Skip to content
CHRIST SONGS .IN
TAMIL CHRISTIAN SONGS .IN
  • Lyrics
  • Chords
  • Bible
  • /
  • A
  • B
  • C
  • D
  • E
  • F
  • G
  • H
  • I
  • J
  • K
  • L
  • M
  • N
  • O
  • P
  • Q
  • R
  • S
  • T
  • U
  • V
  • W
  • X
  • Y
  • Z

Index
  • A
  • B
  • C
  • D
  • E
  • F
  • G
  • H
  • I
  • J
  • K
  • L
  • M
  • N
  • O
  • P
  • Q
  • R
  • S
  • T
  • U
  • V
  • W
  • X
  • Y
  • Z
Malachi 4 KJV ASV BBE DBY WBT WEB YLT

Malachi 4 in Kannada WBT Compare Webster's Bible

Malachi 4

1 ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.

2 ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.

3 ದುಷ್ಟರನ್ನು ತುಳಿದುಬಿಡುವಿರಿ; ಯಾಕಂದರೆ ನಾನು ಕಾರ್ಯ ಸಾಧಿಸುವ ದಿನದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

4 ನನ್ನ ಸೇವಕನಾದ ಮೋಶೆಯ ನ್ಯಾಯಪ್ರಮಾಣ ವನ್ನೂ ನಾನು ಅವನಿಗೆ ಹೋರೇಬಿನಲ್ಲಿ ಸಮಸ್ತ ಇಸ್ರಾಯೇಲಿಗೋಸ್ಕರ ಆಜ್ಞಾಪಿಸಿದ್ದನ್ನೂ ನಿಯಮ ಗಳನ್ನೂ ನ್ಯಾಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.

5 ಇಗೋ, ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುತ್ತೇನೆ.

6 ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು.

  • Tamil
  • Hindi
  • Malayalam
  • Telugu
  • Kannada
  • Gujarati
  • Punjabi
  • Bengali
  • Oriya
  • Nepali

By continuing to browse the site, you are agreeing to our use of cookies.

Close