Bible

Mark 11 - DBY (Kannada)

1 And when they draw near to Jerusalem, to Bethphage and Bethany, at the mount of Olives, he sends two of his disciples,ಅವರು ಯೆರೂಸಲೇಮಿಗೆ ಸವಿಾಪವಾಗಿ ಎಣ್ಣೀಮರಗಳ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಬಂದಾಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ--

2 and says to them, Go into the village which is over against you, and immediately on entering into it ye will find a colt tied, upon which no [child] of man has ever sat: loose it and lead it [here].ನಿಮ್ಮ ಎದುರಾಗಿರುವ ಹಳ್ಳಿಗೆ ಹೋಗಿರಿ; ನೀವು ಅದರೊಳಗೆ ಪ್ರವೇಶಿಸುತ್ತಲೇ ಯಾರು ಎಂದಿಗೂ ಅದರ ಮೇಲೆ ಕೂತುಕೊಳ್ಳದಿರುವ ಒಂದು ಕತ್ತೇಮರಿಯನ್ನು ಅಲ್ಲಿ ಕಾಣುವಿರಿ; ಅದನ್ನು ಬಿಚ್ಚಿ ತಕ್ಕೊಂಡು ಬನ್ನಿರಿ.

3 And if any one say to you, Why do ye this? say, The Lord has need of it; and straightway he sends it hither.ಯಾವ ನಾದರೂ ನಿಮಗೆ-- ನೀವು ಯಾಕೆ ಇದನ್ನು ಮಾಡು ತ್ತೀರಿ ಎಂದು ಕೇಳಿದರೆ ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ; ಆಗ ಅವನು ಕೂಡಲೆ ಅದನ್ನು ಇಲ್ಲಿಗೆ ಕಳುಹಿಸುವನು ಎಂದು ಹೇಳಿದನು.

4 And they departed, and found a colt bound to the door without at the crossway, and they loose him.ಆಗ ಅವರು ಹೊರಟು ಹೋಗಿ ಎರಡು ದಾರಿಗಳು ಕೂಡುವ ಸ್ಥಳದಲ್ಲಿ ಹೊರಗೆ ಬಾಗಲಿನ ಬಳಿಯಲ್ಲಿ ಕಟ್ಟಿದ್ದ ಕತ್ತೇಮರಿಯನ್ನು ಬಿಚ್ಚುತ್ತಿರುವಾಗ

5 And some of those who stood there said to them, What are ye doing, loosing the colt?ಅಲ್ಲಿ ನಿಂತವರಲ್ಲಿ ಕೆಲವರು ಅವರಿಗೆ--ಆ ಕತ್ತೇಮರಿಯನ್ನು ಏನು ಮಾಡುತ್ತೀರಿ ಎಂದು ಕೇಳಿದರು.

6 And they said to them as Jesus had commanded. And they let them [do it].ಅದಕ್ಕೆ ಅವರು ಯೇಸು ಅಪ್ಪಣೆ ಕೊಟ್ಟಂತೆಯೇ ಹೇಳಿದರು. ಆಗ ಅವರು ಅವರಿಗೆ ಹೋಗಗೊಡಿಸಿದರು.

7 And they led the colt to Jesus, and cast their clothes upon it, and he sat on it;ಅವರು ಕತ್ತೇ ಮರಿಯನ್ನು ಯೇಸುವಿನ ಬಳಿಗೆ ತಂದು ಅದರ ಮೇಲೆ ತಮ್ಮ ವಸ್ತ್ರಗಳನ್ನು ಹಾಕಿದಾಗ ಆತನು ಅದರ ಮೇಲೆ ಕೂತುಕೊಂಡನು.

8 and many strewed their clothes on the way, and others cut down branches from the trees [and went on strewing them on the way].ಅನೇಕರು ತಮ್ಮ ವಸ್ತ್ರ ಗಳನ್ನು ದಾರಿಯಲ್ಲಿ ಹಾಸಿದರು; ಇತರರು ಮರಗಳಿಂದ ಕೊಂಬೆಗಳನ್ನು ಕಡಿದು ದಾರಿಯಲ್ಲಿ ಹಾಕಿದರು.

