Bible

Luke 19 - DBY (Kannada)

1 And he entered and passed through Jericho.ಯೇಸು ಯೆರಿಕೋವನ್ನು ಪ್ರವೇಶಿಸಿ ಹಾದು ಹೋದನು.

2 And behold, [there was] a man by name called Zacchaeus, and he was chief tax-gatherer, and he was rich.ಆಗ ಇಗೋ, ಅಲ್ಲಿ ಜಕ್ಕಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯ ನಿದ್ದನು. ಇವನು ಸುಂಕದವರಲ್ಲಿ ಮುಖ್ಯಸ್ಥನೂ ಐಶ್ವರ್ಯವಂತನೂ ಆಗಿದ್ದನು.

3 And he sought to see Jesus who he was: and he could not for the crowd, because he was little in stature.ಯೇಸು ಯಾರೆಂದು ಅವನು ನೋಡುವದಕ್ಕೆ ಅಪೇಕ್ಷಿಸಿದರೂ ತಾನು ಗಿಡ್ಡನಾಗಿದ್ದದರಿಂದ ಜನದಟ್ಟನೆಯ ನಿಮಿತ್ತವಾಗಿ ಆತನನ್ನು ನೋಡಲಾರದೆ ಇದ್ದನು.

4 And running on before, he got up into a sycamore that he might see him, for he was going to pass that [way].ಆಗ ಆತನನ್ನು ನೋಡುವ ಹಾಗೆ ಅವನು ಮುಂದಾಗಿ ಓಡಿಹೋಗಿ ಒಂದು ಆಲದ ಮರವನ್ನು ಹತ್ತಿದನು; ಯಾಕಂದರೆ ಆತನು ಆ ಮಾರ್ಗವಾಗಿಯೇ ಹೋಗುವವನಾಗಿ ದ್ದನು.

5 And when he came up to the place, Jesus looked up and saw him, and said to him, Zacchaeus, make haste and come down, for to-day I must remain in thy house.ಯೇಸು ಆ ಸ್ಥಳಕ್ಕೆ ಬಂದು ಮೇಲಕ್ಕೆ ನೋಡಿ ಅವನನ್ನು ಕಂಡು ಅವನಿಗೆ--ಜಕ್ಕಾಯನೇ, ತ್ವರೆಯಾಗಿ ಇಳಿದು ಬಾ; ಯಾಕಂದರೆ ಈ ದಿನ ನಾನು ನಿನ್ನ ಮನೆಯಲ್ಲಿ ಇರತಕ್ಕದ್ದಾಗಿದೆ ಅಂದನು.

6 And he made haste and came down, and received him with joy.ಆಗ ಅವನು ತ್ವರೆಯಾಗಿ ಇಳಿದು ಬಂದು ಅತನನ್ನು ಸಂತೋಷದಿಂದ ಸೇರಿಸಿಕೊಂಡನು.

7 And all murmured when they saw [it], saying, He has turned in to lodge with a sinful man.ಇದನ್ನು ಅವರು ನೋಡಿ ದಾಗ--ಇವನು ಪಾಪಿಯಾದವನೊಂದಿಗೆ ಅತಿಥಿ ಯಾಗಿರಲು ಹೋಗಿದ್ದಾನೆ ಎಂದು ಹೇಳಿ ಅವರೆಲ್ಲರೂ ಗುಣುಗುಟ್ಟಿದರು.

8 But Zacchaeus stood and said to the Lord, Behold, Lord, the half of my goods I give to the poor, and if I have taken anything from any man by false accusation, I return [him] fourfold.ಆಗ ಜಕ್ಕಾಯನು ನಿಂತುಕೊಂಡು ಕರ್ತನಿಗೆ--ಕರ್ತನೇ, ಇಗೋ, ನನ್ನ ಸೊತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ನಾನು ಯಾರಿಂದಲಾದರೂ ಸುಳ್ಳಾಗಿ ದೂರು ಹೇಳಿ ಏನಾದರೂ ತಕ್ಕೊಂಡಿದ್ದರೆ ಅವನಿಗೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಅಂದನು.

