Matthew 11 - YLT (Kannada)
1 And it came to pass, when Jesus ended directing his twelve disciples, he departed thence to teach and to preach in their cities.ಮತ್ತು ಆದದ್ದೇನಂದರೆ, ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆ ಕೊಡು ವದನ್ನು ಮುಗಿಸಿದ ಮೇಲೆ ಅವರ ಪಟ್ಟಣಗಳಲ್ಲಿ ಬೋಧಿಸುವದಕ್ಕೂ ಸಾರುವದಕ್ಕೂ ಅಲ್ಲಿಂದ ಹೊರಟು ಹೋದನು.
2 And John having heard in the prison the works of the Christ, having sent two of his disciples,ಆಗ ಯೋಹಾನನು ಸೆರೆಮನೆಯಲ್ಲಿ ಕ್ರಿಸ್ತನ ಕಾರ್ಯಗಳನ್ನು ಕೇಳಿದ್ದರಿಂದ ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಆತನಿಗೆ--
3 said to him, `Art thou He who is coming, or for another do we look?'ಬರಬೇಕಾದಾತನು ನೀನೋ ಇಲ್ಲವೆ ನಾವು ಬೇರೊಬ್ಬನಿಗಾಗಿ ನೋಡಬೇಕೋ ಅಂದನು.
4 And Jesus answering said to them, `Having gone, declare to John the things that ye hear and see,ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನೀವು ಹೋಗಿ ಕೇಳುವವುಗಳನ್ನೂ ನೋಡುವವು ಗಳನ್ನೂ ಯೋಹಾನನಿಗೆ ತಿಳಿಸಿರಿ;
5 blind receive sight, and lame walk, lepers are cleansed, and deaf hear, dead are raised, and poor have good news proclaimed,ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
6 and happy is he who may not be stumbled in me.'ನನ್ನ ವಿಷಯವಾಗಿ ಸಂಶಯಪಡದವನೇ ಧನ್ಯನು ಅಂದನು.
7 And as they are going, Jesus began to say to the multitudes concerning John, `What went ye out to the wilderness to view? -- a reed shaken by the wind?ಅವರು ಹೊರಟುಹೋಗುತ್ತಿದ್ದಾಗ ಯೇಸು ಯೋಹಾನನ ಕುರಿತಾಗಿ ಜನಸಮೂಹಗಳೊಂ ದಿಗೆ -- ಏನು ನೋಡುವದಕ್ಕಾಗಿ ನೀವು ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ?
8 `But what went ye out to see? -- a man clothed in soft garments? lo, those wearing the soft things are in the kings' houses.ಆದರೆ ನೀವು ಏನು ನೊಡುವದಕ್ಕಾಗಿ ಹೋದಿರಿ? ನಯವಾದ ವಸ್ತ್ರಗಳನ್ನು ಧರಿಸಿಕೊಂಡ ಮನುಷ್ಯ ನನ್ನೋ? ಇಗೋ, ನಯವಾದ ಬಟ್ಟೆಗಳನ್ನು ಧರಿಸಿಕೊ ಳ್ಳುವವರು ಅರಮನೆಗಳಲ್ಲಿ ಇರುತ್ತಾರೆ.
9 `But what went ye out to see? -- a prophet? yes, I say to you, and more than a prophet,ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿ ಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನು ಎಂದು ನಾನು ನಿಮಗೆ ಹೇಳುತ್ತೇನೆ.
10 for this is he of whom it hath been written, Lo, I do send My messenger before thy face, who shall prepare thy way before thee.ಯಾಕಂ ದರೆ--ಇಗೋ, ನಿನ್ನ ಮಾರ್ಗವನ್ನು ನಿನ್ನ ಮುಂದೆ ಸಿದ್ಧಪಡಿಸುವ ನನ್ನ ದೂತನನ್ನು ನಾನು ನಿನ್ನ ಮುಂದೆ ಕಳುಹಿಸುತ್ತೇನೆಂದು ಯಾವನ ವಿಷಯವಾಗಿ ಬರೆದಿ ದೆಯೋ ಅವನೇ ಇವನು.
