Luke 1 - YLT (Kannada)
1 Seeing that many did take in hand to set in order a narration of the matters that have been fully assured among us,ನಮ್ಮಲ್ಲಿ ಬಹು ನಿಶ್ಚಯವಾಗಿ ನಂಬಿ ಕೊಂಡಿರುವ ವಿಷಯಗಳ ಪ್ರಕಟನೆಯನ್ನು ಕ್ರಮವಾಗಿ ಬರೆಯುವದಕ್ಕೆ ಅನೇಕರು ಕೈಕೊಂಡು
2 as they did deliver to us, who from the beginning became eye-witnesses, and officers of the Word, --ಮೊದಲಿನಿಂದಲೂ ಕಣ್ಣಾರೆ ಕಂಡ ಸಾಕ್ಷಿಗಳು ಮತ್ತು ವಾಕ್ಯಪರಿಚಾರಕರು ಅವುಗಳನ್ನು ನಮಗೆ ಒಪ್ಪಿಸಿಕೊ ಟ್ಟದ್ದರಿಂದ
3 it seemed good also to me, having followed from the first after all things exactly, to write to thee in order, most noble Theophilus,ಅತ್ಯುತ್ತಮನಾದ ಥೆಯೊಫಿಲನೇ, ಮೊದಲಿ ನಿಂದಲೂ ಎಲ್ಲವುಗಳನ್ನು ಪೂರ್ಣವಾಗಿ ತಿಳಿದುಕೊಂಡಿ ರುವ ನಾನು ಸಹ ಅವುಗಳನ್ನು ಕ್ರಮವಾಗಿ ನಿನಗೆ ಬರೆಯುವದು ಒಳ್ಳೇದೆಂದು ನನಗೆ ತೋಚಿತು;
4 that thou mayest know the certainty of the things wherein thou wast instructed.ಹೀಗೆ ನಿನಗೆ ಬೋಧಿಸಲ್ಪಟ್ಟವುಗಳು ಸ್ಥಿರವಾದವುಗಳೆಂದು ಇದರಿಂದ ನೀನು ತಿಳಿಯಬಹುದು.
5 There was in the days of Herod, the king of Judea, a certain priest, by name Zacharias, of the course of Abijah, and his wife of the daughters of Aaron, and her name Elisabeth;ಯೂದಾಯದ ಅರಸನಾದ ಹೆರೋದನ ದಿನ ಗಳಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರಿಯನೆಂದು ಹೆಸರಿದ್ದ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ಕುಮಾರ್ತೆಯರಿಗೆ ಸಂಬಂಧಪಟ್ಟವಳು. ಆಕೆಯ ಹೆಸರು ಎಲಿಸಬೇತ್.
6 and they were both righteous before God, going on in all the commands and righteousnesses of the Lord blameless,ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.
7 and they had no child, because that Elisabeth was barren, and both were advanced in their days.ಎಲಿಸಬೇತಳು ಬಂಜೆಯಾದದರಿಂದ ಅವರಿಗೆ ಮಕ್ಕ ಳಿರಲಿಲ್ಲ; ಅವರಿಬ್ಬರೂ ಬಹಳ ಪ್ರಾಯಹೋದವರಾ ಗಿದ್ದರು.
8 And it came to pass, in his acting as priest, in the order of his course before God,ಹೀಗಿರಲಾಗಿ ಅವನು ತನ್ನ ವರ್ಗದ ಸರತಿಯ ಮೇರೆಗೆ ದೇವರ ಮುಂದೆ ಯಾಜಕನ ಉದ್ಯೋಗವನ್ನು ಮಾಡುತ್ತಿದ್ದಾಗ
9 according to the custom of the priesthood, his lot was to make perfume, having gone into the sanctuary of the Lord,ಯಾಜಕೋದ್ಯೋಗದ ಪದ್ಧತಿಯ ಪ್ರಕಾರ ಅವನು ಕರ್ತನ ಆಲಯದಲ್ಲಿ ಪ್ರವೇಶಿಸಿ ಧೂಪವನ್ನು ಸುಡುವದು ಅವನ ಪಾಲಿಗೆ ಬಂತು.
10 and all the multitude of the people were praying without, at the hour of the perfume.ಧೂಪಾರ್ಪಣೆಯ ಸಮಯದಲ್ಲಿ ಜನ ಸಮೂಹ ವೆಲ್ಲಾ ಹೊರಗೆ ಪ್ರಾರ್ಥಿಸುತ್ತಿದ್ದರು.
