Bible

Luke 10 - WEB (Kannada)

1 Now after these things, the Lord also appointed seventy others, and sent them two by two ahead of him{literally, "before his face"} into every city and place, where he was about to come.ಇವುಗಳಾದ ಮೇಲೆ ಕರ್ತನು ಬೇರೆ ಎಪ್ಪತ್ತು ಮಂದಿಯನ್ನು ಸಹ ನೇಮಿಸಿ ತಾನೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತನ್ನ ಮುಂದಾಗಿ ಕಳುಹಿಸಿದನು.

2 Then he said to them, "The harvest is indeed plentiful, but the laborers are few. Pray therefore to the Lord of the harvest, that he may send out laborers into his harvest.ಆತನು ಅವರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ; ಆದದರಿಂದ ಬೆಳೆಯ ಯಜಮಾನನು ತನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ನೀವು ಪ್ರಾರ್ಥನೆಮಾಡಿರಿ.

3 Go your ways. Behold, I send you out as lambs among wolves.ಹೋಗಿರಿ, ಇಗೋ, ತೋಳಗಳ ಮಧ್ಯದಲ್ಲಿ ಕುರಿಮರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ.

4 Carry no purse, nor wallet, nor sandals. Greet no one on the way.ಹವ್ಮೆಾಣಿಯನ್ನಾಗಲೀ ಚೀಲವನ್ನಾಗಲೀ ಕೆರಗಳನ್ನಾಗಲೀ ತಕ್ಕೊಳ್ಳಬೇಡಿರಿ; ಮತ್ತು ದಾರಿಯಲ್ಲಿ ಯಾರನ್ನೂ ವಂದಿಸಬೇಡಿರಿ.

5 Into whatever house you enter, first say, 'Peace be to this house.'ನೀವು ಯಾವ ಮನೆಯಲ್ಲಿಯಾದರೂ ಪ್ರವೇಶಿಸುವಾಗ ಮೊದಲು--ಈ ಮನೆಗೆ ಸಮಾಧಾನವಾಗಲಿ ಎಂದು ಹೇಳಿರಿ.

6 If a son of peace is there, your peace will rest on him; but if not, it will return to you.ಅಲ್ಲಿ ಸಮಾಧಾನದ ಮಗನು ಇದ್ದರೆ ನಿಮ್ಮ ಸಮಾಧಾನವು ಅವರ ಮೇಲೆ ಇರುವದು; ಇಲ್ಲದಿದ್ದರೆ ಅದು ನಿಮಗೆ ಹಿಂದಿರು ಗುವದು.

7 Remain in that same house, eating and drinking the things they give, for the laborer is worthy of his wages. Don't go from house to house.ಅದೇ ಮನೆಯಲ್ಲಿದ್ದು ಅವರು ಕೊಟ್ಟದ್ದನ್ನು ತಿಂದು ಕುಡಿಯಿರಿ; ಯಾಕಂದರೆ ಕೆಲಸದವನು ತನ್ನ ಕೂಲಿಗೆ ಯೋಗ್ಯನು. ಮನೆಯಿಂದ ಮನೆಗೆ ಹೋಗ ಬೇಡಿರಿ;

8 Into whatever city you enter, and they receive you, eat the things that are set before you.ಯಾವದಾದರೂ ಪಟ್ಟಣದೊಳಗೆ ನೀವು ಪ್ರವೇಶಿಸುವಾಗ ಅವರು ನಿಮ್ಮನ್ನು ಸೇರಿಸಿಕೊಂಡರೆ ನಿಮ್ಮ ಮುಂದೆ ಇಡುವಂಥವುಗಳನ್ನು ತಿನ್ನಿರಿ.

9 Heal the sick who are therein, and tell them, 'The Kingdom of God has come near to you.'ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿರಿ; ಮತ್ತು ಅವರಿಗೆ--ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂದು ಹೇಳಿರಿ.

