Luke 23 - DBY (Kannada)
1 And the whole multitude of them, rising up, led him to Pilate.ಆಗ ಜನಸಮೂಹವೆಲ್ಲವೂ ಎದ್ದು ಆತನನ್ನು ಪಿಲಾತನ ಬಳಿಗೆ ತೆಗೆದು ಕೊಂಡು ಹೋದರು.
2 And they began to accuse him, saying, We have found this [man] perverting our nation, and forbidding to give tribute to Caesar, saying that he himself is Christ, a king.ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.
3 And Pilate demanded of him saying, Art *thou* the king of the Jews? And he answering him said, Thou sayest.ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವನಿಗೆ--ನೀನೇ ಹೇಳುತ್ತೀ ಅಂದನು.
4 And Pilate said to the chief priests and the crowds, I find no guilt in this man.ತರುವಾಯ ಪಿಲಾತನು ಪ್ರಧಾ ನಯಾಜಕರಿಗೂ ಜನರಿಗೂ--ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ ಅಂದನು.
5 But they insisted, saying, He stirs up the people, teaching throughout all Judaea, beginning from Galilee even on to here.ಅದಕ್ಕೆ ಅವರು ಹೆಚ್ಚು ಉಗ್ರತೆಯಿಂದ--ಈತನು ಗಲಿಲಾಯ ಮೊದಲುಗೊಂಡು ಈ ಸ್ಥಳದ ವರೆಗೂ ಎಲ್ಲಾ ಯೂದಾ ಯದಲ್ಲಿ ಬೋಧಿಸುತ್ತಾ ಜನರನ್ನು ರೇಗಿಸುತ್ತಾನೆ ಎಂದು ಹೇಳಿದರು.
6 But Pilate, having heard Galilee [named], demanded if the man were a Galilaean;ಪಿಲಾತನು ಗಲಿಲಾಯದ ವಿಷಯ ವಾಗಿ ಕೇಳಿ--ಆ ಮನುಷ್ಯನು ಗಲಿಲಾಯದವನೋ ಎಂದು ಅವನು ವಿಚಾರಿಸಿ
7 and having learned that he was of Herod's jurisdiction, remitted him to Herod, who himself also was at Jerusalem in those days.ಆತನು ಹೆರೋದನ ಅಧಿಕಾರದ ವಿಭಾಗಕ್ಕೆ ಸಂಬಂಧಪಟ್ಟವನೆಂದು ತಿಳಿದ ಕೂಡಲೆ ಆ ಸಮಯದಲ್ಲಿ ಯೆರೂಸಲೇಮಿನಲ್ಲಿಯೇ ಇದ್ದ ಹೆರೋದನ ಬಳಿಗೆ ಆತನನ್ನು ಕಳುಹಿಸಿದನು.
8 And when Herod saw Jesus he greatly rejoiced, for he had been a long while desirous of seeing him, because of hearing many things concerning him, and he hoped to see some sign done by him;ಹೆರೋದನು ಯೇಸುವನ್ನು ನೋಡಿದಾಗ ಅತ್ಯಂತ ಸಂತೋಷಪಟ್ಟನು; ಯಾಕಂದರೆ ಅವನು ಆತನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ ಆತನನ್ನು ನೋಡುವಂತೆ ಬಹಳ ಕಾಲದಿಂದ ಆಶೆಪಟ್ಟಿ ದ್ದನು. ಆತನಿಂದಾಗುವ ಅದ್ಭುತ ಕಾರ್ಯವನ್ನು ನೋಡ ಲು ನಿರೀಕ್ಷಿಸುತ್ತಿದ್ದನು.
9 and he questioned him in many words, but *he* answered him nothing.ಆಗ ಅವನು ಆತನನ್ನು ಅನೇಕ ಮಾತುಗಳಿಂದ ಪ್ರಶ್ನಿಸಿದಾಗ್ಯೂ ಆತನು ಅವನಿಗೆ ಏನೂ ಉತ್ತರಕೊಡಲಿಲ್ಲ.