9 And Jesus said to him, To-day salvation is come to this house, inasmuch as he also is a son of Abraham;ಆಗ ಯೇಸು ಅವನಿಗೆ--ಈ ದಿನ ಈ ಮನೆಗೆ ರಕ್ಷಣೆ ಆಯಿತು. ಯಾಕಂದರೆ ಇವನು ಸಹ ಅಬ್ರಹಾಮನ ಮಗ ನಲ್ಲವೇ.

10 for the Son of man has come to seek and to save that which is lost.ಯಾಕಂದರೆ ಮನುಷ್ಯಕುಮಾರನು ತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.

11 But as they were listening to these things, he added and spake a parable, because he was near to Jerusalem and they thought that the kingdom of God was about to be immediately manifested.ಅವರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇಮಿಗೆ ಸವಿಾಪವಾಗಿದ್ದದ ರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗು ವದೆಂದು ಅವರು ಭಾವಿಸಿದ್ದದರಿಂದಲೂ ಆತನು ಇನ್ನೂ ಒಂದು ಸಾಮ್ಯವನ್ನು ಹೇಳಿದನು.

12 He said therefore, A certain high-born man went to a distant country to receive for himself a kingdom and return.ಅದೇ ನಂದರೆ--ಕೀರ್ತಿವಂತನಾದ ಒಬ್ಬಾನೊಬ್ಬ ಮನುಷ್ಯನು ತನಗೋಸ್ಕರ ರಾಜ್ಯವನ್ನು ಪಡೆದುಕೊಂಡು ತಿರಿಗಿ ಬರುವದಕ್ಕಾಗಿ ದೂರ ದೇಶಕ್ಕೆ ಹೊರಟುಹೋದನು.

13 And having called his own ten bondmen, he gave to them ten minas, and said to them, Trade while I am coming.ಅವನು ತನ್ನ ಹತ್ತು ಆಳುಗಳನ್ನು ಕರೆದು ಅವರಿಗೆ ಹತ್ತು ಮೊಹರಿಗಳನ್ನು ಒಪ್ಪಿಸಿ--ನಾನು ಬರುವವರೆಗೆ ವ್ಯಾಪಾರ ಮಾಡಿಕೊಂಡಿರ್ರಿ ಎಂದು ಹೇಳಿದನು.

14 But his citizens hated him, and sent an embassy after him, saying, We will not that this [man] should reign over us.ಆದರೆ ಅವರ ಪಟ್ಟಣದವರು ಅವನನ್ನು ದ್ವೇಷಿಸಿ--ಇವನು ನಮ್ಮ ಮೇಲೆ ಆಡಳಿತ ಮಾಡುವದು ನಮಗೆ ಮನಸ್ಸಿಲ್ಲ ಎಂದು ಹೇಳಿ ಅವನ ಹಿಂದೆ ಸಂದೇಶವನ್ನು ಕಳುಹಿಸಿದರು.

15 And it came to pass on his arrival back again, having received the kingdom, that he desired these bondmen to whom he gave the money to be called to him, in order that he might know what every one had gained by trading.ಇದಾದ ಮೇಲೆ ಅವನು ರಾಜ್ಯವನ್ನು ಪಡೆದು ಹಿಂದಿರುಗಿದಾಗ ವ್ಯಾಪಾ ರದಿಂದ ಪ್ರತಿಯೊಬ್ಬ ಮನುಷ್ಯನು ಎಷ್ಟು ಲಾಭವನ್ನು ಪಡೆದನೆಂದು ತಿಳುಕೊಳ್ಳುವಂತೆ ತಾನು ಹಣಕೊಟ್ಟ ಆ ಆಳುಗಳನ್ನು ತನ್ನ ಬಳಿಗೆ ಕರೆಯಬೇಕೆಂದು ಆಜ್ಞಾಪಿ ಸಿದನು.

16 And the first came up, saying, [My] Lord, thy mina has produced ten minas.ಆಗ ಮೊದಲನೆಯವನು ಬಂದು--ಒಡೆಯನೇ, ನಿನ್ನ ಮೊಹರಿನಿಂದ ಹತ್ತು ಮೊಹರಿಗಳನ್ನು ಸಂಪಾದಿಸಿದ್ದೇನೆ ಅಂದನು.

