Mark 14 - KJV (Kannada)
1 After two days was the feast of the passover, and of unleavened bread: and the chief priests and the scribes sought how they might take him by craft, and put him to death.ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವದಕ್ಕೆ ಇನ್ನೂ ಎರಡು ದಿವಸ ಗಳಿದ್ದಾಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ಉಪಾಯ ದಿಂದ ಆತನನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಹವಣಿಸುತ್ತಿದ್ದರು.
2 But they said, Not on the feast day, lest there be an uproar of the people.ಆದರೆ ಅವರು--ಜನರು ದಂಗೆ ಏಳದಂತೆ ಹಬ್ಬದಲ್ಲಿ ಬೇಡ ಎಂದು ಅಂದುಕೊಂಡರು.
3 And being in Bethany in the house of Simon the leper, as he sat at meat, there came a woman having an alabaster box of ointment of spikenard very precious; and she brake the box, and poured it on his head.ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಆತನು ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಅತಿ ಶ್ರೇಷ್ಠವಾದ ಸುಗಂಧ ತೈಲದ ಭರಣಿ ಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ಆತನ ತಲೆಯ ಮೇಲೆ ಹೊಯಿದಳು.
4 And there were some that had indignation within themselves, and said, Why was this waste of the ointment made?ಆದರೆ ಅಲ್ಲಿದ್ದ ಕೆಲವರು ತಮ್ಮೊಳಗೆ ಕೋಪಗೊಂಡು--ಈ ತೈಲವನ್ನು ನಷ್ಟ ಮಾಡಿದ್ದೇಕೆ?
5 For it might have been sold for more than three hundred pence, and have been given to the poor. And they murmured against her.ಇದನ್ನು ಮುನ್ನೂರು (ಪೆನ್ಸ್) ಹಣಕ್ಕಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡ ಬಹುದಾಗಿತ್ತಲ್ಲಾ ಎಂದು ಅಂದುಕೊಂಡು ಆಕೆಗೆ ವಿರೋಧವಾಗಿ ಗುಣುಗುಟ್ಟಿದರು.
6 And Jesus said, Let her alone; why trouble ye her? she hath wrought a good work on me.ಆದರೆ ಯೇಸು --ಈಕೆಯನ್ನು ಬಿಟ್ಟುಬಿಡಿರಿ; ಈಕೆಗೆ ನೀವು ಯಾಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೇ ಕಾರ್ಯವನ್ನು ಮಾಡಿದ್ದಾಳೆ.
7 For ye have the poor with you always, and whensoever ye will ye may do them good: but me ye have not always.ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ನಿಮಗೆ ಮನಸ್ಸಿದ್ದರೆ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು; ಆದರೆ ನಾನು ಯಾವಾ ಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ.
8 She hath done what she could: she is come aforehand to anoint my body to the burying.ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ; ನನ್ನ ಶರೀರವನ್ನು ಹೂಣಿಡುವದಕ್ಕೆ ಅದನ್ನು ಅಭಿಷೇಕಿಸುವದಕ್ಕಾಗಿ ಈಕೆಯು ಮುಂದಾಗಿ ಮಾಡಿದ್ದಾಳೆ.
9 Verily I say unto you, Wheresoever this gospel shall be preached throughout the whole world, this also that she hath done shall be spoken of for a memorial of her.ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಈ ಸುವಾರ್ತೆಯು ಸರ್ವ ಲೋಕದಲ್ಲಿ ಎಲ್ಲೆಲ್ಲಿ ಸಾರಲ್ಪಡುವದೋ ಅಲ್ಲೆಲ್ಲಾ ಈಕೆಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳುವರು ಅಂದನು.
10 And Judas Iscariot, one of the twelve, went unto the chief priests, to betray him unto them.ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತನು ಯೇಸುವನ್ನು ಪ್ರಧಾನ ಯಾಜಕರಿಗೆ ಹಿಡುಕೊಡುವಂತೆ ಅವರ ಬಳಿಗೆ ಹೋದನು.
