Luke 9 - BBE (Kannada)
1 And getting the twelve together, he gave them power and authority over all evil spirits and over diseases, to make them well.ತರುವಾಯ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವದಕ್ಕೂ ರೋಗಗಳನ್ನು ಸ್ವಸ್ಥ ಮಾಡುವದಕ್ಕೂ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟನು.
2 And he sent them out to be preachers of the kingdom of God, and to make well those who were ill.ದೇವರ ರಾಜ್ಯವನ್ನು ಸಾರುವದಕ್ಕೂ ರೋಗಿಗಳನ್ನು ಸ್ವಸ್ಥಮಾಡುವದಕ್ಕೂ ಆತನು ಅವರನ್ನು ಕಳುಹಿಸಿಕೊಟ್ಟನು.
3 And he said to them, Take nothing for your journey, no stick or bag or bread or money, and do not take two coats.ಆತನು ಅವರಿಗೆ--ನೀವು ಪ್ರಯಾಣಕ್ಕಾಗಿ ಕೋಲುಗಳನ್ನಾಗಲೀ ಚೀಲವನ್ನಾ ಗಲೀ ರೊಟ್ಟಿಯನ್ನಾಗಲೀ ಹಣವನ್ನಾಗಲೀ ಏನೂ ತಕ್ಕೊಳ್ಳಬೇಡಿರಿ; ಇದಲ್ಲದೆ ನಿಮಗೆ ಎರಡು ಅಂಗಿಗಳೂ ಇರಬಾರದು.
4 And if you go into a house, let that house be your resting-place till you go away.ನೀವು ಯಾವದಾದರೂ ಮನೆಯನ್ನು ಪ್ರವೇಶಿಸಿದಾಗ ಅಲ್ಲೇ ಇದ್ದು ಅಲ್ಲಿಂದಲೇ ಹೊರಡಿರಿ.
5 And if any people will not take you in, when you go away from that town, put off its dust from your feet for a witness against them.ಯಾರಾದರೂ ನಿಮ್ಮನ್ನು ಅಂಗೀಕರಿಸದೆ ಹೋದರೆ ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದ ಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ ಅಂದನು.
6 And they went away, journeying through all the towns, preaching the good news and making people free from diseases in all places.ಅವರು ಊರುಗಳನ್ನು ಹಾದು ಹೋಗುವಾಗ ಸುವಾರ್ತೆಯನ್ನು ಸಾರುತ್ತಾ ಎಲ್ಲಾ ಕಡೆಗಳಲ್ಲಿ ಸ್ವಸ್ಥ ಮಾಡುತ್ತಾ ಹೋದರು.
7 Now Herod the king had news of all these things: and he was in doubt, because it was said by some people that John had come back from the dead;ಚತುರಾಧಿಪತಿಯಾದ ಹೆರೋದನು ಯೇಸು ಮಾಡಿದವುಗಳನ್ನೆಲ್ಲಾ ಕೇಳಿ ಕಳವಳಗೊಂಡನು. ಯಾಕಂದರೆ ಯೋಹಾನನು ಸತ್ತವರೊಳಗಿಂದ ಎದ್ದಿ ದ್ದಾನೆಂದು ಕೆಲವರು ಹೇಳುತ್ತಿದ್ದರು.
8 And by some, that Elijah had come; and by others, that one of the old prophets had come back to life.ಎಲೀಯನು ಪ್ರತ್ಯಕ್ಷವಾಗಿದ್ದಾನೆಂದು ಕೆಲವರು ಹಿಂದಿನ ಕಾಲದ ಪ್ರವಾದಿಗಳಲ್ಲಿ ಒಬ್ಬನು ಎದ್ದಿದ್ದಾನೆಂದು ಇನ್ನು ಬೇರೆ ಯವರು ಹೇಳುತ್ತಿದ್ದರು.