17 And he said to him, Well [done], thou good bondman; because thou hast been faithful in that which is least, be thou in authority over ten cities.ಅದಕ್ಕೆ ಅವನು ಅವ ನಿಗೆ--ಒಳ್ಳೇದು. ನೀನು ಉತ್ತಮ ಆಳು; ಯಾಕಂದರೆ ನೀನು ಅತಿ ಸ್ವಲ್ಪದರಲ್ಲಿ ನಂಬಿಗಸ್ತನಾಗಿದ್ದೀ ಹತ್ತು ಪಟ್ಟಣಗಳ ಮೇಲೆ ನೀನು ಅಧಿಕಾರಿಯಾಗಿರು ಅಂದನು.

18 And the second came, saying, [My] Lord, thy mina has made five minas.ಎರಡನೆಯವನು ಬಂದು--ಒಡೆಯನೇ, ನಿನ್ನ ಮೊಹರಿಯಿಂದ ಐದು ಮೊಹರಿಗಳನ್ನು ಸಂಪಾ ದಿಸಿದ್ದೇನೆ ಅಂದನು.

19 And he said also to this one, And *thou*, be over five cities.ಅದಕ್ಕೆ ಅವನು ಅದೇ ಪ್ರಕಾರ--ನೀನು ಸಹ ಐದು ಪಟ್ಟಣಗಳ ಮೇಲಿರು ಎಂದು ಅವನಿಗೆ ಹೇಳಿದನು.

20 And another came, saying, [My] Lord, lo, [there is] thy mina, which I have kept laid up in a towel.ಆಗ ಮತ್ತೊಬ್ಬನು ಬಂದು--ಒಡೆಯನೇ, ಇಗೋ, ನಾನು ಕರವಸ್ತ್ರದಲ್ಲಿ ಕಟ್ಟಿ ಇಟ್ಟಿದ್ದ ನಿನ್ನ ಮೊಹರಿ ಇದೇ.

21 For I feared thee because thou art a harsh man: thou takest up what thou hast not laid down, and thou reapest what thou hast not sowed.ಯಾಕಂದರೆ ನೀನು ಕಠಿಣವಾದ ಮನುಷ್ಯನು ಎಂದು ನಾನು ನಿನಗೆ ಭಯಪಟ್ಟೆನು; ನೀನು ಇಡದೆ ಇರುವದನ್ನು ತಕ್ಕೊಳ್ಳು ವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆಗಿದ್ದೀ ಅಂದನು.

22 He says to him, Out of thy mouth will I judge thee, wicked bondman: thou knewest that *I* am a harsh man, taking up what I have not laid down and reaping what I have not sowed.ಆಗ ಅವನು--ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿ ಸುವೆನು. ನಾನು ಇಡದೆ ಇರುವಲ್ಲಿ ತಕ್ಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.

23 And why didst thou not give my money to [the] bank; and *I* should have received it, at my coming, with interest?ಹಾಗಿದ್ದರೆ ನನ್ನ ಹಣವನ್ನು ಧನ ವ್ಯವಹಾರದ ಸಂಸ್ಥೆಯಲ್ಲಿ ಯಾಕೆ ಹಾಕಲಿಲ್ಲ? ನಾನು ಬಂದಾಗ ಅದನ್ನು ಬಡ್ಡಿಯ ಸಹಿತ ತೆಗೆದುಕೊಳ್ಳುತ್ತಿದ್ದೆನು ಎಂದು ಅವನಿಗೆ ಹೇಳಿದನು.

24 And he said to those that stood by, Take from him the mina and give [it] to him who has the ten minas.ಅವನು ಹತ್ತಿರ ನಿಂತಿದ್ದವರಿಗೆ--ಇವನ ಕಡೆಯಿಂದ ಆ ಮೊಹರಿಯನ್ನು ತಕ್ಕೊಂಡು ಹತ್ತು ಮೊಹರಿಗಳಿ ದ್ದವನಿಗೆ ಕೊಡಿರಿ ಅಂದನು.

