Bible

Psalm 47 - WEB (Kannada)

1 > Oh clap your hands, all you nations. Shout to God with the voice of triumph!ಎಲ್ಲಾ ಜನರೇ, ನೀವು ನಿಮ್ಮ ಕೈಗಳನ್ನು ತಟ್ಟಿರಿ; ಜಯಾರ್ಭಟದಿಂದ ದೇವರಿಗೆ ಧ್ವನಿಗೈಯಿರಿ.

2 For Yahweh Most High is awesome. He is a great King over all the earth.ಮಹೋನ್ನತನಾದ ಕರ್ತನು ಭಯಂಕ ರನೂ ಭೂಮಿಯ ಮೇಲೆಲ್ಲಾ ಮಹಾಅರಸನೂ ಆಗಿದ್ದಾನೆ.

3 He subdues nations under us, And peoples under our feet.ಜನರನ್ನು ನಮ್ಮ ಕೆಳಗೂ ಜನಾಂಗಗಳನ್ನು ನಮ್ಮ ಪಾದಗಳ ಕೆಳಗೂ ಅಧೀನ ಮಾಡಿದ್ದಾನೆ.

4 He chooses our inheritance for us, The glory of Jacob whom he loved. Selah.ಆತನು ಪ್ರೀತಿಮಾಡುವ ಯಾಕೋಬನ ಘನತೆಯಾದ ನಮ್ಮ ಬಾಧ್ಯತೆಯನ್ನು ಆದುಕೊಳ್ಳುತ್ತಾನೆ--ಸೆಲಾ.

5 God has gone up with a shout, Yahweh with the sound of a trumpet.ದೇವರು ಮಹಾಧ್ವನಿಯಿಂದ, ಕರ್ತನು ತುತೂ ರಿಯ ಶಬ್ದದಿಂದ, ಮೇಲೆ ಹೋಗಿದ್ದಾನೆ.

6 Sing praise to God, sing praises. Sing praises to our King, sing praises.ದೇವರಿಗೆ ಸ್ತುತಿಗಳನ್ನು ಹಾಡಿರಿ, ಸ್ತುತಿಗಳನ್ನು ಹಾಡಿರಿ; ನಮ್ಮ ಅರಸನಿಗೆ ಸ್ತುತಿಗಳನ್ನು ಹಾಡಿರಿ, ಸ್ತುತಿಗಳನ್ನು ಹಾಡಿರಿ;

7 For God is the King of all the earth. Sing praises with understanding.ದೇವರು ಭೂಮಿಗೆಲ್ಲಾ ಅರಸನು; ತಿಳುವಳಿಕೆಯಿಂದ ಸ್ತುತಿಗಳನ್ನು ಹಾಡಿರಿ.

8 God reigns over the nations. God sits on his holy throne.ಅನ್ಯಜನಾಂಗವನ್ನು ಆಳುತ್ತಾನೆ; ತನ್ನ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾನೆ.

9 The princes of the peoples are gathered together, The people of the God of Abraham. For the shields of the earth belong to God. He is greatly exalted!ಜನರ ಅಧಿಪತಿಗಳು ಅಬ್ರಹಾಮನ ದೇವರ ಪ್ರಜೆಯ ಸಂಗಡ ಕೂಡಿ ಕೊಂಡಿದ್ದಾರೆ; ಭೂಮಿಯ ಗುರಾಣಿಗಳು ದೇವರ ವಶದಲ್ಲಿವೆ; ಆತನು ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದಾನೆ.

Kannada Bible