9 And Herod said, I put John to death: but who is this, of whom such stories are given to me? And he had a desire to see him.ಆಗ ಹೆರೋದನು--ನಾನು ಯೋಹಾನನ ತಲೆ ಹೊಯ್ಸಿದ್ದೇನೆ; ಆದರೆ ನಾನು ಯಾರನ್ನು ಕುರಿತು ಈ ವಿಷಯಗಳನ್ನು ಕೇಳು ತ್ತೇನೋ ಇವನು ಯಾರು ಎಂದು ಹೇಳಿ ಅವನು ಆತನನ್ನು ನೋಡಲು ಅಪೇಕ್ಷಿಸಿದನು.
10 And the twelve, when they came back, gave him an account of what they had done. And he took them with him and went away from the people to a town named Beth-saida.ತರುವಾಯ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದವುಗಳನ್ನೆಲ್ಲಾ ಆತನಿಗೆ ತಿಳಿಸಿದರು. ಆಗ ಆತನು ಬೇತ್ಸಾಯಿದ ಎಂದು ಕರೆಯಲ್ಪಟ್ಟ ಪಟ್ಟಣಕ್ಕೆ ಸಂಬಂಧಿಸಿದ ಅರಣ್ಯಸ್ಥಳಕ್ಕೆ ಪ್ರತ್ಯೇಕವಾಗಿ ಅವರನ್ನು ಕರೆದುಕೊಂಡು ಹೋದನು.
11 But the people, getting news of it, went after him: and he was pleased to see them, and gave them teaching about the kingdom of God, and made those well who were in need of it.ಆಗ ಜನರು ಅದನ್ನು ತಿಳಿದು ಆತನನ್ನು ಹಿಂಬಾಲಿಸಲು ಆತನು ಅವರನ್ನು ಅಂಗೀಕರಿಸಿ ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ ಸ್ವಸ್ಥತೆ ಬೇಕಾಗಿದ್ದವರನ್ನು ಸ್ವಸ್ಥ ಮಾಡಿದನು.
12 And the day went on; and the twelve came to him and said, Send these people away so that they may go into the towns and the country round about and get resting-places and food for themselves, for we are in a waste place.ಸಂಜೆಯಾಗು ತ್ತಿದ್ದಾಗ ಹನ್ನೆರಡು ಮಂದಿ ಬಂದು ಆತನಿಗೆ--ಈ ಜನಸಮೂಹವು ಸುತ್ತಲಿರುವ ಊರುಗಳಿಗೂ ಸೀಮೆಗಳಿಗೂ ಹೋಗಿ ಇಳುಕೊಂಡು ಆಹಾರವನ್ನು ದೊರಕಿಸಿಕೊಳ್ಳುವಂತೆ ಅವರನ್ನು ಕಳುಹಿಸಿಬಿಡು; ಯಾಕಂದರೆ ನಾವು ಇಲ್ಲಿ ಅರಣ್ಯ ಸ್ಥಳದಲ್ಲಿ ಇದ್ದೇವಲ್ಲಾ ಅಂದರು.
13 But he said, Give them food yourselves. And they said, We have only five cakes of bread and two fishes, if we do not go and get food for all these people.ಆದರೆ ಆತನು ಅವರಿಗೆ--ನೀವೇ ಅವ ರಿಗೆ ಊಟಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು--ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳದ ಹೊರತು ನಮ್ಮಲ್ಲಿ ಐದು ರೊಟ್ಟಿ ಎರಡು ವಿಾನುಗಳಿಗಿಂತ ಹೆಚ್ಚೇನೂ ಇಲ್ಲ ಅಂದರು.
14 For there were about five thousand men. And he said to his disciples, Make them be seated in groups, about fifty to a group.ಯಾಕಂದರೆ ಅವರು ಹೆಚ್ಚು ಕಡಿಮೆ ಗಂಡಸರೇ ಐದು ಸಾವಿರ ಇದ್ದರು. ಆಗ ಆತನು ತನ್ನ ಶಿಷ್ಯ ರಿಗೆ--ಪಂಕ್ತಿಗಳಲ್ಲಿ ಐವತ್ತರಂತೆ ಅವರನ್ನು ಕೂಡ್ರಿಸಿರಿ ಅಂದನು.
