Song Of Solomon 3

1 ರಾತ್ರಿಯಲ್ಲಿ ನನ್ನ ಹಾಸಿಗೆಯ ಮೇಲೆ ನನ್ನ ಪ್ರಾಣ ಪ್ರಿಯನನ್ನು ಹುಡುಕಿದೆನು; ಅವನನ್ನು ಹುಡುಕಿದೆನು, ಆದರೆ ಕಾಣದೆಹೋದೆನು.

2 ನಾನು ಈಗ ಎದ್ದು ಪಟ್ಟಣವನ್ನು ಸಂಚರಿಸಿ ಬೀದಿ ಗಳಲ್ಲಿಯೂ ಮಾರ್ಗಗಳಲ್ಲಿಯೂ ನನ್ನ ಪ್ರಾಣಪ್ರಿಯ ನನ್ನು ಹುಡುಕುವೆನು. ಅವನನ್ನು ಹುಡುಕಿ ಕಾಣದೆ ಹೋದೆನು.

3 ಪಟ್ಟಣವನ್ನು ಸಂಚರಿಸುವ ಕಾವಲು ಗಾರರು ನನ್ನನ್ನು ಕಂಡಾಗ--ನನ್ನ ಪ್ರಾಣಪ್ರಿಯ ನನ್ನು ನೀವು ಕಂಡಿರಾ ಅಂದೆನು.

4 ನಾನು ಅವರನ್ನು ಬಿಟ್ಟು ಸ್ವಲ್ಪ ಆಚೆಗೆ ಹೋದ ತರುವಾಯ, ನನ್ನ ಪ್ರಾಣಪ್ರಿಯನನ್ನು ಕಂಡೆನು. ನಾನು ಅವನನ್ನು ಹಿಡುಕೊಂಡು ನನ್ನ ತಾಯಿಯ ಮನೆಗೂ ನನ್ನನ್ನು ಹೆತ್ತವಳ ಕೊಠಡಿಗೂ ಅವನನ್ನು ಕರತರುವ ವರೆಗೆ ಹೋಗಗೊಡಿಸಲಿಲ್ಲ.

5 ಯೆರೂಸಲೇಮಿನ ಕುಮಾರ್ತೆಯರೇ, ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ನನ್ನ ಪ್ರೀತಿಯನ್ನು ಎಬ್ಬಿಸಬೇಡಿರಿ, ಎಚ್ಚರಿಸಬೇಡಿರಿ ಎಂದು ಅಡವಿಯ ಜಿಂಕೆಗಳಿಂದಲೂ ದುಪ್ಪಿಗಳಿಂದಲೂ ನಿಮಗೆ ಆಜ್ಞಾಪಿಸುತ್ತೇನೆ.

6 ರಕ್ತಬೋಳ ಸಾಂಬ್ರಾಣಿಗಳಿಂದಲೂ ವರ್ತಕರ ಸಕಲ ಸುಗಂಧ ದ್ರವ್ಯಗಳಿಂದಲೂ ಧೂಮ ಸ್ತಂಭ ಗಳ ಹಾಗೆಯೂ ಅಡವಿಯಿಂದ ಬರುವ ಇವಳಾರು?

7 ಸೊಲೊಮೋನನ ಹಾಸಿಗೆಯನ್ನು ನೋಡು; ಇಸ್ರಾ ಯೇಲಿನ ಪರಾಕ್ರಮಶಾಲಿಗಳಲ್ಲಿ ಅರವತ್ತು ಮಂದಿ ಪರಾಕ್ರಮಶಾಲಿಗಳು ಅದನ್ನು ಸುತ್ತಿಕೊಂಡಿದ್ದಾರೆ.

8 ಅವರೆಲ್ಲರು ಕತ್ತಿಹಿಡಿದವರು, ಯುದ್ಧನಿಪುಣರು.

