Bible

Mark 14 - WEB (Kannada)

1 It was now two days before the feast of the Passover and the unleavened bread, and the chief priests and the scribes sought how they might sieze him by deception, and kill him.ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವದಕ್ಕೆ ಇನ್ನೂ ಎರಡು ದಿವಸ ಗಳಿದ್ದಾಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ಉಪಾಯ ದಿಂದ ಆತನನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಹವಣಿಸುತ್ತಿದ್ದರು.

2 For they said, "Not during the feast, because there might be a riot of the people."ಆದರೆ ಅವರು--ಜನರು ದಂಗೆ ಏಳದಂತೆ ಹಬ್ಬದಲ್ಲಿ ಬೇಡ ಎಂದು ಅಂದುಕೊಂಡರು.

3 While he was at Bethany, in the house of Simon the leper, as he sat at the table, a woman came having an alabaster jar of ointment of pure nard-- very costly. She broke the jar, and poured it over his head.ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಆತನು ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಅತಿ ಶ್ರೇಷ್ಠವಾದ ಸುಗಂಧ ತೈಲದ ಭರಣಿ ಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ಆತನ ತಲೆಯ ಮೇಲೆ ಹೊಯಿದಳು.

4 But there were some who were indignant among themselves, saying, "Why has this ointment been wasted?ಆದರೆ ಅಲ್ಲಿದ್ದ ಕೆಲವರು ತಮ್ಮೊಳಗೆ ಕೋಪಗೊಂಡು--ಈ ತೈಲವನ್ನು ನಷ್ಟ ಮಾಡಿದ್ದೇಕೆ?

5 For this might have been sold for more than three hundred denarii,{300 denarii was about a years wages for an agricultural laborer.} and given to the poor." They grumbled against her.ಇದನ್ನು ಮುನ್ನೂರು (ಪೆನ್ಸ್‌) ಹಣಕ್ಕಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡ ಬಹುದಾಗಿತ್ತಲ್ಲಾ ಎಂದು ಅಂದುಕೊಂಡು ಆಕೆಗೆ ವಿರೋಧವಾಗಿ ಗುಣುಗುಟ್ಟಿದರು.

6 But Jesus said, "Leave her alone. Why do you trouble her? She has done a good work for me.ಆದರೆ ಯೇಸು --ಈಕೆಯನ್ನು ಬಿಟ್ಟುಬಿಡಿರಿ; ಈಕೆಗೆ ನೀವು ಯಾಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೇ ಕಾರ್ಯವನ್ನು ಮಾಡಿದ್ದಾಳೆ.

7 For you always have the poor with you, and whenever you want to, you can do them good; but you will not always have me.ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ನಿಮಗೆ ಮನಸ್ಸಿದ್ದರೆ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು; ಆದರೆ ನಾನು ಯಾವಾ ಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ.

8 She has done what she could. She has anointed my body beforehand for the burying.ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ; ನನ್ನ ಶರೀರವನ್ನು ಹೂಣಿಡುವದಕ್ಕೆ ಅದನ್ನು ಅಭಿಷೇಕಿಸುವದಕ್ಕಾಗಿ ಈಕೆಯು ಮುಂದಾಗಿ ಮಾಡಿದ್ದಾಳೆ.

9 Most assuredly I tell you, wherever this Gospel may be preached throughout the whole world, that which this woman has done will also be spoken of for a memorial of her."ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಈ ಸುವಾರ್ತೆಯು ಸರ್ವ ಲೋಕದಲ್ಲಿ ಎಲ್ಲೆಲ್ಲಿ ಸಾರಲ್ಪಡುವದೋ ಅಲ್ಲೆಲ್ಲಾ ಈಕೆಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳುವರು ಅಂದನು.

10 Judas Iscariot, who was one of the twelve, went away to the chief priests, that he might deliver him to them.ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತನು ಯೇಸುವನ್ನು ಪ್ರಧಾನ ಯಾಜಕರಿಗೆ ಹಿಡುಕೊಡುವಂತೆ ಅವರ ಬಳಿಗೆ ಹೋದನು.

