Bible

Matthew 12 - DBY (Kannada)

1 At that time Jesus went on the sabbath through the cornfields; and his disciples were hungry, and began to pluck the ears and to eat.ಆ ಸಮಯದಲ್ಲಿ ಯೇಸು ಸಬ್ಬತ್‌ ದಿನದಲ್ಲಿ ಪೈರಿನ ಹೊಲವನು ಹಾದುಹೋಗುತ್ತಿದ್ದಾಗ ಆತನ ಶಿಷ್ಯರು ಹಸಿದಿ ದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು.

2 But the Pharisees, seeing [it], said to him, Behold, thy disciples are doing what is not lawful to do on sabbath.ಆದರೆ ಫರಿಸಾಯರು ಅದನ್ನು ನೋಡಿ ಆತನಿಗೆ--ಇಗೋ, ನಿನ್ನ ಶಿಷ್ಯರು ಸಬ್ಬತ್‌ದಿನದಲ್ಲಿ ಮಾಡ ಬಾರದ್ದನ್ನು ಮಾಡುತ್ತಾರೆ ಅಂದರು.

3 But he said to them, Have ye not read what David did when he was hungry, and they that were with him?ಅದಕ್ಕೆ ಆತನು ಅವರಿಗೆ--ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂದು ನೀವು ಓದಲಿಲ್ಲವೋ?

4 How he entered into the house of God, and ate the shewbread, which it was not lawful for him to eat, nor for those with him, but for the priests only?ಅವನು ದೇವರ ಮನೆ ಯೊಳಗೆ ಪ್ರವೇಶಿಸಿ ಯಾಜಕರೇ ಹೊರತು ತಾನಾಗಲೀ ತನ್ನ ಕೂಡ ಇದ್ದವರಾಗಲೀ ತಿನ್ನಬಾರದಾಗಿದ್ದ ಸಮ್ಮುಖ ರೊಟ್ಟಿಯನ್ನು ಹೇಗೆ ತಿಂದನು?

5 Or have ye not read in the law that on the sabbaths the priests in the temple profane the sabbath, and are blameless?ಇದಲ್ಲದೆ ಸಬ್ಬತ್‌ ದಿನಗಳಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ತನ್ನು ಅಪವಿತ್ರಪಡಿಸಿದರೂ ನಿರಪರಾಧಿಗಳಾಗಿದ್ದಾ ರೆಂದು ನೀವು ನ್ಯಾಯಪ್ರಮಾಣದಲ್ಲಿ ಓದಲಿಲ್ಲವೇ?

6 But I say unto you, that there is here what is greater than the temple.ಆದರೆ ನಾನು ನಿಮಗೆ ಹೇಳುವದೇನಂದರೆ-- ದೇವಾಲಯಕ್ಕಿಂತಲೂ ದೊಡ್ಡವನು ಈ ಸ್ಥಳದಲ್ಲಿ ಇದ್ದಾನೆ.

7 But if ye had known what is: I will have mercy and not sacrifice, ye would not have condemned the guiltless.ಆದರೆ--ನನಗೆ ಯಜ್ಞವಲ್ಲ, ಕರುಣೆಯೇ ಬೇಕು ಎಂಬದರ ಅರ್ಥವನ್ನು ನೀವು ತಿಳಿದಿದ್ದರೆ ನಿರಪರಾಧಿಗಳನ್ನು ಅಪರಾಧಿಗಳೆಂದು ತೀರ್ಪುಮಾಡು ತ್ತಿದ್ದಿಲ್ಲ.

8 For the Son of man is Lord of the sabbath.ಯಾಕಂದರೆ ಮನುಷ್ಯ ಕುಮಾರನು ಸಬ್ಬತ್‌ ದಿನಕ್ಕೂ ಒಡೆಯನಾಗಿದ್ದಾನೆ ಎಂದು ಹೇಳಿದನು.

9 And, going away from thence, he came into their synagogue.ತರುವಾಯ ಆತನು ಅಲ್ಲಿಂದ ಹೊರಟು ಅವರ ಸಭಾಮಂದಿರದೊಳಕ್ಕೆ ಹೋದನು.

10 And behold, there was a man having his hand withered. And they asked him, saying, Is it lawful to heal on the sabbath? that they might accuse him.ಇಗೋ, ಅಲ್ಲಿ ಕೈ ಬತ್ತಿದ್ದ ಒಬ್ಬ ಮನುಷ್ಯನಿದ್ದನು. ಆಗ ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಆತನಿಗೆ-- ಸಬ್ಬತ್‌ ದಿನಗಳಲ್ಲಿ ಸ್ವಸ್ಥ ಮಾಡುವದು ನ್ಯಾಯವೋ ಎಂದು ಕೇಳಿದರು.