10 But into whatever city you enter, and they don't receive you, go out into the streets of it and say,ಆದರೆ ನೀವು ಪ್ರವೇಶಿ ಸುವ ಯಾವ ಪಟ್ಟಣದಲ್ಲಿಯಾದರೂ ಅವರು ನಿಮ್ಮನ್ನು ಸೇರಿಸಿಕೊಳ್ಳದಿದ್ದರೆ ನೀವು ಹೊರಟು ಅದೇ ಬೀದಿ ಗಳಲ್ಲಿ ಹೋಗಿ--

11 'Even the dust from your city that clings to us, we wipe off against you. Nevertheless know this, that the Kingdom of God has come near to you.'ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ.

12 I tell you, it will be more tolerable in that day for Sodom than for that city.ಆದರೆ ಆ ದಿನದಲ್ಲಿ ಆ ಪಟ್ಟಣಕ್ಕಿಂತಲೂ ಸೊದೋಮಿನ ಗತಿಯು ಹೆಚ್ಚಾಗಿ ತಾಳಬಹುದಾಗಿರುವದು ಎಂದು ನಾನು ನಿಮಗೆ ಹೇಳುತ್ತೇನೆ.

13 "Woe to you, Chorazin! Woe to you, Bethsaida! For if the mighty works had been done in Tyre and Sidon which were done in you, they would have repented long ago, sitting in sackcloth and ashes.ಖೊರಾಜಿನೇ, ನಿನಗೆ ಅಯ್ಯೋ! ಬೇತ್ಸಾಯಿದವೇ, ನಿನಗೆ ಅಯ್ಯೋ! ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ತೂರ್‌ ಸೀದೋನ್‌ಗಳಲ್ಲಿ ನಡೆದಿದ್ದರೆ ಅಲ್ಲಿಯವರು ಬಹಳ ಕಾಲದ ಹಿಂದೆಯೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರ ಪಡುತ್ತಿದ್ದರು.

14 But it will be more tolerable for Tyre and Sidon in the judgment than for you.ಆದರೆ ನ್ಯಾಯ ತೀರ್ಪಿನಲ್ಲಿ ನಿಮ್ಮ ಗತಿಗಿಂತಲೂ ತೂರ್‌ ಸೀದೋನ್‌ಗಳ ಗತಿಯು ಹೆಚ್ಚಾಗಿ ತಾಳಬಹು ದಾಗಿರುವದು.

15 You, Capernaum, who are exalted to heaven, will be brought down to Hades.{Hades is the lower realm of the dead, or Hell.}ಆಕಾಶದವರೆಗೂ ಎತ್ತಲ್ಪಟ್ಟಿರುವ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬ ಲ್ಪಡುವಿ.

16 Whoever listens to you listens to me, and whoever rejects you rejects me. Whoever rejects me rejects him who sent me."ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುತ್ತಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುತ್ತಾನೆ; ನನ್ನನ್ನು ತಿರಸ್ಕರಿಸುವವನು ನನ್ನನ್ನು ಕಳುಹಿಸಿದಾತನನ್ನು ತಿರಸ್ಕರಿಸುತ್ತಾನೆ ಅಂದನು.

17 The seventy returned with joy, saying, "Lord, even the demons are subject to us in your name!"ತರುವಾಯ ಆ ಎಪ್ಪತ್ತು ಮಂದಿ ಸಂತೋಷದಿಂದ ಹಿಂತಿರುಗಿ--ಕರ್ತನೇ, ನಿನ್ನ ಹೆಸರಿನಲ್ಲಿ ದೆವ್ವಗಳು ಸಹ ನಮಗೆ ಅಧೀನವಾದವು ಅಂದರು.

18 He said to them, "I saw Satan having fallen like lightning from heaven.ಆಗ ಆತನು ಅವರಿಗೆ--ಸೈತಾನನು ಮಿಂಚಿನ ಹಾಗೆ ಆಕಾಶದಿಂದ ಬೀಳುವದನ್ನು ನಾನು ನೋಡಿದೆನು.

19 Behold, I give you authority to tread on serpents and scorpions, and over all the power of the enemy. Nothing will in any way hurt you.ಇಗೋ, ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡ ಲಾರದು.

20 Nevertheless, don't rejoice in this, that the spirits are subject to you, but rejoice that your names are written in heaven."ಆದಾಗ್ಯೂ ದುರಾತ್ಮಗಳು ನಿಮಗೆ ಅಧೀನವಾದವೆಂದು ಸಂತೋಷಪಡಬೇಡಿರಿ; ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿರು ವದರಿಂದಲೇ ಸಂತೋಷಿಸಿರಿ ಅಂದನು.