11 And there appeared to him a messenger of the Lord standing on the right side of the altar of the perfume,ಆಗ ಧೂಪ ವೇದಿಯ ಬಲಗಡೆಯಲ್ಲಿ ನಿಂತುಕೊಂಡಿದ್ದ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.
12 and Zacharias, having seen, was troubled, and fear fell on him;ಜಕರೀ ಯನು ಅವನನ್ನು ನೋಡಿ ಕಳವಳದಿಂದ ಭಯಹಿಡಿ ದವನಾದನು.
13 and the messenger said unto him, `Fear not, Zacharias, for thy supplication was heard, and thy wife Elisabeth shall bear a son to thee, and thou shalt call his name John,ಆದರೆ ಆ ದೂತನು ಅವನಿಗೆ--ಜಕರೀಯನೇ, ಭಯಪಡಬೇಡ; ಯಾಕಂದರೆ ನಿನ್ನ ಪ್ರಾರ್ಥನೆಯು ಕೇಳಲ್ಪಟ್ಟಿದೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನನ್ನು ಯೋಹಾನನೆಂದು ಕರೆಯಬೇಕು.
14 and there shall be joy to thee, and gladness, and many at his birth shall joy,ನಿನಗೆ ಆನಂದವೂ ಉಲ್ಲಾಸವೂ ಆಗುವದು; ಅನೇಕರು ಅವನ ಜನನದಲ್ಲಿ ಆನಂದಿಸುವರು.
15 for he shall be great before the Lord, and wine and strong drink he may not drink, and of the Holy Spirit he shall be full, even from his mother's womb;ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು.
16 and many of the sons of Israel he shall turn to the Lord their God,ಅವನು ಇಸ್ರಾ ಯೇಲಿನ ಮಕ್ಕಳಲ್ಲಿ ಅನೇಕರನ್ನು ಅವರ ದೇವರಾದ ಕರ್ತನ ಕಡೆಗೆ ತಿರುಗಿಸುವನು.
17 and he shall go before Him, in the spirit and power of Elijah, to turn hearts of fathers unto children, and disobedient ones to the wisdom of righteous ones, to make ready for the Lord, a people prepared.'ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು.
18 And Zacharias said unto the messenger, `Whereby shall I know this? for I am aged, and my wife is advanced in her days?'ಆಗ ಜಕರೀಯನು ಆ ದೂತನಿಗೆ--ಇದನ್ನು ನಾನು ಯಾವದರಿಂದ ತಿಳು ಕೊಳ್ಳಲಿ? ಯಾಕಂದರೆ ನಾನು ಮುದುಕನು; ನನ್ನ ಹೆಂಡತಿಯೂ ಪ್ರಾಯಗತಿಸಿದವಳು ಅಂದನು.
19 And the messenger answering said to him, `I am Gabriel, who have been standing near before God, and I was sent to speak unto thee, and to proclaim these good news to thee,ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ--ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು, ಈಗ ನಿನ್ನ ಸಂಗಡ ಮಾತನಾಡುವದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವದಕ್ಕೂ ಕಳುಹಿಸ ಲ್ಪಟ್ಟಿದ್ದೇನೆ.
20 and lo, thou shalt be silent, and not able to speak, till the day that these things shall come to pass, because thou didst not believe my words, that shall be fulfilled in their season.'ಇಗೋ, ತಕ್ಕ ಕಾಲದಲ್ಲಿ ನೆರವೇರುವ ನನ್ನ ಮಾತುಗಳನ್ನು ನೀನು ನಂಬದೆ ಹೋದದರಿಂದ ಈ ಸಂಗತಿಗಳು ಈಡೇರುವ ದಿನದ ವರೆಗೆ ನೀನು ಮೂಕನಾಗಿದ್ದು ಮಾತನಾಡಲಾರದೆ ಇರುವಿ ಅಂದನು.
21 And the people were waiting for Zacharias, and wondering at his tarrying in the sanctuary,ಆಗ ಜಕರೀಯನಿಗಾಗಿ ಕಾದುಕೊಂಡಿದ್ದ ಜನರು ಅವನು ದೇವಾಲಯದಲ್ಲಿ ಬಹಳ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು.