11 They, when they heard it, were glad, and promised to give him money. He sought how he might conveniently deliver him.ಅವರು ಅದನ್ನು ಕೇಳಿ ಸಂತೋಷಪಟ್ಟು ಅವನಿಗೆ ಹಣ ಕೊಡುತ್ತೇವೆಂದು ಮಾತುಕೊಟ್ಟರು. ಅವನು ಆತನನ್ನು ಅನುಕೂಲವಾಗಿ ಹಿಡುಕೊಡುವದು ಹೇಗೆಂದು ಹುಡುಕುತ್ತಿದ್ದನು.

12 On the first day of unleavened bread, when they sacrificed the Passover, his disciples asked him, "Where do you want us to go and make ready that you may eat the Passover?"ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿವಸ ಪಸ್ಕದ ಕುರಿಯನ್ನು ಅವರು ಕೊಯ್ದಾಗ ಆತನ ಶಿಷ್ಯರು ಆತನಿಗೆ--ನೀನು ಪಸ್ಕದ ಊಟಮಾಡು ವಂತೆ ನಾವು ಎಲ್ಲಿಗೆ ಹೋಗಿ ಸಿದ್ಧಮಾಡಬೇಕನ್ನುತ್ತೀ ಎಂದು ಕೇಳಿದರು.

13 He sent two of his disciples, and said to them, "Go into the city, and there you will meet a man carrying a pitcher of water. Follow him,ಆಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ--ನೀವು ಪಟ್ಟಣದೊಳಕ್ಕೆ ಹೋಗಿರಿ; ಅಲ್ಲಿ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು; ಅವನನ್ನು ಹಿಂಬಾಲಿಸಿರಿ.

14 and wherever he enters in, tell the master of the house, 'The Teacher says, "Where is the guest room, where I may eat the Passover with my disciples?"'ಅವನು ಯಾವ ಮನೆ ಯೊಳಗೆ ಹೋಗುತ್ತಾನೋ ಆ ಮನೆಯ ಯಜಮಾನ ನಿಗೆ--ನಾನು ನನ್ನ ಶಿಷ್ಯರೊಂದಿಗೆ ಪಸ್ಕದ ಊಟ ಮಾಡಲು ಅತಿಥಿಯ ಕೊಠಡಿ ಎಲ್ಲಿದೆ ಎಂದು ಬೋಧ ಕನು ಕೇಳುತ್ತಾನೆ ಎಂದು ಹೇಳಿರಿ.

15 He will himself show you a large upper room furnished and ready. Make ready for us there."ಅವನು ಸಜ್ಜು ಗೊಳಿಸಿ ಸಿದ್ಧಮಾಡಿದ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು; ಅಲ್ಲಿ ನಮಗೆ ಸಿದ್ಧಮಾಡಿರಿ ಅಂದನು.

16 His disciples went out, and came into the city, and found things as he had said to them, and they prepared the Passover.ಆಗ ಆತನ ಶಿಷ್ಯರು ಹೊರಟುಹೋಗಿ ಪಟ್ಟಣದೊಳಕ್ಕೆ ಬಂದು ಆತನು ತಮಗೆ ಹೇಳಿದಂತೆ ಕಂಡುಕೊಂಡು ಪಸ್ಕವನ್ನು ಸಿದ್ಧಮಾಡಿದರು.

17 When it was evening he came with the twelve.ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದನು.

18 As they sat and were eating, Jesus said, "Most assuredly I tell you, one of you will betray me -- he who eats with me."ಅವರು ಕೂತುಕೊಂಡು ಊಟಮಾಡುತ್ತಿದ್ದಾಗ ಯೇಸು ಅವರಿಗೆ--ನನ್ನೊಂದಿಗೆ ಊಟ ಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.

19 They began to be sorrowful, and to ask him one by one, "Surely not I?" And another said, "Surely not I?"ಆಗ ಅವರು ದುಃಖಿಸ ಲಾರಂಭಿಸಿ ಒಬ್ಬೊಬ್ಬರಾಗಿ ಆತನಿಗೆ--ಅದು ನಾನೋ? ಮತ್ತು ಇನ್ನೊಬ್ಬನು--ಅದು ನಾನೋ? ಎಂದು ಆತನನ್ನು ಕೇಳಿದರು.

