Bible

Mark 2 - ASV (Kannada)

1 And when he entered again into Capernaum after some days, it was noised that he was in the house.1 ಕೆಲವು ದಿವಸಗಳಾದ ಮೇಲೆ ಆತನು ತಿರಿಗಿ ಕಪೆರ್ನೌಮಿಗೆ ಬಂದನು; ಆಗ ಆತನು ಮನೆಯಲ್ಲಿದ್ದ ಸುದ್ದಿಯು ಹರಡಿತು.

2 And many were gathered together, so that there was no longer room `for them', no, not even about the door: and he spake the word unto them.ಕೂಡಲೆ ಅನೇಕರು ಕೂಡಿಬಂದದ್ದರಿಂದ ಅವರನ್ನು ಸೇರಿಸಿಕೊಳ್ಳುವದಕ್ಕೆ ಬಾಗಲಿನ ಬಳಿಯಲ್ಲಾದರೂ ಸ್ಥಳವಿರಲಿಲ್ಲ; ಆತನು ಅವರಿಗೆ ವಾಕ್ಯವನ್ನು ಸಾರು ತ್ತಿದ್ದನು;

3 And they come, bringing unto him a man sick of the palsy, borne of four.ಆಗ ಒಬ್ಬ ಪಾರ್ಶ್ವವಾಯು ರೋಗಿಯನ್ನು ನಾಲ್ವರು ಹೊತ್ತುಕೊಂಡು ಆತನ ಬಳಿಗೆ ಬಂದರು.

4 And when they could not come nigh unto him for the crowd, they uncovered the roof where he was: and when they had broken it up, they let down the bed whereon the sick of the palsy lay.ಜನಸಂದಣಿಯ ನಿಮಿತ್ತ ಅವರು ಆತನ ಹತ್ತಿರಕ್ಕೆ ಬರಲಾರದೆ ಆತನಿದ್ದ ಮನೆಯ ಮೇಲ್ಚಾವಣಿಯನ್ನು ಬಿಚ್ಚಿ ಅದನ್ನು ಮುರಿದು ಪಾರ್ಶ್ವವಾಯು ರೋಗಿಯು ಮಲಗಿದ್ದ ಹಾಸಿಗೆಯನ್ನು ಕೆಳಗೆ ಇಳಿಸಿದರು.

5 And Jesus seeing their faith saith unto the sick of the palsy, Son, thy sins are forgiven.ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ--ಮಗನೇ, ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಎಂದು ಹೇಳಿದನು.

6 But there were certain of the scribes sitting there, and reasoning in their hearts,ಆದರೆ ಅಲ್ಲಿ ಕೂತುಕೊಂಡಿದ್ದ ಶಾಸ್ತ್ರಿಗಳಲ್ಲಿ ಕೆಲವರು--

7 Why doth this man thus speak? he blasphemeth: who can forgive sins but one, `even' God?ಈ ಮನುಷ್ಯನು ಯಾಕೆ ಹೀಗೆ ದೇವದೂಷಣೆಗಳನ್ನು ಮಾಡುತ್ತಾನೆ? ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು ಎಂದು ತಮ್ಮ ಹೃದಯ ಗಳಲ್ಲಿ ಅಂದುಕೊಂಡರು.

8 And straightway Jesus, perceiving in his spirit that they so reasoned within themselves, saith unto them, Why reason ye these things in your hearts?ಹೀಗೆ ಅವರು ತಮ್ಮೊಳಗೆ ಅಂದುಕೊಂಡದ್ದನ್ನು ಯೇಸು ಕೂಡಲೆ ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ--ನೀವು ನಿಮ್ಮ ಹೃದಯ ಗಳಲ್ಲಿ ಯಾಕೆ ಇವುಗಳನ್ನು ಆಲೋಚಿಸುತ್ತೀರಿ ಎಂದು ಹೇಳಿ

9 Which is easier, to say to the sick of the palsy, Thy sins are forgiven; or to say, Arise, and take up thy bed, and walk?ಪಾರ್ಶ್ವವಾಯು ರೋಗಿಗೆ--ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅನ್ನುವದೋ? ಯಾವದು ಸುಲಭ?

10 But that ye may know that the Son of man hath authority on earth to forgive sins (he saith to the sick of the palsy),ಆದರೆ ಪಾಪಗಳನ್ನು ಕ್ಷಮಿಸಿಬಿಡುವದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬದು ನಿಮಗೆ ತಿಳಿಯಬೇಕು ಎಂದು ಹೇಳಿ (ಪಾರ್ಶ್ವವಾಯು ರೋಗಿಗೆ)--

11 I say unto thee, Arise, take up thy bed, and go unto thy house.ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.

12 And he arose, and straightway took up the bed, and went forth before them all; insomuch that they were all amazed, and glorified God, saying, We never saw it on this fashion.ಕೂಡಲೆ ಅವನು ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದಕ್ಕೆ ಎಲ್ಲರೂ ಬೆರಗಾಗಿ--ನಾವು ಇಂಥದನ್ನು ಎಂದಿಗೂ ನೋಡಲಿಲ್ಲ ಎಂದು ಹೇಳುತ್ತಾ ದೇವರನ್ನು ಮಹಿಮೆಪಡಿಸಿದರು.