10 And the chief priests and the scribes stood and accused him violently.ಆಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ನಿಂತುಕೊಂಡು ಉಗ್ರತೆಯಿಂದ ಆತನ ಮೇಲೆ ದೂರು ಹೇಳಿದರು.
11 And Herod with his troops having set him at nought and mocked him, having put a splendid robe upon him, sent him back to Pilate.ಹೆರೋದನು ತನ್ನ ಯುದ್ಧಭಟರೊಂದಿಗೆ ಆತನನ್ನು ತಿರಸ್ಕರಿಸಿ ಹಾಸ್ಯಮಾಡಿ ಆತನ ಮೇಲೆ ಶೋಭಾಯಮಾನವಾದ ವಸ್ತ್ರವನ್ನು ಹೊದಿಸಿ ಆತನನ್ನು ತಿರಿಗಿ ಪಿಲಾತನ ಬಳಿಗೆ ಕಳುಹಿಸಿ ದನು.
12 And Pilate and Herod became friends with one another the same day, for they had been at enmity before between themselves.ಇದಲ್ಲದೆ ಪಿಲಾತನು ಹೆರೋದನು ಅದೇ ದಿನದಲ್ಲಿ ಒಬ್ಬರಿಗೊಬ್ಬರು ಸ್ನೇಹಿತರಾದರು; ಯಾಕಂ ದರೆ ಅವರಲ್ಲಿ ಮೊದಲು ಹಗೆತನವಿತ್ತು.
13 And Pilate, having called together the chief priests and the rulers and the people,ಪಿಲಾತನು ಪ್ರಧಾನಯಾಜಕರನ್ನೂ ಅಧಿಕಾರಿಗಳ ನ್ನೂ ಜನರನ್ನೂ ಒಟ್ಟಾಗಿ ಕರೆಸಿ ಅವರಿಗೆ--
14 said to them, Ye have brought to me this man as turning away the people [to rebellion], and behold, I, having examined him before you, have found nothing criminal in this man as to the things of which ye accuse him;ಜನರು ತಿರಿಗಿ ಬೀಳುವಂತೆ ಮಾಡುತ್ತಾನೆಂದು ನೀವು ಈ ಮನುಷ್ಯನನ್ನು ನನ್ನ ಬಳಿಗೆ ತಂದಿದ್ದೀರಿ; ಇಗೋ, ನೀವು ಈತನ ಮೇಲೆ ತಂದಿರುವ ದೂರುಗಳನ್ನು ನಾನು ನಿಮ್ಮ ಮುಂದೆಯೇ ವಿಚಾರಿಸಿದಾಗ ಈತನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ.
15 nor Herod either, for I remitted you to him, and behold, nothing worthy of death is done by him.ಮಾತ್ರವಲ್ಲದೆ ಹೆರೋದ ನಿಗೆ ಸಹ ಯಾವದೂ ಕಾಣಲಿಲ್ಲ; ಯಾಕಂದರೆ ನಾನು ನಿಮ್ಮನ್ನು ಅವನ ಬಳಿಗೆ ಕಳುಹಿಸಿದೆನು; ಇಗೋ, ಅವನೂ ಆತನಲ್ಲಿ ಮರಣಕ್ಕೆ ಯೋಗ್ಯವಾದದ್ದೇನೂ ಕಾಣಲಿಲ್ಲ.
16 Having chastised him therefore, I will release him.ಹೀಗಿರುವದರಿಂದ ನಾನು ಆತನನ್ನು ಹೊಡಿಸಿ ಬಿಟ್ಟುಬಿಡುವೆನು ಅಂದನು.
17 ( Now he was obliged to release one for them at the feast.)ಯಾಕಂದರೆ ಅಧಿಪತಿಯು ಒಬ್ಬನನ್ನು ಹಬ್ಬದಲ್ಲಿ ಅವರಿಗಾಗಿ ಬಿಡಿಸು ವದು ಅವಶ್ಯವಾಗಿತ್ತು).