22 and having come out, he was not able to speak to them, and they perceived that a vision he had seen in the sanctuary, and he was beckoning to them, and did remain dumb.ಅವನು ಹೊರಗೆ ಬಂದಾಗ ಅವರೊಂದಿಗೆ ಮಾತನಾಡಲಾರದೆ ಇದ್ದನು; ಅದಕ್ಕ ವರು ಅವನು ದೇವಾಲಯದಲ್ಲಿ ಒಂದು ದರ್ಶನವನ್ನು ಕಂಡನೆಂದು ಗ್ರಹಿಸಿದರು; ಯಾಕಂದರೆ ಅವನು ಅವರಿಗೆ ಸನ್ನೆ ಮಾಡುತ್ತಾ ಮಾತಿಲ್ಲದವನಾಗಿದ್ದನು.
23 And it came to pass, when the days of his service were fulfilled, he went away to his house,ಇದಾದ ಮೇಲೆ ತನ್ನ ಸೇವೆಯ ದಿನಗಳು ಮುಗಿದ ಕೂಡಲೆ ಅವನು ತನ್ನ ಸ್ವಂತ ಮನೆಗೆ ಹೊರಟು ಹೋದನು.
24 and after those days, his wife Elisabeth conceived, and hid herself five months, saying --ಆ ದಿವಸಗಳಾದ ಮೇಲೆ ಅವನ ಹೆಂಡತಿಯಾದ ಎಲಿಸಬೇತಳು ಗರ್ಭಿಣಿಯಾಗಿ ಐದು ತಿಂಗಳು ತನ್ನನ್ನು ಮರೆಮಾಡಿಕೊಂಡು--
25 `Thus hath the Lord done to me, in days in which He looked upon `me', to take away my reproach among men.'ಜನರಲ್ಲಿ ನನಗಿದ್ದ ಅವ ಮಾನವನ್ನು ತೆಗೆದುಹಾಕುವದಕ್ಕಾಗಿ ಕರ್ತನು ನನ್ನ ಮೇಲೆ ದೃಷ್ಟಿಯಿಟ್ಟ ದಿನಗಳಲ್ಲಿ ನನಗೆ ಹೀಗೆ ಮಾಡಿದನು ಎಂದು ಹೇಳಿದಳು.
26 And in the sixth month was the messenger Gabriel sent by God, to a city of Galilee, the name of which `is' Nazareth,ಆರನೆಯ ತಿಂಗಳಿನಲ್ಲಿ ಗಲಿಲಾಯ ಪಟ್ಟಣದ ನಜರೇತೆಂಬ ಊರಿಗೆ ದೇವರಿಂದ ಗಬ್ರಿಯೇಲನೆಂಬ ದೂತನು
27 to a virgin, betrothed to a man, whose name `is' Joseph, of the house of David, and the name of the virgin `is' Mary.ದಾವೀದನ ಮನೆತನದವನಾದ ಯೋಸೇ ಫನಿಗೆ ನಿಶ್ಚಯಮಾಡಲ್ಪಟ್ಟ ಮರಿಯಳೆಂಬ ಒಬ್ಬ ಕನ್ಯೆಯ ಬಳಿಗೆ ಕಳುಹಿಸಲ್ಪಟ್ಟನು.
28 And the messenger having come in unto her, said, `Hail, favoured one, the Lord `is' with thee; blessed `art' thou among women;'ಆ ದೂತನು ಆಕೆಗೆ--ಅಪಾರ ದಯೆ ಹೊಂದಿದವಳೇ, ನಿನಗೆ ವಂದನೆ; ಕರ್ತನು ನಿನ್ನೊಂದಿಗಿದ್ದಾನೆ; ಸ್ತ್ರೀಯರಲ್ಲಿ ನೀನು ಧನ್ಯಳೇ ಎಂದು ಹೇಳಿದನು.
29 and she, having seen, was troubled at his word, and was reasoning of what kind this salutation may be.ಆಕೆಯು ಅವನನ್ನು ನೋಡಿ ಅವನ ಮಾತಿಗೆ ಕಳವಳಗೊಂಡು ಇದು ಎಂಥಾತರವಾದ ವಂದನೆ ಎಂದು ತನ್ನ ಮನದಲ್ಲಿ ಯೋಚಿಸುತ್ತಿರುವಾಗ
30 And the messenger said to her, `Fear not, Mary, for thou hast found favour with God;ಆ ದೂತನು ಆಕೆಗೆ-- ಮರಿಯಳೇ, ಹೆದರಬೇಡ; ಯಾಕಂದರೆ ನೀನು ದೇವರ ದಯೆಯನ್ನು ಹೊಂದಿದ್ದೀ;
31 and lo, thou shalt conceive in the womb, and shalt bring forth a son, and call his name Jesus;ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸು ಎಂದು ಹೆಸರಿಡಬೇಕು.
