Bible

Luke 10 - BBE (Kannada)

1 Now after these things, the Lord made selection of seventy others and sent them before him, two together, into every town and place where he himself was about to come.ಇವುಗಳಾದ ಮೇಲೆ ಕರ್ತನು ಬೇರೆ ಎಪ್ಪತ್ತು ಮಂದಿಯನ್ನು ಸಹ ನೇಮಿಸಿ ತಾನೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತನ್ನ ಮುಂದಾಗಿ ಕಳುಹಿಸಿದನು.

2 And he said to them, There is much grain ready to be cut, but not enough workers: so make prayer to the Lord of the grain-fields that he will send workers to get in the grain.ಆತನು ಅವರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ; ಆದದರಿಂದ ಬೆಳೆಯ ಯಜಮಾನನು ತನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ನೀವು ಪ್ರಾರ್ಥನೆಮಾಡಿರಿ.

3 Go on your way: see, I send you out like lambs among wolves.ಹೋಗಿರಿ, ಇಗೋ, ತೋಳಗಳ ಮಧ್ಯದಲ್ಲಿ ಕುರಿಮರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ.

4 Take no bag for money or for food, and no shoes; say no word to any man on the way.ಹವ್ಮೆಾಣಿಯನ್ನಾಗಲೀ ಚೀಲವನ್ನಾಗಲೀ ಕೆರಗಳನ್ನಾಗಲೀ ತಕ್ಕೊಳ್ಳಬೇಡಿರಿ; ಮತ್ತು ದಾರಿಯಲ್ಲಿ ಯಾರನ್ನೂ ವಂದಿಸಬೇಡಿರಿ.

5 And whenever you go into a house, first say, Peace be to this house.ನೀವು ಯಾವ ಮನೆಯಲ್ಲಿಯಾದರೂ ಪ್ರವೇಶಿಸುವಾಗ ಮೊದಲು--ಈ ಮನೆಗೆ ಸಮಾಧಾನವಾಗಲಿ ಎಂದು ಹೇಳಿರಿ.

6 And if a son of peace is there, your peace will be with him: but if not, it will come back to you again.ಅಲ್ಲಿ ಸಮಾಧಾನದ ಮಗನು ಇದ್ದರೆ ನಿಮ್ಮ ಸಮಾಧಾನವು ಅವರ ಮೇಲೆ ಇರುವದು; ಇಲ್ಲದಿದ್ದರೆ ಅದು ನಿಮಗೆ ಹಿಂದಿರು ಗುವದು.

7 And keep in that same house, taking what food and drink they give you: for the worker has a right to his reward. Do not go from house to house.ಅದೇ ಮನೆಯಲ್ಲಿದ್ದು ಅವರು ಕೊಟ್ಟದ್ದನ್ನು ತಿಂದು ಕುಡಿಯಿರಿ; ಯಾಕಂದರೆ ಕೆಲಸದವನು ತನ್ನ ಕೂಲಿಗೆ ಯೋಗ್ಯನು. ಮನೆಯಿಂದ ಮನೆಗೆ ಹೋಗ ಬೇಡಿರಿ;

8 And into whatever town you go, if they take you in, take whatever food is given to you:ಯಾವದಾದರೂ ಪಟ್ಟಣದೊಳಗೆ ನೀವು ಪ್ರವೇಶಿಸುವಾಗ ಅವರು ನಿಮ್ಮನ್ನು ಸೇರಿಸಿಕೊಂಡರೆ ನಿಮ್ಮ ಮುಂದೆ ಇಡುವಂಥವುಗಳನ್ನು ತಿನ್ನಿರಿ.

9 And make well those in it who are ill and say to them, The kingdom of God is near to you.ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿರಿ; ಮತ್ತು ಅವರಿಗೆ--ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂದು ಹೇಳಿರಿ.

10 But if you go into a town where they will not have you, go out into the streets of it and say,ಆದರೆ ನೀವು ಪ್ರವೇಶಿ ಸುವ ಯಾವ ಪಟ್ಟಣದಲ್ಲಿಯಾದರೂ ಅವರು ನಿಮ್ಮನ್ನು ಸೇರಿಸಿಕೊಳ್ಳದಿದ್ದರೆ ನೀವು ಹೊರಟು ಅದೇ ಬೀದಿ ಗಳಲ್ಲಿ ಹೋಗಿ--

11 Even the dust of your town, which is on our feet, we put off as a witness against you; but be certain of this, that the kingdom of God is near.ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ.