9 And those going on before and those following cried out, Hosanna! blessed [be] he that comes in [the] Lord's name.ಆಗ ಮುಂದೆಯೂ ಹಿಂದೆಯೂ ಹೋಗುತ್ತಿದ್ದವರು ಕೂಗು ತ್ತಾ-- ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು;

10 Blessed [be] the coming kingdom of our father David. Hosanna in the highest!ಕರ್ತನ ಹೆಸರಿನಲ್ಲಿ ಬರುವ ನಮ್ಮ ತಂದೆ ಯಾದ ದಾವೀದನ ರಾಜ್ಯವು ಆಶೀರ್ವದಿಸಲ್ಪಡಲಿ; ಉನ್ನತದಲ್ಲಿ ಹೊಸನ್ನ ಎಂದು ಹೇಳಿದರು.

11 And he entered into Jerusalem and into the temple; and having looked round on all things, the hour being already late, he went out to Bethany with the twelve.ಯೇಸು ಯೆರೂಸಲೇಮಿಗೆ ಹೋಗಿ ದೇವಾಲ ಯದಲ್ಲಿ ಪ್ರವೇಶಿಸಿದಾಗ ಎಲ್ಲವುಗಳನ್ನು ಸುತ್ತಲೂ ನೋಡಿದನು; ಮತ್ತು ಸಂಜೆಯಾದಾಗ ಆ ಹನ್ನೆರಡು ಮಂದಿಯೊಂದಿಗೆ ಬೇಥಾನ್ಯಕ್ಕೆ ಹೋದನು.

12 And on the morrow, when they were gone out of Bethany, he hungered.ಮರುದಿವಸ ಅವರು ಬೇಥಾನ್ಯದಿಂದ ಬರುತ್ತಿ ದ್ದಾಗ ಆತನು ಹಸಿದಿದ್ದನು;

13 And seeing from afar off a fig-tree which had leaves, he came, if perhaps he might find something on it. And having come up to it he found nothing but leaves, for it was not the time of figs.ಆತನು ಎಲೆಗಳಿದ್ದ ಒಂದು ಅಂಜೂರದ ಮರವನ್ನು ದೂರದಿಂದ ನೋಡಿ ಒಂದು ವೇಳೆ ತನಗೆ ಅದರಲ್ಲಿ ಏನಾದರೂ ಸಿಕ್ಕೀತೆಂದು ಬಂದನು; ಆದರೆ ಆತನು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಯಾಕಂ ದರೆ ಅದು ಅಂಜೂರ ಫಲದ ಕಾಲವಾಗಿರಲಿಲ್ಲ.

14 And answering he said to it, Let no one eat fruit of thee any more for ever. And his disciples heard [it].ಯೇಸು ಅದಕ್ಕೆ--ಇನ್ನೆಂದಿಗೂ ಯಾವನೂ ನಿನ್ನಿಂದ ಹಣ್ಣನ್ನು ತಿನ್ನದಿರಲಿ ಅಂದನು. ಅದನ್ನು ಆತನ ಶಿಷ್ಯರು ಕೇಳಿಸಿಕೊಂಡರು.

15 And they come to Jerusalem, and entering into the temple, he began to cast out those who sold and who bought in the temple, and he overthrew the tables of the moneychangers and the seats of the dove-sellers,ಆಗ ಅವರು ಯೆರೂಸಲೇಮಿಗೆ ಬಂದರು; ಮತ್ತು ಯೇಸು ದೇವಾಲಯದೊಳಕ್ಕೆ ಹೋಗಿ ಅಲ್ಲಿ ಮಾರುತ್ತಿದ್ದವರನ್ನೂ ಕೊಂಡು ಕೊಳ್ಳುತ್ತಿದ್ದವರನ್ನೂ ಹೊರಗೆ ಹಾಕಲಾರಂಭಿಸಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿವಾಳಗಳನ್ನು ಮಾರುತ್ತಿದ್ದವರ ಪೀಠಗಳನ್ನೂ ಕೆಡವಿಹಾಕಿದನು.