20 He answered them, "It is one of the twelve, he who dips with me in the dish.ಅದಕ್ಕಾತನು ಪ್ರತ್ಯುತ್ತರವಾಗಿ ಅವರಿಗೆ--ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು, ಅಂದರೆ ನನ್ನ ಸಂಗಡ ಪಾತ್ರೆಯಲ್ಲಿ ಅದ್ದುವವನೇ.

21 For the Son of Man goes, even as it is written about him, but woe to that man by whom the Son of Man is betrayed! It would be better for that man if he had not been born."ತನ್ನ ವಿಷಯವಾಗಿ ಬರೆದಿರುವ ಪ್ರಕಾರ ಮನುಷ್ಯ ಕುಮಾರನು ನಿಜವಾಗಿಯೂ ಹೋಗುತ್ತಾನೆ; ಆದರೆ ಯಾವನಿಂದ ಮನುಷ್ಯಕುಮಾರನು ಹಿಡುಕೊಡಲ್ಪಡು ತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಎಂದು ಹೇಳಿದನು.

22 As they were eating, Jesus took bread, and when he had blessed, he broke it, and gave to them, and said, "Take, eat. This is my body."ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು.

23 He took the cup, and when he had given thanks, he gave to them. They all drank of it.ತರುವಾಯ ಆತನು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅವರಿಗೆ ಕೊಟ್ಟನು; ಅವರೆಲ್ಲರೂ ಅದರಲ್ಲಿ ಕುಡಿದರು.

24 He said to them, "This is my blood of the new covenant, which is poured out for many.ಆಗ ಆತನು ಅವರಿಗೆ--ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆಯ ನನ್ನ ರಕ್ತ.

25 Most assuredly I tell you, I will no more drink of the fruit of the vine, until that day when I drink it anew in the Kingdom of God."ಇದಲ್ಲದೆ ನಾನು ದೇವರ ರಾಜ್ಯದಲ್ಲಿ ಇದನ್ನು ಹೊಸದಾಗಿ ಕುಡಿಯುವ ಆ ದಿನದ ವರೆಗೆ ಇನ್ನು ಮೇಲೆ ದ್ರಾಕ್ಷಾರಸವನ್ನು ನಾನು ಕುಡಿಯುವದೇ ಇಲ್ಲವೆಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.

26 When they had sung a hymn, they went out to the Mount of Olives.ಬಳಿಕ ಅವರು ಒಂದು ಸಂಗೀತ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೊರಟುಹೋದರು.

27 Jesus said to them, "All of you will be made to stumble because of me tonight, for it is written, 'I will strike the shepherd, and the sheep will be scattered.'ಆಗ ಯೇಸು ಅವರಿಗೆ--ಈ ರಾತ್ರಿ ನೀವೆಲ್ಲರೂ ನನ್ನ ದೆಸೆಯಿಂದ ಅಭ್ಯಂತರಪಡುವಿರಿ; ಯಾಕಂದರೆನಾನು ಕುರುಬನನ್ನು ಹೊಡೆಯುವೆನು, ಕುರಿಗಳು ಚದರಿಸಲ್ಪ ಡುವವು ಎಂದು ಬರೆದದೆ.

28 However, after I am raised up, I will go before you into Galilee."ಆದರೆ ನಾನು ಎದ್ದ ಮೇಲೆ ನಿಮಗಿಂತ ಮುಂದಾಗಿ ಗಲಿಲಾಯಕ್ಕೆ ಹೋಗು ವೆನು ಎಂದು ಹೇಳಿದನು.

29 But Peter said to him, "Although all will be offended, yet I will not."ಆದರೆ ಪೇತ್ರನು ಆತ ನಿಗೆ ಎಲ್ಲರೂ ಅಭ್ಯಂತರಪಟ್ಟಾಗ್ಯೂ ನಾನು ಅಭ್ಯಂತರ ಪಡುವದಿಲ್ಲ ಎಂದು ಹೇಳಿದನು.