11 And when they heard it, they were glad, and promised to give him money. And he sought how he might conveniently betray him.ಅವರು ಅದನ್ನು ಕೇಳಿ ಸಂತೋಷಪಟ್ಟು ಅವನಿಗೆ ಹಣ ಕೊಡುತ್ತೇವೆಂದು ಮಾತುಕೊಟ್ಟರು. ಅವನು ಆತನನ್ನು ಅನುಕೂಲವಾಗಿ ಹಿಡುಕೊಡುವದು ಹೇಗೆಂದು ಹುಡುಕುತ್ತಿದ್ದನು.
12 And the first day of unleavened bread, when they killed the passover, his disciples said unto him, Where wilt thou that we go and prepare that thou mayest eat the passover?ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿವಸ ಪಸ್ಕದ ಕುರಿಯನ್ನು ಅವರು ಕೊಯ್ದಾಗ ಆತನ ಶಿಷ್ಯರು ಆತನಿಗೆ--ನೀನು ಪಸ್ಕದ ಊಟಮಾಡು ವಂತೆ ನಾವು ಎಲ್ಲಿಗೆ ಹೋಗಿ ಸಿದ್ಧಮಾಡಬೇಕನ್ನುತ್ತೀ ಎಂದು ಕೇಳಿದರು.
13 And he sendeth forth two of his disciples, and saith unto them, Go ye into the city, and there shall meet you a man bearing a pitcher of water: follow him.ಆಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ--ನೀವು ಪಟ್ಟಣದೊಳಕ್ಕೆ ಹೋಗಿರಿ; ಅಲ್ಲಿ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು; ಅವನನ್ನು ಹಿಂಬಾಲಿಸಿರಿ.
14 And wheresoever he shall go in, say ye to the goodman of the house, The Master saith, Where is the guestchamber, where I shall eat the passover with my disciples?ಅವನು ಯಾವ ಮನೆ ಯೊಳಗೆ ಹೋಗುತ್ತಾನೋ ಆ ಮನೆಯ ಯಜಮಾನ ನಿಗೆ--ನಾನು ನನ್ನ ಶಿಷ್ಯರೊಂದಿಗೆ ಪಸ್ಕದ ಊಟ ಮಾಡಲು ಅತಿಥಿಯ ಕೊಠಡಿ ಎಲ್ಲಿದೆ ಎಂದು ಬೋಧ ಕನು ಕೇಳುತ್ತಾನೆ ಎಂದು ಹೇಳಿರಿ.
15 And he will shew you a large upper room furnished and prepared: there make ready for us.ಅವನು ಸಜ್ಜು ಗೊಳಿಸಿ ಸಿದ್ಧಮಾಡಿದ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು; ಅಲ್ಲಿ ನಮಗೆ ಸಿದ್ಧಮಾಡಿರಿ ಅಂದನು.
16 And his disciples went forth, and came into the city, and found as he had said unto them: and they made ready the passover.ಆಗ ಆತನ ಶಿಷ್ಯರು ಹೊರಟುಹೋಗಿ ಪಟ್ಟಣದೊಳಕ್ಕೆ ಬಂದು ಆತನು ತಮಗೆ ಹೇಳಿದಂತೆ ಕಂಡುಕೊಂಡು ಪಸ್ಕವನ್ನು ಸಿದ್ಧಮಾಡಿದರು.
17 And in the evening he cometh with the twelve.ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದನು.
18 And as they sat and did eat, Jesus said, Verily I say unto you, One of you which eateth with me shall betray me.ಅವರು ಕೂತುಕೊಂಡು ಊಟಮಾಡುತ್ತಿದ್ದಾಗ ಯೇಸು ಅವರಿಗೆ--ನನ್ನೊಂದಿಗೆ ಊಟ ಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
19 And they began to be sorrowful, and to say unto him one by one, Is it I? and another said, Is it I?ಆಗ ಅವರು ದುಃಖಿಸ ಲಾರಂಭಿಸಿ ಒಬ್ಬೊಬ್ಬರಾಗಿ ಆತನಿಗೆ--ಅದು ನಾನೋ? ಮತ್ತು ಇನ್ನೊಬ್ಬನು--ಅದು ನಾನೋ? ಎಂದು ಆತನನ್ನು ಕೇಳಿದರು.