11 But he said to them, What man shall there be of you who has one sheep, and if this fall into a pit on the sabbath, will not lay hold of it and raise [it] up?ಅದಕ್ಕಾತನು ಅವರಿಗೆ-- ನಿಮ್ಮಲ್ಲಿ ಯಾವನಿಗಾದರೂ ಒಂದು ಕುರಿಯಿರಲಾಗಿ ಅದು ಸಬ್ಬತ್‌ ದಿನದಲ್ಲಿ ಕುಣಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೆ ಇರುವನೇ?

12 How much better then is a man than a sheep! So that it is lawful to do well on the sabbath.ಹಾಗಾದರೆ ಕುರಿಗಿಂತಲೂ ಒಬ್ಬ ಮನುಷ್ಯನು ಎಷ್ಟೋ ಶ್ರೇಷ್ಠನಾಗಿದ್ದಾನಲ್ಲವೇ? ಆದದರಿಂದ ಸಬ್ಬತ್‌ ದಿನಗಳಲ್ಲಿ ಒಳ್ಳೆಯದನ್ನು ಮಾಡುವದು ನ್ಯಾಯವಾಗಿದೆ ಎಂದು ಹೇಳಿದನು.

13 Then he says to the man, Stretch out thy hand. And he stretched [it] out, and it was restored sound as the other.ಆಗ ಆತನು ಆ ಮನುಷ್ಯನಿಗೆ--ನಿನ್ನ ಕೈಯನ್ನು ಮುಂದೆ ಚಾಚು ಅಂದನು. ಅವನು ಚಾಚಿದಾಗ ಅದು ಗುಣವಾಗಿ ಮತ್ತೊಂದರ ಹಾಗಾಯಿತು.

14 But the Pharisees, having gone out, took counsel against him, how they might destroy him.ತರುವಾಯ ಫರಿಸಾ ಯರು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧವಾಗಿ ಆಲೋಚಿಸಲು ಹೊರಗೆ ಹೋದರು.

15 But Jesus knowing [it], withdrew thence, and great crowds followed him; and he healed them all:ಆದರೆ ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು; ಮತ್ತು ದೊಡ್ಡ ಸಮೂಹಗಳು ಆತನನ್ನು ಹಿಂಬಾಲಿಸಿದರು. ಆಗ ಆತನು ಅವರೆಲ್ಲರನ್ನು ವಾಸಿ ಮಾಡಿದನು.

16 and charged them strictly that they should not make him publicly known:ಯೇಸು ತನ್ನನ್ನು ಯಾರಿಗೂ ಪ್ರಕಟಿಸ ಬಾರದೆಂದು ಅವರಿಗೆ ಆಜ್ಞಾಪಿಸಿದನು;

17 that that might be fulfilled which was spoken through Esaias the prophet, saying,ಹೀಗೆ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟಿದ್ದು ನೆರವೇರಿತು; ಅದೇನಂದರೆ--

18 Behold my servant, whom I have chosen, my beloved, in whom my soul has found its delight. I will put my Spirit upon him, and he shall shew forth judgment to the nations.ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು; ನನ್ನ ಪ್ರಾಣವು ಬಹಳವಾಗಿ ಮೆಚ್ಚಿಕೊಂಡಿರುವ ನನ್ನ ಪ್ರಿಯನು; ನಾನು ಆತನ ಮೇಲೆ ನನ್ನ ಆತ್ಮನನ್ನು ಇರಿಸುವೆನು ಮತ್ತು ಆತನು ಅನ್ಯಜನಗಳಿಗೆ ನ್ಯಾಯವನ್ನು ತೋರಿ ಸುವನು.