30 Jesus said to him, "Most assuredly I tell you, that you today, even this night, before the rooster crows twice, you will deny me three times."ಆದರೆ ಯೇಸು ಅವನಿಗೆ--ಈ ದಿವಸ ಈ ರಾತ್ರಿಯೇ ಎರಡು ಸಾರಿ ಹುಂಜ ಕೂಗುವದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.

31 But he spoke all the more, "If I must die with you, I will not deny you." They all said the same thing.ಆದರೆ ಅವನು--ನಾನು ನಿನ್ನ ಸಂಗಡ ಸಾಯಬೇಕಾದರೂ ನಿನ್ನನ್ನು ಅಲ್ಲಗಳೆಯುವದಿಲ್ಲ ಎಂದು ಬಹು ಆವೇಶದಿಂದ ಹೇಳಿದನು. ಅದರಂತೆಯೇ ಅವರೆಲ್ಲರೂ ಹೇಳಿದರು.

32 They came to a place which was named Gethsemane. He said to his disciples, "Sit here, while I pray."ಆಗ ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದಾಗ ಆತನು ತನ್ನ ಶಿಷ್ಯರಿಗೆ--ನಾನು ಪ್ರಾರ್ಥನೆ ಮಾಡು ವಾಗ ನೀವು ಇಲ್ಲಿ ಕೂತುಕೊಂಡಿರ್ರಿ ಅಂದನು.

33 He took with him Peter, James, and John, and began to be greatly troubled and distressed.ಆತನು ಪೇತ್ರ ಯಾಕೋಬ ಯೋಹಾನರನ್ನು ತನ್ನೊಂದಿಗೆ ಕರಕೊಂಡು ಹೋಗಿ ಅತಿವಿಸ್ಮಯಗೊಂಡು ಬಹಳ ಮನಗುಂದಿದವನಾಗಿ--

34 He said to them, "My soul is exceedingly sorrowful, even to death. Stay here, and watch."ನನ್ನ ಪ್ರಾಣವು ಸಾಯುವಷ್ಟು ಅತ್ಯಧಿಕವಾದ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲಿಯೇ ಕಾದುಕೊಂಡಿದ್ದು ಎಚ್ಚರವಾಗಿರ್ರಿ ಅಂದನು.

35 He went forward a little, and fell on the ground, and prayed that, if it were possible, the hour might pass away from him.ಆತನು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿ ಹೋಗುವಂತೆ ಪ್ರಾರ್ಥಿಸಿದನು.

36 He said, "Abba, Father, all things are possible to you. Please remove this cup from me. However, not what I desire, but what you desire."ಆತನು --ಅಪ್ಪಾ, ತಂದೆಯೇ, ಎಲ್ಲವುಗಳು ನಿನಗೆ ಸಾಧ್ಯವಾಗಿವೆ; ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು; ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ ಎಂದು ಹೇಳಿದನು.

37 He came and found them sleeping, and said to Peter, "Simon, are you sleeping? Couldn't you watch one hour?ತರುವಾಯ ಆತನು ಬಂದು ಅವರು ನಿದ್ರೆಮಾಡುವದನ್ನು ಕಂಡು ಪೇತ್ರನಿಗೆ--ಸೀಮೋನನೇ, ನೀನು ನಿದ್ರೆಮಾಡು ತ್ತೀಯಾ? ಒಂದು ಗಳಿಗೆಯಾದರೂ ಎಚ್ಚರವಾಗಿ ರಲಾರೆಯಾ?

38 Watch and pray, that you may not enter into temptation. The spirit indeed is willing, but the flesh is weak."ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ನಿಜವಾಗಿಯೂ ಸಿದ್ಧವಾಗಿದೆ; ಆದರೆ ಶರೀರವು ಬಲಹೀನವಾಗಿದೆ ಎಂದು ಹೇಳಿದನು.

