Luke 19

fullscreen1 ಯೇಸು ಯೆರಿಕೋವನ್ನು ಪ್ರವೇಶಿಸಿ ಹಾದು ಹೋದನು.

fullscreen2 ಆಗ ಇಗೋ, ಅಲ್ಲಿ ಜಕ್ಕಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯ ನಿದ್ದನು. ಇವನು ಸುಂಕದವರಲ್ಲಿ ಮುಖ್ಯಸ್ಥನೂ ಐಶ್ವರ್ಯವಂತನೂ ಆಗಿದ್ದನು.

fullscreen3 ಯೇಸು ಯಾರೆಂದು ಅವನು ನೋಡುವದಕ್ಕೆ ಅಪೇಕ್ಷಿಸಿದರೂ ತಾನು ಗಿಡ್ಡನಾಗಿದ್ದದರಿಂದ ಜನದಟ್ಟನೆಯ ನಿಮಿತ್ತವಾಗಿ ಆತನನ್ನು ನೋಡಲಾರದೆ ಇದ್ದನು.

fullscreen4 ಆಗ ಆತನನ್ನು ನೋಡುವ ಹಾಗೆ ಅವನು ಮುಂದಾಗಿ ಓಡಿಹೋಗಿ ಒಂದು ಆಲದ ಮರವನ್ನು ಹತ್ತಿದನು; ಯಾಕಂದರೆ ಆತನು ಆ ಮಾರ್ಗವಾಗಿಯೇ ಹೋಗುವವನಾಗಿ ದ್ದನು.

fullscreen5 ಯೇಸು ಆ ಸ್ಥಳಕ್ಕೆ ಬಂದು ಮೇಲಕ್ಕೆ ನೋಡಿ ಅವನನ್ನು ಕಂಡು ಅವನಿಗೆ--ಜಕ್ಕಾಯನೇ, ತ್ವರೆಯಾಗಿ ಇಳಿದು ಬಾ; ಯಾಕಂದರೆ ಈ ದಿನ ನಾನು ನಿನ್ನ ಮನೆಯಲ್ಲಿ ಇರತಕ್ಕದ್ದಾಗಿದೆ ಅಂದನು.

fullscreen6 ಆಗ ಅವನು ತ್ವರೆಯಾಗಿ ಇಳಿದು ಬಂದು ಅತನನ್ನು ಸಂತೋಷದಿಂದ ಸೇರಿಸಿಕೊಂಡನು.

fullscreen7 ಇದನ್ನು ಅವರು ನೋಡಿ ದಾಗ--ಇವನು ಪಾಪಿಯಾದವನೊಂದಿಗೆ ಅತಿಥಿ ಯಾಗಿರಲು ಹೋಗಿದ್ದಾನೆ ಎಂದು ಹೇಳಿ ಅವರೆಲ್ಲರೂ ಗುಣುಗುಟ್ಟಿದರು.

fullscreen8 ಆಗ ಜಕ್ಕಾಯನು ನಿಂತುಕೊಂಡು ಕರ್ತನಿಗೆ--ಕರ್ತನೇ, ಇಗೋ, ನನ್ನ ಸೊತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ನಾನು ಯಾರಿಂದಲಾದರೂ ಸುಳ್ಳಾಗಿ ದೂರು ಹೇಳಿ ಏನಾದರೂ ತಕ್ಕೊಂಡಿದ್ದರೆ ಅವನಿಗೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಅಂದನು.

fullscreen9 ಆಗ ಯೇಸು ಅವನಿಗೆ--ಈ ದಿನ ಈ ಮನೆಗೆ ರಕ್ಷಣೆ ಆಯಿತು. ಯಾಕಂದರೆ ಇವನು ಸಹ ಅಬ್ರಹಾಮನ ಮಗ ನಲ್ಲವೇ.

fullscreen10 ಯಾಕಂದರೆ ಮನುಷ್ಯಕುಮಾರನು ತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.

fullscreen11 ಅವರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇಮಿಗೆ ಸವಿಾಪವಾಗಿದ್ದದ ರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗು ವದೆಂದು ಅವರು ಭಾವಿಸಿದ್ದದರಿಂದಲೂ ಆತನು ಇನ್ನೂ ಒಂದು ಸಾಮ್ಯವನ್ನು ಹೇಳಿದನು.

fullscreen12 ಅದೇ ನಂದರೆ--ಕೀರ್ತಿವಂತನಾದ ಒಬ್ಬಾನೊಬ್ಬ ಮನುಷ್ಯನು ತನಗೋಸ್ಕರ ರಾಜ್ಯವನ್ನು ಪಡೆದುಕೊಂಡು ತಿರಿಗಿ ಬರುವದಕ್ಕಾಗಿ ದೂರ ದೇಶಕ್ಕೆ ಹೊರಟುಹೋದನು.

fullscreen13 ಅವನು ತನ್ನ ಹತ್ತು ಆಳುಗಳನ್ನು ಕರೆದು ಅವರಿಗೆ ಹತ್ತು ಮೊಹರಿಗಳನ್ನು ಒಪ್ಪಿಸಿ--ನಾನು ಬರುವವರೆಗೆ ವ್ಯಾಪಾರ ಮಾಡಿಕೊಂಡಿರ್ರಿ ಎಂದು ಹೇಳಿದನು.