12 I say to you, It will be better in that day for Sodom than for that town.ಆದರೆ ಆ ದಿನದಲ್ಲಿ ಆ ಪಟ್ಟಣಕ್ಕಿಂತಲೂ ಸೊದೋಮಿನ ಗತಿಯು ಹೆಚ್ಚಾಗಿ ತಾಳಬಹುದಾಗಿರುವದು ಎಂದು ನಾನು ನಿಮಗೆ ಹೇಳುತ್ತೇನೆ.

13 A curse is on you, Chorazin! A curse is on you, Beth-saida! For if such works of power had been done in Tyre and Sidon as have been done in you, they would have been turned from their sins, in days gone by, seated in the dust.ಖೊರಾಜಿನೇ, ನಿನಗೆ ಅಯ್ಯೋ! ಬೇತ್ಸಾಯಿದವೇ, ನಿನಗೆ ಅಯ್ಯೋ! ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ತೂರ್‌ ಸೀದೋನ್‌ಗಳಲ್ಲಿ ನಡೆದಿದ್ದರೆ ಅಲ್ಲಿಯವರು ಬಹಳ ಕಾಲದ ಹಿಂದೆಯೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರ ಪಡುತ್ತಿದ್ದರು.

14 But it will be better for Tyre and Sidon, in the day of judging, than for you.ಆದರೆ ನ್ಯಾಯ ತೀರ್ಪಿನಲ್ಲಿ ನಿಮ್ಮ ಗತಿಗಿಂತಲೂ ತೂರ್‌ ಸೀದೋನ್‌ಗಳ ಗತಿಯು ಹೆಚ್ಚಾಗಿ ತಾಳಬಹು ದಾಗಿರುವದು.

15 And you, Capernaum, were you not lifted up to heaven? you will go down to hell.ಆಕಾಶದವರೆಗೂ ಎತ್ತಲ್ಪಟ್ಟಿರುವ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬ ಲ್ಪಡುವಿ.

16 Whoever gives ear to you, gives ear to me; and whoever is against you, is against me; and whoever is against me, is against him who sent me.ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುತ್ತಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುತ್ತಾನೆ; ನನ್ನನ್ನು ತಿರಸ್ಕರಿಸುವವನು ನನ್ನನ್ನು ಕಳುಹಿಸಿದಾತನನ್ನು ತಿರಸ್ಕರಿಸುತ್ತಾನೆ ಅಂದನು.

17 And the seventy came back with joy, saying, Lord, even the evil spirits are under our power in your name.ತರುವಾಯ ಆ ಎಪ್ಪತ್ತು ಮಂದಿ ಸಂತೋಷದಿಂದ ಹಿಂತಿರುಗಿ--ಕರ್ತನೇ, ನಿನ್ನ ಹೆಸರಿನಲ್ಲಿ ದೆವ್ವಗಳು ಸಹ ನಮಗೆ ಅಧೀನವಾದವು ಅಂದರು.

18 And he said, I was watching for Satan, falling from heaven like a star.ಆಗ ಆತನು ಅವರಿಗೆ--ಸೈತಾನನು ಮಿಂಚಿನ ಹಾಗೆ ಆಕಾಶದಿಂದ ಬೀಳುವದನ್ನು ನಾನು ನೋಡಿದೆನು.

19 See, I have given you power to put your feet on snakes and evil beasts, and over all the strength of him who is against you: and nothing will do you damage.ಇಗೋ, ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡ ಲಾರದು.

20 Do not be glad, however, because you have power over spirits, but because your names are recorded in heaven.ಆದಾಗ್ಯೂ ದುರಾತ್ಮಗಳು ನಿಮಗೆ ಅಧೀನವಾದವೆಂದು ಸಂತೋಷಪಡಬೇಡಿರಿ; ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿರು ವದರಿಂದಲೇ ಸಂತೋಷಿಸಿರಿ ಅಂದನು.