19 He shall not strive or cry out, nor shall any one hear his voice in the streets;ಆತನು ಜಗಳವಾಡುವದಿಲ್ಲ, ಕೂಗಾಡು ವದೂ ಇಲ್ಲ; ಇಲ್ಲವೆ ಯಾವ ಮನುಷ್ಯನು ಬೀದಿಗಳಲ್ಲಿ ಆತನ ಸ್ವರವನ್ನು ಕೇಳಿಸಿಕೊಳ್ಳುವದೂ ಇಲ್ಲ.

20 a bruised reed shall he not break, and smoking flax shall he not quench, until he bring forth judgment unto victory;ಆತನು ನ್ಯಾಯವನ್ನು ವಿಜಯಕ್ಕಾಗಿ ಕಳುಹಿಸುವವರೆಗೆ ಜಜ್ಜಿದ ದಂಟನ್ನು ಮುರಿಯುವದಿಲ್ಲ ಮತ್ತು ಹೊಗೆಯಾಡುವ ಬತ್ತಿಯನ್ನು ನಂದಿಸುವದಿಲ್ಲ.

21 and on his name shall [the] nations hope.ಮತ್ತು ಆತನ ಹೆಸರಿನಲ್ಲಿ ಅನ್ಯಜನರು ನಂಬಿಕೆಯಿಡುವರು ಎಂಬದೇ.

22 Then was brought to him one possessed by a demon, blind and dumb, and he healed him, so that the dumb [man] spake and saw.ಆಗ ಜನರು ದೆವ್ವ ಹಿಡಿದಿದ್ದವನೂ ಕುರುಡನೂ ಮೂಕನೂ ಆಗಿದ್ದವನನ್ನು ಆತನ ಬಳಿಗೆ ತಂದರು; ಮತ್ತು ಆತನು ಅವನನ್ನು ಸ್ವಸ್ಥಮಾಡಿದ್ದರಿಂದ ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ನೋಡಿದನು.

23 And all the crowds were amazed and said, Is this [man] the Son of David?ಆಗ ಜನರೆಲ್ಲರು ವಿಸ್ಮಯ ಗೊಂಡವರಾಗಿ--ಈತನು ದಾವೀದನ ಕುಮಾರ ನಲ್ಲವೇ ಅಂದರು.

24 But the Pharisees, having heard [it], said, This [man] does not cast out demons, but by Beelzebub, prince of demons.ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು.

25 But he, knowing their thoughts, said to them, Every kingdom divided against itself is brought to desolation, and every city or house divided against itself will not subsist.ಆಗ ಯೇಸು ಅವರ ಆಲೋಚನೆ ಗಳನ್ನು ತಿಳಿದು ಅವರಿಗೆ--ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುತ್ತದೆ; ಮತ್ತು ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ಪಟ್ಟಣವಾಗಲೀ ಮನೆಯಾಗಲೀ ನಿಲ್ಲುವದಿಲ್ಲ.

26 And if Satan casts out Satan, he is divided against himself; how then shall his kingdom subsist?ಇದಲ್ಲದೆ ಸೈತಾನನು ಸೈತಾನನನ್ನು ಹೊರಗೆ ಹಾಕಿದರೆ ಅವನು ತನಗೆ ವಿರೋಧವಾಗಿ ತಾನೇ ವಿಭಾಗಿಸಲ್ಪಟ್ಟಿದ್ದಾನೆ; ಹಾಗಾದರೆ ಅವನ ರಾಜ್ಯವು ಹೇಗೆ ನಿಂತೀತು?

27 And if *I* cast out demons by Beelzebub, your sons, by whom do they cast [them] out? For this reason *they* shall be your judges.ಮತ್ತು ಬೆಲ್ಜೆಬೂಲನಿಂದ ನಾನು ದೆವ್ವಗಳನ್ನು ಬಿಡಿಸಿದರೆ ನಿಮ್ಮ ಮಕ್ಕಳು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯತೀರಿಸುವರು.

28 But if *I* by [the] Spirit of God cast out demons, then indeed the kingdom of God is come upon you.ಆದರೆ ನಾನು ದೇವರ ಆತ್ಮನಿಂದ ದೆವ್ವಗಳನ್ನು ಬಿಡಿಸಿದರೆ ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆಯಲ್ಲಾ.