32 he shall be great, and Son of the Highest he shall be called, and the Lord God shall give him the throne of David his father,ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು.
33 and he shall reign over the house of Jacob to the ages; and of his reign there shall be no end.'ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.
34 And Mary said unto the messenger, `How shall this be, seeing a husband I do not know?'ಆಗ ಮರಿಯಳು ಆ ದೂತ ನಿಗೆ--ಇದು ಹೇಗಾದೀತು? ನಾನು ಪುರುಷನನ್ನು ಅರಿತವಳಲ್ಲವಲ್ಲಾ ಅಂದಳು.
35 And the messenger answering said to her, `The Holy Spirit shall come upon thee, and the power of the Highest shall overshadow thee, therefore also the holy-begotten thing shall be called Son of God;ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ ಆಕೆಗೆ--ಪವಿತ್ರಾತ್ಮನು ನಿನ್ನ ಮೇಲೆ ಬರುವನು, ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸಿ ಕೊಳ್ಳುವದು; ಆದದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರವಾದ ಶಿಶುವು ದೇವರ ಮಗನೆಂದು ಕರೆಯ ಲ್ಪಡುವನು.
36 and lo, Elisabeth, thy kinswoman, she also hath conceived a son in her old age, and this is the sixth month to her who was called barren;ಇಗೋ, ಬಂಜೆಯೆಂದು ಕರೆಯಲ್ಪಟ್ಟ ನಿನ್ನ ಬಂಧುವಾದ ಎಲಿಸಬೇತಳು ಸಹ ತನ್ನ ಮುಪ್ಪಿನ ಪ್ರಾಯದಲ್ಲಿ ಮಗನನ್ನು ಗರ್ಭಧರಿಸಿದ್ದಾಳೆ. ಆಕೆಗೆ ಇದು ಆರನೆಯ ತಿಂಗಳು.
37 because nothing shall be impossible with God.'ಯಾಕಂದರೆ ದೇವರಿಗೆ ಅಸಾಧ್ಯವಾದದ್ದು ಯಾವದೂ ಇಲ್ಲ ಎಂದು ಹೇಳಿ ದನು.
38 And Mary said, `Lo, the maid-servant of the Lord; let it be to me according to thy saying,' and the messenger went away from her.ಆಗ ಮರಿಯಳು--ನೋಡು, ನಾನು ಕರ್ತನ ದಾಸಿ; ನಿನ್ನ ಮಾತಿನಂತೆ ನನಗೆ ಆಗಲಿ ಅಂದಳು; ಆ ದೂತನು ಆಕೆಯ ಬಳಿಯಿಂದ ಹೊರಟುಹೋದನು.
39 And Mary having arisen in those days, went to the hill-country, with haste, to a city of Judea,ಆ ದಿವಸಗಳಲ್ಲಿ ಮರಿಯಳು ಎದ್ದು ಬೆಟ್ಟದ ಸೀಮೆಯ ಯೆಹೂದದ ಪಟ್ಟಣಕ್ಕೆ ಅವಸರದಿಂದ ಹೋಗಿ
40 and entered into the house of Zacharias, and saluted Elisabeth.ಜಕರೀಯನ ಮನೆಯನ್ನು ಪ್ರವೇಶಿಸಿ ಎಲಿಸಬೇತಳನ್ನು ವಂದಿಸಿದಳು.
41 And it came to pass, when Elisabeth heard the salutation of Mary, the babe did leap in her womb; and Elisabeth was filled with the Holy Spirit,ಎಲಿಸಬೇತಳು ಮರಿಯಳ ವಂದನೆಯನ್ನು ಕೇಳಿದಾಗ ಅವಳ ಗರ್ಭ ದಲ್ಲಿದ್ದ ಕೂಸು ಹಾರಾಡಿತು; ಎಲಿಸಬೇತಳು ಪರಿಶುದ್ಧಾ ತ್ಮಭರಿತಳಾಗಿ
42 and spake out with a loud voice, and said, `Blessed `art' thou among women, and blessed `is' the fruit of thy womb;ಗಟ್ಟಿಯಾದ ಧ್ವನಿಯಿಂದ ಮಾತ ನಾಡಿ--ಸ್ತ್ರೀಯರಲ್ಲಿ ನೀನು ಧನ್ಯಳೇ; ನಿನ್ನ ಗರ್ಭಫಲವು ಆಶೀರ್ವದಿಸಲ್ಪಟ್ಟದ್ದೇ.
