Cross Reference
3 ಯೋಹಾನನು 1:11
ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೇದನ್ನು ಅನುಸರಿಸು; ಒಳ್ಳೇದನ್ನು ಮಾಡುವವನು ದೇವರಿಗೆ ಸಂಬಂಧಪಟ್ಟವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.
1 ಯೋಹಾನನು 3:7
ಚಿಕ್ಕ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಆತನು ಹೇಗೆ ನೀತಿವಂತ ನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.
1 ಯೋಹಾನನು 2:29
ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.
ತೀತನಿಗೆ 2:11
ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.
ರೋಮಾಪುರದವರಿಗೆ 6:22
ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.
ರೋಮಾಪುರದವರಿಗೆ 5:21
ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
ಯೆಹೆಜ್ಕೇಲನು 18:20
ಪಾಪ ಮಾಡುವ ಪ್ರಾಣವು ತಾನಾಗಿ ಸಾಯುವದು; ಮಗನು ತಂದೆಯ ಅಕ್ರಮವನ್ನು ಹೊರುವದಿಲ್ಲ. ತಂದೆಯು ಮಗನ ಅಕ್ರಮವನ್ನು ಹೊರುವದಿಲ್ಲ. ನೀತಿವಂತನ ನೀತಿಯು ಅವನ ಮೇಲೆಯೇ ಇರುವದು. ದುಷ್ಟನ ದುಷ್ಟತ್ವವು ಅವನ ಮೇಲೆಯೇ ಇರುವದು.
ಯೆಹೆಜ್ಕೇಲನು 18:9
ಸತ್ಯವನ್ನು ಮಾಡುವದ ಕ್ಕಾಗಿ ನನ್ನ ನಿಯಮಗಳಲ್ಲಿ ನಡೆದು, ನನ್ನ ನ್ಯಾಯಗಳನ್ನು ಕೈಕೊಂಡು ಸತ್ಯಪರನಾಗಿ ನಡೆದರೆ ಅವನು ನೀತಿ ವಂತನು ಮತ್ತು ನಿಶ್ಚಯವಾಗಿ ಬದುಕುವವನು ಎಂದು ದೇವರಾದ ಕರ್ತನು ಹೇಳಿದ್ದಾನೆ.
ಙ್ಞಾನೋಕ್ತಿಗಳು 11:19
ನೀತಿಯು ಜೀವಕ್ಕೆ ಒಲಿಯುತ್ತದೆ; ಕೆಟ್ಟದ್ದನ್ನು ಹಿಂದಟ್ಟುವವನು ತನ್ನ ಮರ ಣಕ್ಕೆ ಹಿಂದಟ್ಟುತ್ತಾನೆ.
ಙ್ಞಾನೋಕ್ತಿಗಳು 10:16
ನೀತಿವಂತರ ಪ್ರಯಾಸವು ಜೀವಕ್ಕಾಗಿಯೂ ದುಷ್ಟರ ಫಲವು ಪಾಪಕ್ಕಾಗಿಯೂ ಇವೆ.
ಙ್ಞಾನೋಕ್ತಿಗಳು 9:11
ನನ್ನ ಮೂಲಕ ನಿನ್ನ ದಿನಗಳು ಹೆಚ್ಚುವವು; ನಿನ್ನ ಜೀವನದ ವರುಷಗಳು ವೃದ್ಧಿಯಾಗುವವು.
ಙ್ಞಾನೋಕ್ತಿಗಳು 8:35
ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಂಡು ಕರ್ತನ ದಯವನ್ನು ಹೊಂದುವನು.
ಧರ್ಮೋಪದೇಶಕಾಂಡ 30:15
ನೋಡು, ನಾನು ಈಹೊತ್ತು ಜೀವವನ್ನೂ ಮರಣವನ್ನೂ, ಒಳ್ಳೇದನ್ನೂ ಕೆಟ್ಟದ್ದನ್ನೂ ನಿನ್ನ ಮುಂದೆ ಇಟ್ಟಿದ್ದೇನೆ.