Bible

Luke 21 - BBE (Kannada)

1 And looking up, he saw the men of wealth putting their offerings in the money-box.ಇದಲ್ಲದೆ ಐಶ್ವರ್ಯವಂತರು ತಮ್ಮ ಕಾಣಿಕೆಗಳನ್ನು ಬೊಕ್ಕಸದಲ್ಲಿ ಹಾಕುವದನ್ನು ಆತನು ಕಣ್ಣೆತ್ತಿ ನೋಡಿದನು.

2 And he saw a certain poor widow putting in a farthing.ಒಬ್ಬ ಬಡ ವಿಧವೆಯು ಸಹ ಎರಡು ಕಾಸುಗಳನ್ನು ಅದರಲ್ಲಿ ಹಾಕುವದನ್ನು ಆತನು ನೋಡಿದನು.

3 And he said, Truly I say to you, This poor widow has given more than all of them:ಆತನು--ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಈ ಬಡ ವಿಧವೆಯು ಅವರೆಲ್ಲರಿಗಿಂತಲೂ ಹೆಚ್ಚು ಹಾಕಿದ್ದಾಳೆ;

4 For they gave out of their wealth, having more than enough for themselves: but she, even out of her need, has put in all her living.ಯಾಕಂದರೆ ಇವರೆಲ್ಲರೂ ತಮಗಿರುವ ಸಮೃದ್ಧಿಯಲ್ಲಿ ದೇವರಿಗೆ ಕಾಣಿಕೆಗಳನ್ನು ಹಾಕಿದ್ದಾರೆ; ಆದರೆ ಈಕೆಯು ತನ್ನ ಬಡತನದಲ್ಲಿ ತನ್ನ ಜೀವನಕ್ಕೆ ಇದ್ದದ್ದನ್ನೆಲ್ಲಾ ಹಾಕಿದ್ದಾಳೆ ಅಂದನು.

5 And some were talking about the Temple, how it was made fair with beautiful stones and with offerings, but he said,ತರುವಾಯ ಕೆಲವರು ದೇವಾಲಯದ ವಿಷಯ ವಾಗಿ ಅದು ಎಂಥಾ ಒಳ್ಳೇ ಕಲ್ಲುಗಳಿಂದಲೂ ದಾನಗ ಳಿಂದಲೂ ಅಲಂಕೃತವಾಗಿದೆ ಎಂದು ಮಾತನಾಡು ತ್ತಿರುವಾಗ ಆತನು--

6 As for these things which you see, the days will come when not one stone will be resting on another, but all will be broken down.ನೀವು ನೋಡುತ್ತಿರುವ ಇವುಗ ಳಾದರೋ ಕೆಡವಲ್ಪಟ್ಟು ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಬಿಡಲ್ಪಡದ ದಿವಸಗಳು ಬರುವವು ಅಂದನು.

7 And they said to him, Master, when will these things be? and what sign will there be when these events are to take place?ಆಗ ಅವರು ಆತನಿಗೆ--ಬೋಧಕನೇ, ಇವುಗಳು ಯಾವಾಗ ಆಗುವವು? ಇವುಗಳು ಸಂಭವಿ ಸುವದಕ್ಕಿರುವಾಗ ಯಾವ ಸೂಚನೆ ಇರುವದು ಎಂದು ಕೇಳಿದರು.

8 And he said, Take care that you are not tricked: for a number of people will come in my name, saying, I am he; and, The time is near: do not go after them.ಅದಕ್ಕೆ ಆತನು--ನೀವು ಮೋಸ ಹೋಗ ದಂತೆ ಎಚ್ಚರಿಕೆ ತಂದುಕೊಳ್ಳಿರಿ; ಯಾಕಂದರೆ ಅನೇಕರು ನನ್ನ ಹೆಸರಿನಲ್ಲಿ ಬಂದು--ನಾನೇ ಕ್ರಿಸ್ತನು ಎಂದು ಹೇಳುವರು; ಸಮಯವು ಸವಿಾಪಿಸಿದೆ, ಆದಕಾರಣ ನೀವು ಅವರ ಹಿಂದೆ ಹೋಗಬೇಡಿರಿ.

9 And when news of wars and troubled times comes to your ears, have no fear; for these things have to be, but the end will not be now.ನೀವು ಯುದ್ಧಗಳ ಮತ್ತು ಕಲಹಗಳ ವಿಷಯವಾಗಿ ಕೇಳುವಾಗ ದಿಗಿಲುಪಡಬೇಡಿರಿ; ಯಾಕಂದರೆ ಇವುಗಳು ಮೊದಲು ಆಗುವದು ಅಗತ್ಯ; ಆದರೂ ಕೂಡಲೆ ಅಂತ್ಯ ಬರುವದಿಲ್ಲ ಅಂದನು.