18 But they cried out in a mass saying, Away with this [man] and release Barabbas to us;ಆಗ ಅವರೆಲ್ಲರೂ ಆ ಕ್ಷಣವೇ--ಈತನನ್ನು ತೆಗೆದುಹಾಕಿ ನಮಗೆ ಬರಬ್ಬ ನನ್ನು ಬಿಟ್ಟುಕೊಡು ಎಂದು ಕೂಗುತ್ತಾ ಹೇಳಿದರು.
19 who was one who, for a certain tumult which had taken place in the city, and [for] murder, had been cast into prison.(ಬರಬ್ಬನು ಪಟ್ಟಣದಲ್ಲಿ ನಡೆದ ಒಂದಾನೊಂದು ದಂಗೆಯ ಮತ್ತು ಕೊಲೆಯ ನಿಮಿತ್ತ ಸೆರೆಯಲ್ಲಿ ಹಾಕಲ್ಪ ಟ್ಟವನಾಗಿದ್ದನು).
20 Pilate therefore, desirous to release Jesus, again addressed [them].ಆದದರಿಂದ ಪಿಲಾತನು ಯೇಸು ವನ್ನು ಬಿಡಿಸಬೇಕೆಂದು ಮನಸ್ಸುಳ್ಳವನಾಗಿ ಮತ್ತೊಮ್ಮೆ ಅವರೊಂದಿಗೆ ಮಾತನಾಡಿದನು.
21 But they cried out in reply saying, Crucify, crucify him.ಆದರೆ ಅವರು--ಅವನನ್ನು ಶಿಲುಬೆಗೆ ಹಾಕಿಸು, ಅವನನ್ನು ಶಿಲುಬೆಗೆ ಹಾಕಿಸು ಎಂದು ಕೂಗುತ್ತಾ ಹೇಳಿದರು.
22 And he said the third time to them, What evil then has this [man] done? I have found no cause of death in him: I will chastise him therefore and release him.ಆದರೆ ಅವನು ಮೂರನೆಯ ಸಾರಿ ಅವ ರಿಗೆ--ಯಾಕೆ? ಈತನು ಕೆಟ್ಟದ್ದೇನು ಮಾಡಿದ್ದಾನೆ? ಈತನಲ್ಲಿ ಮರಣಕ್ಕೆ ಕಾರಣವಾದದ್ದೇನೂ ನನಗೆ ಕಾಣ ಲಿಲ್ಲ; ಆದದರಿಂದ ನಾನು ಈತನನ್ನು ಹೊಡಿಸಿ ಬಿಟ್ಟು ಬಿಡುತ್ತೇನೆ ಅಂದನು.
23 But they were urgent with loud voices, begging that he might be crucified. And their voices [and those of the chief priests] prevailed.ಆದರೆ ಆತನು ಶಿಲುಬೆಗೆ ಹಾಕಲ್ಪಡಬೇಕೆಂದು ಅವರು ಮಹಾಧ್ವನಿಯಿಂದ ಒತ್ತಾಯ ಮಾಡಿದರು. ಹೀಗೆ ಅವರ ಕೂಗಾಟವೂ ಪ್ರಧಾನಯಾಜಕರ ಕೂಗಾಟವೂ ಗೆದ್ದಿತು.
24 And Pilate adjudged that what they begged should take place.ಆಗ ಪಿಲಾತನು ಅವರು ಕೇಳಿಕೊಂಡಂತೆ ಆಗಲಿ ಎಂದು ನಿರ್ಣಯಿಸಿದನು.
25 And he released him who, for tumult and murder, had been cast into prison, whom they begged for, and Jesus he delivered up to their will.ಇದಲ್ಲದೆ ಅವರು ಇಷ್ಟಪಟ್ಟವ ನನ್ನು ಅಂದರೆ ದಂಗೆಯ ಮತ್ತು ಕೊಲೆಯ ನಿಮಿತ್ತ ಸೆರೆಮನೆಯೊಳಗೆ ಹಾಕಲ್ಪಟ್ಟವನನ್ನು ಅವರಿಗೆ ಬಿಟ್ಟು ಕೊಟ್ಟು ಯೇಸುವನ್ನು ಅವರ ಇಷ್ಟಕ್ಕೆ ಒಪ್ಪಿಸಿದನು.