21 In that same hour he was full of joy in the Holy Spirit and said, I give praise to you, O Father, Lord of heaven and earth, because you have kept these things secret from the wise and the men of learning, and have made them clear to little children: for so, O Father, it was pleasing in your eyes.ಆ ಗಳಿಗೆಯಲ್ಲಿ ಯೇಸು ಆತ್ಮದಲ್ಲಿ ಉಲ್ಲಾಸ ಗೊಂಡು -- ಓ ತಂದೆಯೇ, ಪರಲೋಕ, ಭೂಲೋಕ ಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿ ಗಳಿಗೂ ಬುದ್ಧಿವಂತರಿಗೂ ಮರೆಮಾಡಿ ಕೂಸುಗಳಿಗೆ ಪ್ರಕಟಮಾಡಿರುವದರಿಂದ ನಿನ್ನನ್ನು ಕೊಂಡಾಡುತ್ತೇನೆ; ಹೌದು, ತಂದೆಯೇ, ಅದು ನಿನ್ನ ದೃ

22 All things have been given to me by my Father: and no one has knowledge of the Son, but only the Father: and of the Father, but only the Son, and he to whom the Son will make it clear.ಎಲ್ಲವುಗಳು ನನ್ನ ತಂದೆಯಿಂದ ನನಗೆ ಒಪ್ಪಿಸಲ್ಪಟ್ಟಿವೆ; ತಂದೆಯ ಹೊರತು ಯಾರೂ ಮಗನನ್ನು ಅರಿಯರು. ಮಗನೂ ತಾನು ಯಾರಿಗೆ ತಂದೆಯನ್ನು ಪ್ರಕಟಮಾಡುವನೋ ಅವನೂ ಅಲ್ಲದೆ ಆತನನ್ನು (ತಂದೆಯನ್ನು) ಯಾರೂ ಅರಿತವರಲ್ಲ.

23 And, turning to the disciples, he said privately, Happy are the eyes which see the things you see:ಆತನು ತನ್ನ ಶಿಷ್ಯರ ಕಡೆಗೆ ತಿರುಗಿಕೊಂಡು--ನೀವು ನೋಡು ತ್ತಿರುವವುಗಳನ್ನು ನೋಡುವ ಕಣ್ಣುಗಳು ಧನ್ಯವಾದವು ಗಳು ಎಂದು ಪ್ರತ್ಯೇಕವಾಗಿ ಹೇಳಿದನು.

24 For I say to you that numbers of prophets and kings have had a desire to see the things which you see, and have not seen them, and to have knowledge of the things which have come to your ears, and they had it not.ಯಾಕಂದರೆ ಅನೇಕ ಪ್ರವಾದಿಗಳೂ ಅರಸರೂ ನೀವು ನೋಡು ವಂಥವುಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಿಲ್ಲ ಮತ್ತು ನೀವು ಕೇಳುವಂಥವುಗಳನ್ನು ಕೇಳ ಬೇಕೆಂದು ಅಪೇಕ್ಷಿಸಿದರೂ ಅವರು ಕೇಳಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.

25 And a certain teacher of the law got up and put him to the test, saying, Master, what have I to do so that I may have eternal life?ಆಗ ಇಗೋ, ಒಬ್ಬಾನೊಬ್ಬ ನ್ಯಾಯಶಾಸ್ತ್ರಿಯು ಎದ್ದು ನಿಂತು ಆತನನ್ನು ಶೋಧಿಸುವದಕ್ಕಾಗಿ-- ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.

26 And he said to him, What does the law say, in your reading of it?ಆತನು ಅವನಿಗೆ-- ನ್ಯಾಯಪ್ರಮಾಣದಲ್ಲಿ ಏನು ಬರೆದದೆ? ನೀನು ಹೇಗೆ ಓದುತ್ತೀ ಎಂದು ಕೇಳಿದನು.

27 And he, answering, said, Have love for the Lord your God with all your heart and with all your soul and with all your strength and with all your mind; and for your neighbour as for yourself.ಅದಕ್ಕೆ ಅವನು ಪ್ರತ್ಯುತ್ತರವಾಗಿ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯ ದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಮನಸ್ಸಿನಿಂ ದಲೂ ಪ್ರೀತಿಸಬೇಕು; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಅಂದನು.