29 Or how can any one enter into the house of the strong [man] and plunder his goods, unless first he bind the strong [man]? and then he will plunder his house.ಇಲ್ಲವೆ ಯಾವನಾದರೂ ಮೊದಲು ಬಲವುಳ್ಳ ಮನುಷ್ಯನನ್ನು ಕಟ್ಟಿಹಾಕದ ಹೊರತು ಅವನ ಮನೆ ಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳು ವದಕ್ಕಾದೀತೇ? ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವದಕ್ಕಾಗುವದು.

30 He that is not with me is against me, and he that gathers not with me scatters.ನನ್ನ ಸಂಗಡ ಇರದ ವನು ನನಗೆ ವಿರೋಧವಾಗಿದ್ದಾನೆ; ಮತ್ತು ನನ್ನ ಸಂಗಡ ಕೂಡಿಸದವನು ಚದರಿಸುವವನಾಗಿದ್ದಾನೆ ಎಂದು ಹೇಳಿದನು.

31 For this reason I say unto you, Every sin and injurious speaking shall be forgiven to men, but speaking injuriously of the Spirit shall not be forgiven to men.ಆದಕಾರಣ ನಾನು ನಿಮಗೆ ಹೇಳುವದೇ ನಂದರೆ-- ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ.

32 And whosoever shall have spoken a word against the Son of man, it shall be forgiven him; but whosoever shall speak against the Holy Spirit, it shall not be forgiven him, neither in this age nor in the coming [one].ಮನುಷ್ಯ ಕುಮಾರನಿಗೆ ವಿರೋಧವಾಗಿ ಯಾವನಾದರೂ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವದು; ಆದರೆ ಪರಿಶುದ್ಧಾ ತ್ಮನಿಗೆ ವಿರೋಧವಾಗಿ ಯಾವನಾದರೂ ಮಾತನಾ ಡಿದರೆ ಈ ಲೋಕದಲ್ಲಿಯಾಗಲೀ ಇಲ್ಲವೆ ಬರುವ ಲೋಕದಲ್ಲಿಯಾಗಲೀ ಅದು ಅವನಿಗೆ ಕ್ಷಮಿಸಲ್ಪಡು ವದಿಲ್ಲ.

33 Either make the tree good, and its fruit good; or make the tree corrupt, and its fruit corrupt. For from the fruit the tree is known.ಮರವು ಒಳ್ಳೆಯದಾಗಿದ್ದರೆ ಅದರ ಫಲವೂ ಒಳ್ಳೆಯದೆಂದು ಎಣಿಸಿರಿ; ಇಲ್ಲವೇ ಮರವು ಕೆಟ್ಟದ್ದಾಗಿದ್ದರೆ ಅದರ ಫಲವೂ ಕೆಟ್ಟದ್ದೆಂದೆಣಿಸಿರಿ; ಯಾಕಂದರೆ ಮರವು ತನ್ನ ಫಲದಿಂದಲೇ ತಿಳಿಯಲ್ಪ ಡುವದು.

34 Offspring of vipers! how can ye speak good things, being wicked? For of the abundance of the heart the mouth speaks.ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.

35 The good man out of the good treasure brings forth good things; and the wicked man out of the wicked treasure brings forth wicked things.ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ.

36 But I say unto you, that every idle word which men shall say, they shall render an account of it in judgment-day:ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.

37 for by thy words thou shalt be justified, and by thy words thou shalt be condemned.ನೀನು ನಿನ್ನ ಮಾತುಗಳಿಂದಲೇ ನೀತಿವಂತನಾಗುವಿ ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯಾಗುವಿ ಎಂದು ಹೇಳಿದನು.

38 Then answered him some of the scribes and Pharisees, saying, Teacher, we desire to see a sign from thee.ಆಗ ಶಾಸ್ತ್ರಿಗಳಲ್ಲಿ ಮತ್ತು ಫರಿಸಾಯರಲ್ಲಿ ಕೆಲ ವರು--ಗುರುವೇ, ನಿನ್ನಿಂದ ಒಂದು ಸೂಚಕಕಾರ್ಯ ವನ್ನು ನೋಡಬೇಕೆಂದಿದ್ದೇವೆ ಎಂದು ಕೇಳಿದ್ದಕ್ಕೆ