43 and whence `is' this to me, that the mother of my Lord might come unto me?ನನ್ನ ಕರ್ತನ ತಾಯಿಯು ನನ್ನ ಬಳಿಗೆ ಬರುವದು ನನಗೆಲ್ಲಿಂದಾಯಿತು?
44 for, lo, when the voice of thy salutation came to my ears, leap in gladness did the babe in my womb;ಇಗೋ, ನಿನ್ನ ವಂದನೆಯ ಧ್ವನಿಯು ನನ್ನ ಕಿವಿ ಗಳಲ್ಲಿ ಬಿದ್ದ ಕೂಡಲೆ ಕೂಸು ನನ್ನ ಗರ್ಭದಲ್ಲಿ ಉಲ್ಲಾಸದಿಂದ ಹಾರಾಡಿತು.
45 and happy `is' she who did believe, for there shall be a completion to the things spoken to her from the Lord.'ಕರ್ತನಿಂದ ತನಗೆ ಹೇಳಲ್ಪಟ್ಟವುಗಳು ನೆರವೇರುವವೆಂದು ನಂಬಿದವಳು ಧನ್ಯಳು ಎಂದು ಹೇಳಿದಳು.
46 And Mary said, `My soul doth magnify the Lord,ಆಗ ಮರಿಯಳು--ನನ್ನ ಪ್ರಾಣವು ಕರ್ತನನ್ನು ಘನಪಡಿಸುತ್ತದೆ;
47 And my spirit was glad on God my Saviour,ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ;
48 Because He looked on the lowliness of His maid-servant, For, lo, henceforth call me happy shall all the generations,ಆತನು ತನ್ನ ದಾಸಿಯ ದೀನಸ್ಥಿತಿಯನ್ನು ಲಕ್ಷಿಸಿದ್ದಾನೆ. ಇಗೋ, ಇಂದಿನಿಂದ ತಲತಲಾಂತರಗಳವರು ನನ್ನನ್ನು ಧನ್ಯಳೆಂದು ಕರೆಯುವರು.
49 For He who is mighty did to me great things, And holy `is' His name,ಪರಾಕ್ರಮಿಯಾದಾತನು ನನಗೆ ಮಹತ್ತಾದವುಗಳನ್ನು ಮಾಡಿದ್ದಾನೆ; ಆತನ ಹೆಸರು ಪರಿಶುದ್ಧವಾದದ್ದು.
50 And His kindness `is' to generations of generations, To those fearing Him,ಆತನಿಗೆ ಭಯಪಡು ವವರ ಮೇಲೆ ಆತನ ಕರುಣೆಯು ತಲತಲಾಂತರ ಗಳಿಗೂ ಇರುವದು.
51 He did powerfully with His arm, He scattered abroad the proud in the thought of their heart,ಆತನು ತನ್ನ ಬಾಹುಬಲವನ್ನು ತೋರಿಸಿ ಗರ್ವಿಷ್ಠರನ್ನು ಅವರ ಹೃದಯದ ಕಲ್ಪನೆಗಳ ನಿಮಿತ್ತವಾಗಿ ಅವರನ್ನು ಚದರಿಸಿಬಿಟ್ಟಿದ್ದಾನೆ;
52 He brought down the mighty from thrones, And He exalted the lowly,ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ.
53 The hungry He did fill with good, And the rich He sent away empty,ಹಸಿದವರನ್ನು ಒಳ್ಳೆಯವು ಗಳಿಂದ ತೃಪ್ತಿಪಡಿಸಿ ಐಶ್ವರ್ಯವಂತರನ್ನು ಬರಿದಾಗಿ ಕಳುಹಿಸಿಬಿಟ್ಟಿದ್ದಾನೆ.
54 He received again Israel His servant, To remember kindness,ತನ್ನ ಕರುಣೆಯ ಜ್ಞಾಪಕಾರ್ಥ ವಾಗಿ ತನ್ನ ಸೇವಕನಾದ ಇಸ್ರಾಯೇಲನಿಗೆ ಸಹಾಯ ಮಾಡಿದ್ದಾನೆ.