21 In that same hour Jesus rejoiced in the Holy Spirit, and said, "I thank you, O Father, Lord of heaven and earth, that you have hidden these things from the wise and understanding, and revealed them to little children. Yes, Father, for so it was well-pleasing in your sight."ಆ ಗಳಿಗೆಯಲ್ಲಿ ಯೇಸು ಆತ್ಮದಲ್ಲಿ ಉಲ್ಲಾಸ ಗೊಂಡು -- ಓ ತಂದೆಯೇ, ಪರಲೋಕ, ಭೂಲೋಕ ಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿ ಗಳಿಗೂ ಬುದ್ಧಿವಂತರಿಗೂ ಮರೆಮಾಡಿ ಕೂಸುಗಳಿಗೆ ಪ್ರಕಟಮಾಡಿರುವದರಿಂದ ನಿನ್ನನ್ನು ಕೊಂಡಾಡುತ್ತೇನೆ; ಹೌದು, ತಂದೆಯೇ, ಅದು ನಿನ್ನ ದೃ

22 Turning to the disciples, he said, "All things have been delivered to me by my Father. No one knows who the Son is, except the Father, and who the Father is, except the Son, and he to whomever the Son desires to reveal him."ಎಲ್ಲವುಗಳು ನನ್ನ ತಂದೆಯಿಂದ ನನಗೆ ಒಪ್ಪಿಸಲ್ಪಟ್ಟಿವೆ; ತಂದೆಯ ಹೊರತು ಯಾರೂ ಮಗನನ್ನು ಅರಿಯರು. ಮಗನೂ ತಾನು ಯಾರಿಗೆ ತಂದೆಯನ್ನು ಪ್ರಕಟಮಾಡುವನೋ ಅವನೂ ಅಲ್ಲದೆ ಆತನನ್ನು (ತಂದೆಯನ್ನು) ಯಾರೂ ಅರಿತವರಲ್ಲ.

23 Turning to the disciples, he said privately, "Blessed are the eyes which see the things that you see,ಆತನು ತನ್ನ ಶಿಷ್ಯರ ಕಡೆಗೆ ತಿರುಗಿಕೊಂಡು--ನೀವು ನೋಡು ತ್ತಿರುವವುಗಳನ್ನು ನೋಡುವ ಕಣ್ಣುಗಳು ಧನ್ಯವಾದವು ಗಳು ಎಂದು ಪ್ರತ್ಯೇಕವಾಗಿ ಹೇಳಿದನು.

24 for I tell you that many prophets and kings desired to see the things which you see, and didn't see them, and to hear the things which you hear, and didn't hear them."ಯಾಕಂದರೆ ಅನೇಕ ಪ್ರವಾದಿಗಳೂ ಅರಸರೂ ನೀವು ನೋಡು ವಂಥವುಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಿಲ್ಲ ಮತ್ತು ನೀವು ಕೇಳುವಂಥವುಗಳನ್ನು ಕೇಳ ಬೇಕೆಂದು ಅಪೇಕ್ಷಿಸಿದರೂ ಅವರು ಕೇಳಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.

25 Behold, a certain lawyer stood up and tested him, saying, "Teacher, what shall I do to inherit eternal life?"ಆಗ ಇಗೋ, ಒಬ್ಬಾನೊಬ್ಬ ನ್ಯಾಯಶಾಸ್ತ್ರಿಯು ಎದ್ದು ನಿಂತು ಆತನನ್ನು ಶೋಧಿಸುವದಕ್ಕಾಗಿ-- ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.

26 He said to him, "What is written in the law? How do you read it?"ಆತನು ಅವನಿಗೆ-- ನ್ಯಾಯಪ್ರಮಾಣದಲ್ಲಿ ಏನು ಬರೆದದೆ? ನೀನು ಹೇಗೆ ಓದುತ್ತೀ ಎಂದು ಕೇಳಿದನು.

