Mark 4 - KJV (Kannada)
1 And he began again to teach by the sea side: and there was gathered unto him a great multitude, so that he entered into a ship, and sat in the sea; and the whole multitude was by the sea on the land.ಆತನು ತಿರಿಗಿ ಸಮುದ್ರದ ಬಳಿಯಲ್ಲಿ ಬೋಧಿಸಲಾರಂಭಿಸಿದನು; ಮತ್ತು ಜನರ ದೊಡ್ಡ ಸಮೂಹವು ಆತನ ಬಳಿಗೆ ಕೂಡಿಬಂದದ್ದ ರಿಂದ ಆತನು ಸಮುದ್ರದಲ್ಲಿದ್ದ ಒಂದು ದೋಣಿ ಯನ್ನು ಹತ್ತಿ ಕೂತುಕೊಂಡನು; ಆಗ ಜನ ಸಮೂಹವೆಲ್ಲಾ ಸಮುದ್ರದ ಬಳಿಯಲ್ಲಿ ನೆಲದ ಮೇಲೆ ಇದ್ದರು.
2 And he taught them many things by parables, and said unto them in his doctrine,ಆತನು ಸಾಮ್ಯಗಳಲ್ಲಿ ಅವರಿಗೆ ಅನೇಕ ವಿಷಯಗಳನ್ನು ಕಲಿಸಿ ತನ್ನ ಬೋಧನೆ ಯಲ್ಲಿ ಅವರಿಗೆ ಹೇಳಿದ್ದೇನಂದರೆ--
3 Hearken; Behold, there went out a sower to sow:ಕೇಳಿರಿ, ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟುಹೋದನು.
4 And it came to pass, as he sowed, some fell by the way side, and the fowls of the air came and devoured it up.ಅವನು ಬಿತ್ತಿದಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು. ಆಗ ಆಕಾಶದ ಪಕ್ಷಿಗಳು ಬಂದು ಅವುಗಳನ್ನು ನುಂಗಿಬಿಟ್ಟವು.
5 And some fell on stony ground, where it had not much earth; and immediately it sprang up, because it had no depth of earth:ಇನ್ನು ಕೆಲವು ಹೆಚ್ಚು ಮಣ್ಣಿಲ್ಲದ ಬಂಡೆಯ ನೆಲದ ಮೇಲೆ ಬಿದ್ದವು; ಅದಕ್ಕೆ ಆಳವಾದ ಮಣ್ಣು ಇಲ್ಲದ್ದರಿಂದ ಅವು ಕೂಡಲೆ ಮೊಳೆತವು;
6 But when the sun was up, it was scorched; and because it had no root, it withered away.ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಬೇರಿಲ್ಲದ ಕಾರಣ ಒಣಗಿಹೋದವು;
7 And some fell among thorns, and the thorns grew up, and choked it, and it yielded no fruit.ಮತ್ತೆ ಕೆಲವು ಮುಳ್ಳು ಗಳಲ್ಲಿ ಬಿದ್ದವು; ಆ ಮುಳ್ಳುಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟದ್ದರಿಂದ ಅವು ಫಲಕೊಡಲಿಲ್ಲ.
8 And other fell on good ground, and did yield fruit that sprang up and increased; and brought forth, some thirty, and some sixty, and some an hundred.ಕೆಲವು ಒಳ್ಳೇ ನೆಲದ ಮೇಲೆ ಬಿದ್ದು ಮೊಳೆತು ಬೆಳೆಯುತಾ ಕೆಲವು ಮೂವತ್ತರಷ್ಟು, ಅರವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು.
9 And he said unto them, He that hath ears to hear, let him hear.ಆತನು ಅವರಿಗೆ ಹೇಳಿದ್ದೇನಂದರೆ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
10 And when he was alone, they that were about him with the twelve asked of him the parable.ಆತನು ಒಬ್ಬನೇ ಇದ್ದಾಗ ಆತನ ಸುತ್ತಲೂ ಇದ್ದವರು ಹನ್ನೆರಡು ಮಂದಿಯೊಂದಿಗೆ ಆ ಸಾಮ್ಯದ ವಿಷಯವಾಗಿ ಆತನನ್ನು ಕೇಳಿದರು.