13 And he went forth again by the sea side; and all the multitude resorted unto him, and he taught them.ಆತನು ತಿರಿಗಿ ಸಮುದ್ರದ ಕಡೆಗೆ ಹೊರಟು ಹೋದನು; ಆಗ ಜನಸಮೂಹವೆಲ್ಲಾ ಆತನ ಬಳಿಗೆ ಬಂದಾಗ ಆತನು ಅವರಿಗೆ ಬೋಧಿಸಿದನು.

14 And as he passed by, he saw Levi the `son' of Alphaeus sitting at the place of toll, and he saith unto him, Follow me. And he arose and followed him.ಆತನು ಹಾದುಹೋಗುತ್ತಿದ್ದಾಗ ಸುಂಕದ ಕಟ್ಟೆಯಲ್ಲಿ ಕೂತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ಕಂಡು ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆಗ ಅವನು ಎದ್ದು ಆತನನ್ನು ಹಿಂಬಾಲಿಸಿದನು.

15 And it came to pass, that he was sitting at meat in his house, and many publicans and sinners sat down with Jesus and his disciples: for there were many, and they followed him.ಇದಾದ ಮೇಲೆ ಯೇಸು ಅವನ ಮನೆಯಲ್ಲಿ ಊಟಕ್ಕೆ ಕೂತಿದ್ದಾಗ ಅನೇಕ ಸುಂಕದವರೂ ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಕೂತುಕೊಂಡರು; ಯಾಕಂದರೆ ಅಲ್ಲಿದ್ದ ಅನೇಕರು ಆತನನ್ನು ಹಿಂಬಾಲಿಸುತ್ತಿದ್ದರು.

16 And the scribes of the Pharisees, when they saw that he was eating with the sinners and publicans, said unto his disciples, `How is it' that he eateth and drinketh with publicans and sinners?ಆತನು ಸುಂಕದವರ ಮತ್ತು ಪಾಪಿಗಳ ಜೊತೆಯಲ್ಲಿ ಊಟ ಮಾಡುತ್ತಿರು ವದನ್ನು ಶಾಸ್ತ್ರಿಗಳು ಮತ್ತು ಫರಿಸಾಯರು ನೋಡಿ ಆತನ ಶಿಷ್ಯರಿಗೆ--ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ತಿನ್ನುವದು ಮತ್ತು ಕುಡಿಯುವದು ಹೇಗೆ ಅಂದರು.

17 And when Jesus heard it, he saith unto them, They that are whole have no need of a physician, but they that are sick: I came not to call the righteous, but sinners.ಯೇಸು ಅದನ್ನು ಕೇಳಿ--ಕ್ಷೇಮದಿಂದಿರುವವರಿಗೆ ಅಲ್ಲ, ಕ್ಷೇಮವಿಲ್ಲದವರಿಗೆ ವೈದ್ಯನುಬೇಕು; ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕಾಗಿ ಕರೆಯುವದಕ್ಕೆ ಬಂದೆನು ಎಂದು ಅವರಿಗೆ ಹೇಳಿದನು.

18 And John's disciples and the Pharisees were fasting: and they come and say unto him, Why do John's disciples and the disciples of the Pharisees fast, but thy disciples fast not?ಪದ್ಧತಿಯ ಪ್ರಕಾರ ಉಪವಾಸ ಮಾಡುತ್ತಿದ್ದ ಯೋಹಾನನ ಮತ್ತು ಫರಿಸಾಯರ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಯೋಹಾನನ ಮತ್ತು ಫರಿಸಾಯರ ಶಿಷ್ಯರು ಉಪವಾಸಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಯಾಕೆ ಉಪವಾಸ ಮಾಡುವದಿಲ್ಲ ಎಂದು ಕೇಳಿದರು.

19 And Jesus said unto them, Can the sons of the bridechamber fast, while the bridegroom is with them? as long as they have the bridegroom with them, they cannot fast.ಅದಕ್ಕೆ ಯೇಸು ಅವರಿಗೆ--ಮದಲಿಂಗನು ಅವರ ಸಂಗಡ ಇರುವಾಗ ಮದಲಗಿ ತ್ತಿಯ ಮನೇಮಕ್ಕಳು ಉಪವಾಸ ಮಾಡುವರೋ? ಮದಲಿಂಗನು ಅವರ ಸಂಗಡ ಇರುವ ತನಕ ಅವರು ಉಪವಾಸ ಮಾಡುವದಿಲ್ಲ.

