ಙ್ಞಾನೋಕ್ತಿಗಳು 8:5
ಓ ಜ್ಞಾನಹೀನರೇ, ಜ್ಞಾನವನ್ನು ಗ್ರಹಿಸಿರಿ; ಬುದ್ಧಿಹೀನರೇ, ನೀವು ತಿಳು ವಳಿಕೆಯ ಹೃದಯದವರಾಗಿರ್ರಿ.
O ye simple, | הָבִ֣ינוּ | hābînû | ha-VEE-noo |
understand | פְתָאיִ֣ם | pĕtāʾyim | feh-ta-YEEM |
wisdom: | עָרְמָ֑ה | ʿormâ | ore-MA |
fools, ye and, | וּ֝כְסִילִ֗ים | ûkĕsîlîm | OO-heh-see-LEEM |
be ye of an understanding | הָבִ֥ינוּ | hābînû | ha-VEE-noo |
heart. | לֵֽב׃ | lēb | lave |
Cross Reference
ಙ್ಞಾನೋಕ್ತಿಗಳು 1:22
ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?
ಪ್ರಕಟನೆ 3:17
ನೀನು--ನಾನು ಐಶ್ವರ್ಯವಂತನು, ಧನವೃದ್ಧಿಯುಳ್ಳವನು, ಯಾವದರ ಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ನಿರ್ಗತಿಕನು, ದರಿದ್ರನು, ಬಡವನು, ಕುರುಡನು, ಬೆತ್ತಲೆಯಾದವನು ಆಗಿರುವ ದನ್ನು ತಿಳಿಯದೆ ಇದ್ದೀ.
ಙ್ಞಾನೋಕ್ತಿಗಳು 1:4
ಇವು ಮೂಢರಿಗೆ ಜಾಣತನ ವನ್ನೂ ಯೌವನಸ್ಥನಿಗೆ ತಿಳುವಳಿಕೆಯನ್ನೂ ವಿವೇಕ ವನ್ನೂ ಕೊಡುವವುಗಳಾಗಿವೆ.
1 ಕೊರಿಂಥದವರಿಗೆ 6:9
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
1 ಕೊರಿಂಥದವರಿಗೆ 1:28
ಇದಲ್ಲದೆ ದೇವರು ಇರುವವುಗಳನ್ನು ಇಲ್ಲದಂತಾಗಿ ಮಾಡುವ ಹಾಗೆ ಈ ಲೋಕದ ಹೀನವಾದವರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣನೆಗೆ ಬಾರದವರನ್ನೂ ಆರಿಸಿಕೊಂಡಿದ್ದಾನೆ.
ಅಪೊಸ್ತಲರ ಕೃತ್ಯಗ 26:18
ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
ಯೆಶಾಯ 55:1
ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ.
ಯೆಶಾಯ 42:13
ಕರ್ತನು ಪರಾಕ್ರಮ ಶಾಲಿಯಾಗಿ ಮುಂದೆ ಹೋಗುವನು; ಯುದ್ಧ ವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸು ವನು; ತನ್ನ ಶತ್ರುಗಳಿಗೆ ವಿರೋಧವಾಗಿ ಜಯ ಶಾಲಿಯಾಗುವನು.
ಙ್ಞಾನೋಕ್ತಿಗಳು 9:4
ಮೂರ್ಖನು ಯಾವನೋ ಅವನು ಇಲ್ಲಿಗೆ ತಿರುಗಲಿ ಎಂದು ಕೂಗುತ್ತಾಳೆ. ತಿಳುವಳಿಕೆ ಇಲ್ಲದೆ ಇರುವವನಿಗೆ ಆಕೆಯು--
ಕೀರ್ತನೆಗಳು 94:8
ಜನರಲ್ಲಿ ಪಶುಪ್ರಾಯದವರೇ, ನೀವು ಗ್ರಹಿಸಿರಿ; ಹುಚ್ಚರೇ, ಯಾವಾಗ ಬುದ್ಧಿವಂತರಾಗುವಿರಿ?
ಕೀರ್ತನೆಗಳು 19:7
ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.