11 And he said unto them, Unto you it is given to know the mystery of the kingdom of God: but unto them that are without, all these things are done in parables:ಅದಕ್ಕೆ ಆತನು ಅವರಿಗೆ--ದೇವರ ರಾಜ್ಯದ ಮರ್ಮವನ್ನು ತಿಳಿದುಕೊಳ್ಳಲು ನಿಮಗೆ ಕೊಡಲ್ಪಟ್ಟಿದೆ. ಆದರೆ ಹೊರಗಿನವರಿಗೆ ಇವೆಲ್ಲವುಗಳು ಸಾಮ್ಯಗಳಿಂದ ಹೇಳಲ್ಪಡುತ್ತವೆ.
12 That seeing they may see, and not perceive; and hearing they may hear, and not understand; lest at any time they should be converted, and their sins should be forgiven them.ಯಾಕಂದರೆ ಅವರು ದೃಷ್ಟಿಯಿ ದ್ದರೂ ನೋಡಿ ತಿಳುಕೊಳ್ಳದಂತೆ ಕೇಳಿದರೂ ಕೇಳಿ ಗ್ರಹಿಸದಂತೆ ಮತ್ತು ಅವರು ತಿರುಗಿಕೊಂಡು ತಮ್ಮ ಪಾಪಗಳಿಂದ ಕ್ಷಮಿಸಲ್ಪಡದಂತೆ ಆಗುವದು.
13 And he said unto them, Know ye not this parable? and how then will ye know all parables?ಮತ್ತು ಆತನು ಅವರಿಗೆ--ಈ ಸಾಮ್ಯವು ನಿಮಗೆ ತಿಳಿಯ ಲಿಲ್ಲವೋ? ಹಾಗಾದರೆ ಎಲ್ಲಾ ಸಾಮ್ಯಗಳನ್ನು ನೀವು ಹೇಗೆ ತಿಳಿದುಕೊಳ್ಳುವಿರಿ?
14 The sower soweth the word.ಬಿತ್ತುವವನು ವಾಕ್ಯವನ್ನು ಬಿತ್ತುತ್ತಾನೆ.
15 And these are they by the way side, where the word is sown; but when they have heard, Satan cometh immediately, and taketh away the word that was sown in their hearts.ದಾರಿಯ ಮಗ್ಗುಲಲ್ಲಿ ವಾಕ್ಯವು ಬಿತ್ತಲ್ಪಟ್ಟವರು ಇವರೇ; ಆದರೆ ಇವರು ಕೇಳಿದಾಗ ಸೈತಾನನು ಕೂಡಲೆ ಬಂದು ಅವರ ಹೃದಯಗಳಲ್ಲಿ ಬಿತ್ತಲ್ಪಟ್ಟಿದ್ದ ವಾಕ್ಯವನ್ನು ತೆಗೆದು ಬಿಡುತ್ತಾನೆ.
16 And these are they likewise which are sown on stony ground; who, when they have heard the word, immediately receive it with gladness;ಅದೇ ಪ್ರಕಾರ ಬಂಡೆಯ ನೆಲದ ಮೇಲೆ ಬಿತ್ತಲ್ಪಟ್ಟವರು ವಾಕ್ಯವನ್ನು ಕೇಳಿದಾಗ ಕೂಡಲೆ ಅದನ್ನು ಸಂತೋಷದಿಂದ ಅಂಗೀಕರಿಸಿ
17 And have no root in themselves, and so endure but for a time: afterward, when affliction or persecution ariseth for the word's sake, immediately they are offended.ತಮ್ಮಲ್ಲಿ ಬೇರು ಇಲ್ಲದ ಕಾರಣ ಸ್ವಲ್ಪ ಕಾಲ ಮಾತ್ರ ಇರುವಂಥವರಾಗಿದ್ದಾರೆ; ತರುವಾಯ ವಾಕ್ಯದ ನಿಮಿತ್ತ ಉಪದ್ರವವಾಗಲೀ ಹಿಂಸೆಯಾಗಲೀ ಬಂದಾಗ ಕೂಡಲೆ ಅವರು ಅಭ್ಯಂತರಪಡುತ್ತಾರೆ.