fullscreen14 ಆದರೆ ಅವರ ಪಟ್ಟಣದವರು ಅವನನ್ನು ದ್ವೇಷಿಸಿ--ಇವನು ನಮ್ಮ ಮೇಲೆ ಆಡಳಿತ ಮಾಡುವದು ನಮಗೆ ಮನಸ್ಸಿಲ್ಲ ಎಂದು ಹೇಳಿ ಅವನ ಹಿಂದೆ ಸಂದೇಶವನ್ನು ಕಳುಹಿಸಿದರು.

fullscreen15 ಇದಾದ ಮೇಲೆ ಅವನು ರಾಜ್ಯವನ್ನು ಪಡೆದು ಹಿಂದಿರುಗಿದಾಗ ವ್ಯಾಪಾ ರದಿಂದ ಪ್ರತಿಯೊಬ್ಬ ಮನುಷ್ಯನು ಎಷ್ಟು ಲಾಭವನ್ನು ಪಡೆದನೆಂದು ತಿಳುಕೊಳ್ಳುವಂತೆ ತಾನು ಹಣಕೊಟ್ಟ ಆ ಆಳುಗಳನ್ನು ತನ್ನ ಬಳಿಗೆ ಕರೆಯಬೇಕೆಂದು ಆಜ್ಞಾಪಿ ಸಿದನು.

fullscreen16 ಆಗ ಮೊದಲನೆಯವನು ಬಂದು--ಒಡೆಯನೇ, ನಿನ್ನ ಮೊಹರಿನಿಂದ ಹತ್ತು ಮೊಹರಿಗಳನ್ನು ಸಂಪಾದಿಸಿದ್ದೇನೆ ಅಂದನು.

fullscreen17 ಅದಕ್ಕೆ ಅವನು ಅವ ನಿಗೆ--ಒಳ್ಳೇದು. ನೀನು ಉತ್ತಮ ಆಳು; ಯಾಕಂದರೆ ನೀನು ಅತಿ ಸ್ವಲ್ಪದರಲ್ಲಿ ನಂಬಿಗಸ್ತನಾಗಿದ್ದೀ ಹತ್ತು ಪಟ್ಟಣಗಳ ಮೇಲೆ ನೀನು ಅಧಿಕಾರಿಯಾಗಿರು ಅಂದನು.

fullscreen18 ಎರಡನೆಯವನು ಬಂದು--ಒಡೆಯನೇ, ನಿನ್ನ ಮೊಹರಿಯಿಂದ ಐದು ಮೊಹರಿಗಳನ್ನು ಸಂಪಾ ದಿಸಿದ್ದೇನೆ ಅಂದನು.

fullscreen19 ಅದಕ್ಕೆ ಅವನು ಅದೇ ಪ್ರಕಾರ--ನೀನು ಸಹ ಐದು ಪಟ್ಟಣಗಳ ಮೇಲಿರು ಎಂದು ಅವನಿಗೆ ಹೇಳಿದನು.

fullscreen20 ಆಗ ಮತ್ತೊಬ್ಬನು ಬಂದು--ಒಡೆಯನೇ, ಇಗೋ, ನಾನು ಕರವಸ್ತ್ರದಲ್ಲಿ ಕಟ್ಟಿ ಇಟ್ಟಿದ್ದ ನಿನ್ನ ಮೊಹರಿ ಇದೇ.

fullscreen21 ಯಾಕಂದರೆ ನೀನು ಕಠಿಣವಾದ ಮನುಷ್ಯನು ಎಂದು ನಾನು ನಿನಗೆ ಭಯಪಟ್ಟೆನು; ನೀನು ಇಡದೆ ಇರುವದನ್ನು ತಕ್ಕೊಳ್ಳು ವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆಗಿದ್ದೀ ಅಂದನು.

fullscreen22 ಆಗ ಅವನು--ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿ ಸುವೆನು. ನಾನು ಇಡದೆ ಇರುವಲ್ಲಿ ತಕ್ಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.

fullscreen23 ಹಾಗಿದ್ದರೆ ನನ್ನ ಹಣವನ್ನು ಧನ ವ್ಯವಹಾರದ ಸಂಸ್ಥೆಯಲ್ಲಿ ಯಾಕೆ ಹಾಕಲಿಲ್ಲ? ನಾನು ಬಂದಾಗ ಅದನ್ನು ಬಡ್ಡಿಯ ಸಹಿತ ತೆಗೆದುಕೊಳ್ಳುತ್ತಿದ್ದೆನು ಎಂದು ಅವನಿಗೆ ಹೇಳಿದನು.

fullscreen24 ಅವನು ಹತ್ತಿರ ನಿಂತಿದ್ದವರಿಗೆ--ಇವನ ಕಡೆಯಿಂದ ಆ ಮೊಹರಿಯನ್ನು ತಕ್ಕೊಂಡು ಹತ್ತು ಮೊಹರಿಗಳಿ ದ್ದವನಿಗೆ ಕೊಡಿರಿ ಅಂದನು.