27 He answered, "You shall love the Lord your God with all your heart, with all your soul, with all your strength, and with all your mind; and your neighbor as yourself."ಅದಕ್ಕೆ ಅವನು ಪ್ರತ್ಯುತ್ತರವಾಗಿ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯ ದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಮನಸ್ಸಿನಿಂ ದಲೂ ಪ್ರೀತಿಸಬೇಕು; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಅಂದನು.

28 He said to him, "You have answered correctly. Do this, and you will live."ಆಗ ಆತನು ಅವನಿಗೆ--ನೀನು ಸರಿಯಾಗಿ ಉತ್ತರ ಕೊಟ್ಟಿದ್ದೀ; ಅದರಂತೆಯೇ ಮಾಡು, ಆಗ ನೀನು ಬದುಕುವಿ ಅಂದನು.

29 But he, desiring to justify himself, asked Jesus, "Who is my neighbor?"ಆದರೆ ಅವನು ತನ್ನನ್ನು ತಾನೇ ನೀತಿವಂತನೆಂದು ತೋರಿಸು ವದಕ್ಕೆ ಅಪೇಕ್ಷೆಯುಳ್ಳವನಾಗಿ ಯೇಸುವಿಗೆ--ನನ ನೆರೆಯವನು ಯಾರು ಎಂದು ಕೇಳಿದನು.

30 Jesus answered, "A certain man was going down from Jerusalem to Jericho, and he fell among robbers, who both stripped him and beat him, and departed, leaving him half dead.ಆಗ ಯೇಸು ಪ್ರತ್ಯುತ್ತರವಾಗಿ--ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನಿಂದ ಇಳಿದು ಯೆರಿಕೋವಿಗೆ ಹೋಗುತ್ತಿದ್ದಾಗ ಕಳ್ಳರ ಮಧ್ಯದಲ್ಲಿ ಸಿಕ್ಕಿಬಿದ್ದನು. ಅವರು ಅವನ ಬಟ್ಟೆಯನ್ನು ತೆಗೆದುಹಾಕಿ ಅವನನ್ನು ಗಾಯ ಪಡಿಸಿ ಅರೆಜೀವ ಮಾಡಿ ಬಿಟ್ಟು ಹೊರಟುಹೋದರು.

31 By chance a certain priest was going down that way. When he saw him, he passed by on the other side.ಆಗ ಅನಿರೀಕ್ಷಿತವಾಗಿ ಒಬ್ಬಾನೊಬ್ಬ ಯಾಜಕನು ಆ ಮಾರ್ಗವಾಗಿ ಬಂದು ಅವನನ್ನು ನೋಡಿ ಓರೆ ಯಾಗಿ ಹೋದನು.

32 In the same way a Levite also, when he came to the place, and saw him, passed by on the other side.ಅದೇ ಪ್ರಕಾರ ಒಬ್ಬ ಲೇವಿ ಯೂ ಆ ಸ್ಥಳಕ್ಕೆ ಬಂದು ಅವನನ್ನು ನೋಡಿ ಓರೆಯಾಗಿ ಹೋದನು.

33 But a certain Samaritan, as he traveled, came where he was. When he saw him, he was moved with compassion,ಆದರೆ ಒಬ್ಬಾನೊಬ್ಬ ಸಮಾರ್ಯದ ವನು ಪ್ರಯಾಣ ಮಾಡುತ್ತಾ ಅವನಿದ್ದಲ್ಲಿಗೆ ಬಂದನು; ಅವನನ್ನು ನೋಡಿ ಅವನ ಮೇಲೆ ಕನಿಕರಪಟು

34 came to him, and bound up his wounds, pouring on oil and wine. He set him on his own animal, and brought him to an inn, and took care of him.ಅವನ ಬಳಿಗೆ ಹೋಗಿ ಎಣ್ಣೆಯನ್ನೂ ದ್ರಾಕ್ಷಾರಸ ವನ್ನೂ ಹೊಯ್ದು ಅವನ ಗಾಯಗಳನ್ನು ಕಟ್ಟಿ ತನ್ನ ಸ್ವಂತ ಪಶುವಿನ ಮೇಲೆ ಕೂಡ್ರಿಸಿ ವಸತಿ ಗೃಹಕ್ಕೆ ತಂದು ಅವನನ್ನು ಆರೈಕೆ ಮಾಡಿದನು.

