ಮತ್ತಾಯನು 3:7
ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?
ಮತ್ತಾಯನು 5:20
ನಾನು ನಿಮಗೆ ಹೇಳುವದೇನಂದರೆ-- ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ನಿಮ್ಮ ನೀತಿಯು ಹೆಚ್ಚಿನದಾಗಿರದ ಹೊರತು ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವದಕ್ಕಾಗುವದೇ ಇಲ್ಲ.
ಮತ್ತಾಯನು 9:11
ಫರಿಸಾ ಯರು ಅದನ್ನು ನೋಡಿ ಆತನ ಶಿಷ್ಯರಿಗೆ--ನಿಮ್ಮ ಬೋಧಕನು ಸುಂಕದವರ ಮತ್ತು ಪಾಪಿಗಳ ಸಂಗಡ ಯಾಕೆ ಊಟ ಮಾಡುತ್ತಾನೆ ಎಂದು ಕೇಳಿದರು.
ಮತ್ತಾಯನು 9:14
ತರುವಾಯ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು--ನಾವು ಮತ್ತು ಫರಿಸಾಯರು ಬಹಳ ಸಾರಿ ಉಪವಾಸಮಾಡುತ್ತೇವೆ; ಆದರೆ ನಿನ್ನ ಶಿಷ್ಯರು ಯಾಕೆ ಉಪವಾಸಮಾಡುವದಿಲ್ಲ ಎಂದು ಕೇಳಿದರು.
ಮತ್ತಾಯನು 9:34
ಆದರೆ ಪರಿಸಾಯರು-- ದೆವ್ವಗಳ ಅಧಿಪತಿಯಿಂದ ಇವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
ಮತ್ತಾಯನು 12:2
ಆದರೆ ಫರಿಸಾಯರು ಅದನ್ನು ನೋಡಿ ಆತನಿಗೆ--ಇಗೋ, ನಿನ್ನ ಶಿಷ್ಯರು ಸಬ್ಬತ್‌ದಿನದಲ್ಲಿ ಮಾಡ ಬಾರದ್ದನ್ನು ಮಾಡುತ್ತಾರೆ ಅಂದರು.
ಮತ್ತಾಯನು 12:14
ತರುವಾಯ ಫರಿಸಾ ಯರು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧವಾಗಿ ಆಲೋಚಿಸಲು ಹೊರಗೆ ಹೋದರು.
ಮತ್ತಾಯನು 12:24
ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು.
ಮತ್ತಾಯನು 12:38
ಆಗ ಶಾಸ್ತ್ರಿಗಳಲ್ಲಿ ಮತ್ತು ಫರಿಸಾಯರಲ್ಲಿ ಕೆಲ ವರು--ಗುರುವೇ, ನಿನ್ನಿಂದ ಒಂದು ಸೂಚಕಕಾರ್ಯ ವನ್ನು ನೋಡಬೇಕೆಂದಿದ್ದೇವೆ ಎಂದು ಕೇಳಿದ್ದಕ್ಕೆ
ಮತ್ತಾಯನು 15:1
ತರುವಾಯ ಯೆರೂಸಲೇಮಿನವರಾದ ಶಾಸ್ತ್ರಿಗಳೂ ಫರಿಸಾಯರೂ ಯೇಸುವಿನ ಬಳಿಗೆ ಬಂದು--
Occurences : 100
எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்