9 ರಾತ್ರಿಯ ಭಯದ ನಿಮಿತ್ತ ಪ್ರತಿ ಮನುಷ್ಯನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡಿದ್ದಾನೆ. ಅರಸನಾದ ಸೊಲೊಮೋನನು ಲೆಬನೋನಿನ ಮರದಿಂದ ಒಂದು ರಥವನ್ನು ತನಗೆ ಮಾಡಿಸಿಕೊಂಡನು.

10 ಅವನು ಅದರ ಸ್ತಂಭಗಳನ್ನು ಬೆಳ್ಳಿಯಿಂದಲೂ ಕೆಳಗಿನ ಭಾಗವನ್ನು ಬಂಗಾರದಿಂದಲೂ ಹೊದಿಕೆ ಯನ್ನು ಧೂಮ್ರ ವರ್ಣದ ವಸ್ತ್ರದಿಂದಲೂ ಮಾಡಿ ಸಿದನು. ಯೆರೂಸಲೇಮಿನ ಕುಮಾರ್ತೆಯರ ನಿಮಿತ್ತ ಅದರ ಮಧ್ಯದಲ್ಲಿದ್ದದ್ದು ಪ್ರೀತಿಯಿಂದ ಹಾಸಲ್ಪಟ್ಟಿತು.

11 ಚೀಯೋನಿನ ಕುಮಾರ್ತೆಯರೇ, ನೀವು ಹೊರಟು ಹೋಗಿ ಅವನ ಮದುವೆಯ ದಿವಸದಲ್ಲಿಯೂ ಹೃದ ಯದ ಸಂತೋಷದ ದಿವಸದಲ್ಲಿಯೂ ತನ್ನ ತಾಯಿ ತನಗೆ ಧರಿಸಿದ ಕಿರೀಟ ಇರುವ ಅರಸನಾದ ಸೊಲೊ ಮೋನನನ್ನು ನೋಡಿರಿ.

1 By night on my bed I sought him whom my soul loveth: I sought him, but I found him not.

2 I will rise now, and go about the city in the streets, and in the broad ways I will seek him whom my soul loveth: I sought him, but I found him not.

3 The watchmen that go about the city found me: to whom I said, Saw ye him whom my soul loveth?

4 It was but a little that I passed from them, but I found him whom my soul loveth: I held him, and would not let him go, until I had brought him into my mother’s house, and into the chamber of her that conceived me.

5 I charge you, O ye daughters of Jerusalem, by the roes, and by the hinds of the field, that ye stir not up, nor awake my love, till he please.

6 Who is this that cometh out of the wilderness like pillars of smoke, perfumed with myrrh and frankincense, with all powders of the merchant?

7 Behold his bed, which is Solomon’s; threescore valiant men are about it, of the valiant of Israel.

8 They all hold swords, being expert in war: every man hath his sword upon his thigh because of fear in the night.

9 King Solomon made himself a chariot of the wood of Lebanon.

10 He made the pillars thereof of silver, the bottom thereof of gold, the covering of it of purple, the midst thereof being paved with love, for the daughters of Jerusalem.

11 Go forth, O ye daughters of Zion, and behold king Solomon with the crown wherewith his mother crowned him in the day of his espousals, and in the day of the gladness of his heart.

Song of Solomon 3 in Tamil and English

1 ಕರ್ತನಾದ ದೇವರು ಮಾಡಿದ ಅಡವಿಯ ಎಲ್ಲಾ ಮೃಗಗಳಿಗಿಂತ ಸರ್ಪವು ಯುಕ್ತಿ ಯುಳ್ಳದ್ದಾಗಿತ್ತು. ಅದು ಸ್ತ್ರೀಗೆ--ನೀವು ತೋಟ ದಲ್ಲಿರುವ ಯಾವ ಮರದ ಫಲವನ್ನು ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ ಎಂದು ಕೇಳಿತು.
Now the serpent was more subtil than any beast of the field which the Lord God had made. And he said unto the woman, Yea, hath God said, Ye shall not eat of every tree of the garden?