20 And he answered and said unto them, It is one of the twelve, that dippeth with me in the dish.ಅದಕ್ಕಾತನು ಪ್ರತ್ಯುತ್ತರವಾಗಿ ಅವರಿಗೆ--ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು, ಅಂದರೆ ನನ್ನ ಸಂಗಡ ಪಾತ್ರೆಯಲ್ಲಿ ಅದ್ದುವವನೇ.
21 The Son of man indeed goeth, as it is written of him: but woe to that man by whom the Son of man is betrayed! good were it for that man if he had never been born.ತನ್ನ ವಿಷಯವಾಗಿ ಬರೆದಿರುವ ಪ್ರಕಾರ ಮನುಷ್ಯ ಕುಮಾರನು ನಿಜವಾಗಿಯೂ ಹೋಗುತ್ತಾನೆ; ಆದರೆ ಯಾವನಿಂದ ಮನುಷ್ಯಕುಮಾರನು ಹಿಡುಕೊಡಲ್ಪಡು ತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಎಂದು ಹೇಳಿದನು.
22 And as they did eat, Jesus took bread, and blessed, and brake it, and gave to them, and said, Take, eat: this is my body.ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು.
23 And he took the cup, and when he had given thanks, he gave it to them: and they all drank of it.ತರುವಾಯ ಆತನು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅವರಿಗೆ ಕೊಟ್ಟನು; ಅವರೆಲ್ಲರೂ ಅದರಲ್ಲಿ ಕುಡಿದರು.
24 And he said unto them, This is my blood of the new testament, which is shed for many.ಆಗ ಆತನು ಅವರಿಗೆ--ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆಯ ನನ್ನ ರಕ್ತ.
25 Verily I say unto you, I will drink no more of the fruit of the vine, until that day that I drink it new in the kingdom of God.ಇದಲ್ಲದೆ ನಾನು ದೇವರ ರಾಜ್ಯದಲ್ಲಿ ಇದನ್ನು ಹೊಸದಾಗಿ ಕುಡಿಯುವ ಆ ದಿನದ ವರೆಗೆ ಇನ್ನು ಮೇಲೆ ದ್ರಾಕ್ಷಾರಸವನ್ನು ನಾನು ಕುಡಿಯುವದೇ ಇಲ್ಲವೆಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
26 And when they had sung an hymn, they went out into the mount of Olives.ಬಳಿಕ ಅವರು ಒಂದು ಸಂಗೀತ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೊರಟುಹೋದರು.
27 And Jesus saith unto them, All ye shall be offended because of me this night: for it is written, I will smite the shepherd, and the sheep shall be scattered.ಆಗ ಯೇಸು ಅವರಿಗೆ--ಈ ರಾತ್ರಿ ನೀವೆಲ್ಲರೂ ನನ್ನ ದೆಸೆಯಿಂದ ಅಭ್ಯಂತರಪಡುವಿರಿ; ಯಾಕಂದರೆನಾನು ಕುರುಬನನ್ನು ಹೊಡೆಯುವೆನು, ಕುರಿಗಳು ಚದರಿಸಲ್ಪ ಡುವವು ಎಂದು ಬರೆದದೆ.
28 But after that I am risen, I will go before you into Galilee.ಆದರೆ ನಾನು ಎದ್ದ ಮೇಲೆ ನಿಮಗಿಂತ ಮುಂದಾಗಿ ಗಲಿಲಾಯಕ್ಕೆ ಹೋಗು ವೆನು ಎಂದು ಹೇಳಿದನು.
29 But Peter said unto him, Although all shall be offended, yet will not I.ಆದರೆ ಪೇತ್ರನು ಆತ ನಿಗೆ ಎಲ್ಲರೂ ಅಭ್ಯಂತರಪಟ್ಟಾಗ್ಯೂ ನಾನು ಅಭ್ಯಂತರ ಪಡುವದಿಲ್ಲ ಎಂದು ಹೇಳಿದನು.
