Psalm 86:8
ಕರ್ತನೇ, ದೇವರುಗಳಲ್ಲಿ ನಿನ್ನ ಹಾಗೆ ಒಬ್ಬನೂ ಇಲ್ಲ; ನಿನ್ನ ಕೆಲಸಗಳ ಹಾಗೆ ಒಂದೂ ಇಲ್ಲ.
Psalm 86:8 in Other Translations
King James Version (KJV)
Among the gods there is none like unto thee, O Lord; neither are there any works like unto thy works.
American Standard Version (ASV)
There is none like unto thee among the gods, O Lord; Neither `are there any works' like unto thy works.
Bible in Basic English (BBE)
There is no god like you, O Lord; there are no works like your works.
Darby English Bible (DBY)
Among the gods there is none like unto thee, Lord, and there is nothing like unto thy works.
Webster's Bible (WBT)
Among the gods there is none like thee, O Lord; neither are there any works like thy works.
World English Bible (WEB)
There is no one like you among the gods, Lord, Nor any deeds like your deeds.
Young's Literal Translation (YLT)
There is none like Thee among the gods, O Lord, And like Thy works there are none.
| Among the gods | אֵין | ʾên | ane |
| none is there | כָּמ֖וֹךָ | kāmôkā | ka-MOH-ha |
| like unto thee, | בָאֱלֹהִ֥ים׀ | bāʾĕlōhîm | va-ay-loh-HEEM |
| Lord; O | אֲדֹנָ֗י | ʾădōnāy | uh-doh-NAI |
| neither | וְאֵ֣ין | wĕʾên | veh-ANE |
| thy unto like works any there are works. | כְּֽמַעֲשֶֽׂיךָ׃ | kĕmaʿăśêkā | KEH-ma-uh-SAY-ha |
Cross Reference
ಕೀರ್ತನೆಗಳು 89:6
ಪರ ಲೋಕದಲ್ಲಿ ಕರ್ತನಿಗೆ ಸಮಾನವಾದವನು ಯಾರು? ಪರಾಕ್ರಮಶಾಲಿಗಳ ಮಕ್ಕಳಲ್ಲಿ ಕರ್ತನಿಗೆ ಸಮಾನನಾದವನು ಯಾರು?
ಧರ್ಮೋಪದೇಶಕಾಂಡ 3:24
ನನ್ನ ದೇವರಾದ ಕರ್ತನೇ, ನೀನು ನಿನ್ನ ಸೇವಕನಿಗೆ ನಿನ್ನ ಮಹಿಮೆಯನ್ನೂ ನಿನ್ನ ಕೈಯ ಶಕ್ತಿಯನ್ನೂ ತೋರಿಸುವದಕ್ಕೆ ಆರಂಭಮಾಡಿದಿ; ನಿನ್ನ ಕೃತ್ಯಗಳ ಹಾಗೆಯೂ ನಿನ್ನ ಪರಾಕ್ರಮದ ಹಾಗೆಯೂ ಮಾಡಲು ಶಕ್ತನಾದ ದೇವರು ಪರಲೋಕದಲ್ಲಾಗಲಿ ಭೂಮಿಯಲ್ಲಾಗಲಿ ಯಾರಿದ್ದಾರೆ? ನಾನು ದಾಟಿ ಹೋಗಿ
ವಿಮೋಚನಕಾಂಡ 15:11
ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ?
ದಾನಿಯೇಲನು 3:29
ಆದದರಿಂದ ನಾನು ನಿರ್ಣಯಮಾಡುವದರಿಂದ ಸಕಲ ಪ್ರಜೆ, ಜನಾಂಗ ಮತ್ತು ಭಾಷೆಗಳಲ್ಲಿ ಯಾರು ಶದ್ರಕ್ ಮೇಷಕ್ ಅಬೇದ್‌ನೆಗೋ ಎಂಬವರ ದೇವ ರಿಗೆ ವಿರೋಧವಾಗಿ ದೂಷಣೆ ಮಾಡುವರೋ ಅವರು ತುಂಡುತುಂಡಾಗಿ ಕತ್ತರಿಸಲ್ಪಟ್ಟು ಅವರ ಮನೆಗಳು ತಿಪ್ಪೆಗುಂಡಿಗಳಾಗಿ ಮಾಡಲ್ಪಡುವದು. ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರು ಇರುವದಿಲ್ಲ.
ಯೆರೆಮಿಯ 10:16
ಯಾಕೋ ಬ್ಯರ ಪಾಲು ಇವುಗಳ ಹಾಗಲ್ಲ; ಆತನು ಸಮಸ್ತ ವನ್ನು ರೂಪಿಸಿದಾತನೇ; ಇಸ್ರಾಯೇಲ್ ಆತನ ಸ್ವಾಸ್ತ್ಯದ ಕೋಲು; ಸೈನ್ಯಗಳ ಕರ್ತನು ಎಂಬದು ಆತನ ಹೆಸರಾಗಿದೆ.
ಯೆರೆಮಿಯ 10:6
ಓ ಕರ್ತನೇ, ನಿನ್ನ ಹಾಗೆ ಯಾರೂ ಇಲ್ಲ; ನೀನು ಮಹೋ ತ್ತಮನು, ನಿನ್ನ ಹೆಸರು ಪರಾಕ್ರಮದಲ್ಲಿ ದೊಡ್ಡದು.
ಯೆಶಾಯ 40:25
ಹೀಗಿರಲು ನನ್ನನ್ನು ಯಾರಿಗೆ ಹೋಲಿಸಿ ಸರಿ ಸಮಾನ ಮಾಡುತ್ತೀರಿ ಎಂದು ಪರಿಶುದ್ಧನಾದವನು ಹೇಳುತ್ತಾನೆ.
ಯೆಶಾಯ 40:18
ಹೀಗಿರಲು ದೇವರನ್ನು ಯಾರಿಗೆ ಹೋಲಿಸು ವಿರಿ? ಅಥವಾ ಯಾವ ಹೋಲಿಕೆಯನ್ನು ಆತನಿಗೆ ಸಮಾನ ಮಾಡುವಿರಿ?
ಕೀರ್ತನೆಗಳು 136:4
ಒಬ್ಬನಾಗಿ ದೊಡ್ಡ ಅದ್ಭುತಗಳನ್ನು ಮಾಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
ಕೀರ್ತನೆಗಳು 89:8
ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹಾಗೆ ಶಕ್ತನಾದ ಕರ್ತನು ಯಾರು? ಇಲ್ಲವೆ ನಿನ್ನ ನಂಬಿಗಸ್ತಿಕೆಯು ನಿನ್ನ ಸುತ್ತಲೂ ಅದೆ.
ಧರ್ಮೋಪದೇಶಕಾಂಡ 4:34
ಇಲ್ಲವೆ ನಿಮ್ಮ ದೇವರಾದ ಕರ್ತನು ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆ ನಿಮಗೆ ಮಾಡಿದ್ದೆಲ್ಲಾದರ ಹಾಗೆ ಬೇರೆ ದೇವರು ಹೋಗಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಮಧ್ಯ ದಿಂದ ಶೋಧನೆಗಳು ಗುರುತುಗಳು ಅದ್ಭುತಗಳು ಇವುಗಳ ಮೂಲಕವಾಗಿಯೂ ಯುದ್ಧದಿಂದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾಭೀತಿಯಿಂದಲೂ ತಕ್ಕೊಳ್ಳುವದಕ್ಕೆ ಪ್ರಯತ್ನ ಮಾಡಿದನೋ?