2 ಆಗ ಸ್ತ್ರೀಯು ಸರ್ಪಕ್ಕೆ--ತೋಟದ ಮರಗಳ ಫಲಗಳನ್ನು ನಾವು ತಿನ್ನಬಹುದು.
And the woman said unto the serpent, We may eat of the fruit of the trees of the garden:

3 ಆದರೆ ತೋಟದ ಮಧ್ಯದಲ್ಲಿ ರುವ ಮರದ ಫಲದ ವಿಷಯದಲ್ಲಿ ದೇವರು--ನೀವು ಸಾಯದ ಹಾಗೆ ಅದನ್ನು ತಿನ್ನಲೂ ಬಾರದು, ಮುಟ್ಟಲೂ ಬಾರದು ಎಂದು ಹೇಳಿದ್ದಾನೆ ಅಂದಳು.
But of the fruit of the tree which is in the midst of the garden, God hath said, Ye shall not eat of it, neither shall ye touch it, lest ye die.

4 ಸರ್ಪವು ಸ್ತ್ರೀಗೆ--ನೀವು ಖಂಡಿತವಾಗಿ ಸಾಯುವದಿಲ್ಲ;
And the serpent said unto the woman, Ye shall not surely die:

5 ನೀವು ಅದನ್ನು ತಿಂದ ದಿನದಲ್ಲಿ ನಿಮ್ಮ ಕಣ್ಣುಗಳು ತೆರೆಯ ಲ್ಪಡುವವೆಂದೂ ನೀವು ಒಳ್ಳೇದರ ಕೆಟ್ಟದರ ಭೇದವನ್ನು ಅರಿತವರಾಗಿ ದೇವರುಗಳ ಹಾಗೆ ಇರುವಿರೆಂದೂ ದೇವರಿಗೆ ತಿಳಿದಿದೆ ಎಂದು ಹೇಳಿತು.
For God doth know that in the day ye eat thereof, then your eyes shall be opened, and ye shall be as gods, knowing good and evil.

6 ಸ್ತ್ರೀಯು--ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು.
And when the woman saw that the tree was good for food, and that it was pleasant to the eyes, and a tree to be desired to make one wise, she took of the fruit thereof, and did eat, and gave also unto her husband with her; and he did eat.

7 ಆಗ ಅವರಿಬ್ಬರ ಕಣ್ಣುಗಳು ತೆರೆಯಲ್ಪಟ್ಟು ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಕೊಂಡರು; ಅವರು ಅಂಜೂರದ ಎಲೆಗಳನ್ನು ಹೊಲಿದುಕೊಂಡು ತಮಗೆ ತಾವೇ ಉಡುಗೆಗಳನ್ನು ಮಾಡಿಕೊಂಡರು.
And the eyes of them both were opened, and they knew that they were naked; and they sewed fig leaves together, and made themselves aprons.

8 ಆಗ ಕರ್ತನಾದ ದೇವರು ದಿನದ ತಂಗಾಳಿಯಲ್ಲಿ ತೋಟದೊಳಗೆ ತಿರುಗಾಡುವ ಶಬ್ದವನ್ನು ಆದಾಮನೂ ಅವನ ಹೆಂಡತಿಯೂ ಕೇಳಿ ದೇವರಾದ ಕರ್ತನ ಸನ್ನಿಧಿಯಿಂದ ತೋಟದ ಮರಗಳಲ್ಲಿ ಅಡಗಿಕೊಂಡರು.
And they heard the voice of the Lord God walking in the garden in the cool of the day: and Adam and his wife hid themselves from the presence of the Lord God amongst the trees of the garden.

9 ಆಗ ಕರ್ತನಾದ ದೇವರು ಆದಾಮನನ್ನು ಕರೆದು ಅವನಿಗೆ--ನೀನು ಎಲ್ಲಿದ್ದೀ ಅಂದನು.
And the Lord God called unto Adam, and said unto him, Where art thou?