15 And they did so, and made them all be seated.ಅವರು ಅದರಂತೆಯೇ ಮಾಡಿ ಅವರೆ ಲ್ಲರನ್ನೂ ಕೂಡ್ರಿಸಿದರು.
16 And he took the five cakes of bread and the two fishes and, looking up to heaven, he said words of blessing over them, and when they had been broken, he gave them to the disciples to give to the people.ತರುವಾಯ ಆತನು ಐದು ರೊಟ್ಟಿಗಳನ್ನೂ ಎರಡು ವಿಾನುಗಳನ್ನೂ ತಕ್ಕೊಂಡು ಪರಲೋಕದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ ಮುರಿದು ಜನಸಮೂಹಕ್ಕೆ ಹಂಚುವಂತೆ ಶಿಷ್ಯರಿಗೆ ಕೊಟ್ಟನು.
17 And they all took the food and had enough; and they took up of the broken bits which were over, twelve baskets full.ಆಗ ಅವರೆಲ್ಲರೂ ತಿಂದು ತೃಪ್ತರಾದರು; ಉಳಿದ ತುಂಡುಗಳನ್ನು ಕೂಡಿಸಲು ಅವರಿಗೆ ಹನ್ನೆರಡು ಪುಟ್ಟಿಗಳು ಉಳಿದವು.
18 And it came about that when he was in prayer, by himself, and the disciples were with him, he put a question to them, saying, Who do the people say I am?ಇದಾದ ಮೇಲೆ ಆತನು ಒಬ್ಬನೇ ಪ್ರಾರ್ಥಿಸು ತ್ತಿದ್ದಾಗ ಆತನ ಶಿಷ್ಯರು ಆತನೊಂದಿಗೆ ಇದ್ದರು; ಆಗ ಆತನು ಅವರಿಗೆ--ಜನರು ನನ್ನನ್ನು ಯಾರು ಅನ್ನುತ್ತಾರೆ ಎಂದು ಕೇಳಿದನು.
19 And they, answering, said, John the Baptist; but others say Elijah; and others, that one of the old prophets has come back.ಅವರು ಪ್ರತ್ಯುತ್ತರವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು ಅನ್ನುತ್ತಾರೆ; ಆದರೆ ಕೆಲವರು--ಎಲೀಯನು; ಬೇರೆ ಕೆಲವರು--ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ತಿರಿಗಿ ಎದ್ದಿದ್ದಾನೆ ಅನ್ನುತ್ತಾರೆ ಎಂದು ಹೇಳಿದರು.
20 And he said, But who do you say that I am? And Peter, answering, said, The Christ of God.ಆತನು ಅವರಿಗೆ--ಆದರೆ ನಾನು ಯಾರಾಗಿದ್ದೇನೆಂದು ನೀವು ಅನ್ನುತ್ತೀರಿ ಎಂದು ಕೇಳಲು ಪೇತ್ರನು ಪ್ರತ್ಯುತ್ತರ ವಾಗಿ--ದೇವರ ಕ್ರಿಸ್ತನು ಎಂದು ಹೇಳಿದನು.
21 But he gave them special orders, not to say this to any man;ಆ ಸಂಗತಿಯನ್ನು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿ--
22 Saying, The Son of man will undergo much and be put on one side by the rulers and the chief priests and the teachers of the law, and be put to death, and on the third day he will come back to life.ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.
