Lamentations 4 - YLT (Kannada)
1 How is the gold become dim, Changed the best -- the pure gold? Poured out are stones of the sanctuary At the head of all out-places.ಬಂಗಾರವು ಹೇಗೆ ಮುಸುಕಾಯಿತು! ಬಹಳ ಶುದ್ಧವಾದ ಬಂಗಾರವು ಹೇಗೆ ಬದಲಾಯಿತು! ಪರಿಶುದ್ಧ ಸ್ಥಳದ ಕಲ್ಲುಗಳು ಪ್ರತಿಯೊಂದು ಬೀದಿಯ ಬದಿಯಲ್ಲಿ ಸುರಿಯಲ್ಪಟ್ಟಿವೆ.
2 The precious sons of Zion, Who are comparable with fine gold, How have they been reckoned earthen bottles, Work of the hands of a potter.ಅಪರಂಜಿಗೆ ಸಮಾನರಾದ ಚೀಯೋನಿನ ಅಮೂಲ್ಯ ಕುಮಾರರು ಹೇಗೆ ಮಣ್ಣಿನ ಪಾತ್ರೆಗಳಂತೆಯೂ ಕುಂಬಾರನ ಕೈಕೆಲಸದ ಹಾಗೆಯೂ ಎಣಿಸಲ್ಪಟ್ಟಿ ದ್ದಾರಲ್ಲಾ!
3 Even dragons have drawn out the breast, They have suckled their young ones, The daughter of my people is become cruel, Like the ostriches in a wilderness.ಸಮುದ್ರದ ವಿಕಾರವಾದ ಪ್ರಾಣಿಗಳಾ ದರೂ ತಮ್ಮ ಕೆಚ್ಚಲನ್ನು ಹೊರ ಎಳೆದು ತಮ್ಮ ಮರಿಗಳಿಗೆ ಮೊಲೆ ಕೊಡುತ್ತವೆ; ಆದರೆ ನನ್ನ ಜನರ ಮಗಳು ಅರಣ್ಯದಲ್ಲಿರುವ ಉಷ್ಟ್ರಪಕ್ಷಿಗಳ ಹಾಗೆ ಕ್ರೂರವಾಗಿ ದ್ದಾಳೆ.
4 Cleaved hath the tongue of a suckling unto his palate with thirst, Infants asked bread, a dealer out they have none.ಮೊಲೆಕೂಸಿನ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ, ಎಳೆಕೂಸುಗಳು ರೊಟ್ಟಿ ಕೇಳುತ್ತವೆ; ಆದರೆ ಅವರಿಗೆ ಯಾರೂ ಕೊಡುವದಿಲ್ಲ.
5 Those eating of dainties have been desolate in out-places, Those supported on scarlet have embraced dunghills.ರುಚಿ ಯಾದವುಗಳನ್ನು ತಿಂದವರು ಬೀದಿಗಳಲ್ಲಿ ಹಾಳಾಗಿ ದ್ದಾರೆ; ಸಕಲಾತಿಗಳಲ್ಲಿ ಬೆಳೆಸಲ್ಪಟ್ಟವರು ತಿಪ್ಪೆಗಳನ್ನು ಅಪ್ಪಿಕೊಳ್ಳುತ್ತಾರೆ.
6 And greater is the iniquity of the daughter of my people, Than the sin of Sodom, That was overturned as `in' a moment, And no hands were stayed on her.ನನ್ನ ಜನರ ಮಗಳ ಅಕ್ರಮದ ದಂಡನೆಯು ಸೊದೋಮಿನ ಪಾಪದ ದಂಡನೆಗಿಂತ ದೊಡ್ಡದು; ಅದು ಕ್ಷಣಮಾತ್ರದಲ್ಲಿ ಕೆಡವಿ ಹಾಕಲ್ಪಟ್ಟಿತು! ಅವಳನ್ನು ಯಾವ ಕೈಗಳೂ ತಡೆಯಲಿಲ್ಲ.
7 Purer were her Nazarites than snow, Whiter than milk, ruddier of body than rubies, Of sapphire their form.ಅವಳ ನಜರೀಯರು ಹಿಮಕ್ಕಿಂತಲೂ ಸ್ವಚ್ಛವಾಗಿದ್ದರು, ಹಾಲಿಗಿಂತಲೂ ಬೆಳ್ಳಗಿದ್ದರು, ಅವರು ಮೈ ಕಟ್ಟಿನಲ್ಲಿ ಹವಳಕ್ಕಿಂತಲೂ ಕೆಂಪಾಗಿದ್ದರು; ಅವರ ಹೊಳಪು ಇಂದ್ರನೀಲಮಣಿಯ ಹಾಗಿತ್ತು.