28 And he said, You have given the right answer: do this and you will have life.ಆಗ ಆತನು ಅವನಿಗೆ--ನೀನು ಸರಿಯಾಗಿ ಉತ್ತರ ಕೊಟ್ಟಿದ್ದೀ; ಅದರಂತೆಯೇ ಮಾಡು, ಆಗ ನೀನು ಬದುಕುವಿ ಅಂದನು.

29 But he, desiring to put himself in the right, said to Jesus, And who is my neighbour?ಆದರೆ ಅವನು ತನ್ನನ್ನು ತಾನೇ ನೀತಿವಂತನೆಂದು ತೋರಿಸು ವದಕ್ಕೆ ಅಪೇಕ್ಷೆಯುಳ್ಳವನಾಗಿ ಯೇಸುವಿಗೆ--ನನ ನೆರೆಯವನು ಯಾರು ಎಂದು ಕೇಳಿದನು.

30 And Jesus, answering him, said, A certain man was going down from Jerusalem to Jericho, and he got into the hands of thieves, who took his clothing and gave him cruel blows, and when they went away, he was half dead.ಆಗ ಯೇಸು ಪ್ರತ್ಯುತ್ತರವಾಗಿ--ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನಿಂದ ಇಳಿದು ಯೆರಿಕೋವಿಗೆ ಹೋಗುತ್ತಿದ್ದಾಗ ಕಳ್ಳರ ಮಧ್ಯದಲ್ಲಿ ಸಿಕ್ಕಿಬಿದ್ದನು. ಅವರು ಅವನ ಬಟ್ಟೆಯನ್ನು ತೆಗೆದುಹಾಕಿ ಅವನನ್ನು ಗಾಯ ಪಡಿಸಿ ಅರೆಜೀವ ಮಾಡಿ ಬಿಟ್ಟು ಹೊರಟುಹೋದರು.

31 And by chance a certain priest was going down that way: and when he saw him, he went by on the other side.ಆಗ ಅನಿರೀಕ್ಷಿತವಾಗಿ ಒಬ್ಬಾನೊಬ್ಬ ಯಾಜಕನು ಆ ಮಾರ್ಗವಾಗಿ ಬಂದು ಅವನನ್ನು ನೋಡಿ ಓರೆ ಯಾಗಿ ಹೋದನು.

32 And in the same way, a Levite, when he came to the place and saw him, went by on the other side.ಅದೇ ಪ್ರಕಾರ ಒಬ್ಬ ಲೇವಿ ಯೂ ಆ ಸ್ಥಳಕ್ಕೆ ಬಂದು ಅವನನ್ನು ನೋಡಿ ಓರೆಯಾಗಿ ಹೋದನು.

33 But a certain man of Samaria, journeying that way, came where he was, and when he saw him, he was moved with pity for him,ಆದರೆ ಒಬ್ಬಾನೊಬ್ಬ ಸಮಾರ್ಯದ ವನು ಪ್ರಯಾಣ ಮಾಡುತ್ತಾ ಅವನಿದ್ದಲ್ಲಿಗೆ ಬಂದನು; ಅವನನ್ನು ನೋಡಿ ಅವನ ಮೇಲೆ ಕನಿಕರಪಟು

34 And came to him and put clean linen round his wounds, with oil and wine; and he put him on his beast and took him to a house and took care of him.ಅವನ ಬಳಿಗೆ ಹೋಗಿ ಎಣ್ಣೆಯನ್ನೂ ದ್ರಾಕ್ಷಾರಸ ವನ್ನೂ ಹೊಯ್ದು ಅವನ ಗಾಯಗಳನ್ನು ಕಟ್ಟಿ ತನ್ನ ಸ್ವಂತ ಪಶುವಿನ ಮೇಲೆ ಕೂಡ್ರಿಸಿ ವಸತಿ ಗೃಹಕ್ಕೆ ತಂದು ಅವನನ್ನು ಆರೈಕೆ ಮಾಡಿದನು.

