Mark 3 - KJV (Kannada)
1 And he entered again into the synagogue; and there was a man there which had a withered hand.ಆತನು ತಿರಿಗಿ ಸಭಾಮಂದಿರದಲ್ಲಿ ಪ್ರವೇಶಿಸಿದಾಗ ಅಲ್ಲಿ ಕೈ ಬತ್ತಿದವನಾದ ಒಬ್ಬ ಮನುಷ್ಯನಿದ್ದನು.
2 And they watched him, whether he would heal him on the sabbath day; that they might accuse him.ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಸಬ್ಬತ್ ದಿನದಲ್ಲಿ ಆತನು ಅವನನ್ನು ಸ್ವಸ್ಥ ಮಾಡುವನೇನೋ ಎಂದು ಕಾಯು ತ್ತಿದ್ದರು.
3 And he saith unto the man which had the withered hand, Stand forth.ಆತನು ಕೈಬತ್ತಿದ ಮನುಷ್ಯನಿಗೆ--ಎದ್ದು ನಿಂತುಕೋ ಎಂದು ಹೇಳಿದನು.
4 And he saith unto them, Is it lawful to do good on the sabbath days, or to do evil? to save life, or to kill? But they held their peace.ಆತನು ಅವರಿಗೆ --ಸಬ್ಬತ್ ದಿವಸಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ ಇಲ್ಲವೆ ಕೆಟ್ಟದ್ದನ್ನು ಮಾಡುವದು ನ್ಯಾಯವೋ? ಪ್ರಾಣವನ್ನು ಉಳಿಸುವದೋ ಇಲ್ಲವೆ ಕೊಲ್ಲುವದೋ ಎಂದು ಕೇಳಿದನು; ಆದರೆ ಅವರು ಸುಮ್ಮನಿದ್ದರು.
5 And when he had looked round about on them with anger, being grieved for the hardness of their hearts, he saith unto the man, Stretch forth thine hand. And he stretched it out: and his hand was restored whole as the other.ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು.
6 And the Pharisees went forth, and straightway took counsel with the Herodians against him, how they might destroy him.ಫರಿಸಾ ಯರು ಹೊರಟುಹೋಗಿ ಕೂಡಲೆ ತಾವು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧ ವಾಗಿ ಹೆರೋದ್ಯರೊಂದಿಗೆ ಆಲೋಚನೆ ಮಾಡಿಕೊಂಡರು.
7 But Jesus withdrew himself with his disciples to the sea: and a great multitude from Galilee followed him, and from Judaea,ಆದರೆ ಯೇಸು ತನ್ನ ಶಿಷ್ಯರೊಂದಿಗೆ ಸಮುದ್ರದ ಕಡೆಗೆ ಹಿಂದಿರುಗಿದನು; ಆಗ ಗಲಿಲಾಯದಿಂದಲೂ ಯೂದಾಯದಿಂದಲೂ
8 And from Jerusalem, and from Idumaea, and from beyond Jordan; and they about Tyre and Sidon, a great multitude, when they had heard what great things he did, came unto him.ಯೆರೂಸಲೇಮಿನಿಂದಲೂ ಇದೂಮಾಯದಿಂದಲೂ ಯೊರ್ದನಿನ ಆಚೆಯಿಂ ದಲೂ ಜನರು ದೊಡ್ಡ ಸಮೂಹವಾಗಿ ಆತನನ್ನು ಹಿಂಬಾಲಿಸಿದರು. ಆತನು ಮಾಡಿದ ಮಹತ್ಕಾರ್ಯ ಗಳನ್ನು ಕೇಳಿ ತೂರ್ ಸೀದೋನ್ ಸುತ್ತಲಿನ ಜನರು ದೊಡ್ಡ ಸಮೂಹವಾಗಿ ಆತನ ಬಳಿಗೆ ಬಂದರು.
9 And he spake to his disciples, that a small ship should wait on him because of the multitude, lest they should throng him.ಸಮೂಹವು ತನ್ನನ್ನು ನೂಕದಂತೆ ತನಗೋಸ್ಕರ ಒಂದು ಚಿಕ್ಕ ದೋಣಿಯು ಸಿದ್ಧವಿರ ಬೇಕೆಂದು ಆತನು ತನ್ನ ಶಿಷ್ಯರಿಗೆ ಹೇಳಿದನು.
10 For he had healed many; insomuch that they pressed upon him for to touch him, as many as had plagues.ಯಾಕಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರು ಆತನನ್ನು ಮುಟ್ಟಬೇ ಕೆಂದು ಆತನ ಮೇಲೆ ಬೀಳುತ್ತಿದ್ದರು.
11 And unclean spirits, when they saw him, fell down before him, and cried, saying, Thou art the Son of God.ಅಶುದ್ಧಾತ್ಮಗಳು ಆತನನ್ನು ಕಂಡಾಗ ಆತನ ಮುಂದೆ ಬಿದ್ದು--ನೀನು ದೇವಕುಮಾರನು ಎಂದು ಕೂಗಿ ಹೇಳಿದವು.