26 And as they led him away, they laid hold on a certain Simon, a Cyrenian, coming from the field, and put the cross upon him to bear it behind Jesus.ಅವರು ಆತನನ್ನು ತೆಗೆದುಕೊಂಡು ಹೋಗುತ್ತಿ ರುವಾಗ ಹೊಲದಿಂದ ಬರುತ್ತಿದ್ದ ಕುರೇನ್ಯದವನಾದ ಸೀಮೋನನೆಂಬವನನ್ನು ಹಿಡಿದು ಅವನ ಮೇಲೆ ಶಿಲು ಬೆಯನ್ನು ಇಟ್ಟು ಯೇಸುವಿನ ಹಿಂದೆ ಹೊತ್ತುಕೊಂಡು ಹೋಗುವಂತೆ ಮಾಡಿದರು.
27 And a great multitude of the people, and of women who wailed and lamented him, followed him.ಆಗ ಜನರ ದೊಡ್ಡ ಗುಂಪೂ ಸ್ತ್ರೀಯರೂ ಆತನಿ ಗಾಗಿ ಶೋಕಿಸುತ್ತಾ ಗೋಳಾಡುತ್ತಾ ಆತನನ್ನು ಹಿಂಬಾ ಲಿಸಿದರು.
28 And Jesus turning round to them said, Daughters of Jerusalem, do not weep over me, but weep over yourselves and over your children;ಆದರೆ ಯೇಸು ಅವರ ಕಡೆಗೆ ತಿರುಗಿ ಕೊಂಡು--ಯೆರೂಸಲೇಮಿನ ಕುಮಾರ್ತೆಯರೇ, ನನ ಗಾಗಿ ಅಳಬೇಡಿರಿ; ಆದರೆ ನಿಮಗಾಗಿಯೂ ನಿಮ್ಮ ಮಕ್ಕಳಿಗಾಗಿಯೂ ಅಳಿರಿ.
29 for behold, days are coming in which they will say, Blessed [are] the barren, and wombs that have not borne, and breasts that have not given suck.ಯಾಕಂದರೆ--ಇಗೋ, ಬಂಜೆಯರೂ ಎಂದಿಗೂ ಗರ್ಭಿಣಿಯಾಗದವರೂ ಎಂದಿಗೂ ಮೊಲೆ ಕುಡಿಸದವರೂ ಧನ್ಯರು ಎಂದು ಹೇಳುವ ದಿವಸಗಳು ಬರುತ್ತವೆ.
30 Then shall they begin to say to the mountains, Fall upon us; and to the hills, Cover us:ಆಗ ಅವರು ಬೆಟ್ಟಗಳಿಗೆ--ನಮ್ಮ ಮೇಲೆ ಬೀಳಿರಿ; ಗುಡ್ಡಗಳಿಗೆ-- ನಮ್ಮನ್ನು ಮುಚ್ಚಿಕೊಳ್ಳಿರಿ ಎಂದು ಹೇಳಲಾರಂಭಿಸು ವರು.
31 for if these things are done in the green tree, what shall take place in the dry?ಅವರು ಹಸಿರಾಗಿರುವ ಮರಕ್ಕೆ ಇವುಗಳನ್ನು ಮಾಡಿದರೆ ಒಣಗಿದ ಮರಕ್ಕೆ ಏನು ಮಾಡಿಯಾರು ಅಂದನು.
32 Now two others also, malefactors, were led with him to be put to death.ಇದಲ್ಲದೆ ದುಷ್ಕರ್ಮಿಗಳಾದ ಬೇರೆ ಇಬ್ಬರನ್ನು ಆತನೊಂದಿಗೆ ಕೊಲ್ಲುವದಕ್ಕಾಗಿ ತೆಗೆದುಕೊಂಡು ಹೋದರು.
