಿ ಹಿಂದಟ್ಟಿ ಬೇಟೆಯಾಡಿದರು.
53 They have put an end to my life in the prison, stoning me with stones.ಅವರು ಕಾರಾಗೃಹದಲ್ಲಿ ನನ್ನ ಜೀವವನ್ನು ತೆಗೆದುಹಾಕಿ ನನ್ನ ಮೇಲೆ ಕಲ್ಲನ್ನು ಹಾಕಿದ್ದಾರೆ.
54 Waters were flowing over my head; I said, I am cut off.ಪ್ರವಾಹವು ನನ ತಲೆಯ ಮೇಲೆ ಹರಿಯಿತು; ಆಗ--ನಾನು ಸತ್ತೆನು ಅಂದುಕೊಂಡೆನು.
55 I was making prayer to your name, O Lord, out of the lowest prison.ಓ ಕರ್ತನೇ, ನಾನು ಆಳವಾದ ಕಾರಾಗೃಹದಿಂದ ನಿನ್ನ ಹೆಸರನ್ನು ಎತ್ತಿ ಬೇಡಿಕೊಂಡೆನು.
56 My voice came to you; let not your ear be shut to my breathing, to my cry.ನೀನು ನನ್ನ ಸ್ವರವನ್ನು ಕೇಳಿದ್ದೀ; ನನ್ನ ಶ್ವಾಸಕ್ಕೂ ನನ್ನ ಕೂಗಿಗೂ ನಿನ್ನ ಕಿವಿಯನ್ನು ಮರೆಮಾಡಲಿಲ್ಲ.
57 You came near in the day when I made my prayer to you: you said, Have no fear.ನಾನು ನಿನ್ನನ್ನು ಕರೆದ ದಿನದಲ್ಲಿ ನೀನು ಸವಿಾಪಕ್ಕೆ ಬಂದು--ಭಯಪಡ ಬೇಡ ಎಂದು ಹೇಳಿದಿ.
58 O Lord, you have taken up the cause of my soul, you have made my life safe.ಓ ಕರ್ತನೇ, ನೀನು ನನ್ನ ಪ್ರಾಣದ ವ್ಯಾಜ್ಯಗಳನ್ನು ನಡಿಸಿ ನನ್ನ ಜೀವವನ್ನು ವಿಮೋಚಿಸಿದ್ದೀ.
59 O Lord, you have seen my wrong; be judge in my cause.ಓ ಕರ್ತನೇ, ನೀನು ನನ್ನ ಅನ್ಯಾಯವನ್ನು ನೋಡಿದ್ದೀ, ನನಗೆ ನ್ಯಾಯವನ್ನು ತೀರಿಸು.
60 You have seen all the evil rewards they have sent on me, and all their designs against me.ಅವರ ಎಲ್ಲಾ ಪ್ರತೀಕಾರವನ್ನೂ ನನಗೆ ವಿರುದ್ಧವಾದ ಅವರ ಎಲ್ಲಾ ಕಲ್ಪನೆಗಳನ್ನೂ ನೀನು ನೋಡಿರುವಿ.
61 Their bitter words have come to your ears, O Lord, and all their designs against me;ಓ ಕರ್ತನೇ, ಅವರ ನಿಂದೆಯನ್ನೂ ನನಗೆ ವಿರುದ್ಧವಾದ ಅವರ ಎಲ್ಲಾ ಕಲ್ಪನೆಗಳನ್ನೂ ನನಗೆ ವಿರುದ್ಧವಾಗಿ ಹೇಳುವವರ ತುಟಿಗಳನ್ನೂ
62 The lips of those who came up against me, and their thoughts against me all the day.ದಿನವಿಡೀ ನನಗೆ ವಿರುದ್ಧವಾದ ಅವರ ದುರಾಲೋಚನೆಯನ್ನೂ ಕೇಳಿರುವಿ.
63 Take note of them when they are seated, and when they get up; I am their song.ಅವರು ಕೂಡ್ರುವದನ್ನೂ ಏಳುವದನ್ನೂ ನೋಡು; ನಾನೇ ಅವರಿಗೆ ಸಂಗೀತವಾಗಿದ್ದೇನೆ.
64 You will give them their reward, O Lord, answering to the work of their hands.ಓ ಕರ್ತನೇ, ಅವರ ಕೈಕೆಲಸಗಳ ಪ್ರಕಾರ ಅವರಿಗೆ ಪ್ರತಿಫಲವನ್ನು ಕೊಡು.
65 You will let their hearts be covered over with your curse on them.ಅವರಿಗೆ ದುಃಖಕರವಾದ ಹೃದಯವನ್ನೂ ನಿನ್ನ ಶಾಪವನ್ನೂ ಕೊಡು.
66 You will go after them in wrath, and put an end to them from under the heavens of the Lord.ಕರ್ತನೇ ಆಕಾಶದ ಕೆಳಗಿರುವವರನ್ನು ನಿನ್ನ ಕೋಪದಿಂದ ಹಿಂಸಿಸಿ ಹಾಳುಮಾಡು.
Kannada Bible