23 And he said to them all, If any man has a desire to come after me, let him give up all, and take up his cross every day, and come after me.ಆತನು ಅವರೆಲ್ಲರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ;
24 For whoever has a desire to keep his life will have it taken from him, but whoever gives up his life because of me, will keep it.ಯಾವನಾದರೂ ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಾದರೆ ಅದನ್ನು ಕಳಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿ ಯಾವನಾದರೂ ತನ್ನ ಪ್ರಾಣವನ್ನು ಕಳಕೊಂಡರೆ ಅದನ್ನು ಉಳಿಸಿಕೊಳ್ಳುವನು.
25 For what profit will a man have if he gets all the world, but undergoes loss or destruction himself?ಇದಲ್ಲದೆ ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡು ತನ್ನನ್ನು ತಾನೇ ಹಾಳು ಮಾಡಿ ಕೊಂಡರೆ ಇಲ್ಲವೆ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು?
26 For if any man has a feeling of shame because of me or of my words, the Son of man will have shame because of him when he comes in his glory and the glory of the Father and of the holy angels.ಯಾವನಾದರೂ ನನ್ನ ಮತ್ತು ನನ್ನ ವಾಕ್ಯಗಳ ವಿಷಯದಲ್ಲಿ ನಾಚಿಕೊಳ್ಳುವದಾದರೆ ಮನುಷ್ಯಕುಮಾರನು ತನ್ನ ಮತ್ತು ತನ್ನ ತಂದೆಯ ಪ್ರಭಾವದೊಡನೆಯೂ ಪರಿಶುದ್ಧದೂತರೊಂದಿಗೂ ಬರುವಾಗ ಅವನ ವಿಷಯದಲ್ಲಿ ಆತನು ನಾಚಿಕೊಳ್ಳು ವನು.
27 But truly I say to you, Some of those who are here now will have no taste of death till they see the kingdom of God.ಆದರೆ ನಾನು ನಿಮಗೆ ಸತ್ಯವಾಗಿ ಹೇಳು ತ್ತೇನೆ, ಇಲ್ಲಿ ನಿಂತುಕೊಂಡಿರುವ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣವನ್ನು ರುಚಿಸುವದೇ ಇಲ್ಲ ಅಂದನು.
28 And about eight days after he had said these things, he took Peter and John and James with him and went up into the mountain for prayer.ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಆದದ್ದೇನಂದರೆ, ಆತನು ಪೇತ್ರ ಯೋಹಾನ ಮತ್ತು ಯಾಕೋಬರನ್ನು ಕರಕೊಂಡು ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟವನ್ನೇರಿದನು.
29 And while he was in prayer, his face was changed and his clothing became white and shining.ಆತನು ಪ್ರಾರ್ಥನೆ ಮಾಡುತ್ತಿದ್ದಾಗ ಆತನ ಮುಖ ಭಾವವು ಬದಲಾಯಿತು; ಉಡುಪು ಬೆಳ್ಳಗಾಗಿ ಪ್ರಕಾಶಮಾನವಾಯಿತು.
30 And two men, Moses and Elijah, were talking with him;ಇಗೋ, ಮೋಶೆ ಮತ್ತು ಎಲೀಯ ಎಂಬ ಇಬ್ಬರು ಪುರುಷರು ಆತನೊಂದಿಗೆ ಮಾತನಾಡುತ್ತಿದ್ದರು.
31 Who were seen in glory and were talking of his death which was about to take place in Jerusalem.ಇವರು ಮಹಿಮೆಯಲ್ಲಿ ಕಾಣಿಸಿಕೊಂಡು ಆತನು ಯೆರೂಸ ಲೇಮಿನಲ್ಲಿ ಪೂರೈಸುವದಕ್ಕಿದ್ದ ಆತನ ಮರಣದ ವಿಷಯವಾಗಿ ಮಾತನಾಡುತ್ತಿದ್ದರು.
