Proverbs 30:1-32 in Kannada
Proverbs 30:1
ಯಾಕೆ ಎಂಬವನ ಮಗನಾದ ಆಗೂರನ ಪ್ರವಾದನೆಯ ಮಾತುಗಳು; ಇವನು ಇಥಿಯೇಲನಿಗೆ ಹೌದು, ಇಥಿಯೇಲನಿಗೂ ಉಕ್ಕಾಲ ನಿಗೂ ಹೀಗೆ ಹೇಳಿದನು.
Proverbs 30:2
ಖಂಡಿತವಾಗಿಯೂ ಪ್ರತಿಯೊಬ್ಬ ಮನುಷ್ಯನಿಗಿಂತ ನಾನು ಪಶುಪ್ರಾಯನು; ಮನುಷ್ಯನ ವಿವೇಕವು ನನಗೆ ಇಲ್ಲ.
Proverbs 30:3
ನಾನು ಜ್ಞಾನವನ್ನು ಪಡೆದುಕೊಂಡಿಲ್ಲ; ಅಲ್ಲದೆ ಪರಿಶುದ್ಧನ ವಿಷಯವಾದ ತಿಳುವಳಿಕೆಯು ನನಗಿಲ್ಲ.
Proverbs 30:4
ಆಕಾಶಕ್ಕೆ ಏರಿದವನು ಇಲ್ಲವೆ ಇಳಿದವನು ಯಾರು? ತನ್ನ ಮುಷ್ಟಿಗಳಲ್ಲಿ ಗಾಳಿಯನ್ನು ಕೂಡಿಸಿದವನಾರು? ವಸ್ತ್ರದಲ್ಲಿ ನೀರನ್ನು ಕಟ್ಟಿದವ ನಾರು? ಭೂಮಿಯ ಕೊನೆಗಳನ್ನೆಲ್ಲಾ ಸ್ಥಾಪಿಸಿದವ ನಾರು? ನೀನು ಹೇಳುವದಾದರೆ ಆತನ ಹೆಸರೇನು? ಆತನ ಮಗನ ಹೆಸರೇನು?
Proverbs 30:5
ದೇವರ ಪ್ರತಿಯೊಂದು ಮಾತು ಶುದ್ಧವಾಗಿದೆ; ಆತನಲ್ಲಿ ಭರವಸವಿಡುವವನಿಗೆ ಆತನು ಗುರಾಣಿಯಾಗಿದ್ದಾನೆ.
Proverbs 30:6
ಆತನು ನಿನ್ನನ್ನು ಗದರಿಸುವಂತೆಯೂ ನೀನು ಸುಳ್ಳುಗಾರನೆಂದು ತೋರು ವಂತೆಯೂ ಆತನ ಮಾತುಗಳಿಗೆ ಯಾವದನ್ನು ಸೇರಿಸ ಬೇಡ.
Proverbs 30:7
ನಿನ್ನಿಂದ ಎರಡನ್ನು ಕೇಳಿಕೊಂಡಿದ್ದೇನೆ; ನಾನು ಸಾಯುವದಕ್ಕಿಂತ ಮುಂಚೆ ಅವುಗಳನ್ನು ಕೊಡುವದಕ್ಕೆ ಹಿಂತೆಗೆಯಬೇಡ;
Proverbs 30:8
ವ್ಯರ್ಥತ್ವವನ್ನೂ ಸುಳ್ಳುಗಳನ್ನೂ ನನ್ನಿಂದ ದೂರವಾಗಿ ತೆಗೆದುಹಾಕು. ಬಡತನವಾಗಲಿ ಐಶ್ವರ್ಯವಾಗಲಿ ನನಗೆ ಕೊಡಬೇಡ; ನನಗೆ ತಕ್ಕಷ್ಟು ಆಹಾರವನ್ನು ಭೋಜನ ಮಾಡಿಸು;
Proverbs 30:9
ಇಲ್ಲವಾದರೆ ನಾನು ಸಂತೃಪ್ತನಾಗಿ ನಿನ್ನನ್ನು ನಿರಾಕರಿಸಿ--ಕರ್ತನು ಯಾರು ಎಂದು ಹೇಳಿಯೇನು? ಇಲ್ಲವೆ ನಾನು ಬಡವನಾಗಿ ಕದ್ದುಕೊಂಡು ದೇವರ ನಾಮವನ್ನು ಅಯೋಗ್ಯವಾಗಿ ಎತ್ತೇನು.