10 Then he said to them, Nation will be moved against nation and kingdom against kingdom:ಆತನು ಅವರಿಗೆ--ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳು ವವು.

11 There will be great earth-shocks and outbursts of disease in a number of places, and men will be without food; and there will be wonders and great signs from heaven.ಬೇರೆ ಬೇರೆ ಸ್ಥಳಗಳಲ್ಲಿ ಮಹಾಭೂಕಂಪಗಳೂ ಬರಗಳೂ ವ್ಯಾಧಿಗಳೂ ಇರುವವು; ಭಯಹುಟ್ಟಿ ಸುವ ದೃಶ್ಯಗಳೂ ಮಹಾಸೂಚನೆಗಳೂ ಆಕಾಶದಿಂದ ಆಗುವವು.

12 But before all this, they will take you and be very cruel to you, giving you up to the Synagogues and to prisons, taking you before kings and rulers, because of my name.ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು ಹಿಂಸಿಸಿ ಸಭಾಮಂದಿರ ಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು.

13 And it will be turned to a witness for you.ಇದು ಸಾಕ್ಷಿಗೋಸ್ಕರ ನಿಮಗೆ ಪರಿಣಮಿ ಸುವದು.

14 So take care not to be troubled before the time comes, about what answers you will give:ಹೀಗಿರುವದರಿಂದ ನೀವು ಏನು ಉತ್ತರ ಕೊಡಬೇಕೆಂದು ಮುಂದಾಗಿ ಯೋಚಿಸಬಾರದೆಂದು ನಿಮ್ಮ ಹೃದಯಗಳಲ್ಲಿ ನಿಶ್ಚಯಮಾಡಿಕೊಳ್ಳಿರಿ.

15 For I will give you words and wisdom, so that not one of those who are against you will be able to get the better of you, or to put you in the wrong.ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು.

16 But you will be given up even by your fathers and mothers, your brothers and relations and friends; and some of you will be put to death.ಆದರೆ ತಂದೆ ತಾಯಿಗಳೂ ಸಹೋದರರೂ ಬಂಧುಗಳೂ ಸ್ನೇಹಿ ತರೂ ನಿಮ್ಮನ್ನು ಹಿಡಿದುಕೊಡುವರು; ನಿಮ್ಮಲ್ಲಿ ಕೆಲವ ರನ್ನು ಕೊಲ್ಲಿಸುವರು.

17 And you will be hated by all men, because of me.ನನ್ನ ಹೆಸರಿನ ನಿಮಿತ್ತವಾಗಿ ನಿಮ್ಮನ್ನು ಎಲ್ಲರೂ ದ್ವೇಷಿಸುವರು.

18 But not a hair of your head will come to destruction.ಆದರೆ ನಿಮ್ಮ ತಲೆಯ ಒಂದು ಕೂದಲಾದರೂ ನಾಶವಾಗುವದಿಲ್ಲ.

19 By going through all these things, you will keep your lives.ನೀವು ನಿಮ್ಮ ಸಹನೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತೀರಿ.

20 But when you see armies all round about Jerusalem, then be certain that her destruction is near.ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.

21 Then let those who are in Judaea go in flight to the mountains; and those who are in the middle of the town go out; and let not those who are in the country come in.ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಅದರ ಮಧ್ಯದಲ್ಲಿ ರುವವರು ಹೊರಟುಹೋಗಲಿ; ಇದಲ್ಲದೆ ಹಳ್ಳಿಗಳಲ್ಲಿ ಇರುವವರು ಅವುಗಳಲ್ಲಿ ಪ್ರವೇಶಿಸದೆ ಇರಲಿ.

22 For these are the days of punishment, in which all the things in the Writings will be put into effect.ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ.

23 It will be hard for women who are with child, and for her with a baby at the breast, in those days. For great trouble will come on the land, and wrath on this people.ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು.

24 And they will be put to death with the sword, and will be taken as prisoners into all the nations; and Jerusalem will be crushed under the feet of the Gentiles, till the times of the Gentiles are complete.ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.

25 And there will be signs in the sun and moon and stars; and on the earth, fear among the nations and doubt because of the loud noise of the sea and the waves;ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು.