25 And they said to him, Lord, he has ten minas.(ಆಗ ಅವರು ಅವ ನಿಗೆ--ಒಡೆಯನೇ, ಅವನಿಗೆ ಹತ್ತು ಮೊಹರಿಗಳಿವೆ ಯಲ್ಲಾ ಅಂದರು.)

26 For I say unto you, that to every one that has shall be given; but from him that has not, that even which he has shall be taken from him.ಆದರೆ ನಾನು ನಿಮಗೆ ಹೇಳು ವದೇನಂದರೆ--ಇದ್ದ ಪ್ರತಿಯೊಬ್ಬನಿಗೆ ಕೊಡಲ್ಪಡು ವದು ಮತ್ತು ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ಅವನಿಂದ ತೆಗೆಯಲ್ಪಡುವದು.

27 Moreover those mine enemies, who would not [have] me to reign over them, bring them here and slay [them] before me.ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.

28 And having said these things, he went on before, going up to Jerusalem.ಆತನು ಹೀಗೆ ಹೇಳಿದ ತರುವಾಯ ಮುಂದಾಗಿ ಯೆರೂಸಲೇಮಿಗೆ ಏರಿಹೋದನು.

29 And it came to pass as he drew near to Bethphage and Bethany at the mountain called [the mount] of Olives, he sent two of his disciples,ಇದಾದ ಮೇಲೆ ಆತನು ಎಣ್ಣೇಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸವಿಾಪಿಸಿದಾಗ ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ--

30 saying, Go into the village over against [you], in which ye will find, on entering it, a colt tied up, on which no [child] of man ever sat at any time: loose it and lead it [here].ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ನೀವು ಅದ ರೊಳಗೆ ಪ್ರವೇಶಿಸುತ್ತಿರುವಾಗ ಅಲ್ಲಿ ಕಟ್ಟಿರುವ ಮತ್ತು ಯಾವ ಮನುಷ್ಯನೂ ಅದರ ಮೇಲೆ ಹತ್ತದಿರುವ ಒಂದು ಕತ್ತೇ ಮರಿಯನ್ನು ಕಾಣುವಿರಿ; ಅದನ್ನು ಬಿಚ್ಚಿ ಇಲ್ಲಿಗೆ ತಕ್ಕೊಂಡು ಬನ್ನಿರಿ;

31 And if any one ask you, Why do ye loose [it]? thus shall ye say to him, Because the Lord has need of it.ಯಾವನಾದರೂ ನಿಮಗೆ--ಯಾಕೆ ಅದನ್ನು ಬಿಚ್ಚುತ್ತೀರಿ ಎಂದು ಕೇಳಿದರೆ ನೀವು ಅವನಿಗೆ--ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ ಅಂದನು.

32 And they that were sent, having gone their way, found as he had said to them.ಕಳುಹಿಸಲ್ಪಟ್ಟವರು ತಮ್ಮ ಮಾರ್ಗವಾಗಿ ಹೊರಟು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡರು.

33 And as they were loosing the colt, its masters said to them, Why loose ye the colt?ಅವರು ಆ ಕತ್ತೇ ಮರಿ ಯನ್ನು ಬಿಚ್ಚುತ್ತಿರುವಾಗ ಆದರ ಯಜಮಾನರು ಅವರಿಗೆ--ನೀವು ಕತ್ತೇಮರಿಯನ್ನು ಯಾಕೆ ಬಿಚ್ಚುತ್ತೀರಿ ಎಂದು ಕೇಳಿದ್ದಕ್ಕೆ

34 And they said, Because the Lord has need of it.ಅವರು--ಅದು ಕರ್ತನಿಗೆ ಬೇಕಾಗಿದೆ ಅಂದರು.

35 And they led it to Jesus; and having cast their own garments on the colt, they put Jesus on [it].ಅವರು ಅದನ್ನು ಯೇಸು ವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಕತ್ತೇಮರಿಯ ಮೇಲೆ ಹಾಕಿ ಅದರ ಮೇಲೆ ಯೇಸುವನ್ನು ಕೂಡ್ರಿಸಿ ದರು.