32 Now Peter and those who were with him were overcome with sleep: but when they were fully awake, they saw his glory and the two men who were with him.ಆದರೆ ಪೇತ್ರನೂ ಅವನ ಸಂಗಡ ಇದ್ದವರೂ ನಿದ್ರೆಯಿಂದ ಭಾರವುಳ್ಳವರಾಗಿದ್ದರು; ಅವರು ಎಚ್ಚತ್ತಾಗ ಆತನ ಮಹಿಮೆಯನ್ನೂ ಆತನ ಕೂಡ ನಿಂತಿದ್ದ ಇಬ್ಬರು ಪುರಷರನ್ನೂ ನೋಡಿದರು.
33 And when they were about to go away from him, Peter said to Jesus, Master, it is good for us to be here; let us make three tents, one for you and one for Moses and one for Elijah: having no knowledge of what he was saying.ಇದಾದ ಮೇಲೆ ಅವರು ಹೋಗುತ್ತಿದ್ದಾಗ ಪೇತ್ರನು ಯೇಸುವಿಗೆ--ಬೋಧಕನೇ, ನಾವು ಇಲ್ಲೇ ಇರುವದು ನಮಗೆ ಒಳ್ಳೇದು; ನಾವು ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಮೂರು ಗುಡಾರಗಳನ್ನು ಮಾಡುವೆವು ಅಂದನು. ತಾನು ಹೇಳಿದ್ದನ್ನು ಅವನು ಅರಿಯದೆ ಇದ್ದನು.
34 And while he said these things, the shade of a cloud came over them, and they were full of fear when they went into the cloud.ಹೀಗೆ ಅವನು ಮಾತನಾಡು ತ್ತಿದ್ದಾಗಲೇ ಮೇಘವು ಬಂದು ಅವರನ್ನು ಕವಿದು ಕೊಂಡಿತು ಮತ್ತು ಅವರು ಆ ಮೇಘದೊಳಗೆ ಪ್ರವೇ ಶಿಸುತ್ತಿದ್ದಾಗ ಅವರು ಭಯಪಟ್ಟರು.
35 And there was a voice from the cloud saying, This is my Son, the man of my selection; give ear to him.ಆಗ ಮೇಘ ದೊಳಗಿಂದ--ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳುವ ಧ್ವನಿಯಾಯಿತು.
36 And after the voice was gone they saw that Jesus was by himself. And they kept quiet, and said nothing at that time to anyone of the things which they had seen.ಆ ಧ್ವನಿಯಾದ ನಂತರ (ಅವರು) ಯೇಸುವನ್ನು ಮಾತ್ರ ನೋಡಿದರು. ಅವರು ನೋಡಿ ದವುಗಳನ್ನು ಆ ದಿವಸಗಳಲ್ಲಿ ಯಾರಿಗೂ ಹೇಳದೆ ಸುಮ್ಮನಿದ್ದರು.
37 And on the day after, when they came down from the mountain, a great band of people came to him.ಇದಾದ ಮೇಲೆ ಮರುದಿವಸ ಅವರು ಬೆಟ್ಟ ದಿಂದ ಕೆಳಗಿಳಿದು ಬಂದಾಗ ಬಹಳ ಜನರು ಆತನನ್ನು ಸಂಧಿಸಿದರು.
38 And a man from among them, crying out, said, Master, I make a request to you, give a thought to my son, for he is my only child:ಆಗ ಇಗೋ, ಆ ಗುಂಪಿನೊಳಗಿಂದ ಒಬ್ಬ ಮನುಷ್ಯನು ಕೂಗಿ--ಬೋಧಕನೇ, ನನ್ನ ಮಗನ ಮೇಲೆ ದೃಷ್ಟಿಯಿಡು ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ; ಯಾಕಂದರೆ ಅವನು ನನಗೆ ಒಬ್ಬನೇ ಮಗನು.
39 And see, a spirit takes him, and suddenly he gives a cry, twisted in pain and streaming at the lips, and when it goes away from him at last, he is marked as from blows.ಇಗೋ, ದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಅದು ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವದಲ್ಲದೆ ಜಜ್ಜುವದು. ಅದು ಅವನನ್ನು ಬಿಟ್ಟುಹೋಗುವದು ಕಷ್ಟ.