30 And Jesus saith unto him, Verily I say unto thee, That this day, even in this night, before the cock crow twice, thou shalt deny me thrice.ಆದರೆ ಯೇಸು ಅವನಿಗೆ--ಈ ದಿವಸ ಈ ರಾತ್ರಿಯೇ ಎರಡು ಸಾರಿ ಹುಂಜ ಕೂಗುವದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
31 But he spake the more vehemently, If I should die with thee, I will not deny thee in any wise. Likewise also said they all.ಆದರೆ ಅವನು--ನಾನು ನಿನ್ನ ಸಂಗಡ ಸಾಯಬೇಕಾದರೂ ನಿನ್ನನ್ನು ಅಲ್ಲಗಳೆಯುವದಿಲ್ಲ ಎಂದು ಬಹು ಆವೇಶದಿಂದ ಹೇಳಿದನು. ಅದರಂತೆಯೇ ಅವರೆಲ್ಲರೂ ಹೇಳಿದರು.
32 And they came to a place which was named Gethsemane: and he saith to his disciples, Sit ye here, while I shall pray.ಆಗ ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದಾಗ ಆತನು ತನ್ನ ಶಿಷ್ಯರಿಗೆ--ನಾನು ಪ್ರಾರ್ಥನೆ ಮಾಡು ವಾಗ ನೀವು ಇಲ್ಲಿ ಕೂತುಕೊಂಡಿರ್ರಿ ಅಂದನು.
33 And he taketh with him Peter and James and John, and began to be sore amazed, and to be very heavy;ಆತನು ಪೇತ್ರ ಯಾಕೋಬ ಯೋಹಾನರನ್ನು ತನ್ನೊಂದಿಗೆ ಕರಕೊಂಡು ಹೋಗಿ ಅತಿವಿಸ್ಮಯಗೊಂಡು ಬಹಳ ಮನಗುಂದಿದವನಾಗಿ--
34 And saith unto them, My soul is exceeding sorrowful unto death: tarry ye here, and watch.ನನ್ನ ಪ್ರಾಣವು ಸಾಯುವಷ್ಟು ಅತ್ಯಧಿಕವಾದ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲಿಯೇ ಕಾದುಕೊಂಡಿದ್ದು ಎಚ್ಚರವಾಗಿರ್ರಿ ಅಂದನು.
35 And he went forward a little, and fell on the ground, and prayed that, if it were possible, the hour might pass from him.ಆತನು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿ ಹೋಗುವಂತೆ ಪ್ರಾರ್ಥಿಸಿದನು.
36 And he said, Abba, Father, all things are possible unto thee; take away this cup from me: nevertheless not what I will, but what thou wilt.ಆತನು --ಅಪ್ಪಾ, ತಂದೆಯೇ, ಎಲ್ಲವುಗಳು ನಿನಗೆ ಸಾಧ್ಯವಾಗಿವೆ; ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು; ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ ಎಂದು ಹೇಳಿದನು.
37 And he cometh, and findeth them sleeping, and saith unto Peter, Simon, sleepest thou? couldest not thou watch one hour?ತರುವಾಯ ಆತನು ಬಂದು ಅವರು ನಿದ್ರೆಮಾಡುವದನ್ನು ಕಂಡು ಪೇತ್ರನಿಗೆ--ಸೀಮೋನನೇ, ನೀನು ನಿದ್ರೆಮಾಡು ತ್ತೀಯಾ? ಒಂದು ಗಳಿಗೆಯಾದರೂ ಎಚ್ಚರವಾಗಿ ರಲಾರೆಯಾ?
38 Watch ye and pray, lest ye enter into temptation. The spirit truly is ready, but the flesh is weak.ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ನಿಜವಾಗಿಯೂ ಸಿದ್ಧವಾಗಿದೆ; ಆದರೆ ಶರೀರವು ಬಲಹೀನವಾಗಿದೆ ಎಂದು ಹೇಳಿದನು.
39 And again he went away, and prayed, and spake the same words.ಆತನು ತಿರಿಗಿ ಹೊರಟು ಹೋಗಿ ಅದೇ ಮಾತುಗಳನ್ನು ಹೇಳುತ್ತಾ ಪ್ರಾರ್ಥಿಸಿ ದನು.