11 Verily I say to you, there hath not risen, among those born of women, a greater than John the Baptist, but he who is least in the reign of the heavens is greater than he.ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಸ್ತ್ರೀಯರಲ್ಲಿ ಹುಟ್ಟಿದವರೊ ಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡವನು ಏಳಲಿಲ್ಲ; ಆದಾಗ್ಯೂ ಪರಲೋಕ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡ ವನಾಗಿದ್ದಾನೆ.
12 `And, from the days of John the Baptist till now, the reign of the heavens doth suffer violence, and violent men do take it by force,ಇದಲ್ಲದೆ ಬಾಪ್ತಿಸ್ಮ ಮಾಡಿಸುವ ಯೋಹಾನನ ದಿನಗಳಿಂದ ಇದುವರೆಗೆ ಪರಲೋಕ ರಾಜ್ಯವು ಬಲಾತ್ಕಾರಕ್ಕೆ ಗುರಿಯಾಗಿದೆ; ಮತ್ತು ಬಲಾತ್ಕಾರಿಗಳು ಅದನ್ನು ಒತ್ತಾಯದಿಂದ ತೆಗೆದು ಕೊಳ್ಳುತ್ತಾರೆ.
13 for all the prophets and the law till John did prophesy,ಯಾಕಂದರೆ ಎಲ್ಲಾ ಪ್ರವಾದಿಗಳೂ ನ್ಯಾಯಪ್ರಮಾಣವೂ ಯೋಹಾನನ ವರೆಗೆ ಪ್ರವಾದಿ ಸಿದ್ದುಂಟು.
14 and if ye are willing to receive `it', he is Elijah who was about to come;ನೀವು ಇದನ್ನು ಅಂಗೀಕರಿಸುವದಕ್ಕೆ ಮನಸ್ಸಿದ್ದರೆ ಬರಬೇಕಾಗಿದ್ದ ಎಲೀಯನು ಇವನೇ.
15 he who is having ears to hear -- let him hear.ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
16 `And to what shall I liken this generation? it is like little children in market-places, sitting and calling to their comrades,ಆದರೆ ಈ ಸಂತತಿಯನ್ನು ನಾನು ಯಾವದಕ್ಕೆ ಹೋಲಿಸಲಿ? ಮಕ್ಕಳು ಪೇಟೆಗಳಲ್ಲಿ ಕೂತುಕೊಂಡು ತಮ್ಮ ಸಂಗಡಿ ಗರನ್ನು ಕರೆಯುತ್ತಾ--
17 and saying, We piped unto you, and ye did not dance, we lamented to you, and ye did not smite the breast.ನಾವು ನಿಮಗೋಸ್ಕರ ಕೊಳಲೂದಿದೆವು, ಆದರೆ ನೀವು ಕುಣಿಯಲಿಲ್ಲ; ನಾವು ನಿಮಗೋಸ್ಕರ ಶೋಕಿಸಿದೆವು, ಆದರೆ ನೀವು ಗೋಳಾಡಲಿಲ್ಲ ಎಂದು ಹೇಳುವವರಿಗೆ ಇದು ಹೋಲಿಕೆಯಾಗಿದೆ.
18 `For John came neither eating nor drinking, and they say, He hath a demon;ಯಾಕಂದರೆ ಯೋಹಾನನು ತಿನ್ನದೆಯೂ ಕುಡಿಯದೆಯೂ ಬಂದನು. ಅದಕ್ಕೆ ಅವರು--ಅವನಿಗೆ ದೆವ್ವ ಹಿಡಿದಿದೆ ಅನ್ನುತ್ತಾರೆ.