fullscreen25 (ಆಗ ಅವರು ಅವ ನಿಗೆ--ಒಡೆಯನೇ, ಅವನಿಗೆ ಹತ್ತು ಮೊಹರಿಗಳಿವೆ ಯಲ್ಲಾ ಅಂದರು.)

fullscreen26 ಆದರೆ ನಾನು ನಿಮಗೆ ಹೇಳು ವದೇನಂದರೆ--ಇದ್ದ ಪ್ರತಿಯೊಬ್ಬನಿಗೆ ಕೊಡಲ್ಪಡು ವದು ಮತ್ತು ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ಅವನಿಂದ ತೆಗೆಯಲ್ಪಡುವದು.

fullscreen27 ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.

fullscreen28 ಆತನು ಹೀಗೆ ಹೇಳಿದ ತರುವಾಯ ಮುಂದಾಗಿ ಯೆರೂಸಲೇಮಿಗೆ ಏರಿಹೋದನು.

fullscreen29 ಇದಾದ ಮೇಲೆ ಆತನು ಎಣ್ಣೇಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸವಿಾಪಿಸಿದಾಗ ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ--

fullscreen30 ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ನೀವು ಅದ ರೊಳಗೆ ಪ್ರವೇಶಿಸುತ್ತಿರುವಾಗ ಅಲ್ಲಿ ಕಟ್ಟಿರುವ ಮತ್ತು ಯಾವ ಮನುಷ್ಯನೂ ಅದರ ಮೇಲೆ ಹತ್ತದಿರುವ ಒಂದು ಕತ್ತೇ ಮರಿಯನ್ನು ಕಾಣುವಿರಿ; ಅದನ್ನು ಬಿಚ್ಚಿ ಇಲ್ಲಿಗೆ ತಕ್ಕೊಂಡು ಬನ್ನಿರಿ;

fullscreen31 ಯಾವನಾದರೂ ನಿಮಗೆ--ಯಾಕೆ ಅದನ್ನು ಬಿಚ್ಚುತ್ತೀರಿ ಎಂದು ಕೇಳಿದರೆ ನೀವು ಅವನಿಗೆ--ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ ಅಂದನು.

fullscreen32 ಕಳುಹಿಸಲ್ಪಟ್ಟವರು ತಮ್ಮ ಮಾರ್ಗವಾಗಿ ಹೊರಟು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡರು.

fullscreen33 ಅವರು ಆ ಕತ್ತೇ ಮರಿ ಯನ್ನು ಬಿಚ್ಚುತ್ತಿರುವಾಗ ಆದರ ಯಜಮಾನರು ಅವರಿಗೆ--ನೀವು ಕತ್ತೇಮರಿಯನ್ನು ಯಾಕೆ ಬಿಚ್ಚುತ್ತೀರಿ ಎಂದು ಕೇಳಿದ್ದಕ್ಕೆ

fullscreen34 ಅವರು--ಅದು ಕರ್ತನಿಗೆ ಬೇಕಾಗಿದೆ ಅಂದರು.

fullscreen35 ಅವರು ಅದನ್ನು ಯೇಸು ವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಕತ್ತೇಮರಿಯ ಮೇಲೆ ಹಾಕಿ ಅದರ ಮೇಲೆ ಯೇಸುವನ್ನು ಕೂಡ್ರಿಸಿ ದರು.

fullscreen36 ಆತನು ಹೋಗುತ್ತಿರುವಾಗ ಅವರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು.

fullscreen37 ಇದಲ್ಲದೆ ಆತನು ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಸವಿಾಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ನೋಡಿದ್ದ ಎಲ್ಲಾ ಮಹತ್ಕಾರ್ಯಗಳಿಗಾಗಿ ಸಂತೋಷ ಪಡುತ್ತಾ ಮಹಾಧ್ವನಿಯಿಂದ ದೇವರನ್ನು ಕೊಂಡಾಡ ಲಾರಂಭಿಸಿ--

fullscreen38 ಕರ್ತನ ಹೆಸರಿನಲ್ಲಿ ಬರುವ ಅರ ಸನು ಸ್ತುತಿಹೊಂದಲಿ; ಪರಲೋಕದಲ್ಲಿ ಸಮಾಧಾನ, ಮತ್ತು ಅತ್ಯುನ್ನತದಲ್ಲಿ ಮಹಿಮೆ ಎಂದು ಹೇಳಿದರು.

fullscreen39 ಜನಸಮೂಹದೊಳಗಿಂದ ಕೆಲವು ಫರಿಸಾಯರು ಆತನಿಗೆ--ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು ಅಂದರು.

fullscreen40 ಆಗ ಆತನು ಪ್ರತ್ಯುತ್ತರವಾಗಿ ಅವ ರಿಗೆ--ಇವರು ಸುಮ್ಮನಿರುವದಾದರೆ ಈ ಕಲ್ಲುಗಳು ಕೂಡಲೆ ಕೂಗುವವು ಎಂದು ನಾನು ನಿಮಗೆ ಹೇಳು ತ್ತೇನೆ ಅಂದನು.