33 And when they came to the place which is called Skull, there they crucified him, and the malefactors, one on the right hand, the other on the left.ಅವರು ಕಲ್ವಾರಿ ಎಂದು ಕರೆಯಲ್ಪಡುವ ಸ್ಥಳಕ್ಕೆ ಬಂದಾಗ ಅಲ್ಲಿ ಆತನನ್ನು ಮತ್ತು ಆ ದುಷ್ಕರ್ಮಿಗಳಲ್ಲಿ ಒಬ್ಬನನ್ನು ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆ ಯಲ್ಲಿ ಶಿಲುಬೆಗೆ ಹಾಕಿದರು.
34 And Jesus said, Father, forgive them, for they know not what they do. And, parting out his garments, they cast lots.ಆಗ ಯೇಸು--ತಂದೆಯೇ, ಅವರನ್ನು ಕ್ಷಮಿಸು; ಯಾಕಂದರೆ ತಾವು ಏನು ಮಾಡುತ್ತೇವೆಂದು ಅವರು ಅರಿಯರು ಅಂದನು. ಅವರು ಆತನ ಉಡುಪನ್ನು ಪಾಲು ಮಾಡಿ ಚೀಟು ಹಾಕಿದರು.
35 And the people stood beholding, and the rulers also [with them] sneered, saying, He has saved others; let him save himself if this is the Christ, the chosen one of God.ಜನರು ನೋಡುತ್ತಾ ನಿಂತುಕೊಂಡಿ ದ್ದರು. ಆಗ ಅವರೊಂದಿಗೆ ಅಧಿಕಾರಿಗಳು ಸಹ ಆತ ನಿಗೆ ಅಪಹಾಸ್ಯ ಮಾಡಿ--ಈತನು ಬೇರೆಯವರನ್ನು ರಕ್ಷಿಸಿದನು; ಇವನು ದೇವರು ಆರಿಸಿಕೊಂಡ ಕ್ರಿಸ್ತನಾಗಿ ದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ ಅಂದರು.
36 And the soldiers also made game of him, coming up offering him vinegar,ಸೈನಿ ಕರು ಸಹ ಆತನ ಬಳಿಗೆ ಬಂದು ಆತನಿಗೆ ಹಾಸ್ಯ ಮಾಡಿ ಹುಳಿರಸವನ್ನು ಕೊಟ್ಟು
37 and saying, If *thou* be the king of the Jews, save thyself.ಆತನಿಗೆ--ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನೇ ರಕ್ಷಿಸಿಕೋ ಅಂದರು.
38 And there was also an inscription [written] over him in Greek, and Roman, and Hebrew letters: This is the King of the Jews.ಇದಲ್ಲದೆ ಆತನ ಮೇಲ್ಗಡೆಯಲ್ಲಿ--ಈತನು ಯೆಹೂದ್ಯರ ಅರಸನು ಎಂಬ ಮೇಲ್ಬರಹವು ಸಹ ಗ್ರೀಕ್ ಲ್ಯಾಟಿನ್ ಮತ್ತು ಇಬ್ರಿಯ ಅಕ್ಷರಗಳಲ್ಲಿ ಬರೆಯಲ್ಪಟ್ಟಿತ್ತು.
39 Now one of the malefactors who had been hanged spoke insultingly to him, saying, Art not thou the Christ? save thyself and us.ತೂಗುಹಾಕಲ್ಪಟ್ಟಿದ್ದ ದುಷ್ಕರ್ಮಿಗಳಲ್ಲಿ ಒಬ್ಬನು ಆತನನ್ನು ದೂಷಿಸಿ--ನೀನು ಕ್ರಿಸ್ತನಾಗಿದ್ದರೆ ನಿನ್ನನ್ನು ರಕ್ಷಿಸಿಕೊಂಡು ನಮ್ಮನ್ನೂ ರಕ್ಷಿಸು ಅಂದನು.