19 the Son of Man came eating and drinking, and they say, Lo, a man, a glutton, and a wine-drinker, a friend of tax-gatherers and sinners, and wisdom was justified of her children.'ಮನುಷ್ಯಕುಮಾರನು ತಿನ್ನುವವನಾಗಿಯೂ ಕುಡಿಯುವವನಾಗಿಯೂ ಬಂದನು. ಅದಕ್ಕೆ ಅವರು--ಇಗೋ, ಈ ಮನುಷ್ಯನು ಹೊಟ್ಟೆ ಬಾಕನೂ ಮದ್ಯಪಾನ ಮಾಡುವವನೂ ಸುಂಕದವರ ಪಾಪಿಗಳ ಸ್ನೇಹಿತನೂ ಎಂದು ಅನ್ನುತ್ತಾರೆ. ಆದರೆ ಜ್ಞಾನವು ನೀತಿಯುಳ್ಳದ್ದೆಂದು ತನ್ನ ಮಕ್ಕಳಿಂದ ನಿರ್ಣಯಿ ಸಲ
20 Then began he to reproach the cities in which were done most of his mighty works, because they did not reform.ತರುವಾಯ ತಾನು ಹೆಚ್ಚಾದ ಮಹತ್ಕಾರ್ಯ ಗಳನ್ನು ನಡಿಸಿದ ಪಟ್ಟಣಗಳು ಮಾನಸಾಂತರಪಡದೆ ಇದ್ದದರಿಂದ ಆತನು ಅವುಗಳನ್ನು ಗದರಿಸತೊ ಡಗಿ --
21 `Wo to thee, Chorazin! wo to thee, Bethsaida! because, if in Tyre and Sidon had been done the mighty works that were done in you, long ago in sackcloth and ashes they had reformed;ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು.
22 but I say to you, to Tyre and Sidon it shall be more tolerable in a day of judgment than for you.ಆದರೆ ನಾನು ನಿಮಗೆ ಹೇಳುವದೇನಂದರೆ-- ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ತೂರ್ ಮತ್ತು ಸೀದೋನ್ಗಳ ಗತಿಯು ಹೆಚ್ಚು ತಾಳಬಹುದಾಗಿರುವದು.
23 `And thou, Capernaum, which unto the heaven wast exalted, unto hades shalt be brought down, because if in Sodom had been done the mighty works that were done in thee, it had remained unto this day;ಆಕಾಶದವರೆಗೂ ಹೆಚ್ಚಿಸಲ್ಪಟ್ಟ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬಲ್ಪಡುವಿ; ಯಾಕಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಈ ದಿನದವರೆಗೂ ಇರುತ್ತಿತ್ತು.
24 but I say to you, to the land of Sodom it shall be more tolerable in a day of judgment than to thee.'ಆದರೆ ನಾನು ನಿನಗೆ ಹೇಳುವದೇನಂದರೆ --ನ್ಯಾಯತೀರ್ಪಿನ ದಿನದಲ್ಲಿ ನಿನಗಿಂತಲೂ ಸೊದೋಮಿನ ಗತಿಯು ಹೆಚ್ಚು ತಾಳಬಹುದಾಗಿರುವದು.
25 At that time Jesus answering said, `I do confess to Thee, Father, Lord of the heavens and of the earth, that thou didst hide these things from wise and understanding ones, and didst reveal them to babes.ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
26 Yes, Father, because so it was good pleasure before Thee.ಹೌದು, ತಂದೆಯೇ, ಇದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋಚಿತು.
27 `All things were delivered to me by my Father, and none doth know the Son, except the Father, nor doth any know the Father, except the Son, and he to whom the Son may wish to reveal `Him'.ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಇಲ್ಲವೆ ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದ
28 `Come unto me, all ye labouring and burdened ones, and I will give you rest,ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.
29 take up my yoke upon you, and learn from me, because I am meek and humble in heart, and ye shall find rest to your souls,ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.
30 for my yoke `is' easy, and my burden is light.'ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
Kannada Bible