8 Darker than blackness hath been their visage, They have not been known in out-places, Cleaved hath their skin unto their bone, It hath withered -- it hath been as wood.ಈಗ ಅವರ ರೂಪವು ಕಲ್ಲಿದ್ದಲಿಗಿಂತ ಕಪ್ಪಾಗಿದೆ, ಬೀದಿಗಳಲ್ಲಿ ಅವರು ಯಾರೆಂಬದು ತಿಳಿಯಲಿಲ್ಲ; ಅವರ ಚರ್ಮವು ಅವರ ಎಲುಬುಗಳಿಗೆ ಹತ್ತಿಕೊಂಡಿದೆ, ಅದು ಒಣಗಿ ಕಡ್ಡಿಯ ಹಾಗೆ ಆಗಿದೆ.
9 Better have been the pierced of a sword Than the pierced of famine, For these flow away, pierced through, Without the increase of the field.ಕತ್ತಿಯಿಂದ ಹತರಾದವರು ಹಸಿವೆ ಯಿಂದ ಹತರಾದವರಿಗಿಂತ ಲೇಸು, ಇವರು ಭೂಫಲ ಗಳಿಲ್ಲದೆ ಕ್ಷಾಮದಿಂದ ತಿವಿಯಲ್ಪಟ್ಟು ಕ್ಷೀಣಿಸಿ ಹೋಗುತ್ತಾರೆ.
10 The hands of merciful women have boiled their own children, They have been for food to them, In the destruction of the daughter of my people.ಕನಿಕರ ತುಂಬಿದ ಹೆಂಗಸರ ಕೈಗಳು ಅವರ ಸ್ವಂತ ಮಕ್ಕಳನ್ನೇ ಬೇಯಿಸಿದವು; ಇವರು ನನ್ನ ಜನರ ಮಗಳ ನಾಶದಲ್ಲಿ ಅವರಿಗೆ ಆಹಾರ ವಾದರು.
11 Completed hath Jehovah His fury, He hath poured out the fierceness of His anger, And he kindleth a fire in Zion, And it devoureth her foundations.ಕರ್ತನು ತನ್ನ ರೋಷವನ್ನು ತೀರಿಸಿ ದ್ದಾನೆ; ಆತನು ತನ್ನ ಉಗ್ರವಾದ ಕೋಪವನ್ನು ಸುರಿದಿದ್ದಾನೆ; ಚೀಯೋನಿನಲ್ಲಿ ಹೊತ್ತಿಸಿದ ಬೆಂಕಿಯು ಅದರ ಅಸ್ತಿವಾರಗಳನ್ನು ತಿಂದುಬಿಟ್ಟಿತು.
12 Believe not did the kings of earth, And any of the inhabitants of the world, That come would an adversary and enemy Into the gates of Jerusalem.ಭೂ ರಾಜರೂ ವಿರೋಧಿಯೂ ಶತ್ರುವೂ ಯೆರೂಸಲೇ ಮಿನಲ್ಲಿ ಪ್ರವೇಶಿಸಿದ್ದನ್ನು ಪ್ರಪಂಚದ ಎಲ್ಲಾ ನಿವಾಸಿಗಳೂ ನಂಬುತ್ತಿರಲಿಲ್ಲ.
13 Because of the sins of her prophets, The iniquities of her priests, Who are shedding in her midst the blood of the righteous,ಅವಳ ಪ್ರವಾದಿಗಳ ಪಾಪಗಳಿಗೋಸ್ಕರವೂ ಅವಳ ಯಾಜಕರ ಅಕ್ರಮಗಳಿ ಗೋಸ್ಕರವೂ ಹೀಗಾಯಿತು. ಯಾಕಂದರೆ ಇವರು ನೀತಿವಂತರ ರಕ್ತವನ್ನು ಅವಳ ಮಧ್ಯ ಚೆಲ್ಲಿದ್ದರು.
14 They have wandered naked in out-places, They have been polluted with blood, Without `any' being able to touch their clothing,ಅವರು ಬೀದಿಗಳಲ್ಲಿ ಕುರುಡರಂತೆ ಅಲೆದಾಡಿದರು, ಅವರು ರಕ್ತದಿಂದ ತಮ್ಮನ್ನು ತಾವೇ ಅಪವಿತ್ರಪಡಿಸಿ ಕೊಂಡರು; ಆದದರಿಂದ ಮನುಷ್ಯರು ಅವರ ವಸ್ತ್ರಗಳನ್ನು ಮುಟ್ಟಲಾರದೆ ಹೋದರು.