16 and suffered not that any one should carry any package through the temple.ಯಾವನೂ ದೇವಾಲಯದ ಮಾರ್ಗದಿಂದ ಯಾವ ಪಾತ್ರೆಯ ನ್ನಾದರೂ ತಕ್ಕೊಂಡು ಹೋಗಗೊಡಿಸಲಿಲ್ಲ.

17 And he taught saying to them, Is it not written, My house shall be called a house of prayer for all the nations? but *ye* have made it a den of robbers.ಆತನು ಅವರಿಗೆ ಬೋಧಿಸುತ್ತಾ--ನನ್ನ ಮನೆಯು ಎಲ್ಲಾ ಜನಾಂಗಗಳವರಿಂದ ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದೆಂದು ಬರೆದಿಲ್ಲವೇ? ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.

18 And the chief priests and the scribes heard [it], and they sought how they might destroy him; for they feared him, because all the crowd were astonished at his doctrine.ಆಗ ಶಾಸ್ತ್ರಿಗಳೂ ಪ್ರಧಾನಯಾಜಕರೂ ಅದನ್ನು ಕೇಳಿ ಆತನನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸಿದರು. ಆದರೆ ಜನರೆಲ್ಲರೂ ಆತನ ಬೋಧನೆಗೆ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಆತನಿಗೆ ಭಯಪಟ್ಟರು.

19 And when it was evening he went forth without the city.ಸಂಜೆಯಾದಾಗ ಆತನು ಪಟ್ಟಣದ ಹೊರಗೆ ಹೋದನು.

20 And passing by early in the morning they saw the fig-tree dried up from the roots.ಬೆಳಿಗ್ಗೆ ಅವರು ದಾರಿಯಲ್ಲಿ ಹೋಗುತ್ತಿದ್ದಾಗ ಆ ಅಂಜೂರದ ಮರವು ಬೇರು ಸಹಿತವಾಗಿ ಒಣಗಿರು ವದನ್ನು ಕಂಡರು.

21 And Peter, remembering [what Jesus had said], says to him, Rabbi, see, the fig-tree which thou cursedst is dried up.ಆಗ ಪೇತ್ರನು ಜ್ಞಾಪಕ ಮಾಡಿ ಕೊಂಡು ಆತನಿಗೆ--ಗುರುವೇ, ಇಗೋ, ನೀನು ಶಪಿ ಸಿದ ಅಂಜೂರದ ಮರವು ಒಣಗಿಹೋಗಿದೆ ಅಂದನು.

22 And Jesus answering says to them, Have faith in God.ಯೇಸು ಪ್ರತ್ಯುತ್ತರವಾಗಿ ಅವರಿಗೆ ಹೇಳಿದ್ದೇನಂದರೆ --ದೇವರಲ್ಲಿ ನಂಬಿಕೆ ಇಡಿರಿ.

23 Verily I say to you, that whosoever shall say to this mountain, Be thou taken away and cast into the sea, and shall not doubt in his heart, but believe that what he says takes place, whatever he shall say shall come to pass for him.ಯಾಕಂದರೆ ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾವನಾದರೂ ಈ ಬೆಟ್ಟಕ್ಕೆ--ನೀನು ಕಿತ್ತುಕೊಂಡು ಹೋಗಿ ಸಮುದ್ರ ದಲ್ಲಿ ಬೀಳು ಎಂದು ಹೇಳಿ ತನ್ನ ಹೃದಯದಲ್ಲಿ ಸಂಶಯ ಪಡದೆ ತಾನು ಹೇಳಿದವುಗಳು ಆಗುವವೆಂದು ನಂಬಿ ದರೆ ಅವನು ಹೇಳಿದಂತೆಯೇ ಆಗುವದು.

24 For this reason I say to you, All things whatsoever ye pray for and ask, believe that ye receive it, and it shall come to pass for you.ಆದ ಕಾರಣ ನಾನು ನಿಮಗೆ ಹೇಳುವದೇನಂದರೆ--ನೀವು ಪ್ರಾರ್ಥನೆ ಮಾಡುವಾಗ ಯಾವವುಗಳನ್ನು ಆಶಿಸು ತ್ತೀರೋ ಅವು ನಿಮಗೆ ಸಿಕ್ಕುವವೆಂದು ನಂಬಿರಿ; ಮತ್ತು ಅವುಗಳನ್ನು ನೀವು ಹೊಂದುವಿರಿ.