40 And I made a request to your disciples to send it out of him, but they were not able to do it.ಅದನ್ನು ಬಿಡಿಸುವಂತೆ ನಾನು ನಿನ್ನ ಶಿಷ್ಯರನ್ನು ಬೇಡಿಕೊಂಡೆನು; ಆದರೆ ಅದು ಅವರಿಂದ ಆಗಲಿಲ್ಲ ಅಂದನು.
41 And Jesus said, O generation without faith and false in heart, how long will I have to be with you and put up with you? let your son come here.ಯೇಸು ಪ್ರತ್ಯುತ್ತರ ವಾಗಿ--ಓ ನಂಬಿಕೆಯಿಲ್ಲದ ವಕ್ರಸಂತತಿಯೇ, ನಾನು ಎಷ್ಟು ಕಾಲ ನಿಮ್ಮೊಂದಿಗಿರಲಿ ಮತ್ತು ನಿಮ್ಮನ್ನು ಸಹಿಸಲಿ ಎಂದು ಹೇಳಿ--ನಿನ್ನ ಮಗನನ್ನು ಇಲ್ಲಿಗೆ ಕರಕೊಂಡು ಬಾ ಅಂದನು.
42 And while he was coming, he was pushed violently down and twisted by the evil spirit. But Jesus gave sharp orders to the unclean spirit, and made the boy well, and gave him back to his father.ಅವನು ಇನ್ನೂ ಬರುತ್ತಿದ್ದಾಗಲೇ ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ಅಶುದ್ಧಾತ್ಮವನ್ನು ಗದರಿಸಿ ಮಗನನ್ನು ಸ್ವಸ್ಥಮಾಡಿ ಅವನನ್ನು ಅವನ ತಂದೆಗೆ ತಿರಿಗಿ ಒಪ್ಪಿ ಸಿದನು.
43 And they were full of wonder at the great power of God. But while they were all wondering at all the things which he did, he said to his disciples,ಆಗ ಅವರೆಲ್ಲರೂ ದೇವರ ಮಹತ್ತಾದ ಶಕ್ತಿಗಾಗಿ ಬೆರಗಾದರು.ಆದರೆ ಯೇಸು ಮಾಡಿದ ಎಲ್ಲಾ ಕಾರ್ಯಗಳಿಗಾಗಿ ಅವರಲ್ಲಿ ಪ್ರತಿಯೊಬ್ಬನೂ ಆಶ್ಚರ್ಯಪಡುತ್ತಿರುವಲ್ಲಿ ಆತನು ತನ್ನ ಶಿಷ್ಯರಿಗೆ--
44 Let these words go deep into your ears, for the Son of man will be given up into the hands of men.ಈ ಮಾತುಗಳು ನಿಮ್ಮ ಕಿವಿಗಳ ಆಳಕ್ಕೆ ಇಳಿಯಲಿ; ಯಾಕಂದರೆ ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು ಎಂದು ಹೇಳಿದನು.
45 But this saying was not clear to them and its sense was kept secret from them so that they were not able to see it: and they had fear of questioning him about it.ಆದರೆ ಅವರು ಈ ಮಾತನು ತಿಳಿದುಕೊಳ್ಳಲಿಲ್ಲ, ಅವರು ಗ್ರಹಿಸಲಾರದಂತೆ ಅದು ಅವರಿಗೆ ಮರೆಯಾಗಿತ್ತು. ಮತ್ತು ಆ ಮಾತನ್ನು ಕುರಿತು ಆತನನ್ನು ಕೇಳುವದಕ್ಕೆ ಅವರು ಭಯಪಟ್ಟರು.
46 Now there was a discussion among them about which of them would be the greatest.ಆಗ ತಮ್ಮಲ್ಲಿ ಯಾವನು ಎಲ್ಲರಿಗಿಂತ ದೊಡ್ಡ ವನು ಎಂಬ ತರ್ಕವು ಅವರೊಳಗೆ ಎದ್ದಿತು.
