ಲೂಕನು 18:39
ಮುಂದೆ ಹೋಗುತ್ತಿದ್ದವರು ಅವನು ಸುಮ್ಮನಿರು ವಂತೆ ಅವನನ್ನು ಗದರಿಸಿದರು. ಆದರೂ ಅವನು--ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.
And | καὶ | kai | kay |
they which | οἱ | hoi | oo |
went before | προάγοντες | proagontes | proh-AH-gone-tase |
rebuked | ἐπετίμων | epetimōn | ape-ay-TEE-mone |
him, | αὐτῷ | autō | af-TOH |
that | ἵνα | hina | EE-na |
he should hold his peace: | σιωπήσῃ· | siōpēsē | see-oh-PAY-say |
but | αὐτὸς | autos | af-TOSE |
he | δὲ | de | thay |
cried | πολλῷ | pollō | pole-LOH |
so much | μᾶλλον | mallon | MAHL-lone |
the more, | ἔκραζεν | ekrazen | A-kra-zane |
Son Thou | Υἱὲ | huie | yoo-A |
of David, | Δαβίδ, | dabid | tha-VEETH |
have mercy | ἐλέησόν | eleēson | ay-LAY-ay-SONE |
on me. | με | me | may |
Cross Reference
ಲೂಕನು 18:15
ತರುವಾಯ ಚಿಕ್ಕಮಕ್ಕಳನ್ನು ಸಹ ಯೇಸು ಮುಟ್ಟುವಂತೆ ಜನರು ಅವುಗಳನ್ನು ಆತನ ಬಳಿಗೆ ತಂದಾಗ ಆತನ ಶಿಷ್ಯರು ಇದನ್ನು ನೋಡಿ ಅವರನು ಗದರಿಸಿದರು.
2 ಕೊರಿಂಥದವರಿಗೆ 12:8
ಈ ವಿಷಯದಲ್ಲಿ ಅದು ನನ್ನನ್ನು ಬಿಟ್ಟುಹೋಗಬೇಕೆಂದು ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು.
ಲೂಕನು 19:39
ಜನಸಮೂಹದೊಳಗಿಂದ ಕೆಲವು ಫರಿಸಾಯರು ಆತನಿಗೆ--ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು ಅಂದರು.
ಲೂಕನು 18:38
ಆಗ ಅವನು--ಯೇಸುವೇ, ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಕೂಗಿಕೊಂಡನು.
ಲೂಕನು 18:1
ಜನರು ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥಿಸತಕ್ಕದ್ದೆಂದು ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು--
ಲೂಕನು 11:52
ನ್ಯಾಯ ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಯಾಕಂದರೆ ನೀವು ಜ್ಞಾನದ ಬೀಗದ ಕೈಯನ್ನು ತಕ್ಕೊಂಡಿದ್ದೀರಿ, ನೀವಂತೂ ಒಳಗೆ ಪ್ರವೇಶಿಸಲಿಲ್ಲ. ಒಳಗೆ ಪ್ರವೇಶಿಸುತ್ತಿರುವವ ರಿಗೂ ನೀವು ತಡೆದಿರಿ ಎಂದು ಹೇಳಿದನು.
ಲೂಕನು 11:8
ಆದರೆ ನಾನು ನಿಮಗೆ ಹೇಳುವದೇನಂದರೆ--ಅವನು ತನ್ನ ಸ್ನೇಹಿತನಾಗಿರುವದರಿಂದ ಎದ್ದು ಅವನಿಗೆ ಕೊಡದೆ ಹೋದರೂ ಅವನು ಮೇಲಿಂದ ಮೇಲೆ ಪೀಡಿಸಿ ಬೇಡುವದರಿಂದ ಎದ್ದು ಅವನಿಗೆ ಬೇಕಾದಷ್ಟು ಕೊಡುವನು.
ಲೂಕನು 8:49
ಆತನು ಇನ್ನೂ ಮಾತನಾಡುತ್ತಿದ್ದಾಗ ಸಭಾಮಂದಿ ರದ ಅಧಿಕಾರಿಯ ಮನೆಯಿಂದ ಒಬ್ಬನು ಬಂದು ಅವನಿಗೆ--ನಿನ್ನ ಮಗಳು ಸತ್ತಿದ್ದಾಳೆ, ಬೋಧಕನಿಗೆ ತೊಂದರೆ ಕೊಡಬೇಡ ಅಂದನು.
ಮತ್ತಾಯನು 26:40
ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರು ನಿದ್ರೆ ಮಾಡುವದನ್ನು ಕಂಡು ಪೇತ್ರನಿಗೆ--ಏನು ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ?
ಮತ್ತಾಯನು 7:7
ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು.
ಯೆರೆಮಿಯ 29:12
ಆಗ ನನ್ನನ್ನು ಕರೆಯುವಿರಿ; ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ; ನಿಮಗೆ ಕಿವಿಗೊಡುವೆನು.
ಕೀರ್ತನೆಗಳು 141:1
ಕರ್ತನೇ, ನಿನ್ನನ್ನು ಕೂಗುತ್ತೇನೆ; ನನ್ನ ಬಳಿಗೆ ಬರಲು ತ್ವರೆಯಾಗಿ ಬಾ; ನಾನು ನಿನ್ನನ್ನು ಕರೆಯುವಾಗ, ನನ್ನ ಸ್ವರಕ್ಕೆ ಕಿವಿಗೊಡು.
ಆದಿಕಾಂಡ 32:26
ಆತನು ಯಾಕೋಬನಿಗೆ--ಉದಯವಾಯಿತು, ನನ್ನನು ಬಿಡು ಅಂದಾಗ ಅವನು--ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡೆನು ಅಂದನು.