26 Men's strength will go from them in fear and in waiting for the things which are coming on the earth; for the powers of the heavens will be moved.ಆಕಾಶದ ಶಕ್ತಿಗಳು ಕದಲಿಸಲ್ಪಡುವದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಸಂಭವಿಸುವದೋ ಎಂದು ಎದುರುನೋಡುತ್ತಾ ಪ್ರಾಣಹೋದಂತಾಗುವರು.

27 And then they will see the Son of man coming in a cloud, with power and great glory.ಆಗ ಮನುಷ್ಯಕು ಮಾರನು ಬಲದಿಂದಲೂ ಮಹಾ ಮಹಿಮೆ ಯಿಂದಲೂ ಕೂಡಿದವನಾಗಿ ಮೇಘದಲ್ಲಿ ಬರುವದನ್ನು ಅವರು ಕಾಣುವರು;

28 But when these things come about, let your heads be lifted up, because your salvation is near.ಆದರೆ ಈ ಸಂಗತಿಗಳು ಸಂಭವಿಸುವದಕ್ಕೆ ಪ್ರಾರಂಭಿಸಿದಾಗ ಮೇಲಕ್ಕೆ ನೋಡಿರಿ; ನಿಮ್ಮ ತಲೆಗಳನ್ನು ಎತ್ತಿರಿ; ಯಾಕಂದರೆ ನಿಮ್ಮ ವಿಮೋಚನೆಯು ಸವಿಾಪವಾಗಿದೆ ಅಂದನು.

29 And he made a story for them: See the fig-tree, and all the trees;ಆತನು ಅವರಿಗೆ ಒಂದು ಸಾಮ್ಯಕೊಟ್ಟು ಹೇಳಿದ್ದೇ ನಂದರೆ--ಅಂಜೂರದ ಮರವನ್ನು ಮತ್ತು ಎಲ್ಲಾ ಮರಗಳನ್ನು ನೋಡಿರಿ;

30 When they put out their young leaves, you take note of it, and it is clear to you that summer is coming.ಅವು ಚಿಗುರಿದಾಗ ನೀವು ನೋಡಿ ಬೇಸಿಗೆಯು ಹತ್ತಿರವಾಯಿತೆಂದು ನೀವೇ ನೀವಾಗಿ ತಿಳಿದುಕೊಳ್ಳುವಿರಿ.

31 In the same way, when you see these things taking place you may be certain that the kingdom of God is near.ಅದೇ ಪ್ರಕಾರ ಇವೆಲ್ಲವುಗಳು ಸಂಭವಿಸುವದನ್ನು ನೀವು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ತಿಳಿದುಕೊಳ್ಳಿರಿ.

32 Truly I say to you, This generation will not come to an end till all things are complete.ಎಲ್ಲವುಗಳು ನೆರವೇರುವ ವರೆಗೆ ಈ ಸಂತತಿಯು ಅಳಿದು ಹೋಗುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

33 Heaven and earth will come to an end, but my words will not come to an end.ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.

34 But give attention to yourselves, for fear that your hearts become over-full of the pleasures of food and wine, and the cares of this life, and that day may come on you suddenly, and take you as in a net:ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.

35 For so it will come on all those who are living on the face of all the earth.ಯಾಕಂದರೆ ಅದು ಭೂಮಿಯ ಮೇಲೆ ವಾಸವಾಗಿರುವವರೆಲ್ಲರ ಮೇಲೆ ಉರ್ಲಿನಂತೆ ಬರುವದು.

36 But keep watch at all times with prayer, that you may be strong enough to come through all these things and take your place before the Son of man.ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.

37 And every day he was teaching in the Temple and every night he went out to the mountain which is named the Mountain of Olives to take his rest.ಆತನು ಹಗಲಿನಲ್ಲಿ ದೇವಾಲಯದೊಳಗೆ ಬೋಧಿಸುತ್ತಾ ಇದ್ದು ರಾತ್ರಿಯಲ್ಲಿ ಹೊರಗೆ ಹೋಗಿ ಎಣ್ಣೇ ಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡ ದಲ್ಲಿ ವಾಸಿಸುತ್ತಿದ್ದನು.

38 And all the people came early in the morning to give ear to his words in the Temple.ಜನರೆಲ್ಲರೂ ಬೆಳಗಿನ ಜಾವದಲ್ಲಿ ಆತನ ಬಳಿಗೆ ದೇವಾಲಯದಲ್ಲಿ ಆತನ ಉಪದೇಶವನ್ನು ಕೇಳುವದಕ್ಕಾಗಿ ಬರುತ್ತಿದ್ದರು.

Kannada Bible