39 Again he went away, and prayed, saying the same words.ಆತನು ತಿರಿಗಿ ಹೊರಟು ಹೋಗಿ ಅದೇ ಮಾತುಗಳನ್ನು ಹೇಳುತ್ತಾ ಪ್ರಾರ್ಥಿಸಿ ದನು.

40 Again he returned, and found them sleeping, for their eyes were very heavy, and they didn't know what to answer him.ಆತನು ಹಿಂತಿರುಗಿದಾಗ ಅವರು ತಿರಿಗಿ ನಿದ್ರೆ ಮಾಡುವದನ್ನು ಕಂಡನು; (ಯಾಕಂದರೆ ಅವರ ಕಣ್ಣುಗಳು ಭಾರವಾಗಿದ್ದವು;) ಆತನಿಗೆ ಅವರು ಏನು ಉತ್ತರ ಕೊಡಬೇಕೋ ತಿಳಿಯಲಿಲ್ಲ.

41 He came the third time, and said to them, "Sleep on now, and take your rest. It is enough. The hour has come. Behold, the Son of Man is betrayed into the hands of sinners.ಆತನು ಮೂರನೆಯ ಸಾರಿ ಬಂದು ಅವರಿಗೆ-- ಈಗ ನಿದ್ರೆ ಮಾಡಿ ನಿಮ್ಮ ವಿಶ್ರಾಂತಿಯನ್ನು ತೆಗೆದುಕೊಳ್ಳಿರಿ; ಇನ್ನು ಸಾಕು; ಗಳಿಗೆ ಬಂದಿದೆ; ಇಗೋ, ಮನುಷ್ಯ ಕುಮಾರನು ಪಾಪಿಗಳ ಕೈಗಳಿಗೆ ಹಿಡುಕೊಡಲ್ಪಡುತ್ತಾನೆ;

42 Arise, let us be going. Behold, he who betrays me is at hand."ಏಳಿರಿ, ನಾವು ಹೋಗೋಣ; ಇಗೋ ನನ್ನನ್ನು ಹಿಡುಕೊಡುವವನು ಸವಿಾಪದಲ್ಲಿದ್ದಾನೆ ಎಂದು ಹೇಳಿದನು.

43 Immediately, while he was still speaking, Judas, one of the twelve, came--and with him a multitude with swords and clubs, from the chief priests, the scribes, and the elders.ಆತನು ಇನ್ನೂ ಮಾತನಾಡುತ್ತಿರುವಾಗಲೇ ಹನ್ನೆ ರಡು ಮಂದಿಯಲ್ಲಿ ಒಬ್ಬನಾದ ಯೂದನು ಬಂದನು; ಪ್ರಧಾನ ಯಾಜಕರ ಶಾಸ್ತ್ರಿಗಳ ಮತ್ತು ಹಿರಿಯರ ಕಡೆ ಯಿಂದ ಬಂದಿದ್ದ ಜನರ ದೊಡ್ಡ ಸಮೂಹವು ಕತ್ತಿ ದೊಣ್ಣೆಗಳನ್ನು ಹಿಡಿದುಕೊಂಡು ಅವನ ಕೂಡ ಬಂದರು.

44 Now he who betrayed him had given them a sign, saying, "Whoever I will kiss, that is he. Seize him, and lead him away safely."ಇದಲ್ಲದೆ ಆತನನ್ನು ಹಿಡುಕೊಡುವವನು ಅವರಿಗೆ--ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಆತನನ್ನು ಹಿಡಿದು ಭದ್ರವಾಗಿ ತೆಗೆದುಕೊಂಡು ಹೋಗಿರಿ ಎಂದು ಗುರುತು ಹೇಳಿಕೊಟ್ಟಿದ್ದನು.

45 When he had come, immediately he came to him, and said, "Rabbi! Rabbi!" and kissed him.ಅವನು ಬಂದ ಕೂಡಲೆ ನೇರವಾಗಿ ಆತನ ಕಡೆಗೆ ಹೋಗಿ-- ಗುರುವೇ, ಗುರುವೇ ಎಂದು ಹೇಳಿ ಆತನಿಗೆ ಮುದ್ದಿಟ್ಟನು.

46 They laid their hands on him, and seized him.ಆಗ ಅವರು ಆತನ ಮೇಲೆ ಕೈ ಹಾಕಿ ಆತನನ್ನು ಹಿಡಿದರು.

47 But a certain one of those who stood by drew his sword, and struck the servant of the high priest, and cut off his ear.ಆದರೆ ಹತ್ತಿರ ನಿಂತಿದ್ದ ವರಲ್ಲಿ ಒಬ್ಬನು ಕತ್ತಿಯನ್ನು ಹಿರಿದು ಪ್ರಧಾನ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿ ದನು.

48 Jesus answered them, "Have you come out, as against a robber, with swords and clubs to seize me?ಯೇಸು ಅವರಿಗೆ-- ಕತ್ತಿಗಳನ್ನು ಮತ್ತು ದೊಣ್ಣೆಗಳನ್ನು ತಕ್ಕೊಂಡು ಕಳ್ಳನಿಗೆ ವಿರೋಧವಾಗಿ ಬರುವಂತೆ ನನ್ನನ್ನು ಹಿಡಿಯುವದಕ್ಕಾಗಿ ಬಂದಿರಾ?

49 I was daily with you in the temple teaching, and you didn't arrest me. But this is so that the Scriptures might be fulfilled."ನಾನು ಪ್ರತಿ ದಿನವೂ ದೇವಾಲಯದಲ್ಲಿ ಬೋಧಿ ಸುತ್ತಾ ನಿಮ್ಮ ಸಂಗಡ ಇದ್ದೆನು; ಆಗ ನೀವು ನನ್ನನು ಹಿಡಿಯಲಿಲ್ಲ; ಆದರೆ ಬರಹಗಳು ನೆರವೇರಲೇಬೇಕು ಅಂದನು.

50 They all left him, and fled.ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.

51 A certain young man followed him, having a linen cloth thrown around himself, over his naked body. The young men grabbed him,ಅಲ್ಲಿ ಒಬ್ಬಾನೊಬ್ಬ ಯೌವನಸ್ಥನು ಬರೀ ಮೈಮೇಲೆ ನಾರು ಬಟ್ಟೆಯನ್ನು ಹಾಕಿಕೊಂಡವನಾಗಿ ಆತನನ್ನು ಹಿಂಬಾಲಿಸುತ್ತಿರಲು ಯೌವನಸ್ಥರು ಅವನನ್ನು ಹಿಡಿದರು.

52 but he left the linen cloth, and fled from them naked.ಆಗ ಅವನು ಆ ನಾರುಮಡಿಯನ್ನು ಬಿಟ್ಟು ಬರೀ ಮೈಯಲ್ಲಿ ಓಡಿಹೋದನು.

53 They led Jesus away to the high priest. All the chief priests, the elders, and the scribes came together with him.ಇದಾದ ಮೇಲೆ ಅವರು ಯೇಸುವನ್ನು ಮಹಾ ಯಾಜಕನ ಬಳಿಗೆ ತೆಗೆದುಕೊಂಡು ಹೋದರು; ಆತನ ಸಂಗಡ ಪ್ರಧಾನ ಯಾಜಕರೆಲ್ಲರೂ ಹಿರಿಯರೂ ಶಾಸ್ತ್ರಿಗಳೂ ಅವನ ಬಳಿಗೆ ಕೂಡಿ ಬಂದರು.

54 Peter had followed him from a distance, until he came into the court of the high priest. He was sitting with the officers, and warming himself in the light of the fire.ಆದರೆ ಪೇತ್ರನು ಮಹಾಯಾಜಕನ ಭವನದವರೆಗೂ ದೂರ ದಿಂದ ಆತನನ್ನು ಹಿಂಬಾಲಿಸಿ ಆಳುಗಳ ಸಂಗಡ ಕೂತುಕೊಂಡು ಬೆಂಕಿಯ ಹತ್ತಿರ ಚಳಿ ಕಾಯಿಸಿಕೊಳ್ಳು ತ್ತಿದ್ದನು.

55 Now the chief priests and the whole council sought witnesses against Jesus to put him to death, and found none.ಪ್ರಧಾನಯಾಜಕರೂ ನ್ಯಾಯಸಭೆಯವ ರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನಿಗೆ ವಿರೋಧವಾಗಿ ಸಾಕ್ಷಿಯನ್ನು ಹುಡುಕಿ ಏನೂ ಕಂಡು ಕೊಳ್ಳಲಿಲ್ಲ.