18 And these are they which are sown among thorns; such as hear the word,ಮುಳ್ಳು ಗಿಡಗಳಲ್ಲಿ ಬಿತ್ತಲ್ಪಟ್ಟವರು ಇವರೇ; ಇಂಥವರು ವಾಕ್ಯವನ್ನು ಕೇಳಿದಾಗ
19 And the cares of this world, and the deceitfulness of riches, and the lusts of other things entering in, choke the word, and it becometh unfruitful.ಈ ಲೋಕದ ಚಿಂತೆಗಳೂ ಐಶ್ವರ್ಯದ ಮೋಸವೂ ಇತರ ವಿಷಯಗಳ ಆಶೆಗಳೂ ಒಳಗೆ ಸೇರಿ ವಾಕ್ಯವನ್ನು ಅಡಗಿಸುವದರಿಂದ ಅದು ನಿಷ್ಫಲವಾಗುವದು.
20 And these are they which are sown on good ground; such as hear the word, and receive it, and bring forth fruit, some thirtyfold, some sixty, and some an hundred.ಒಳ್ಳೆಯ ಭೂಮಿಯ ಮೇಲೆ ಬಿತ್ತಲ್ಪಟ್ಟವರು ಇವರೇ; ಇಂಥವರು ವಾಕ್ಯವನ್ನು ಕೇಳಿ ಅಂಗೀಕರಿಸಿದ ಮೇಲೆ ಕೆಲವರು ಮೂವತ್ತರಷ್ಟು, ಕೆಲವರು ಅರವತ್ತರಷ್ಟು, ಕೆಲವರು ನೂರರಷ್ಟು ಫಲಕೊಡುತ್ತಾರೆ ಅಂದನು.
21 And he said unto them, Is a candle brought to be put under a bushel, or under a bed? and not to be set on a candlestick?ಆತನು ಅವರಿಗೆ--ದೀಪವನ್ನು ಕೊಳಗದೊಳ ಗಾಗಲೀ ಮಂಚದ ಕೇಳಗಾಗಲೀ ಇಡುವದಕ್ಕೆ ತರುವದುಂಟೋ? ದೀಪಸ್ತಂಭದ ಮೇಲೆ ಇಡುವದಕ್ಕೆ ಅಲ್ಲವೋ?
22 For there is nothing hid, which shall not be manifested; neither was any thing kept secret, but that it should come abroad.ಯಾಕಂದರೆ ಪ್ರಕಟವಾಗದಂತೆ ಅಡಗಿಸಲ್ಪಟ್ಟದ್ದು ಯಾವದೂ ಇಲ್ಲ; ಇಲ್ಲವೆ ರಹಸ್ಯವಾಗಿ ಇಡಲ್ಪಟ್ಟದ್ದು ಯಾವದೂ ಬಹಿರಂಗವಾಗಿ ಇರಲಾರದು.
23 If any man have ears to hear, let him hear.ಯಾವನಿಗಾದರೂ ಕೇಳುವದಕ್ಕೆ ಕಿವಿಗಳಿದ್ದರೆ ಅವನು ಕೇಳಲಿ ಅಂದನು.
24 And he said unto them, Take heed what ye hear: with what measure ye mete, it shall be measured to you: and unto you that hear shall more be given.ಆತನು ಅವರಿಗೆ--ನೀವು ಕೇಳುವದರಲ್ಲಿ ಎಚ್ಚರವಾಗಿರ್ರಿ; ನೀವು ಯಾವ ಅಳತೆಯಿಂದ ಅಳೆಯುತ್ತೀರೋ ಅದು ನಿಮಗೂ ಅಳೆಯಲ್ಪಡುವದು; ಮತ್ತು ಕೇಳುವವ ರಾದ ನಿಮಗೆ ಹೆಚ್ಚಾಗಿ ಕೊಡಲ್ಪಡುವದು.