40 And when he returned, he found them asleep again, (for their eyes were heavy,) neither wist they what to answer him.ಆತನು ಹಿಂತಿರುಗಿದಾಗ ಅವರು ತಿರಿಗಿ ನಿದ್ರೆ ಮಾಡುವದನ್ನು ಕಂಡನು; (ಯಾಕಂದರೆ ಅವರ ಕಣ್ಣುಗಳು ಭಾರವಾಗಿದ್ದವು;) ಆತನಿಗೆ ಅವರು ಏನು ಉತ್ತರ ಕೊಡಬೇಕೋ ತಿಳಿಯಲಿಲ್ಲ.
41 And he cometh the third time, and saith unto them, Sleep on now, and take your rest: it is enough, the hour is come; behold, the Son of man is betrayed into the hands of sinners.ಆತನು ಮೂರನೆಯ ಸಾರಿ ಬಂದು ಅವರಿಗೆ-- ಈಗ ನಿದ್ರೆ ಮಾಡಿ ನಿಮ್ಮ ವಿಶ್ರಾಂತಿಯನ್ನು ತೆಗೆದುಕೊಳ್ಳಿರಿ; ಇನ್ನು ಸಾಕು; ಗಳಿಗೆ ಬಂದಿದೆ; ಇಗೋ, ಮನುಷ್ಯ ಕುಮಾರನು ಪಾಪಿಗಳ ಕೈಗಳಿಗೆ ಹಿಡುಕೊಡಲ್ಪಡುತ್ತಾನೆ;
42 Rise up, let us go; lo, he that betrayeth me is at hand.ಏಳಿರಿ, ನಾವು ಹೋಗೋಣ; ಇಗೋ ನನ್ನನ್ನು ಹಿಡುಕೊಡುವವನು ಸವಿಾಪದಲ್ಲಿದ್ದಾನೆ ಎಂದು ಹೇಳಿದನು.
43 And immediately, while he yet spake, cometh Judas, one of the twelve, and with him a great multitude with swords and staves, from the chief priests and the scribes and the elders.ಆತನು ಇನ್ನೂ ಮಾತನಾಡುತ್ತಿರುವಾಗಲೇ ಹನ್ನೆ ರಡು ಮಂದಿಯಲ್ಲಿ ಒಬ್ಬನಾದ ಯೂದನು ಬಂದನು; ಪ್ರಧಾನ ಯಾಜಕರ ಶಾಸ್ತ್ರಿಗಳ ಮತ್ತು ಹಿರಿಯರ ಕಡೆ ಯಿಂದ ಬಂದಿದ್ದ ಜನರ ದೊಡ್ಡ ಸಮೂಹವು ಕತ್ತಿ ದೊಣ್ಣೆಗಳನ್ನು ಹಿಡಿದುಕೊಂಡು ಅವನ ಕೂಡ ಬಂದರು.
44 And he that betrayed him had given them a token, saying, Whomsoever I shall kiss, that same is he; take him, and lead him away safely.ಇದಲ್ಲದೆ ಆತನನ್ನು ಹಿಡುಕೊಡುವವನು ಅವರಿಗೆ--ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಆತನನ್ನು ಹಿಡಿದು ಭದ್ರವಾಗಿ ತೆಗೆದುಕೊಂಡು ಹೋಗಿರಿ ಎಂದು ಗುರುತು ಹೇಳಿಕೊಟ್ಟಿದ್ದನು.
45 And as soon as he was come, he goeth straightway to him, and saith, Master, master; and kissed him.ಅವನು ಬಂದ ಕೂಡಲೆ ನೇರವಾಗಿ ಆತನ ಕಡೆಗೆ ಹೋಗಿ-- ಗುರುವೇ, ಗುರುವೇ ಎಂದು ಹೇಳಿ ಆತನಿಗೆ ಮುದ್ದಿಟ್ಟನು.
46 And they laid their hands on him, and took him.ಆಗ ಅವರು ಆತನ ಮೇಲೆ ಕೈ ಹಾಕಿ ಆತನನ್ನು ಹಿಡಿದರು.
47 And one of them that stood by drew a sword, and smote a servant of the high priest, and cut off his ear.ಆದರೆ ಹತ್ತಿರ ನಿಂತಿದ್ದ ವರಲ್ಲಿ ಒಬ್ಬನು ಕತ್ತಿಯನ್ನು ಹಿರಿದು ಪ್ರಧಾನ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿ ದನು.
48 And Jesus answered and said unto them, Are ye come out, as against a thief, with swords and with staves to take me?ಯೇಸು ಅವರಿಗೆ-- ಕತ್ತಿಗಳನ್ನು ಮತ್ತು ದೊಣ್ಣೆಗಳನ್ನು ತಕ್ಕೊಂಡು ಕಳ್ಳನಿಗೆ ವಿರೋಧವಾಗಿ ಬರುವಂತೆ ನನ್ನನ್ನು ಹಿಡಿಯುವದಕ್ಕಾಗಿ ಬಂದಿರಾ?
49 I was daily with you in the temple teaching, and ye took me not: but the scriptures must be fulfilled.ನಾನು ಪ್ರತಿ ದಿನವೂ ದೇವಾಲಯದಲ್ಲಿ ಬೋಧಿ ಸುತ್ತಾ ನಿಮ್ಮ ಸಂಗಡ ಇದ್ದೆನು; ಆಗ ನೀವು ನನ್ನನು ಹಿಡಿಯಲಿಲ್ಲ; ಆದರೆ ಬರಹಗಳು ನೆರವೇರಲೇಬೇಕು ಅಂದನು.
50 And they all forsook him, and fled.ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
51 And there followed him a certain young man, having a linen cloth cast about his naked body; and the young men laid hold on him:ಅಲ್ಲಿ ಒಬ್ಬಾನೊಬ್ಬ ಯೌವನಸ್ಥನು ಬರೀ ಮೈಮೇಲೆ ನಾರು ಬಟ್ಟೆಯನ್ನು ಹಾಕಿಕೊಂಡವನಾಗಿ ಆತನನ್ನು ಹಿಂಬಾಲಿಸುತ್ತಿರಲು ಯೌವನಸ್ಥರು ಅವನನ್ನು ಹಿಡಿದರು.
52 And he left the linen cloth, and fled from them naked.ಆಗ ಅವನು ಆ ನಾರುಮಡಿಯನ್ನು ಬಿಟ್ಟು ಬರೀ ಮೈಯಲ್ಲಿ ಓಡಿಹೋದನು.
53 And they led Jesus away to the high priest: and with him were assembled all the chief priests and the elders and the scribes.ಇದಾದ ಮೇಲೆ ಅವರು ಯೇಸುವನ್ನು ಮಹಾ ಯಾಜಕನ ಬಳಿಗೆ ತೆಗೆದುಕೊಂಡು ಹೋದರು; ಆತನ ಸಂಗಡ ಪ್ರಧಾನ ಯಾಜಕರೆಲ್ಲರೂ ಹಿರಿಯರೂ ಶಾಸ್ತ್ರಿಗಳೂ ಅವನ ಬಳಿಗೆ ಕೂಡಿ ಬಂದರು.
54 And Peter followed him afar off, even into the palace of the high priest: and he sat with the servants, and warmed himself at the fire.ಆದರೆ ಪೇತ್ರನು ಮಹಾಯಾಜಕನ ಭವನದವರೆಗೂ ದೂರ ದಿಂದ ಆತನನ್ನು ಹಿಂಬಾಲಿಸಿ ಆಳುಗಳ ಸಂಗಡ ಕೂತುಕೊಂಡು ಬೆಂಕಿಯ ಹತ್ತಿರ ಚಳಿ ಕಾಯಿಸಿಕೊಳ್ಳು ತ್ತಿದ್ದನು.
55 And the chief priests and all the council sought for witness against Jesus to put him to death; and found none.ಪ್ರಧಾನಯಾಜಕರೂ ನ್ಯಾಯಸಭೆಯವ ರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನಿಗೆ ವಿರೋಧವಾಗಿ ಸಾಕ್ಷಿಯನ್ನು ಹುಡುಕಿ ಏನೂ ಕಂಡು ಕೊಳ್ಳಲಿಲ್ಲ.