47 But when Jesus saw the reasoning of their hearts, he took a small child and put him by his side,ಆದರೆ ಯೇಸು ಅವರ ಹೃದಯದ ಆಲೋಚನೆಯನ್ನು ತಿಳಿದವನಾಗಿ ಒಂದು ಮಗುವನ್ನು ತಕ್ಕೊಂಡು ತನ್ನ ಬಳಿಯಲ್ಲಿ ನಿಲ್ಲಿಸಿ
48 And said to them, Whoever gives honour to this child in my name, gives honour to me: and whoever gives honour to me, gives honour to him who sent me: for whoever is least among you all, that man is great.ಅವರಿಗೆ ಯಾವನಾದರೂ ಈ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಯಾವನಾದರೂ ನನ್ನನ್ನು ಅಂಗೀಕರಿಸಿಕೊಂಡರೆ ನನ್ನನ್ನು ಕಳುಹಿಸಿ ಕೊಟ್ಟಾತನನ್ನೇ ಅಂಗೀಕರಿಸಿಕೊಳ್ಳುತ್ತಾನೆ. ಯಾಕಂ ದರೆ ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡ
49 And John, answering, said, Master, we saw a man driving out evil spirits in your name, and we did not let him do it, because he was not one of us.ಆಗ ಯೋಹಾನನು--ಬೋಧಕನೇ, ಒಬ್ಬನು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವದನ್ನು ನಾವು ನೋಡಿ ಅವನಿಗೆ ಅಡ್ಡಿಮಾಡಿದೆವು; ಯಾಕಂದರೆ ಅವನು ನಮ್ಮೊಂದಿಗೆ (ನಿನ್ನನ್ನು) ಹಿಂಬಾಲಿ ಸುವದಿಲ್ಲ ಅಂದನು.
50 But Jesus said to him, Let him do it, for he who is not against you is for you.ಅದಕ್ಕೆ ಯೇಸು--ಅವನಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ನಮಗೆ ವಿರೋಧ ವಾಗಿರದವನು ನಮ್ಮ ಪಕ್ಷದವನೇ ಎಂದು ಹೇಳಿದನು.
51 And it came about that when the days were near for him to be taken up, his face was turned to go to Jerusalem,ಇದಾದಮೇಲೆ ಯೇಸು ತಾನು ಮೇಲಕ್ಕೆ ಅಂಗೀ ಕರಿಸಲ್ಪಡುವ ಸಮಯವು ಬಂದಾಗ ಯೆರೂಸಲೇಮಿಗೆ ಹೋಗುವದಕ್ಕಾಗಿ ಆತನು ತನ್ನ ಮುಖವನ್ನು ದೃಢಮಾಡಿಕೊಂಡು
52 And he sent men before: and they came to a small town of Samaria to make ready for him.ತನಗೆ ಮುಂದಾಗಿ ದೂತರನ್ನು ಕಳುಹಿಸಿದನು. ಅವರು ಹೋಗಿ ಆತನಿಗಾಗಿ ಸಿದ್ಧ ಪಡಿಸುವಂತೆ ಸಮಾರ್ಯದ ಒಂದು ಹಳ್ಳಿಯೊಳಕ್ಕೆ ಪ್ರವೇಶಿಸಿದರು.
53 But they would not have him there, because he was clearly going to Jerusalem.ಆದರೆ ಅವರು ಆತನನ್ನು ಅಂಗೀಕರಿಸಲಿಲ್ಲ. ಯಾಕಂದರೆ ಆತನು ಯೆರೂಸಲೇ ಮಿಗೆ ಹೋಗುವಾತನೋ ಎಂಬಂತೆ ಆತನ ಮುಖ ವಿತ್ತು.