36 And as he went, they strewed their clothes in the way.ಆತನು ಹೋಗುತ್ತಿರುವಾಗ ಅವರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು.

37 And as he drew near, already at the descent of the mount of Olives, all the multitude of the disciples began, rejoicing, to praise God with a loud voice for all the works of power which they had seen,ಇದಲ್ಲದೆ ಆತನು ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಸವಿಾಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ನೋಡಿದ್ದ ಎಲ್ಲಾ ಮಹತ್ಕಾರ್ಯಗಳಿಗಾಗಿ ಸಂತೋಷ ಪಡುತ್ತಾ ಮಹಾಧ್ವನಿಯಿಂದ ದೇವರನ್ನು ಕೊಂಡಾಡ ಲಾರಂಭಿಸಿ--

38 saying, Blessed the King that comes in the name of [the] Lord: peace in heaven, and glory in the highest.ಕರ್ತನ ಹೆಸರಿನಲ್ಲಿ ಬರುವ ಅರ ಸನು ಸ್ತುತಿಹೊಂದಲಿ; ಪರಲೋಕದಲ್ಲಿ ಸಮಾಧಾನ, ಮತ್ತು ಅತ್ಯುನ್ನತದಲ್ಲಿ ಮಹಿಮೆ ಎಂದು ಹೇಳಿದರು.

39 And some of the Pharisees from the crowd said to him, Teacher, rebuke thy disciples.ಜನಸಮೂಹದೊಳಗಿಂದ ಕೆಲವು ಫರಿಸಾಯರು ಆತನಿಗೆ--ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು ಅಂದರು.

40 And he answering said to them, I say unto you, If these shall be silent, the stones will cry out.ಆಗ ಆತನು ಪ್ರತ್ಯುತ್ತರವಾಗಿ ಅವ ರಿಗೆ--ಇವರು ಸುಮ್ಮನಿರುವದಾದರೆ ಈ ಕಲ್ಲುಗಳು ಕೂಡಲೆ ಕೂಗುವವು ಎಂದು ನಾನು ನಿಮಗೆ ಹೇಳು ತ್ತೇನೆ ಅಂದನು.

41 And as he drew near, seeing the city, he wept over it,ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು--

42 saying, If thou hadst known, even thou, even at least in this thy day, the things that are for thy peace: but now they are hid from thine eyes;ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ.

43 for days shall come upon thee, that thine enemies shall make a palisaded mound about thee, and shall close thee around, and keep thee in on every side,ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು.

44 and shall lay thee even with the ground, and thy children in thee; and shall not leave in thee a stone upon a stone: because thou knewest not the season of thy visitation.ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.

45 And entering into the temple, he began to cast out those that sold and bought in it,ಆತನು ದೇವಾಲಯದೊಳಕ್ಕೆ ಹೋಗಿ ಅದರಲ್ಲಿ ಮಾರುವವರನ್ನೂ ಕೊಂಡುಕೊಳ್ಳುವವರನ್ನೂ ಹೊರಗೆ ಹಾಕುವದಕ್ಕೆ ಪ್ರಾರಂಭಿಸಿ

46 saying to them, It is written, My house is a house of prayer, but *ye* have made it a den of robbers.ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಬರೆಯಲ್ಪಟ್ಟಿದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಅಂದನು.

47 And he was teaching day by day in the temple: and the chief priests and the scribes and the chief of the people sought to destroy him,ಇದಲ್ಲದೆ ಆತನು ಪ್ರತಿದಿನವೂ ದೇವಾಲಯ ದಲ್ಲಿ ಬೋಧಿಸುತ್ತಿದ್ದನು. ಆದರೆ ಪ್ರಧಾನಯಾಜಕರೂ ಶಾಸ್ತ್ರಿಗಳೂ ಜನರ ಪ್ರಮುಖರೂ ಆತನನ್ನು ಕೊಲ್ಲು ವದಕ್ಕೆ ಹವಣಿಸುತ್ತಿದ್ದರು.

48 and did not find what they could do, for all the people hung on him to hear.ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು.

Kannada Bible