35 And the day after he took two pennies and gave them to the owner of the house and said, Take care of him; and if this money is not enough, when I come again I will give you whatever more is needed.ಮರುದಿವಸ ಅವನು ಹೊರಟು ಹೋಗುತ್ತಿದ್ದಾಗ ಎರಡು ನಾಣ್ಯ ಗಳನ್ನು ತೆಗೆದು ವಸತಿಗೃಹದ ಯಜಮಾನನಿಗೆ ಕೊಟ್ಟು ಅವನಿಗೆ--ಇವನನ್ನು ಆರೈಕೆ ಮಾಡು, ನೀನು ಏನಾ ದರೂ ಹೆಚ್ಚು ವೆಚ್ಚ ಮಾಡಿದರೆ ನಾನು ತಿರಿಗಿ ಬಂದಾಗ ಕೊಟ್ಟು ತೀರಿಸುತ್ತೇನೆ ಅಂದನು.

36 Which of these three men, in your opinion, was neighbour to the man who came into the hands of thieves?ಈ ಮೂವರಲ್ಲಿ ಯಾರು ಆ ಕಳ್ಳರ ನಡುವೆ ಸಿಕ್ಕಿ ಬಿದ್ದವನಿಗೆ ನೆರೆಯವ ನಾದನೆಂದು ನೀನು ಯೋಚಿಸುತ್ತೀ ಎಂದು ಕೇಳಿದ್ದಕ್ಕೆ

37 And he said, The one who had mercy on him. And Jesus said, Go and do the same.ಅವನು-- ಯಾವನು ಅವನ ಮೇಲೆ ಕನಿಕರ ತೋರಿಸಿದನೋ ಅವನೇ ಅಂದನು. ಆಗ ಯೇಸು ಅವನಿಗೆ--ಹೋಗು, ನೀನೂ ಅದರಂತೆಯೇ ಮಾಡು ಎಂದು ಹೇಳಿದನು.

38 Now, while they were on their way, he came to a certain town; and a woman named Martha took him into her house.ಇದಾದ ಮೇಲೆ ಅವರು ಹೋಗುತ್ತಿದ್ದಾಗ ಆತನು ಒಂದಾನೊಂದು ಹಳ್ಳಿಯನ್ನು ಪ್ರವೇಶಿಸಿದನು; ಆಗ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯೊಳಗೆ ಅಂಗೀಕರಿಸಿಕೊಂಡಳು.

39 And she had a sister, by name Mary, who took her seat at the Lord's feet and gave attention to his words.ಆಕೆಗೆ ಮರಿಯಳೆಂಬ ಒಬ್ಬ ಸಹೋದರಿ ಇದ್ದಳು. ಆಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕೂತು ಆತನ ವಾಕ್ಯವನ್ನು ಕೇಳುತ್ತಿದ್ದಳು.

40 But Martha had her hands full of the work of the house, and she came to him and said, Lord, is it nothing to you that my sister has let me do all the work? Say to her that she is to give me some help.ಆದರೆ ಮಾರ್ಥಳು ಬಹಳ ಕೆಲಸದ ನಿಮಿತ್ತವಾಗಿ ಬೇಸರಗೊಂಡು ಆತನ ಬಳಿಗೆ ಬಂದು--ಕರ್ತನೇ, ಕೆಲಸ ಮಾಡುವದಕ್ಕೆ ನನ್ನ ಸಹೋದರಿಯು ನನ್ನೊಬ್ಬಳನ್ನೇ ಬಿಟ್ಟಿರುವದು ನಿನಗೆ ಚಿಂತೆಯಿಲ್ಲವೋ? ಆದದರಿಂದ ನನಗೆ ಸಹಾಯಮಾಡುವದಕ್ಕಾಗಿ ಅವಳಿಗೆ ಹೇಳು ಅಂದಳು.

41 But the Lord, answering, said to her, Martha, Martha, you are full of care and troubled about such a number of things:ಆದರೆ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತಿಸಿ ತೊಂದರೆಗೆ ಒಳಗಾಗಿದ್ದೀ;

42 Little is needed, or even one thing only: for Mary has taken that good part, which will not be taken away from her.ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.

Kannada Bible