40 But the other answering rebuked him, saying, Dost *thou* too not fear God, thou that art under the same judgment?ಆದರೆ ಮತ್ತೊಬ್ಬನು ಪ್ರತ್ಯುತ್ತರವಾಗಿ ಅವನನ್ನು ಗದರಿಸಿ--ನೀನು ಇದೇ ದಂಡನೆಯಲ್ಲಿರುವದನ್ನು ನೋಡಿಯೂ ದೇವರಿಗೆ ಭಯಪಡುವದಿಲ್ಲವೋ?
41 and *we* indeed justly, for we receive the just recompense of what we have done; but this [man] has done nothing amiss.ನಾವಂತೂ ನ್ಯಾಯವಾಗಿಯೇ ನಮ್ಮ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಹೊಂದುತ್ತಾ ಇದ್ದೇವೆ; ಈತನಾದರೋ ತಪ್ಪಾದದ್ದೇನೂ ಮಾಡಲಿಲ್ಲ ಅಂದನು.
42 And he said to Jesus, Remember me, [Lord,] when thou comest in thy kingdom.ಇದಲ್ಲದೆ ಅವನು ಯೇಸು ವಿಗೆ--ಕರ್ತನೇ, ನೀನು ನಿನ್ನ ರಾಜ್ಯದಲ್ಲಿ ಬರುವಾಗ ನನ್ನನ್ನು ನೆನಪು ಮಾಡಿಕೋ ಅಂದನು.
43 And Jesus said to him, Verily I say to thee, To-day shalt thou be with me in paradise.ಆಗ ಯೇಸು ಅವನಿಗೆ--ಈ ದಿನವೇ ನೀನು ನನ್ನೊಂದಿಗೆ ಪರದೈಸಿನಲ್ಲಿರುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
44 And it was about [the] sixth hour, and there came darkness over the whole land until [the] ninth hour.ಆಗ ಸುಮಾರು ಆರನೇತಾಸಾಗಿತ್ತು; ಒಂಭತ್ತನೇ ತಾಸಿನವರೆಗೆ ಭೂಮಿಯ ಮೇಲೆಲ್ಲಾ ಕತ್ತಲೆ ಕವಿಯಿತು.
45 And the sun was darkened, and the veil of the temple rent in the midst.ಇದಲ್ಲದೆ ಸೂರ್ಯನು ಕತ್ತಲಾದನು; ದೇವಾಲಯದ ತೆರೆಯು ಮಧ್ಯದಲ್ಲಿ ಹರಿಯಿತು.
46 And Jesus, having cried with a loud voice, said, Father, into thy hands I commit my spirit. And having said this, he expired.ಯೇಸು ಮಹಾಧ್ವನಿಯಿಂದ--ತಂದೆಯೇ, ನಾನು ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ ಎಂದು ಕೂಗಿ ಹೇಳಿದನು; ಹೀಗೆ ಹೇಳಿದ ಮೇಲೆ ಆತನು ಪ್ರಾಣಬಿಟ್ಟನು.
47 Now the centurion, seeing what took place, glorified God, saying, In very deed this man was just.ಆಗ ಶತಾಧಿ ಪತಿಯು ನಡೆದದ್ದನ್ನು ನೋಡಿ--ನಿಶ್ಚಯವಾಗಿ ಈತನು ನೀತಿವಂತನಾಗಿದ್ದನು ಎಂದು ಹೇಳಿ ದೇವರನ್ನು ಮಹಿಮೆಪಡಿಸಿದನು.
48 And all the crowds who had come together to that sight, having seen the things that took place, returned, beating [their] breasts.ಆ ನೋಟಕ್ಕಾಗಿ ಬಂದಿದ್ದ ಎಲ್ಲಾ ಜನರು ನಡೆದ ಸಂಭವಗಳನ್ನು ನೋಡುತ್ತಾ ತಮ್ಮ ಎದೆಗಳನ್ನು ಬಡುಕೊಂಡು ಹಿಂದಿರುಗಿದರು.