12 And he straitly charged them that they should not make him known.ಆದರೆ ಆತನು ತನ್ನನ್ನು ಯಾರಿಗೂ ತಿಳಿಯಪಡಿಸಬಾರದೆಂದು ಅವರಿಗೆ ನೇರವಾಗಿ ಆಜ್ಞಾಪಿಸಿದನು.
13 And he goeth up into a mountain, and calleth unto him whom he would: and they came unto him.ತರುವಾಯ ಆತನು ಬೆಟ್ಟದ ಮೇಲೆ ಹೋಗಿ ತನಗೆ ಬೇಕಾದವರನ್ನು ಕರೆಯಲು ಅವರು ಆತನ ಬಳಿಗೆ ಬಂದರು.
14 And he ordained twelve, that they should be with him, and that he might send them forth to preach,ಆತನು ಹನ್ನೆರಡು ಮಂದಿಯನ್ನು ತನ್ನೊಂದಿಗೆ ಇರುವದಕ್ಕೂ (ಸುವಾರ್ತೆ) ಸಾರುವದ ಕ್ಕಾಗಿ ತಾನು ಅವರನ್ನು ಕಳುಹಿಸುವದಕ್ಕೂ
15 And to have power to heal sicknesses, and to cast out devils:ವ್ಯಾಧಿ ಗಳನ್ನು ಸ್ವಸ್ಥಮಾಡುವದಕ್ಕೂ ದೆವ್ವಗಳನ್ನು ಬಿಡಿಸು ವದಕ್ಕೂ ನೇಮಿಸಿ ಅವರಿಗೆ ಅಧಿಕಾರ ಕೊಟ್ಟನು.
16 And Simon he surnamed Peter;ಆತನು ಸೀಮೋನನಿಗೆ ಪೇತ್ರನೆಂದು ಹೆಸರಿಟ್ಟನು.
17 And James the son of Zebedee, and John the brother of James; and he surnamed them Boanerges, which is, The sons of thunder:ಮತ್ತು ಜೆಬೆದಾಯನ ಮಗನಾದ ಯಾಕೋಬ ನಿಗೂ ಯಾಕೋಬನ ಸಹೋದರನಾದ ಯೋಹಾನ ನಿಗೂ ಬೊವನೆರ್ಗೆಸ್ ಎಂದು ಹೆಸರಿಟ್ಟನು ಅಂದರೆ ಗುಡುಗಿನ ಪುತ್ರರು ಎಂದರ್ಥ.
18 And Andrew, and Philip, and Bartholomew, and Matthew, and Thomas, and James the son of Alphaeus, and Thaddaeus, and Simon the Canaanite,ಮತ್ತು ಅಂದ್ರೆಯ, ಫಿಲಿಪ್ಪ, ಬಾರ್ತೂಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಕಾನಾನ್ಯನಾದ ಸೀಮೋನ,
19 And Judas Iscariot, which also betrayed him: and they went into an house.ಆತನನ್ನು ಹಿಡು ಕೊಡಲಿಕ್ಕಿದ್ದ ಯೂದ ಇಸ್ಕರಿ ಯೋತ್ ಎಂಬವರೇ. ಮತ್ತು ಅವರು ಒಂದು ಮನೆಯೊಳಕ್ಕೆ ಹೋದರು.
20 And the multitude cometh together again, so that they could not so much as eat bread.ಜನಸಮೂಹವು ಅಲ್ಲಿ ತಿರಿಗಿ ಕೂಡಿಬಂದದ್ದ ರಿಂದ ಅವರು ರೊಟ್ಟಿ ತಿನ್ನುವದಕ್ಕೂ ಆಗದೆ ಹೋಯಿತು.
21 And when his friends heard of it, they went out to lay hold on him: for they said, He is beside himself.ಆತನ ಸ್ನೇಹಿತರು ಇದನ್ನು ಕೇಳಿ ದಾಗ ಆತನನ್ನು ಹಿಡಿಯುವದಕ್ಕಾಗಿ ಹೊರಟರು. ಯಾಕಂದರೆ ಅವರು--ಈತನಿಗೆ ಹುಚ್ಚು ಹಿಡಿದದೆ ಎಂದು ಅಂದರು.
22 And the scribes which came down from Jerusalem said, He hath Beelzebub, and by the prince of the devils casteth he out devils.ಇದಲ್ಲದೆ ಯೆರೂಸಲೇಮಿ ನಿಂದ ಬಂದ ಶಾಸ್ತ್ರಿಗಳು--ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ ಮತ್ತು ಇವನು ದೆವ್ವಗಳ ಅಧಿಪತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
23 And he called them unto him, and said unto them in parables, How can Satan cast out Satan?ಆತನು ಅವರನ್ನು ತನ್ನ ಹತ್ತಿರಕ್ಕೆ ಕರೆದು ಸಾಮ್ಯಗಳಲ್ಲಿ ಅವರಿಗೆ--ಸೈತಾನನು ಸೈತಾನನನ್ನು ಹೊರಗೆ ಹಾಕು ವದು ಹೇಗೆ?
