Luke 21 - YLT (Kannada)
1 And having looked up, he saw those who did cast their gifts to the treasury -- rich men,ಇದಲ್ಲದೆ ಐಶ್ವರ್ಯವಂತರು ತಮ್ಮ ಕಾಣಿಕೆಗಳನ್ನು ಬೊಕ್ಕಸದಲ್ಲಿ ಹಾಕುವದನ್ನು ಆತನು ಕಣ್ಣೆತ್ತಿ ನೋಡಿದನು.
2 and he saw also a certain poor widow casting there two mites,ಒಬ್ಬ ಬಡ ವಿಧವೆಯು ಸಹ ಎರಡು ಕಾಸುಗಳನ್ನು ಅದರಲ್ಲಿ ಹಾಕುವದನ್ನು ಆತನು ನೋಡಿದನು.
3 and he said, `Truly I say to you, that this poor widow did cast in more than all;ಆತನು--ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಈ ಬಡ ವಿಧವೆಯು ಅವರೆಲ್ಲರಿಗಿಂತಲೂ ಹೆಚ್ಚು ಹಾಕಿದ್ದಾಳೆ;
4 for all these out of their superabundance did cast into the gifts to God, but this one out of her want, all the living that she had, did cast in.'ಯಾಕಂದರೆ ಇವರೆಲ್ಲರೂ ತಮಗಿರುವ ಸಮೃದ್ಧಿಯಲ್ಲಿ ದೇವರಿಗೆ ಕಾಣಿಕೆಗಳನ್ನು ಹಾಕಿದ್ದಾರೆ; ಆದರೆ ಈಕೆಯು ತನ್ನ ಬಡತನದಲ್ಲಿ ತನ್ನ ಜೀವನಕ್ಕೆ ಇದ್ದದ್ದನ್ನೆಲ್ಲಾ ಹಾಕಿದ್ದಾಳೆ ಅಂದನು.
5 And certain saying about the temple, that with goodly stones and devoted things it hath been adorned, he said,ತರುವಾಯ ಕೆಲವರು ದೇವಾಲಯದ ವಿಷಯ ವಾಗಿ ಅದು ಎಂಥಾ ಒಳ್ಳೇ ಕಲ್ಲುಗಳಿಂದಲೂ ದಾನಗ ಳಿಂದಲೂ ಅಲಂಕೃತವಾಗಿದೆ ಎಂದು ಮಾತನಾಡು ತ್ತಿರುವಾಗ ಆತನು--
6 `These things that ye behold -- days will come, in which there shall not be left a stone upon a stone, that shall not be thrown down.'ನೀವು ನೋಡುತ್ತಿರುವ ಇವುಗ ಳಾದರೋ ಕೆಡವಲ್ಪಟ್ಟು ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಬಿಡಲ್ಪಡದ ದಿವಸಗಳು ಬರುವವು ಅಂದನು.
7 And they questioned him, saying, `Teacher, when, then, shall these things be? and what `is' the sign when these things may be about to happen?'ಆಗ ಅವರು ಆತನಿಗೆ--ಬೋಧಕನೇ, ಇವುಗಳು ಯಾವಾಗ ಆಗುವವು? ಇವುಗಳು ಸಂಭವಿ ಸುವದಕ್ಕಿರುವಾಗ ಯಾವ ಸೂಚನೆ ಇರುವದು ಎಂದು ಕೇಳಿದರು.
8 And he said, `See -- ye may not be led astray, for many shall come in my name, saying -- I am `he', and the time hath come nigh; go not on then after them;ಅದಕ್ಕೆ ಆತನು--ನೀವು ಮೋಸ ಹೋಗ ದಂತೆ ಎಚ್ಚರಿಕೆ ತಂದುಕೊಳ್ಳಿರಿ; ಯಾಕಂದರೆ ಅನೇಕರು ನನ್ನ ಹೆಸರಿನಲ್ಲಿ ಬಂದು--ನಾನೇ ಕ್ರಿಸ್ತನು ಎಂದು ಹೇಳುವರು; ಸಮಯವು ಸವಿಾಪಿಸಿದೆ, ಆದಕಾರಣ ನೀವು ಅವರ ಹಿಂದೆ ಹೋಗಬೇಡಿರಿ.