25 And when ye stand praying, forgive if ye have anything against any one, that your Father also who is in the heavens may forgive you your offences.ನೀವು ನಿಂತು ಕೊಂಡು ಪ್ರಾರ್ಥಿಸುವಾಗ ಯಾವನಿಗಾದರೂ ವಿರೋ ಧವಾದದ್ದು ನಿಮ್ಮಲ್ಲಿದ್ದರೆ ಕ್ಷಮಿಸಿರಿ; ಆಗ ಪರಲೋಕ ದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ಅಪರಾಧಗಳನ್ನು ನಿಮಗೆ ಕ್ಷಮಿಸುವನು.

26 But if *ye* do not forgive, neither will your Father who is in the heavens forgive your offences.ನೀವು ಕ್ಷಮಿಸದಿದ್ದರೆ ಪರ ಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ಅಪರಾಧ ಗಳನ್ನು ಕ್ಷಮಿಸುವದಿಲ್ಲ.

27 And they come again to Jerusalem. And as he walked about in the temple, the chief priests and the scribes and the elders come to him,ಅವರು ತಿರಿಗಿ ಯೆರೂಸಲೇಮಿಗೆ ಬಂದರು; ಮತ್ತು ಆತನು ದೇವಾಲಯದಲ್ಲಿ ತಿರುಗಾಡುತ್ತಿರುವಾಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನ ಬಳಿಗೆ ಬಂದು

28 and they say to him, By what authority doest thou these things? and who gave thee this authority, that thou shouldest do these things?ಆತನಿಗೆ--ನೀನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೀ? ಮತ್ತು ಇವುಗಳನ್ನು ಮಾಡುವದಕ್ಕೆ ನಿನಗೆ ಅಧಿಕಾರ ಕೊಟ್ಟ ವರು ಯಾರು ಎಂದು ಕೇಳಿದರು.

29 And Jesus answering said to them, *I* also will ask you one thing, and answer me, and I will tell you by what authority I do these things:ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ಪ್ರಶ್ನೆಯನ್ನು ನಿಮ್ಮಿಂದ ಕೇಳುತ್ತೇನೆ, ನನಗೆ ಉತ್ತರಕೊಡಿರಿ; ಆಗ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ.

30 The baptism of John, was it of heaven, or of men? answer me.ಯೋಹಾನನ ಬಾಪ್ತಿಸ್ಮವು ಪರಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ, ನನಗೆ ಉತ್ತರಕೊಡಿರಿ ಅಂದನು.

31 And they reasoned with themselves, saying, If we should say, Of heaven, he will say, Why [then] have ye not believed him?ಆಗ ಅವರು --ಪರಲೋಕದಿಂದ ಎಂದು ನಾವು ಹೇಳಿದರೆ--ನೀವು ಯಾಕೆ ಅವನನ್ನು ನಂಬಲಿಲ್ಲ ಎಂದು ಕೇಳಿ ಯಾನು;

32 but should we say, Of men -- they feared the people; for all held of John that he was truly a prophet.ಆದರೆ ನಾವು--ಮನುಷ್ಯರಿಂದ ಎಂದು ಹೇಳುವದಾದರೆ ನಮಗೆ ಜನರ ಭಯವಿದೆ; ಯಾಕಂದರೆ ಯೋಹಾನನು ನಿಜವಾಗಿಯೂ ಪ್ರವಾದಿಯೆಂದು ಎಲ್ಲರೂ ಎಣಿಸಿಕೊಂಡಿರುವರು ಎಂದು ಅವರು ತಮ್ಮಲ್ಲಿ ತರ್ಕಿಸಿಕೊಂಡರು.

33 And they answering say to Jesus, We do not know. And Jesus [answering] says to them, Neither do *I* tell you by what authority I do these things.ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳಲಾರೆವು ಎಂದು ಉತ್ತರ ಕೊಟ್ಟರು. ಅದಕ್ಕೆ ಯೇಸು--ನಾನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಎಂದು ಅವರಿಗೆ ಉತ್ತರ ಕೊಟ್ಟನು.

Kannada Bible