20 But the days will come, when the bridegroom shall be taken away from them, and then will they fast in that day.ಆದರೆ ಮದಲಿಂಗನು ಅವರ ಬಳಿಯಿಂದ ತೆಗೆಯಲ್ಪಡುವ ದಿವಸಗಳು ಬರುತ್ತವೆ; ಆಗ ಅವರು ಆ ದಿವಸಗಳಲ್ಲಿ ಉಪವಾಸ ಮಾಡುವರು.

21 No man seweth a piece of undressed cloth on an old garment: else that which should fill it up taketh from it, the new from the old, and a worse rent is made.ಇದಲ್ಲದೆ ಹೊಸಬಟ್ಟೆಯ ತುಂಡನ್ನು ಹಳೆಯ ಉಡುಪಿಗೆ ಯಾರೂ ಹಚ್ಚುವದಿಲ್ಲ;ಹಚ್ಚಿದರೆ ಹೊಸ ತುಂಡು ಹಳೆಯ ಉಡುಪನ್ನು ಹಿಂಜುವದರಿಂದ ಹರಕು ಹೆಚ್ಚಾಗುವದು.

22 And no man putteth new wine into old wineskins; else the wine will burst the skins, and the wine perisheth, and the skins: but `they put' new wine into fresh wine-skins.ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕುವದಿಲ್ಲ; ಹಾಕಿದರೆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಹಾಕುವದರಿಂದ ದ್ರಾಕ್ಷಾರಸವು ಚೆಲ್ಲಿಹೋಗುವದು ಮತ್ತು ಬುದ್ದಲಿಗಳು ಕೆಟ್ಟುಹೋಗು ವವು. ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿಯೇ ಹಾಕಿಡತಕ್ಕದ

23 And it came to pass, that he was going on the sabbath day through the grainfields; and his disciples began, as they went, to pluck the ears.ಇದಾದ ಮೇಲೆ ಆತನು ಸಬ್ಬತ್‌ ದಿನದಲ್ಲಿ ಪೈರಿನ ಹೊಲಗಳನ್ನು ಹಾದುಹೋಗುತ್ತಿದ್ದಾಗ ಆತನ ಶಿಷ್ಯರು ಕಾಳಿನ ತೆನೆಗಳನ್ನು ಕೀಳಲಾರಂಭಿಸಿದರು.

24 And the Pharisees said unto him, Behold, why do they on the sabbath day that which is not lawful?ಅದಕ್ಕೆ ಫರಿಸಾಯರು ಆತನಿಗೆ--ಇಗೋ, ಅವರು ಸಬ್ಬತ್‌ ದಿನದಲ್ಲಿ ಮಾಡಬಾರದ್ದನ್ನು ಯಾಕೆ ಮಾಡು ತ್ತಾರೆ ಎಂದು ಕೇಳಿದರು.

25 And he said unto them, Did ye never read what David did, when he had need, and was hungry, he, and they that were with him?ಆತನು ಅವರಿಗೆ--ದಾವೀದನು ಕೊರತೆಯುಳ್ಳವನಾಗಿ ಹಸಿದಾಗ ಅವನೂ ಅವನ ಸಂಗಡ ಇದ್ದವರೂ ಏನು ಮಾಡಿ ದರು?

26 How he entered into the house of God when Abiathar was high priest, and ate the showbread, which it is not lawful to eat save for the priests, and gave also to them that were with him?ಮಹಾಯಾಜಕನಾದ ಅಬಿಯಾತರನ ದಿವಸಗಳಲ್ಲಿ ಅವನು ದೇವರ ಮನೆಯೊಳಕ್ಕೆ ಹೋಗಿ ಯಾಜಕರ ಹೊರತು ಬೇರೆಯವರು ತಿನ್ನುವದು ನ್ಯಾಯವಲ್ಲದ ಸಮ್ಮುಖದ ರೊಟ್ಟಿಯನ್ನು ಹೇಗೆ ತಿಂದು ತನ್ನ ಜೊತೆಯಲ್ಲಿ ಇದ್ದವರಿಗೂ ಕೊಟ್ಟನೆಂಬದನ್ನು ನೀವು ಎಂದಾದರೂ ಓದಲಿಲ್ಲವೋ ಎಂದು ಹೇಳಿ ದನು.

27 And he said unto them, The sabbath was made for man, and not man for the sabbath:ಆತನು ಅವರಿಗೆ--ಸಬ್ಬತ್ತು ಮನುಷ್ಯರಿ ಗೋಸ್ಕರ ಮಾಡಲ್ಪಟ್ಟಿತು; ಆದರೆ ಮನುಷ್ಯನು ಸಬ್ಬತ್ತಿಗೋಸ್ಕರ ಅಲ್ಲ;

28 so that the Son of man is lord even of the sabbath.ಆದದರಿಂದ ಮನುಷ್ಯಕುಮಾ ರನು ಸಬ್ಬತ್ತಿಗೆ ಸಹ ಒಡೆಯನಾಗಿದ್ದಾನೆ ಅಂದನು.

Kannada Bible