56 For many gave false testimony against him, and their testimony didn't agree with each other.ಅನೇಕರು ಆತನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿಯು ಒಂದ ಕ್ಕೊಂದು ಒಪ್ಪಲಿಲ್ಲ.

57 Some stood up, and gave false testimony against him, saying,ತರುವಾಯ ಕೆಲವರು ಎದ್ದು ಆತನಿಗೆ ವಿರೋಧವಾಗಿ ಸಾಕ್ಷಿ ಹೇಳುತ್ತಾ--

58 "We heard him say, 'I will destroy this temple that is made with hands, and in three days I will build another made without hands.'"ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದನ್ನು ಮೂರು ದಿನಗಳಲ್ಲಿ ಕಟ್ಟುವೆನು ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ ಅಂದರು.

59 Even so, their testimony did not agree.ಹೀಗಿದ್ದರೂ ಅವರ ಸಾಕ್ಷಿ ಒಂದಕ್ಕೊಂದು ಒಪ್ಪಿಗೆಯಾಗಲಿಲ್ಲ.

60 The high priest stood up in the midst, and asked Jesus, "Have you no answer? What is it which these testify against you?"ಆಗ ಮಹಾಯಾಜಕನು ಎದ್ದು ನಡುವೆ ನಿಂತು ಯೇಸುವಿಗೆ--ನೀನು ಏನೂ ಉತ್ತರಕೊಡುವದಿ ಲ್ಲವೋ? ಇವರು ನಿನಗೆ ವಿರೋಧವಾಗಿ ಹೇಳುವ ಈ ಸಾಕ್ಷಿ ಏನು ಎಂದು ಕೇಳಿದನು.

61 But he stayed quiet, and answered nothing. Again the high priest asked him, "Are you the Christ, the Son of the Blessed?"ಆದರೆ ಆತನು ಏನೂ ಉತ್ತರ ಕೊಡದೆ ಮೌನವಾಗಿದ್ದನು; ತಿರಿಗಿ ಮಹಾಯಾಜಕನು--ನೀನು ಆ ಕ್ರಿಸ್ತನೋ? ಸ್ತುತಿಹೊಂದುವಾತನ ಕುಮಾರನೋ ಎಂದು ಆತನನ್ನು ಕೇಳಿದನು.

62 Jesus said, "I AM. You will see the Son of Man sitting at the right hand of Power, and coming with the clouds of the sky."ಅದಕ್ಕೆ ಯೇಸು--ನಾನೇ, ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಪಾರ್ಶ್ವದಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳಲ್ಲಿ ಬರುವದನ್ನೂ ನೀವು ನೋಡುವಿರಿ ಅಂದನು.

63 The high priest tore his clothes, and said, "What further need have we of witnesses?ಅದಕ್ಕೆ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು--ನಮಗೆ ಇನ್ನು ಹೆಚ್ಚು ಸಾಕ್ಷಿಗಳ ಅವಶ್ಯಕತೆ ಏನಿದೆ?

64 You have heard the blasphemy! What do you think?" They all condemned him to be worthy of death.ನೀವು ಈ ದೇವದೂಷಣೆಯನ್ನು ಕೇಳಿದ್ದೀರಲ್ಲಾ; ನಿಮಗೆ ಹೇಗೆ ತೋರುತ್ತದೆ ಎಂದು ಕೇಳಲು ಅವರೆಲ್ಲರೂ ಅವನು ಮರಣದಂಡನೆ ಹೊಂದತಕ್ಕವನು ಎಂದು ತೀರ್ಪುಮಾಡಿದರು

65 Some began to spit on him, and to cover his face, and to beat him with fists, and to tell him, "Prophesy!" The officers struck him with the palms of their hands.ತರು ವಾಯ ಕೆಲವರು ಆತನ ಮೇಲೆ ಉಗುಳಿ ಆತನ ಮುಖವನ್ನು ಮುಚ್ಚಿ ಆತನನ್ನು ಗುದ್ದುವದಕ್ಕೆ ಆರಂಭಿಸಿ ಆತನಿಗೆ--ಪ್ರವಾದನೆ ಹೇಳು ಅಂದರು. ಆಳು ಗಳು ಆತನನ್ನು ಹೊಡೆದರು.