55 As He spake unto our fathers, To Abraham and to his seed -- to the age.'ಇದಲ್ಲದೆ ನಮ್ಮ ಪಿತೃಗಳಿಗೂ ಅಬ್ರ ಹಾಮನಿಗೂ ಅವನ ಸಂತತಿಗೂ ಸದಾಕಾಲಕ್ಕೆ ಆತನು ಹೇಳಿದಂತೆ ಮಾಡಿದ್ದಾನೆ ಅಂದಳು.
56 And Mary remained with her about three months, and turned back to her house.ಮರಿ ಯಳು ಸುಮಾರು ಮೂರು ತಿಂಗಳು ಅವಳ ಜೊತೆ ಯಲ್ಲಿದ್ದು ತನ್ನ ಸ್ವಂತ ಮನೆಗೆ ಹಿಂದಿರುಗಿಹೋದಳು.
57 And to Elisabeth was the time fulfilled for her bringing forth, and she bare a son,ಇದಲ್ಲದೆ ಎಲಿಸಬೇತಳಿಗೆ ಹೆರಿಗೆಯ ಸಮಯವು ಪೂರ್ಣವಾದಾಗ ಆಕೆಯು ಒಬ್ಬ ಮಗನನ್ನು ಹೆತ್ತಳು.
58 and the neighbours and her kindred heard that the Lord was making His kindness great with her, and they were rejoicing with her.ಆಗ ಕರ್ತನು ತನ್ನ ಮಹಾಕರುಣೆಯನ್ನು ಆಕೆಯ ಮೇಲೆ ತೋರಿಸಿದ್ದನ್ನು ಆಕೆಯ ನೆರೆಹೊರೆಯವರೂ ಬಂಧುಗಳೂ ಕೇಳಿ ಆಕೆಯ ಕೂಡ ಸಂತೋಷಪಟ್ಟರು.
59 And it came to pass, on the eighth day, they came to circumcise the child, and they were calling him by the name of his father, Zacharias,ತರುವಾಯ ಅವರು ಎಂಟನೇ ದಿನದಲ್ಲಿ ಆ ಮಗುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಬಂದು ಅವನ ತಂದೆಯ ಹೆಸರಿನಂತೆ ಅವನನ್ನು ಜಕರೀಯನೆಂದು ಕರೆದರು.
60 and his mother answering said, `No, but he shall be called John.'ಅದಕ್ಕೆ ಅವನ ತಾಯಿಯು ಪ್ರತ್ಯುತ್ತರ ವಾಗಿ--ಹಾಗಲ್ಲ. ಅವನು ಯೋಹಾನನೆಂದು ಕರೆಯ ಲ್ಪಡಬೇಕು ಅಂದಳು.
61 And they said unto her -- `There is none among thy kindred who is called by this name,'ಅದಕ್ಕವರು ಆಕೆಗೆ--ನಿನ್ನ ಬಂಧುಗಳಲ್ಲಿ ಈ ಹೆಸರಿನಿಂದ ಕರೆಯಲ್ಪಟ್ಟವರು ಒಬ್ಬರೂ ಇಲ್ಲ ಅಂದರು.
62 and they were making signs to his father, what he would wish him to be called,ಅವನು ಯಾವ ಹೆಸರಿ ನಿಂದ ಕರೆಯಲ್ಪಡಬೇಕೆಂದು ಅವನ ತಂದೆಗೆ ಅವರು ಸನ್ನೆ ಮಾಡಿದರು.
63 and having asked for a tablet, he wrote, saying, `John is his name;' and they did all wonder;ಆಗ ಅವನು ಒಂದು ಬರೆಯುವ ಹಲಗೆಯನ್ನು ಕೇಳಿ ಅವನ ಹೆಸರು ಯೋಹಾನನು ಎಂದು ಬರೆದನು. ಆಗ ಅವರೆಲ್ಲರೂ ಆಶ್ಚರ್ಯಪಟ್ಟರು.
64 and his mouth was opened presently, and his tongue, and he was speaking, praising God.ಕೂಡಲೆ ಅವನ ಬಾಯಿ ತೆರೆಯಲ್ಪಟ್ಟು ಅವನ ನಾಲಿಗೆಯು ಸಡಿಲವಾಯಿತು ಮತ್ತು ಅವನು ಮಾತ ನಾಡಿ ದೇವರನ್ನು ಕೊಂಡಾಡಿದನು.
