Proverbs 1:8-19 in Kannada
Proverbs 1:8
ನನ್ನ ಮಗನೇ, ನಿನ್ನ ತಂದೆಯ ಶಿಕ್ಷಣವನ್ನು ಕೇಳು, ನಿನ್ನ ತಾಯಿಯ ಕಟ್ಟಳೆಯನ್ನು ತೊರೆಯಬೇಡ;
Proverbs 1:9
ಅವು ನಿನ್ನ ತಲೆಗೆ ಕೃಪೆಯ ಆಭರಣವೂ ನಿನ್ನ ಕೊರಳಿನ ಸುತ್ತಲೂ ಸರಗಳಂತೆಯೂ ಇರುವವು.
Proverbs 1:10
ನನ್ನ ಮಗನೇ, ಪಾಪಿ ಗಳು ನಿನ್ನನ್ನು ಆಕರ್ಷಿಸಿದರೆ ನೀನು ಒಪ್ಪಬೇಡ.
Proverbs 1:11
ಅವರು--ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚು ಹಾಕೋಣ, ನಿರಪರಾಧಿಗಳಿಗಾಗಿ ನಿಷ್ಕಾರಣದಿಂದ ರಹಸ್ಯವಾಗಿ ಅಡಗಿಕೊಳ್ಳೋಣ.
Proverbs 1:12
ಗುಂಡಿಯೊಳಕ್ಕೆ ಹೋಗುವವರನ್ನು ನುಂಗುವಂತೆ ಸಂಪೂರ್ಣವಾಗಿ ನಾವು ಅವರನ್ನು ಸಮಾಧಿಯಂತೆ ನುಂಗಿಬಿಡೋಣ.
Proverbs 1:13
ಅಮೂಲ್ಯವಾದ ಎಲ್ಲಾ ಸಂಪತ್ತನ್ನು ನಾವು ಕಂಡು ಹಿಡಿದು ಕೊಳ್ಳೆಯಿಂದ ನಮ್ಮ ಮನೆಗಳನ್ನು ತುಂಬಿ ಕೊಳ್ಳೋಣ.
Proverbs 1:14
ನೀನು ನಮ್ಮ ಮಧ್ಯದಲ್ಲಿ ಚೀಟನ್ನು ಹಾಕು, ನಮ್ಮೆಲ್ಲರಿಗೂ ಒಂದೇ ಹಣದ ಚೀಲ ಇರಲಿ ಎಂದು ಹೇಳುತ್ತಾರೆ.
Proverbs 1:15
ನನ್ನ ಮಗನೇ, ಮಾರ್ಗದಲ್ಲಿ ಅವರೊಂದಿಗೆ ನಡೆಯಬೇಡ; ಅವರ ಮಾರ್ಗದಿಂದ ನಿನ್ನ ಹೆಜ್ಜೆಯನ್ನು ಹಿಂದೆ ತಕ್ಕೋ.
Proverbs 1:16
ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತವನ್ನು ಸುರಿಸುವದಕ್ಕೆ ಆತುರ ಪಡುತ್ತವೆ.
Proverbs 1:17
ನಿಶ್ಚಯವಾಗಿ ಪಕ್ಷಿಯ ಕಣ್ಣೆದುರಿಗೆ ಬಲೆಯನ್ನು ಹರಡುವದು ವ್ಯರ್ಥವೇ.
Proverbs 1:18
ಅವರು ತಮ್ಮ ಸ್ವಂತ ರಕ್ತಕ್ಕೆ ಹೊಂಚುಹಾಕುತ್ತಾರೆ; ತಮ್ಮ ಪ್ರಾಣಗಳಿಗೆ ರಹಸ್ಯವಾಗಿ ಅಡಗಿಕೊಳ್ಳುತ್ತಾರೆ.
Proverbs 1:19
ತಮ್ಮ ಸ್ವಂತ ಪ್ರಾಣಗಳನ್ನು ತೆಗೆದುಕೊಳ್ಳುವ ದುರ್ಲಾಭಾ ಪೇಕ್ಷಕರ ಪ್ರತಿಯೊಬ್ಬನ ಮಾರ್ಗಗಳು ಹೀಗಿವೆ.
Kannada Bible