15 `Turn aside -- unclean,' they called to them, `Turn aside, turn aside, touch not,' For they fled -- yea, they have wandered, They have said among nations: `They do not add to sojourn.'ಅವರು ಜನರಿಗೆ--ನೀವು ಸರಿಯಿರಿ ಇದು ಅಶುದ್ಧವಾಗಿದೆ; ಸರಿಯಿರಿ, ಸರಿಯಿರಿ; ಮುಟ್ಟಬೇಡಿರಿ ಎಂದು ಕೂಗಿ ಕೊಂಡರು. ಅವರು ಓಡಿಹೋಗಿ ಅಲೆದಾಡುತ್ತಿರು ವಾಗ--ಅವರು ಇನ್ನು ಮೇಲೆ ಅಲ್ಲಿ ವಾಸಮಾಡು ವದಿಲ್ಲ ಎಂದು ಅನ್ಯ ಜನಾಂಗಗಳೊಳಗೆ ಹೇಳಿದರು.
16 The face of Jehovah hath divided them, He doth not add to behold them, The face of priests they have not lifted up, Elders they have not favoured.ಕರ್ತನ ಕೋಪವು ಅವರನ್ನು ವಿಭಾಗಿಸಿತು; ಆತನು ಇನ್ನು ಅವರನ್ನು ಲಕ್ಷಿಸುವದಿಲ್ಲ; ಅವರು ಯಾಜಕರನ್ನು ಗೌರವಿಸಲಿಲ್ಲ; ಅವರು ಹಿರಿಯರಿಗೆ ದಯೆತೋರಿ ಸಲಿಲ್ಲ.
17 While we exist -- consumed are our eyes for our vain help, In our watch-tower we have watched for a nation `that' saveth not.ನಮಗಾದರೋ ನಮ್ಮ ಕಣ್ಣುಗಳು ನಮ್ಮ ವ್ಯರ್ಥವಾದ ಸಹಾಯಕ್ಕಾಗಿ ನೋಡಿ ಸೋತು ಹೋದವು; ನಮ್ಮ ಕಣ್ಣುಗಳು ನಮ್ಮನ್ನು ರಕ್ಷಿಸಲಾರದಂಥ ಜನಾಂಗಕ್ಕಾಗಿ ಕಾವಲಾಗಿದ್ದವು.
18 They have hunted our steps from going in our broad-places, Near hath been our end, fulfilled our days, For come hath our end.ನಾವು ನಮ್ಮ ಬೀದಿಗಳಲ್ಲಿ ಹೋಗದ ಹಾಗೆ, ಅವರು ನಮ್ಮ ಹೆಜ್ಜೆಗಳನ್ನೇ ಬೇಟೆಯಾಡುತ್ತಾರೆ; ನಮ್ಮ ಅಂತ್ಯವು ಸವಿಾಪಿಸಿತು, ನಮ್ಮ ದಿನಗಳು ತುಂಬಿದವು; ನಮ್ಮ ಅಂತ್ಯವು ಬಂದಿತು.
19 Swifter have been our pursuers, Than the eagles of the heavens, On the mountains they have burned `after' us, In the wilderness they have laid wait for us.ನಮ್ಮನ್ನು ಹಿಂಸಿಸುವವರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತ ತೀವ್ರ ವಾಗಿದ್ದಾರೆ; ಅವರು ಪರ್ವತಗಳ ಮೇಲೆ ನಮ್ಮನ್ನು ಹಿಂದಟ್ಟಿ ಅರಣ್ಯದಲ್ಲಿ ಹೊಂಚುಹಾಕಿದರು.
20 The breath of our nostrils -- the anointed of Jehovah, Hath been captured in their pits, of whom we said: `In his shadow we do live among nations.'ಯಾರ ವಿಷಯವಾಗಿ ನಾವು--ಅವನ ನೆರಳಿನ ಕೆಳಗೆ ಅನ್ಯ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿ ಕೊಂಡೆವೋ ನಮ್ಮ ಮೂಗಿನ ಉಸಿರಾದ ಆ ಕರ್ತನ ಅಭಿಷಿಕ್ತನು ಅವರ ಕುಣಿಗಳಲ್ಲಿ ಸಿಕ್ಕಿಕೊಂಡನು.
21 Joy and rejoice, O daughter of Edom, Dwelling in the land of Uz, Even unto thee pass over doth a cup, Thou art drunk, and makest thyself naked.ಎದೋಮಿನ ಮಗಳೇ, ಊಚ್ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು, ಸಂತೋಷಪಡು; ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವದು, ನೀನು ಕುಡಿದು ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.
22 Completed `is' thy iniquity, daughter of Zion, He doth not add to remove thee, He hath inspected thy iniquity, O daughter of Edom, He hath removed `thee' because of thy sins!ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು.
Kannada Bible