65 And fear came upon all those dwelling around them, and in all the hill-country of Judea were all these sayings spoken of,ಆಗ ಅವರ ಸುತ್ತಲೂ ಮತ್ತು ಎಲ್ಲಾ ಯೂದಾಯದ ಬೆಟ್ಟದ ಸೀಮೆಯಲ್ಲಿಯೂ ಈ ಸಂಗತಿಗಳೆಲ್ಲಾ ಹರಡಿದವು.
66 and all who heard did lay them up in their hearts, saying, `What then shall this child be?' and the hand of the Lord was with him.ಕೇಳಿದವರೆಲ್ಲರೂ ಅವುಗಳನ್ನು ತಮ್ಮ ಹೃದಯದಲ್ಲಿ ಇಟ್ಟುಕೊಂಡು--ಈ ಕೂಸೂ ಎಂಥದ್ದಾಗುವನೊ ಎಂದು ಅಂದುಕೊಂಡರು. ಕರ್ತನ ಹಸ್ತವು ಅವನ ಸಂಗಡ ಇತ್ತು.
67 And Zacharias his father was filled with the Holy Spirit, and did prophesy, saying,ಅವನ ತಂದೆಯಾದ ಜಕರೀಯನು ಪವಿತ್ರಾತ್ಮ ಭರಿತನಾಗಿ ಪ್ರವಾದಿಸುತ್ತಾ--
68 `Blessed `is' the Lord, the God of Israel, Because He did look upon, And wrought redemption for His people,ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ.
69 And did raise an horn of salvation to us, In the house of David His servant,ಆತನು ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗಾಗಿ ರಕ್ಷಣೆಯ ಕೊಂಬನ್ನು ಎತ್ತಿ ದ್ದಾನೆ.
70 As He spake by the mouth of His holy prophets, Which have been from the age;ಲೋಕಾದಿಯಿಂದ ಆತನು ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ
71 Salvation from our enemies, And out of the hand of all hating us,ನಾವು ನಮ್ಮ ಶತ್ರುಗಳಿಂದಲೂ ನಮ್ಮನ್ನು ಹಗೆ ಮಾಡುವವರ ಕೈಯಿಂದಲೂ ರಕ್ಷಿಸಲ್ಪಡುವಂತೆ
72 To do kindness with our fathers, And to be mindful of His holy covenant,ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು
73 An oath that He sware to Abraham our father,ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆ
74 To give to us, without fear, Out of the hand of our enemies having been delivered,ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ
75 To serve Him, in holiness and righteousness Before Him, all the days of our life.ನಮ್ಮ ಜೀವಮಾನದ ಎಲ್ಲಾ ದಿನಗಳಲ್ಲಿ ಆತನ ಮುಂದೆ ಪರಿಶುದ್ಧತೆಯಿಂದಲೂ ನೀತಿಯಿಂದಲೂ ಆತನನ್ನು ಸೇವಿಸುವವರಾಗುವದಕ್ಕೆ ಆತನು ಅನುಗ್ರಹಿ ಸುವನು.
76 And thou, child, Prophet of the Highest Shalt thou be called; For thou shalt go before the face of the Lord, To prepare His ways.ಇದಲ್ಲದೆ ಮಗುವೇ, ನೀನಾದರೋ ಮಹೋನ್ನತನ ಪ್ರವಾದಿ ಎಂದು ಕರೆಯಲ್ಪಡುವಿ; ಯಾಕಂದರೆ ಕರ್ತನ ಮಾರ್ಗಗಳನ್ನು ಸಿದ್ಧಮಾಡು ವದಕ್ಕೆ ಆತನ ಮುಂದೆ ಹೋಗುವಿ.
77 To give knowledge of salvation to His people In remission of their sins,ಹೇಗೆಂದರೆ ಆತನು ತನ್ನ ಜನರಿಗೆ ಪಾಪಗಳ ಪರಿಹಾರದಿಂದ ರಕ್ಷಣೆಯ ತಿಳುವಳಿಕೆಯನ್ನು ಕೊಡುವನು.
78 Through the tender mercies of our God, In which the rising from on high did look upon us,ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ
79 To give light to those sitting in darkness and death-shade, To guide our feet to a way of peace.'ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.
80 And the child grew, and was strengthened in spirit, and he was in the deserts till the day of his shewing unto Israel.ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
Kannada Bible