9 and when ye may hear of wars and uprisings, be not terrified, for it behoveth these things to happen first, but the end `is' not immediately.'ನೀವು ಯುದ್ಧಗಳ ಮತ್ತು ಕಲಹಗಳ ವಿಷಯವಾಗಿ ಕೇಳುವಾಗ ದಿಗಿಲುಪಡಬೇಡಿರಿ; ಯಾಕಂದರೆ ಇವುಗಳು ಮೊದಲು ಆಗುವದು ಅಗತ್ಯ; ಆದರೂ ಕೂಡಲೆ ಅಂತ್ಯ ಬರುವದಿಲ್ಲ ಅಂದನು.
10 Then said he to them, `Nation shall rise against nation, and kingdom against kingdom,ಆತನು ಅವರಿಗೆ--ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳು ವವು.
11 great shakings also in every place, and famines, and pestilences, there shall be; fearful things also, and great signs from heaven there shall be;ಬೇರೆ ಬೇರೆ ಸ್ಥಳಗಳಲ್ಲಿ ಮಹಾಭೂಕಂಪಗಳೂ ಬರಗಳೂ ವ್ಯಾಧಿಗಳೂ ಇರುವವು; ಭಯಹುಟ್ಟಿ ಸುವ ದೃಶ್ಯಗಳೂ ಮಹಾಸೂಚನೆಗಳೂ ಆಕಾಶದಿಂದ ಆಗುವವು.
12 and before all these, they shall lay on you their hands, and persecute, delivering up to synagogues and prisons, being brought before kings and governors for my name's sake;ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು ಹಿಂಸಿಸಿ ಸಭಾಮಂದಿರ ಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು.
13 and it shall become to you for a testimony.ಇದು ಸಾಕ್ಷಿಗೋಸ್ಕರ ನಿಮಗೆ ಪರಿಣಮಿ ಸುವದು.
14 `Settle, then, to your hearts, not to meditate beforehand to reply,ಹೀಗಿರುವದರಿಂದ ನೀವು ಏನು ಉತ್ತರ ಕೊಡಬೇಕೆಂದು ಮುಂದಾಗಿ ಯೋಚಿಸಬಾರದೆಂದು ನಿಮ್ಮ ಹೃದಯಗಳಲ್ಲಿ ನಿಶ್ಚಯಮಾಡಿಕೊಳ್ಳಿರಿ.
15 for I will give to you a mouth and wisdom that all your opposers shall not be able to refute or resist.ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು.
16 `And ye shall be delivered up also by parents, and brothers, and kindred, and friends, and they shall put of you to death;ಆದರೆ ತಂದೆ ತಾಯಿಗಳೂ ಸಹೋದರರೂ ಬಂಧುಗಳೂ ಸ್ನೇಹಿ ತರೂ ನಿಮ್ಮನ್ನು ಹಿಡಿದುಕೊಡುವರು; ನಿಮ್ಮಲ್ಲಿ ಕೆಲವ ರನ್ನು ಕೊಲ್ಲಿಸುವರು.
17 and ye shall be hated by all because of my name --ನನ್ನ ಹೆಸರಿನ ನಿಮಿತ್ತವಾಗಿ ನಿಮ್ಮನ್ನು ಎಲ್ಲರೂ ದ್ವೇಷಿಸುವರು.
18 and a hair out of your head shall not perish;ಆದರೆ ನಿಮ್ಮ ತಲೆಯ ಒಂದು ಕೂದಲಾದರೂ ನಾಶವಾಗುವದಿಲ್ಲ.
19 in your patience possess ye your souls.ನೀವು ನಿಮ್ಮ ಸಹನೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತೀರಿ.
20 `And when ye may see Jerusalem surrounded by encampments, then know that come nigh did her desolation;ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.
21 then those in Judea, let them flee to the mountains; and those in her midst, let them depart out; and those in the countries, let them not come in to her;ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಅದರ ಮಧ್ಯದಲ್ಲಿ ರುವವರು ಹೊರಟುಹೋಗಲಿ; ಇದಲ್ಲದೆ ಹಳ್ಳಿಗಳಲ್ಲಿ ಇರುವವರು ಅವುಗಳಲ್ಲಿ ಪ್ರವೇಶಿಸದೆ ಇರಲಿ.
22 because these are days of vengeance, to fulfil all things that have been written.ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ.
23 `And wo to those with child, and to those giving suck, in those days; for there shall be great distress on the land, and wrath on this people;ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು.
24 and they shall fall by the mouth of the sword, and shall be led captive to all the nations, and Jerusalem shall be trodden down by nations, till the times of nations be fulfilled.ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
25 `And there shall be signs in sun, and moon, and stars, and on the land `is' distress of nations with perplexity, sea and billow roaring;ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು.