24 And if a kingdom be divided against itself, that kingdom cannot stand.ಒಂದು ರಾಜ್ಯವು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ರಾಜ್ಯವು ನಿಲ್ಲಲಾರದು.
25 And if a house be divided against itself, that house cannot stand.ಇದ ಲ್ಲದೆ ಒಂದು ಮನೆಯು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ಮನೆಯು ನಿಲ್ಲಲಾರದು.
26 And if Satan rise up against himself, and be divided, he cannot stand, but hath an end.ಸೈತಾನನು ತನಗೆ ತಾನೇ ವಿರೋಧವಾಗಿ ಎದ್ದು ವಿಭಾಗಿಸಲ್ಪಟ್ಟರೆ ಅವನು ನಿಲ್ಲಲಾರದೆ ಅಂತ್ಯಗೊಳ್ಳುವನು.
27 No man can enter into a strong man's house, and spoil his goods, except he will first bind the strong man; and then he will spoil his house.ಇದಲ್ಲದೆ ಒಬ್ಬ ಮನುಷ್ಯನು ಮೊದಲು ಬಲಿಷ್ಠನನ್ನು ಕಟ್ಟದ ಹೊರತು ಅವನ ಮನೆಯೊಳಕ್ಕೆ ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳಲಾರನು; ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವನು ಅಂದನು.
28 Verily I say unto you, All sins shall be forgiven unto the sons of men, and blasphemies wherewith soever they shall blaspheme:ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಎಲ್ಲಾ ಪಾಪಗಳೂ ದೇವದೂಷಣೆಗಳೂ ಮನುಷ್ಯ ಪುತ್ರರಿಗೆ ಕ್ಷಮಿಸಲ್ಪ ಡುವವು;
29 But he that shall blaspheme against the Holy Ghost hath never forgiveness, but is in danger of eternal damnation.ಆದರೆ ಯಾವನು ಪವಿತ್ರಾತ್ಮನಿಗೆ ವಿರೋಧವಾಗಿ ದೂಷಣೆ ಮಾಡುವನೋ ಅವನಿಗೆ ಎಂದಿಗೂ ಕ್ಷಮಾಪಣೆ ಇಲ್ಲ; ಆದರೆ ಅವನು ನಿತ್ಯವಾದ ದಂಡನೆಯ ಅಪಾಯಕ್ಕೆ ಒಳಗಾಗುವನು ಅಂದನು.
30 Because they said, He hath an unclean spirit.ಯಾಕಂದರೆ ಅವರು--ಇವನಿಗೆ ಅಶುದ್ಧಾತ್ಮವಿದೆ ಎಂದು ಹೇಳಿದರು.
31 There came then his brethren and his mother, and, standing without, sent unto him, calling him.ತರುವಾಯ ಆತನ ಸಹೋದರರೂ ತಾಯಿಯೂ ಅಲ್ಲಿಗೆ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೇಕಳುಹಿಸಿದರು.
32 And the multitude sat about him, and they said unto him, Behold, thy mother and thy brethren without seek for thee.ಜನಸಮೂಹವು ಆತನ ಸುತ್ತಲೂ ಕೂತುಕೊಂಡು ಆತನಿಗೆ--ಇಗೋ, ಹೊರಗೆ ನಿನ್ನ ತಾಯಿಯೂ ನಿನ್ನ ಸಹೋದರರೂ ನಿನ್ನನ್ನು ಹುಡುಕುತ್ತಿದ್ದಾರೆ ಎಂದು ಹೇಳಿದರು.
33 And he answered them, saying, Who is my mother, or my brethren?ಆತನು ಪ್ರತ್ಯುತ್ತರವಾಗಿ ಅವರಿಗೆ--ನನ್ನ ತಾಯಿ ಇಲ್ಲವೆ ನನ್ನ ಸಹೋದರರು ಯಾರು ಎಂದು ಹೇಳಿ
34 And he looked round about on them which sat about him, and said, Behold my mother and my brethren!ತನ್ನ ಸುತ್ತಲೂ ಕೂತಿದ್ದವರನ್ನು ನೋಡಿ--ಇಗೋ, ನನ್ನ ತಾಯಿ ಮತ್ತು ನನ್ನ ಸಹೋದರರು!
35 For whosoever shall do the will of God, the same is my brother, and my sister, and mother.ಯಾಕಂದರೆ ಯಾವನು ದೇವರ ಚಿತ್ತದಂತೆ ಮಾಡುವನೋ ಅವನೇ ನನ್ನ ಸಹೋದರನೂ ನನ್ನ ಸಹೋದರಿಯೂ ನನ್ನ ತಾಯಿಯೂ ಆಗಿದ್ದಾರೆ ಅಂದನು.
Kannada Bible