66 As Peter was in the courtyard below, one of the maids of the high priest came,ಇದಲ್ಲದೆ ಪೇತ್ರನು ಭವನದ ಕೆಳಭಾಗದಲ್ಲಿದ್ದಾಗ ಮಹಾಯಾಜಕನ ದಾಸಿಯರಲ್ಲಿ ಒಬ್ಬಳು ಅಲ್ಲಿಗೆ ಬಂದಳು.

67 and seeing Peter warming himself, she looked at him, and said, "You were also with the Nazarene, Jesus!"ಪೇತ್ರನು ಚಳಿಕಾಯಿಸಿಕೊಳ್ಳುತ್ತಿರು ವದನ್ನು ಆಕೆಯು ಕಂಡು ಅವನನ್ನು ದೃಷ್ಟಿಸಿ ನೋಡಿ--ನೀನು ಸಹ ಆ ನಜರೇತಿನ ಯೇಸುವಿ ನೊಂದಿಗೆ ಇದ್ದವನು ಅಂದಳು.

68 But he denied it, saying, "I neither know, nor understand what you are saying." He went out on the porch, and the rooster crowed.ಆದರೆ ಅವನು ಅಲ್ಲಗಳೆದು--ನನಗೆ ಗೊತ್ತಿಲ್ಲ, ನೀನು ಏನು ಹೇಳುತ್ತೀಯೋ ನನಗೆ ತಿಳಿಯುವದಿಲ್ಲ ಎಂದು ಹೇಳಿ ಅಲ್ಲಗಳೆದು ಹೊರಗೆ ದ್ವಾರಾಂಗಳದೊಳಗೆ ಹೋದನು; ಆಗ ಹುಂಜ ಕೂಗಿತು.

69 The maid saw him, and began again to tell those who stood by, "This is one of them."ಆ ದಾಸಿಯು ಅವನನ್ನು ತಿರಿಗಿ ನೋಡಿ ಪಕ್ಕದಲ್ಲಿ ನಿಂತಿದ್ದವರಿಗೆ--ಇವನು ಅವರಲ್ಲಿ ಒಬ್ಬನು ಎಂದು ಹೇಳಲಾರಂಭಿಸಿದಳು.

70 But he again denied it. After a little while again those who stood by said to Peter, "You truly are one of them, for you are a Galilean, and your speech shows it."ಆಗ ಅವನು ಮತ್ತೆ ಅಲ್ಲಗಳೆದನು. ತುಸು ಹೊತ್ತಾದ ಮೇಲೆ ಪಕ್ಕದಲ್ಲಿ ನಿಂತಿದ್ದವರು ತಿರಿಗಿ ಪೇತ್ರನಿಗೆ--ನಿಶ್ಚಯವಾಗಿಯೂ ನೀನು ಅವರಲ್ಲಿ ಒಬ್ಬನು; ಯಾಕಂದರೆ ನೀನು ಗಲಿಲಾಯದವನು ಮತ್ತು ನಿನ್ನ ಭಾಷೆ ಅದಕ್ಕೆ ಒಪ್ಪುತ್ತದೆ ಅಂದರು.

71 But he began to curse, and to swear, "I don't know this man of whom you speak!"ಆದರೆ ಅವನು ಶಪಿಸಿ ಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಆರಂ ಭಿಸಿ--ನೀವು ಮಾತನಾಡುತ್ತಿರುವ ಈ ಮನುಷ್ಯನನ್ನು ನಾನರಿಯೆ ಅಂದನು.

72 The rooster crowed the second time. Peter remembered the word, how that Jesus said to him, "Before the rooster crows twice, you will deny me three times." When he thought about that, he wept.ಆಗ ಎರಡನೇ ಸಾರಿ ಹುಂಜ ಕೂಗಿತು. ಹೀಗೆ--ಎರಡು ಸಾರಿ ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ಅದನ್ನು ಯೋಚಿಸಿ ಅತ್ತನು.

Kannada Bible