26 men fainting at heart from fear, and expectation of the things coming on the world, for the powers of the heavens shall be shaken.ಆಕಾಶದ ಶಕ್ತಿಗಳು ಕದಲಿಸಲ್ಪಡುವದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಸಂಭವಿಸುವದೋ ಎಂದು ಎದುರುನೋಡುತ್ತಾ ಪ್ರಾಣಹೋದಂತಾಗುವರು.
27 `And then they shall see the Son of Man, coming in a cloud, with power and much glory;ಆಗ ಮನುಷ್ಯಕು ಮಾರನು ಬಲದಿಂದಲೂ ಮಹಾ ಮಹಿಮೆ ಯಿಂದಲೂ ಕೂಡಿದವನಾಗಿ ಮೇಘದಲ್ಲಿ ಬರುವದನ್ನು ಅವರು ಕಾಣುವರು;
28 and these things beginning to happen bend yourselves back, and lift up your heads, because your redemption doth draw nigh.'ಆದರೆ ಈ ಸಂಗತಿಗಳು ಸಂಭವಿಸುವದಕ್ಕೆ ಪ್ರಾರಂಭಿಸಿದಾಗ ಮೇಲಕ್ಕೆ ನೋಡಿರಿ; ನಿಮ್ಮ ತಲೆಗಳನ್ನು ಎತ್ತಿರಿ; ಯಾಕಂದರೆ ನಿಮ್ಮ ವಿಮೋಚನೆಯು ಸವಿಾಪವಾಗಿದೆ ಅಂದನು.
29 And he spake a simile to them: `See the fig-tree, and all the trees,ಆತನು ಅವರಿಗೆ ಒಂದು ಸಾಮ್ಯಕೊಟ್ಟು ಹೇಳಿದ್ದೇ ನಂದರೆ--ಅಂಜೂರದ ಮರವನ್ನು ಮತ್ತು ಎಲ್ಲಾ ಮರಗಳನ್ನು ನೋಡಿರಿ;
30 when they may now cast forth, having seen, of yourselves ye know that now is the summer nigh;ಅವು ಚಿಗುರಿದಾಗ ನೀವು ನೋಡಿ ಬೇಸಿಗೆಯು ಹತ್ತಿರವಾಯಿತೆಂದು ನೀವೇ ನೀವಾಗಿ ತಿಳಿದುಕೊಳ್ಳುವಿರಿ.
31 so also ye, when ye may see these things happening, ye know that near is the reign of God;ಅದೇ ಪ್ರಕಾರ ಇವೆಲ್ಲವುಗಳು ಸಂಭವಿಸುವದನ್ನು ನೀವು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ತಿಳಿದುಕೊಳ್ಳಿರಿ.
32 verily I say to you -- This generation may not pass away till all may have come to pass;ಎಲ್ಲವುಗಳು ನೆರವೇರುವ ವರೆಗೆ ಈ ಸಂತತಿಯು ಅಳಿದು ಹೋಗುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
33 the heaven and the earth shall pass away, but my words may not pass away.ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.
34 `And take heed to yourselves, lest your hearts may be weighed down with surfeiting, and drunkenness, and anxieties of life, and suddenly that day may come on you,ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
35 for as a snare it shall come on all those dwelling on the face of all the land,ಯಾಕಂದರೆ ಅದು ಭೂಮಿಯ ಮೇಲೆ ವಾಸವಾಗಿರುವವರೆಲ್ಲರ ಮೇಲೆ ಉರ್ಲಿನಂತೆ ಬರುವದು.
36 watch ye, then, in every season, praying that ye may be accounted worthy to escape all these things that are about to come to pass, and to stand before the Son of Man.'ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.
37 And he was during the days in the temple teaching, and during the nights, going forth, he was lodging at the mount called of Olives;ಆತನು ಹಗಲಿನಲ್ಲಿ ದೇವಾಲಯದೊಳಗೆ ಬೋಧಿಸುತ್ತಾ ಇದ್ದು ರಾತ್ರಿಯಲ್ಲಿ ಹೊರಗೆ ಹೋಗಿ ಎಣ್ಣೇ ಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡ ದಲ್ಲಿ ವಾಸಿಸುತ್ತಿದ್ದನು.
38 and all the people were coming early unto him in the temple to hear him.ಜನರೆಲ್ಲರೂ ಬೆಳಗಿನ ಜಾವದಲ್ಲಿ ಆತನ ಬಳಿಗೆ ದೇವಾಲಯದಲ್ಲಿ ಆತನ ಉಪದೇಶವನ್ನು ಕೇಳುವದಕ್ಕಾಗಿ ಬರುತ್ತಿದ್ದರು.
Kannada Bible