25 For he that hath, to him shall be given: and he that hath not, from him shall be taken even that which he hath.ಯಾಕಂ ದರೆ ಯಾವನಿಗೆ ಇದೆಯೋ ಅವನಿಗೆ ಕೊಡಲ್ಪಡುವದು; ಯಾವನಿಗೆ ಇಲ್ಲವೋ ಅವನಿಗೆ ಇದ್ದದ್ದೂ ಅವನಿಂದ ತೆಗೆಯಲ್ಪಡುವದು ಎಂದು ಹೇಳಿದನು.
26 And he said, So is the kingdom of God, as if a man should cast seed into the ground;ಆತನು ಹೇಳಿದ್ದೇನಂದರೆ--ಒಬ್ಬ ಮನುಷ್ಯನು ಬೀಜವನ್ನು ಭೂಮಿಯಲ್ಲಿ ಹಾಕಿದಂತೆಯೇ ದೇವರ ರಾಜ್ಯವು ಇದೆ.
27 And should sleep, and rise night and day, and the seed should spring and grow up, he knoweth not how.ಅವನು ರಾತ್ರಿ ಮಲಗುತ್ತಾ ಹಗಲು ಏಳುತ್ತಾ ಇರುವಾಗ ಹೇಗೆ ಆ ಬೀಜವು ಮೊಳೆತು ಬೆಳೆಯುವದೆಂದು ಅವನಿಗೆ ಗೊತ್ತಾಗುವದಿಲ್ಲವೋ ಹಾಗೆಯೇ ಇರುವದು.
28 For the earth bringeth forth fruit of herself; first the blade, then the ear, after that the full corn in the ear.ಯಾಕಂದರೆ ಭೂಮಿಯು ಮೊದಲು ಮೊಳಕೆಯನ್ನು ಆಮೇಲೆ ತೆನೆಯನ್ನು ಇದಾದ ಮೇಲೆ ತೆನೆಯಲ್ಲಿ ಪೂರ್ಣಕಾಳನ್ನು ತನ್ನಷ್ಟಕ್ಕೆ ತಾನೇ ಫಲಿಸುತ್ತದೆ.
29 But when the fruit is brought forth, immediately he putteth in the sickle, because the harvest is come.ಆದರೆ ಫಲವು ಫಲಿಸಿದಾಗ ಸುಗ್ಗಿಯು ಬಂದದರಿಂದ ಅವನು ಕೂಡಲೆ ಕುಡು ಗೋಲು ಹಾಕಿ ಕೊಯ್ಯುತ್ತಾನೆ.
30 And he said, Whereunto shall we liken the kingdom of God? or with what comparison shall we compare it?ಆತನು--ದೇವರ ರಾಜ್ಯವನ್ನು ನಾವು ಯಾವ ದಕ್ಕೆ ಹೋಲಿಸೋಣ? ಇಲ್ಲವೆ ಯಾವ ಹೋಲಿಕೆಗೆ ಅದನ್ನು ಹೋಲಿಸೋಣ?
31 It is like a grain of mustard seed, which, when it is sown in the earth, is less than all the seeds that be in the earth:ಭೂಮಿಯಲ್ಲಿರುವ ಎಲ್ಲಾ ಬೀಜಗಳಿಗಿಂತ ಚಿಕ್ಕದಾಗಿರುವ ಸಾಸಿವೆ ಕಾಳು ಭೂಮಿಯಲ್ಲಿ ಬಿತ್ತಲ್ಪಟ್ಟದ್ದಕ್ಕೆ ಅದು ಹೋಲಿಕೆ ಯಾಗಿದೆ.
32 But when it is sown, it groweth up, and becometh greater than all herbs, and shooteth out great branches; so that the fowls of the air may lodge under the shadow of it.ಆದರೆ ಅದು ಬಿತ್ತಲ್ಪಟ್ಟ ಮೇಲೆ ಬೆಳೆದು ಆಕಾಶದ ಪಕ್ಷಿಗಳು ಅದರ ನೆರಳಿನಲ್ಲಿ ವಾಸ ಮಾಡು ವಷ್ಟು ಎಲ್ಲಾ ಸಸ್ಯಗಳಿಗಿಂತ ದೊಡ್ಡದಾಗಿ ದೊಡ್ಡ ಕೊಂಬೆಗಳನ್ನು ಬಿಡುತ್ತದೆ ಎಂದು ಹೇಳಿದನು.