54 And when his disciples, James and John, saw this, they said, Lord, may we send fire from heaven and put an end to them?ಆತನ ಶಿಷ್ಯರಾದ ಯಾಕೋಬ ಯೋಹಾನರು ಇದನ್ನು ನೋಡಿ--ಕರ್ತನೇ, ಎಲೀಯನು ಮಾಡಿದ ಪ್ರಕಾರ ಅವರನ್ನು ದಹಿಸಿಬಿಡುವಂತೆ ಆಕಾಶದಿಂದ ಬೆಂಕಿ ಬೀಳುವ ಹಾಗೆ ನಾವು ಅಪ್ಪಣೆಕೊಡಲು ನಿನಗೆ ಮನಸ್ಸುಂಟೋ ಎಂದು ಅವರು ಕೇಳಿದರು.
55 But turning round he said sharp words to them.ಆದರೆ ಆತನು ತಿರುಗಿಕೊಂಡು ಅವರನ್ನು ಗದರಿಸಿ--ನೀವು ಯಾವ ತರವಾದ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು.
56 And they went to another small town.ಯಾಕಂದರೆ ಮನುಷ್ಯಕುಮಾರನು ಮನುಷ್ಯರ ಪ್ರಾಣಗಳನ್ನು ನಾಶಮಾಡುವದಕ್ಕಾಗಿ ಅಲ್ಲ, ಅವರನ್ನು ರಕ್ಷಿಸುವದಕ್ಕಾಗಿ ಬಂದನು ಎಂದು ಹೇಳಿದನು. ಅವರು ಮತ್ತೊಂದು ಹಳ್ಳಿಗೆ ಹೋದರು.
57 And when they were on the way, a certain man said to him, I will come after you wherever you go.ಇದಾದ ಮೇಲೆ ಅವರು ದಾರಿಯಲ್ಲಿ ಹೋಗು ತ್ತಿರುವಾಗ ಒಬ್ಬಾನೊಬ್ಬ ಮನುಷ್ಯನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುವೆನು ಅಂದನು.
58 And Jesus said to him, Foxes have holes and the birds of the air have resting-places, but the Son of man has nowhere to put his head.ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ ಮತ್ತು ಆಕಾಶದ ಪಕ್ಷಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆ ಇಡುವಷ್ಟೂ ಸ್ಥಳವಿಲ್ಲ ಅಂದನು.
59 And he said to another, Come after me. But he said, Lord, let me first go and give the last honours to my father.ಇದಲ್ಲದೆ ಆತನು ಮತ್ತೊಬ್ಬನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆದರೆ ಅವನು--ಕರ್ತನೇ, ನಾನು ಹೋಗಿ ಮೊದಲು ನನ್ನ ತಂದೆಯನ್ನು ಹೂಣಿಡುವಂತೆ ಅಪ್ಪಣೆಕೊಡು ಅಂದನು.
60 But he said to him, Let the dead take care of their dead; it is for you to go and give news of the kingdom of God.ಆದರೆ ಯೇಸು ಅವ ನಿಗೆ--ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ; ಆದರೆ ನೀನು ಹೋಗಿ ದೇವರ ರಾಜ್ಯವನ್ನು ಸಾರು ಅಂದನು.
61 And another man said, I will come with you, Lord, but first let me say a last good-day to those who are at my house.ಇದಲ್ಲದೆ ಮತ್ತೊಬ್ಬನು ಸಹ--ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುವೆನು; ಆದರೆ ನಾನು ಮೊದಲು ಹೋಗಿ ನನ್ನ ಮನೆಯಲ್ಲಿದ್ದವರಿಗೆ ಬೀಳ್ಕೊಡುವಂತೆ ನನಗೆ ಅಪ್ಪಣೆಕೊಡು ಅಂದನು.
62 But Jesus said, No man, having put his hand to the plough and looking back, is good enough for the kingdom of God.ಆಗ ಯೇಸು ಅವನಿಗೆ--ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ ಅಂದನು.
Kannada Bible