10 ಅದಕ್ಕ ವನು--ನಿನ್ನ ಶಬ್ದವನ್ನು ತೋಟದಲ್ಲಿ ನಾನು ಕೇಳಿ ಬೆತ್ತಲೆಯಾಗಿರುವದರಿಂದ ಭಯಪಟ್ಟು ಅಡಗಿ ಕೊಂಡೆನು ಅಂದನು.
And he said, I heard thy voice in the garden, and I was afraid, because I was naked; and I hid myself.

11 ಅದಕ್ಕೆ ಆತನು--ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ತಿಂದಿದ್ದೀಯೋ? ಅನ್ನಲು
And he said, Who told thee that thou wast naked? Hast thou eaten of the tree, whereof I commanded thee that thou shouldest not eat?

12 ಅವನು--ನೀನು ನನ್ನ ಸಂಗಡ ಇರುವದಕ್ಕೆ ಕೊಟ್ಟ ಸ್ತ್ರೀಯು ಆ ಮರದ ಫಲವನ್ನು ನನಗೆ ಕೊಟ್ಟಳು; ನಾನು ತಿಂದೆನು ಎಂದು ಹೇಳಿದನು.
And the man said, The woman whom thou gavest to be with me, she gave me of the tree, and I did eat.

13 ಕರ್ತನಾದ ದೇವರು ಸ್ತ್ರೀಗೆ--ಇದೇನು ನೀನು ಮಾಡಿದ್ದು ಎಂದು ಕೇಳಿದಾಗ ಸ್ತ್ರೀಯು--ಸರ್ಪವು ನನ್ನನ್ನು ವಂಚಿಸಿದ್ದರಿಂದ ನಾನು ತಿಂದೆನು ಅಂದಳು.
And the Lord God said unto the woman, What is this that thou hast done? And the woman said, The serpent beguiled me, and I did eat.

14 ಆಗ ಕರ್ತನಾದ ದೇವರು ಸರ್ಪಕ್ಕೆ--ನೀನು ಇದನ್ನು ಮಾಡಿದ ಕಾರಣ ಎಲ್ಲಾ ಪಶುಗಳಲ್ಲಿಯೂ ಎಲ್ಲಾ ಅಡವಿಯ ಮೃಗಗಳ ಲ್ಲಿಯೂ ಶಪಿಸಲ್ಪಟ್ಟು ಜೀವದಿಂದಿರುವ ದಿವಸಗಳಲ್ಲೆಲ್ಲಾ ಹೊಟ್ಟೆಯಿಂದ ಹರಿದಾಡಿ ಮಣ್ಣನ್ನು ತಿನ್ನುವಿ.
And the Lord God said unto the serpent, Because thou hast done this, thou art cursed above all cattle, and above every beast of the field; upon thy belly shalt thou go, and dust shalt thou eat all the days of thy life:

15 ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
And I will put enmity between thee and the woman, and between thy seed and her seed; it shall bruise thy head, and thou shalt bruise his heel.

16 ಸ್ತ್ರೀಗೆ ಆತನು--ನಾನು ನಿನ್ನ ದುಃಖವನ್ನೂ ಗರ್ಭವೇದನೆಯನ್ನೂ ಅಧಿಕವಾಗಿ ಹೆಚ್ಚಿಸುವೆನು, ನೀನು ಕಷ್ಟದಿಂದ ಮಕ್ಕಳನ್ನು ಹೆರುವಿ, ನಿನ್ನ ಗಂಡನ ಮೇಲೆ ನಿನಗೆ ಆಶೆ ಇರುವದು; ಅವನು ನಿನ್ನನ್ನು ಆಳುವನು ಅಂದನು.
Unto the woman he said, I will greatly multiply thy sorrow and thy conception; in sorrow thou shalt bring forth children; and thy desire shall be to thy husband, and he shall rule over thee.