Proverbs 30:10
ಅವನ ಯಜಮಾನನಿಗೆ ಸೇವಕನ ವಿಷಯವಾಗಿ ದೂರು ಹೇಳಬೇಡ; ಇದ ರಿಂದ ಅವನು ಶಪಿಸಾನು; ಆಗ ನೀನು ದೋಷಿ ಯಾಗುವಿ.
Proverbs 30:11
ತಮ್ಮ ತಂದೆಯನ್ನು ಶಪಿಸಿ ತಮ್ಮ ತಾಯಿಗೆ ಶುಭವನ್ನು ಕೋರದೆ ಇರುವ ವಂಶಾವಳಿ ಇದೆ.
Proverbs 30:12
ತಮ್ಮ ಮಲಿನತ್ವದಿಂದ ಇನ್ನು ತೊಳೆಯಲ್ಪಡದೆ ತಮ್ಮ ದೃಷ್ಟಿಯಲ್ಲಿ ಶುದ್ಧವಾಗಿರುವ ಒಂದು ವಂಶಾವಳಿಯು ಇದೆ.
Proverbs 30:13
ಒಂದು ವಂಶಾ ವಳಿಯು ಇದೆ: ಅದರ ಕಣ್ಣುಗಳು ಎಷ್ಟೋ ಉನ್ನತ ವಾಗಿವೆ! ಅದರ ಕಣ್ಣು ರೆಪ್ಪೆಗಳು ಎತ್ತಲ್ಪಟ್ಟಿವೆ.
Proverbs 30:14
ಭೂಮಿಯೊಳಗಿಂದ ಬಡವರನ್ನೂ ಮನುಷ್ಯ ರೊಳಗಿಂದ ದಿಕ್ಕಿಲ್ಲದವರನ್ನೂ ನುಂಗುವಂತೆ ತಮ್ಮ ಹಲ್ಲುಗಳು ಖಡ್ಗಗಳಂತೆಯೂ ತಮ್ಮ ದವಡೆಯ ಹಲ್ಲು ಗಳು ಕತ್ತಿಗಳಂತೆಯೂ ಇರುವ ಒಂದು ವಂಶಾವಳಿಯು ಇದೆ.
Proverbs 30:15
ಕೊಡು, ಕೊಡು ಎಂದು ಕೂಗುವ ಇಬ್ಬರು ಹೆಣ್ಣುಮಕ್ಕಳು ಜಿಗಣೆಗೆ ಇವೆ. ಎಂದಿಗೂ ತೃಪ್ತಿಪಡದ ಮೂರು ಸಂಗತಿಗಳು ಇವೆ; ಹೌದು, ಸಾಕು ಎಂದು ಹೇಳದಿರುವ ನಾಲ್ಕು ಸಂಗತಿಗಳಿವೆ.
Proverbs 30:16
ಯಾವವಂದರೆ: ಸಮಾಧಿ, ಬಂಜೆಯಾದ ಗರ್ಭ, ನೀರಿನಿಂದ ತುಂಬ ದಿದ್ದ ಭೂಮಿ, ಸಾಕೆಂದು ಹೇಳದೆ ಇರುವ ಬೆಂಕಿ.
Proverbs 30:17
ತನ್ನ ತಂದೆಯನ್ನು ಹಾಸ್ಯಮಾಡಿ ತನ್ನ ತಾಯಿಯನ್ನು ಧಿಕ್ಕರಿಸುವವನ ಕಣ್ಣನ್ನು ಕಣಿವೆಯ ಕಾಗೆಗಳು ಕಿತ್ತು ಹಾಕುವವು, ಪ್ರಾಯದ ಹದ್ದುಗಳು ಅದನ್ನು ತಿನ್ನು ವವು.