35 On the next day, when he departed, he took out two denarii, and gave them to the host, and said to him, 'Take care of him. Whatever you spend beyond that, I will repay you when I return.'ಮರುದಿವಸ ಅವನು ಹೊರಟು ಹೋಗುತ್ತಿದ್ದಾಗ ಎರಡು ನಾಣ್ಯ ಗಳನ್ನು ತೆಗೆದು ವಸತಿಗೃಹದ ಯಜಮಾನನಿಗೆ ಕೊಟ್ಟು ಅವನಿಗೆ--ಇವನನ್ನು ಆರೈಕೆ ಮಾಡು, ನೀನು ಏನಾ ದರೂ ಹೆಚ್ಚು ವೆಚ್ಚ ಮಾಡಿದರೆ ನಾನು ತಿರಿಗಿ ಬಂದಾಗ ಕೊಟ್ಟು ತೀರಿಸುತ್ತೇನೆ ಅಂದನು.

36 Now which of these three do you think seemed to be a neighbor to him who fell among the robbers?"ಈ ಮೂವರಲ್ಲಿ ಯಾರು ಆ ಕಳ್ಳರ ನಡುವೆ ಸಿಕ್ಕಿ ಬಿದ್ದವನಿಗೆ ನೆರೆಯವ ನಾದನೆಂದು ನೀನು ಯೋಚಿಸುತ್ತೀ ಎಂದು ಕೇಳಿದ್ದಕ್ಕೆ

37 He said, "He who showed mercy on him." Then Jesus said to him, "Go and do likewise."ಅವನು-- ಯಾವನು ಅವನ ಮೇಲೆ ಕನಿಕರ ತೋರಿಸಿದನೋ ಅವನೇ ಅಂದನು. ಆಗ ಯೇಸು ಅವನಿಗೆ--ಹೋಗು, ನೀನೂ ಅದರಂತೆಯೇ ಮಾಡು ಎಂದು ಹೇಳಿದನು.

38 It happened as they went on their way, he entered into a certain village, and a certain woman named Martha received him into her house.ಇದಾದ ಮೇಲೆ ಅವರು ಹೋಗುತ್ತಿದ್ದಾಗ ಆತನು ಒಂದಾನೊಂದು ಹಳ್ಳಿಯನ್ನು ಪ್ರವೇಶಿಸಿದನು; ಆಗ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯೊಳಗೆ ಅಂಗೀಕರಿಸಿಕೊಂಡಳು.

39 She had a sister called Mary, who also sat at Jesus' feet, and heard his word.ಆಕೆಗೆ ಮರಿಯಳೆಂಬ ಒಬ್ಬ ಸಹೋದರಿ ಇದ್ದಳು. ಆಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕೂತು ಆತನ ವಾಕ್ಯವನ್ನು ಕೇಳುತ್ತಿದ್ದಳು.

40 But Martha was distracted with much serving, and she came up to him, and said, "Lord, don't you care that my sister left me to serve alone? Ask her therefore to help me."ಆದರೆ ಮಾರ್ಥಳು ಬಹಳ ಕೆಲಸದ ನಿಮಿತ್ತವಾಗಿ ಬೇಸರಗೊಂಡು ಆತನ ಬಳಿಗೆ ಬಂದು--ಕರ್ತನೇ, ಕೆಲಸ ಮಾಡುವದಕ್ಕೆ ನನ್ನ ಸಹೋದರಿಯು ನನ್ನೊಬ್ಬಳನ್ನೇ ಬಿಟ್ಟಿರುವದು ನಿನಗೆ ಚಿಂತೆಯಿಲ್ಲವೋ? ಆದದರಿಂದ ನನಗೆ ಸಹಾಯಮಾಡುವದಕ್ಕಾಗಿ ಅವಳಿಗೆ ಹೇಳು ಅಂದಳು.

41 Jesus answered her, "Martha, Martha, you are anxious and troubled about many things,ಆದರೆ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತಿಸಿ ತೊಂದರೆಗೆ ಒಳಗಾಗಿದ್ದೀ;

42 but one thing is needed. Mary has chosen the good part, which will not be taken away from her."ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.

Kannada Bible