49 And all those who knew him stood afar off, the women also who had followed him from Galilee, beholding these things.ಆತನಿಗೆ ಪರಿಚಯವಿದ್ದವರೆಲ್ಲರೂ ಗಲಿಲಾಯ ದಿಂದ ಆತನನ್ನು ಹಿಂಬಾಲಿಸಿದ ಸ್ತ್ರೀಯರೂ ದೂರದಲ್ಲಿ ನಿಂತು ಇವುಗಳನ್ನು ನೋಡುತ್ತಿದ್ದರು.
50 And behold, a man named Joseph, who was a councillor, a good man and a justಆಗ ಇಗೋ, ಅಲ್ಲಿ ಯೋಸೇಫನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು; ಅವನು ಆಲೋಚನಾ ಸಭೆಯವನೂ ಒಳ್ಳೆಯವನೂ ನೀತಿವಂತನೂ ಆಗಿ ದ್ದನು.
51 (this [man] had not assented to their counsel and deed), of Arimathaea, a city of the Jews, who also waited, [himself also,] for the kingdom of Godಇವನು ಯೆಹೂದ್ಯರ ಪಟ್ಟಣವಾದ ಅರಿಮ ಥಾಯದವನೂ ದೇವರ ರಾಜ್ಯಕ್ಕಾಗಿ ಎದುರು ನೋಡು ವವನೂ ಆಗಿದ್ದನು. (ಅವನು ಅವರ ಆಲೋಚನೆಗೂ ಕೃತ್ಯಕ್ಕೂ ಒಪ್ಪಿಕೊಂಡಿರಲಿಲ್ಲ.)
52 -- he having gone to Pilate begged the body of Jesus;ಇವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿ ಕೊಂಡನು.
53 and having taken it down, wrapped it in fine linen and placed him in a tomb hewn in the rock, where no one had ever been laid.ಇವನು ಅದನ್ನು ಕೆಳಗೆ ಇಳಿಸಿ ನಾರು ಬಟ್ಟೆಯಲ್ಲಿ ಸುತ್ತಿ ಬಂಡೆಯಲ್ಲಿ ತೋಡಿದ ಸಮಾಧಿಯಲ್ಲಿ ಇಟ್ಟನು. ಮೊದಲು ಯಾರನ್ನೂ ಅದರಲ್ಲಿ ಇಟ್ಟಿರಲಿಲ್ಲ.
54 And it was preparation day, and [the] sabbath twilight was coming on.ಸಬ್ಬತ್ತಿಗೆ ಸವಿಾಪವಾಗಿದ್ದ ಆ ದಿನವು ಸಿದ್ಧತೆಯ ದಿನವಾಗಿತ್ತು.
55 And women, who had come along with him out of Galilee, having followed, saw the sepulchre and how his body was placed.ಇದಲ್ಲದೆ ಗಲಿಲಾಯದಿಂದ ಆತ ನೊಂದಿಗೆ ಬಂದಿದ್ದ ಸ್ತ್ರೀಯರು ಸಹ ಹಿಂಬಾಲಿಸಿ ಹೋಗಿ ಸಮಾಧಿಯನ್ನೂ ಆ ಸಮಾಧಿಯಲ್ಲಿ ಆತನ ದೇಹವನ್ನು ಹೇಗೆ ಇಟ್ಟರೆಂಬದನ್ನೂ ನೋಡಿದರು.
56 And having returned they prepared aromatic spices and ointments, and remained quiet on the sabbath, according to the commandment.ಅವರು ಹಿಂತಿರುಗಿದವರಾಗಿ ಪರಿಮಳ ದ್ಯವ್ಯವನ್ನು ಸುಗಂಧ ತೈಲವನ್ನೂ ಸಿದ್ಧಪಡಿಸಿಕೊಂಡು ಆಜ್ಞಾನು ಸಾರವಾಗಿ ಸಬ್ಬತ್ತಿನ ದಿನದಲ್ಲಿ ವಿಶ್ರಮಿಸಿಕೊಂಡರು.
Kannada Bible