Proverbs 30:18
ನನಗೆ ಆಶ್ಚರ್ಯವಾದ ಮೂರು ಸಂಗತಿಗ ಳಿವೆ. ಹೌದು, ನಾನು ಅರಿಯದಿರುವ ನಾಲ್ಕು ಸಂಗ ತಿಗಳಿವೆ--
Proverbs 30:19
ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ; ಸಮುದ್ರದಲ್ಲಿ ಹಡಗಿನ ಮಾರ್ಗ, ಕನ್ಯೆಯೊಂದಿಗೆ ಮನುಷ್ಯನ ಮಾರ್ಗ.
Proverbs 30:20
ಜಾರಸ್ತ್ರೀಯ ನಡತೆಯು ಹಾಗೆಯೇ ಇದೆ; ಅವಳು ತಿಂದು ತನ್ನ ಬಾಯನ್ನು ಒರಸಿಕೊಂಡು--ನಾನು ಯಾವ ಕೆಟ್ಟದ್ದನ್ನೂ ಮಾಡಲಿಲ್ಲ ಎಂದು ಹೇಳುತ್ತಾಳೆ.
Proverbs 30:21
ಭೂಮಿಯು ಮೂರರಿಂದ ಕಳವಳಗೊಳ್ಳುತ್ತದೆ; ನಾಲ್ವರನ್ನು ಅದು ತಾಳಲಾರದು
Proverbs 30:22
ಆಳುವ ದಾಸನು, ಹೊಟ್ಟೆತುಂಬಿದ ನೀಚನು,
Proverbs 30:23
ಮದುವೆಯಾದ ಚಂಡಿಯು, ತನ್ನ ಯಜಮಾನಳಿಗೆ ಬಾಧ್ಯಸ್ಥಳಾದ ದಾಸಿಯು.
Proverbs 30:24
ಭೂಮಿಯ ಮೇಲೆ ಅಧಿಕ ಜ್ಞಾನವು ಳ್ಳವುಗಳಾದ ನಾಲ್ಕು ಸಣ್ಣ ಪ್ರಾಣಿಗಳು ಇವೆ.
Proverbs 30:25
ಇರುವೆಗಳು ದುರ್ಬಲ ಜಾತಿಯಾಗಿದ್ದರೂ ಬೇಸಿಗೆ ಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುತ್ತವೆ.
Proverbs 30:26
ಮೊಲಗಳು ಬಲಹೀನವಾದ ಜಾತಿಯಾಗಿದ್ದರೂ ಅವು ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳು ತ್ತವೆ.
Proverbs 30:27
ಮಿಡತೆಗಳಿಗೆ ಅರಸನಿಲ್ಲ; ಆದರೂ ಅವೆಲ್ಲಾ ದಂಡುದಂಡಾಗಿ ಹೋಗುತ್ತವೆ.
Proverbs 30:28
ಜೇಡರ ಹುಳು ತನ್ನ ಕೈಗಳಿಂದ ಹಿಡಿದುಕೊಳ್ಳುತ್ತದೆ; ಅದು ಅರಮನೆ ಗಳಲ್ಲಿ ಇರುತ್ತದೆ.
Proverbs 30:29
ಗಂಭೀರ ಗಮನದ ಮೂರು ಪ್ರಾಣಿಗಳಿವೆ; ಹೌದು, ನಡತೆಯಲ್ಲಿ ಅಂದವಾಗಿರುವ ನಾಲ್ಕು ಪ್ರಾಣಿಗಳಿವೆ.
Proverbs 30:30
ಮೃಗಗಳಲ್ಲಿ ಬಲಿಷ್ಠವಾಗಿ ರುವ ಸಿಂಹವು ಯಾವದಕ್ಕೂ ಹೆದರುವುದಿಲ್ಲ.
Proverbs 30:31
ಬೇಟೆಯ ನಾಯಿ; ಹೋತವು ಸಹ; ಸೈನ್ಯಸಮೇತ ನಾದ ಅರಸನು.
Proverbs 30:32
ನೀನು ಉಬ್ಬಿಕೊಂಡು ಮೂರ್ಖ ನಾಗಿ ನಡೆದಿದ್ದರೆ ಇಲ್ಲವೆ ಕೆಟ್ಟದ್ದಾಗಿ ಆಲೋಚಿಸಿದ್ದರೆ ನಿನ್ನ ಬಾಯಿಯ ಮೇಲೆ ಕೈಯಿಟ್ಟುಕೋ.
Kannada Bible