33 And with many such parables spake he the word unto them, as they were able to hear it.ಅವರು ಕೇಳಿಸಿಕೊಳ್ಳಲು ಸಾಧ್ಯವಾಗುವಷ್ಟು ಇಂಥ ಅನೇಕ ಸಾಮ್ಯಗಳಿಂದ ಆತನು ಅವರಿಗೆ ವಾಕ್ಯವನ್ನು ಹೇಳಿದನು.
34 But without a parable spake he not unto them: and when they were alone, he expounded all things to his disciples.ಸಾಮ್ಯವಿಲ್ಲದೆ ಅವರೊಂ ದಿಗೆ ಮಾತನಾಡಲಿಲ್ಲ; ಆದರೆ ಅವರು ಏಕಾಂತದ ಲ್ಲಿದ್ದಾಗ ಆತನು ಎಲ್ಲಾ ವಿಷಯಗಳನ್ನು ತನ್ನ ಶಿಷ್ಯರಿಗೆ ವಿವರಿಸಿದನು.
35 And the same day, when the even was come, he saith unto them, Let us pass over unto the other side.ಅದೇ ದಿವಸ ಸಾಯಂಕಾಲವಾದಾಗ ಆತನು ಅವರಿಗೆ--ನಾವು ಆಚೇದಡಕ್ಕೆ ಹೋಗೋಣ ಅಂದನು.
36 And when they had sent away the multitude, they took him even as he was in the ship. And there were also with him other little ships.ಅವರು ಆ ಜನಸಮೂಹವನ್ನು ಕಳುಹಿ ಸಿದ ಮೇಲೆ ಆತನು ದೋಣಿಯಲ್ಲಿ ಇದ್ದ ಹಾಗೆಯೇ ಅವರು ಆತನನ್ನು ಕರೆದುಕೊಂಡು ಹೋದರು; ಆತನೊಂದಿಗೆ ಬೇರೆ ಚಿಕ್ಕದೋಣಿಗಳೂ ಇದ್ದವು.
37 And there arose a great storm of wind, and the waves beat into the ship, so that it was now full.ಆಗ ಅಲ್ಲಿ ದೊಡ್ಡ ಬಿರುಗಾಳಿಯಿಂದ ತುಫಾನು ಎದ್ದು ತೆರೆಗಳು ದೋಣಿಯೊಳಕ್ಕೆ ಬಡಿದದ್ದರಿಂದ ಅದು ತುಂಬಿಕೊಂಡಿತು.
38 And he was in the hinder part of the ship, asleep on a pillow: and they awake him, and say unto him, Master, carest thou not that we perish?ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬಿನ ಮೇಲೆ ನಿದ್ರಿಸುತ್ತಿದ್ದನು. ಆಗ ಅವರು ಆತನನ್ನು ಎಬ್ಬಿಸಿ ಆತನಿಗೆ--ಒಡೆಯನೇ, ನಾವು ನಾಶವಾಗುತ್ತೇವೆಂದು ನಿನಗೆ ಚಿಂತೆಯಿಲ್ಲವೋ ಅಂದರು.
39 And he arose, and rebuked the wind, and said unto the sea, Peace, be still. And the wind ceased, and there was a great calm.ಆಗ ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ--ಶಾಂತವಾಗಿ ಮೌನವಾಗಿರು ಎಂದು ಹೇಳಿದನು. ಆಗ ಗಾಳಿಯು ನಿಂತು ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.
40 And he said unto them, Why are ye so fearful? how is it that ye have no faith?ಮತ್ತು ಆತನು ಅವರಿಗೆ--ಯಾಕೆ ನೀವು ಇಷ್ಟೊಂದು ಭಯಭರಿತರಾಗಿದ್ದೀರಿ? ನಿಮಗೆ ನಂಬಿಕೆ ಇಲ್ಲದಿರುವದು ಹೇಗೆ ಅಂದನು.
41 And they feared exceedingly, and said one to another, What manner of man is this, that even the wind and the sea obey him?ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು.
Kannada Bible