17 ಆದಾಮನಿಗೆ ಆತನು--ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ತಿನ್ನಬಾರದೆಂದು ನಾನು ನಿನ ಆಜ್ಞಾಪಿಸಿದ ಮರದ ಫಲವನ್ನು ತಿಂದಕಾರಣ ನಿನ್ನ ನಿಮಿತ್ತ ಭೂಮಿಯು ಶಪಿಸಲ್ಪಟ್ಟಿದೆ; ನಿನ್ನ ಜೀವನದ ದಿನಗಳಲ್ಲೆಲ್ಲಾ ದುಃಖದಲ್ಲೇ ನೀನು ಅದರ ಫಲವನ್ನು ತಿನ್ನುವಿ.
And unto Adam he said, Because thou hast hearkened unto the voice of thy wife, and hast eaten of the tree, of which I commanded thee, saying, Thou shalt not eat of it: cursed is the ground for thy sake; in sorrow shalt thou eat of it all the days of thy life;

18 ಇದಲ್ಲದೆ ಭೂಮಿಯು ಮುಳ್ಳುಗಳನ್ನೂ ದತ್ತೂರಿಗಳನ್ನೂ ನಿನಗಾಗಿ ಬೆಳೆಯುವದು. ನೀನು ಹೊಲದ ಪಲ್ಯವನ್ನು ತಿನ್ನುವಿ.
Thorns also and thistles shall it bring forth to thee; and thou shalt eat the herb of the field;

19 ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
In the sweat of thy face shalt thou eat bread, till thou return unto the ground; for out of it wast thou taken: for dust thou art, and unto dust shalt thou return.

20 ಆದಾಮನು ತನ್ನ ಹೆಂಡತಿಯ ಹೆಸರನ್ನು ಹವ್ವ ಎಂದು ಕರೆದನು. ಯಾಕಂದರೆ ಆಕೆಯು ಜೀವವುಳ್ಳ ವರಿಗೆಲ್ಲಾ ತಾಯಿಯಾಗಿದ್ದಾಳೆ.
And Adam called his wife’s name Eve; because she was the mother of all living.

21 ಕರ್ತನಾದ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ಅವರಿಗೆ ತೊಡಿಸಿದನು.
Unto Adam also and to his wife did the Lord God make coats of skins, and clothed them.

22 ಇದ ಲ್ಲದೆ ಕರ್ತನಾದ ದೇವರು--ಇಗೋ, ಮನುಷ್ಯನು ಒಳ್ಳೇದರ ಕೆಟ್ಟದರ ಭೇದವನ್ನು ತಿಳಿದು ನಮ್ಮಲ್ಲಿ ಒಬ್ಬನಂತಾದನು; ಈಗ ಅವನು ಕೈಚಾಚಿ ಜೀವವೃಕ್ಷದ ಫಲವನ್ನು ತೆಗೆದು ತಿಂದು ಎಂದೆಂದಿಗೂ ಬದುಕ ಬಾರದು ಅಂದನು.
And the Lord God said, Behold, the man is become as one of us, to know good and evil: and now, lest he put forth his hand, and take also of the tree of life, and eat, and live for ever:

23 ಆದದರಿಂದ ಕರ್ತನಾದ ದೇವರು ಅವನನ್ನು ಯಾವದರಿಂದ ತೆಗೆದನೋ ಆ ಭೂಮಿಯನ್ನು ವ್ಯವಸಾಯಮಾಡುವದಕ್ಕೆ ಏದೆನ್‌ ತೋಟದಿಂದ ಹೊರಡಿಸಿಬಿಟ್ಟನು.
Therefore the Lord God sent him forth from the garden of Eden, to till the ground from whence he was taken.

24 ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್‌ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.
So he drove out the man; and he placed at the east of the garden of Eden Cherubims, and a flaming sword which turned every way, to keep the way of the tree of life.