56 For many bare false witness against him, but their witness agreed not together.ಅನೇಕರು ಆತನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿಯು ಒಂದ ಕ್ಕೊಂದು ಒಪ್ಪಲಿಲ್ಲ.
57 And there arose certain, and bare false witness against him, saying,ತರುವಾಯ ಕೆಲವರು ಎದ್ದು ಆತನಿಗೆ ವಿರೋಧವಾಗಿ ಸಾಕ್ಷಿ ಹೇಳುತ್ತಾ--
58 We heard him say, I will destroy this temple that is made with hands, and within three days I will build another made without hands.ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದನ್ನು ಮೂರು ದಿನಗಳಲ್ಲಿ ಕಟ್ಟುವೆನು ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ ಅಂದರು.
59 But neither so did their witness agree together.ಹೀಗಿದ್ದರೂ ಅವರ ಸಾಕ್ಷಿ ಒಂದಕ್ಕೊಂದು ಒಪ್ಪಿಗೆಯಾಗಲಿಲ್ಲ.
60 And the high priest stood up in the midst, and asked Jesus, saying, Answerest thou nothing? what is it which these witness against thee?ಆಗ ಮಹಾಯಾಜಕನು ಎದ್ದು ನಡುವೆ ನಿಂತು ಯೇಸುವಿಗೆ--ನೀನು ಏನೂ ಉತ್ತರಕೊಡುವದಿ ಲ್ಲವೋ? ಇವರು ನಿನಗೆ ವಿರೋಧವಾಗಿ ಹೇಳುವ ಈ ಸಾಕ್ಷಿ ಏನು ಎಂದು ಕೇಳಿದನು.
61 But he held his peace, and answered nothing. Again the high priest asked him, and said unto him, Art thou the Christ, the Son of the Blessed?ಆದರೆ ಆತನು ಏನೂ ಉತ್ತರ ಕೊಡದೆ ಮೌನವಾಗಿದ್ದನು; ತಿರಿಗಿ ಮಹಾಯಾಜಕನು--ನೀನು ಆ ಕ್ರಿಸ್ತನೋ? ಸ್ತುತಿಹೊಂದುವಾತನ ಕುಮಾರನೋ ಎಂದು ಆತನನ್ನು ಕೇಳಿದನು.
62 And Jesus said, I am: and ye shall see the Son of man sitting on the right hand of power, and coming in the clouds of heaven.ಅದಕ್ಕೆ ಯೇಸು--ನಾನೇ, ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಪಾರ್ಶ್ವದಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳಲ್ಲಿ ಬರುವದನ್ನೂ ನೀವು ನೋಡುವಿರಿ ಅಂದನು.
63 Then the high priest rent his clothes, and saith, What need we any further witnesses?ಅದಕ್ಕೆ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು--ನಮಗೆ ಇನ್ನು ಹೆಚ್ಚು ಸಾಕ್ಷಿಗಳ ಅವಶ್ಯಕತೆ ಏನಿದೆ?
64 Ye have heard the blasphemy: what think ye? And they all condemned him to be guilty of death.ನೀವು ಈ ದೇವದೂಷಣೆಯನ್ನು ಕೇಳಿದ್ದೀರಲ್ಲಾ; ನಿಮಗೆ ಹೇಗೆ ತೋರುತ್ತದೆ ಎಂದು ಕೇಳಲು ಅವರೆಲ್ಲರೂ ಅವನು ಮರಣದಂಡನೆ ಹೊಂದತಕ್ಕವನು ಎಂದು ತೀರ್ಪುಮಾಡಿದರು
65 And some began to spit on him, and to cover his face, and to buffet him, and to say unto him, Prophesy: and the servants did strike him with the palms of their hands.ತರು ವಾಯ ಕೆಲವರು ಆತನ ಮೇಲೆ ಉಗುಳಿ ಆತನ ಮುಖವನ್ನು ಮುಚ್ಚಿ ಆತನನ್ನು ಗುದ್ದುವದಕ್ಕೆ ಆರಂಭಿಸಿ ಆತನಿಗೆ--ಪ್ರವಾದನೆ ಹೇಳು ಅಂದರು. ಆಳು ಗಳು ಆತನನ್ನು ಹೊಡೆದರು.
66 And as Peter was beneath in the palace, there cometh one of the maids of the high priest:ಇದಲ್ಲದೆ ಪೇತ್ರನು ಭವನದ ಕೆಳಭಾಗದಲ್ಲಿದ್ದಾಗ ಮಹಾಯಾಜಕನ ದಾಸಿಯರಲ್ಲಿ ಒಬ್ಬಳು ಅಲ್ಲಿಗೆ ಬಂದಳು.
67 And when she saw Peter warming himself, she looked upon him, and said, And thou also wast with Jesus of Nazareth.ಪೇತ್ರನು ಚಳಿಕಾಯಿಸಿಕೊಳ್ಳುತ್ತಿರು ವದನ್ನು ಆಕೆಯು ಕಂಡು ಅವನನ್ನು ದೃಷ್ಟಿಸಿ ನೋಡಿ--ನೀನು ಸಹ ಆ ನಜರೇತಿನ ಯೇಸುವಿ ನೊಂದಿಗೆ ಇದ್ದವನು ಅಂದಳು.
68 But he denied, saying, I know not, neither understand I what thou sayest. And he went out into the porch; and the cock crew.ಆದರೆ ಅವನು ಅಲ್ಲಗಳೆದು--ನನಗೆ ಗೊತ್ತಿಲ್ಲ, ನೀನು ಏನು ಹೇಳುತ್ತೀಯೋ ನನಗೆ ತಿಳಿಯುವದಿಲ್ಲ ಎಂದು ಹೇಳಿ ಅಲ್ಲಗಳೆದು ಹೊರಗೆ ದ್ವಾರಾಂಗಳದೊಳಗೆ ಹೋದನು; ಆಗ ಹುಂಜ ಕೂಗಿತು.
69 And a maid saw him again, and began to say to them that stood by, This is one of them.ಆ ದಾಸಿಯು ಅವನನ್ನು ತಿರಿಗಿ ನೋಡಿ ಪಕ್ಕದಲ್ಲಿ ನಿಂತಿದ್ದವರಿಗೆ--ಇವನು ಅವರಲ್ಲಿ ಒಬ್ಬನು ಎಂದು ಹೇಳಲಾರಂಭಿಸಿದಳು.
70 And he denied it again. And a little after, they that stood by said again to Peter, Surely thou art one of them: for thou art a Galilaean, and thy speech agreeth thereto.ಆಗ ಅವನು ಮತ್ತೆ ಅಲ್ಲಗಳೆದನು. ತುಸು ಹೊತ್ತಾದ ಮೇಲೆ ಪಕ್ಕದಲ್ಲಿ ನಿಂತಿದ್ದವರು ತಿರಿಗಿ ಪೇತ್ರನಿಗೆ--ನಿಶ್ಚಯವಾಗಿಯೂ ನೀನು ಅವರಲ್ಲಿ ಒಬ್ಬನು; ಯಾಕಂದರೆ ನೀನು ಗಲಿಲಾಯದವನು ಮತ್ತು ನಿನ್ನ ಭಾಷೆ ಅದಕ್ಕೆ ಒಪ್ಪುತ್ತದೆ ಅಂದರು.
71 But he began to curse and to swear, saying, I know not this man of whom ye speak.ಆದರೆ ಅವನು ಶಪಿಸಿ ಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಆರಂ ಭಿಸಿ--ನೀವು ಮಾತನಾಡುತ್ತಿರುವ ಈ ಮನುಷ್ಯನನ್ನು ನಾನರಿಯೆ ಅಂದನು.
72 And the second time the cock crew. And Peter called to mind the word that Jesus said unto him, Before the cock crow twice, thou shalt deny me thrice. And when he thought thereon, he wept.ಆಗ ಎರಡನೇ ಸಾರಿ ಹುಂಜ ಕೂಗಿತು. ಹೀಗೆ--ಎರಡು ಸಾರಿ ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ಅದನ್ನು ಯೋಚಿಸಿ ಅತ್ತನು.
Kannada Bible