39 But he, answering, said to them, A wicked and adulterous generation seeks after a sign, and a sign shall not be given to it save the sign of Jonas the prophet.ಆತನು ಪ್ರತ್ಯುತ್ತರವಾಗಿ ಅವರಿಗೆ--ವ್ಯಭಿಚಾರಿಣಿ ಯಾದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡು ಕುತ್ತದೆ; ಪ್ರವಾದಿಯಾದ ಯೋನನಲ್ಲಿ ಆದ ಸೂಚಕ ಕಾರ್ಯವೇ ಹೊರತು ಅದಕ್ಕೆ ಇನ್ಯಾವ ಸೂಚಕಕಾರ್ಯ ವೂ ಕೊಡಲ್ಪಡುವದಿಲ್ಲ.

40 For even as Jonas was in the belly of the great fish three days and three nights, thus shall the Son of man be in the heart of the earth three days and three nights.ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.

41 Ninevites shall stand up in the judgment with this generation, and shall condemn it: for they repented at the preaching of Jonas; and behold, more than Jonas [is] here.ನ್ಯಾಯವಿಚಾರಣೆಯಲ್ಲಿ ನಿನೆವೆಯ ಜನರು ಈ ಸಂತತಿಯೊಂದಿಗೆ ಎದ್ದು ಅವರನ್ನು ಖಂಡಿಸು ವರು; ಯಾಕಂದರೆ ಯೋನನು ಸಾರಿದಾಗ ಅವರು ಮಾನಸಾಂತರಪಟ್ಟರು; ಮತ್ತು ಇಗೋ, ಇಲ್ಲಿ ಯೋನ ನಿಗಿಂತಲೂ ದೊಡ್ಡವನಿದ್ದಾನೆ.

42 A queen of [the] south shall rise up in the judgment with this generation, and shall condemn it; for she came from the ends of the earth to hear the wisdom of Solomon; and behold, more than Solomon [is] here.ನ್ಯಾಯವಿಚಾರಣೆ ಯಲ್ಲಿ ದಕ್ಷಿಣದ ರಾಣಿಯು ಈ ಸಂತತಿಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿ ಯ ಕಟ್ಟಕಡೆಯಿಂದ ಬಂದಳು; ಇಗೋ, ಇಲ್ಲಿ ಸೊಲೊ ಮೋನನಿಗಿಂತಲೂ ದೊಡ್ಡವನಿದ್ದಾನೆ.

43 But when the unclean spirit has gone out of the man, he goes through dry places, seeking rest, and does not find [it].ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ತಿರುಗಾಡಿದರೂ ಅದನ್ನು ಕಂಡುಕೊಳ್ಳಲಿಲ್ಲ.

44 Then he says, I will return to my house whence I came out; and having come, he finds [it] unoccupied, swept, and adorned.ಆಗ ಅದು--ನಾನು ಹೊರಟುಬಂದ ನನ್ನ ಮನೆಗೆ ಹಿಂತಿರುಗುವೆನು ಎಂದು ಅಂದುಕೊಂಡು ಬಂದು ಅದು ಬರಿದಾಗಿಯೂ ಗುಡಿಸಿ ಅಲಂಕರಿಸಲ್ಪಟ್ಟದ್ದಾ ಗಿಯೂ ಇರುವದನ್ನು ಕಂಡಿತು.

45 Then he goes and takes with himself seven other spirits worse than himself, and entering in, they dwell there; and the last condition of that man becomes worse than the first. Thus shall it be to this wicked generation also.ತರುವಾಯ ಅದು ಹೋಗಿ ತನಗಿಂತ ಕೆಟ್ಟವುಗಳಾಗಿರುವ ಬೇರೆ ಏಳು ಆತ್ಮಗಳನ್ನು ಕರಕೊಂಡು ಅವು ಅದರೊಳಗೆ ಪ್ರವೇಶಿಸಿ ವಾಸಮಾಡುತ್ತವೆ; ಹೀಗೆ ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತಲೂ ಕೆಟ್ಟದ್ದಾಗಿರುವದು. ಅದರಂತೆಯೇ ಈ ಕೆಟ್ಟ ಸಂತತಿಗೂ ಆಗುವದು ಎಂದು ಹೇಳಿದನು.

46 But while he was yet speaking to the crowds, behold, his mother and his brethren stood without, seeking to speak to him.ಆತನು ಇನ್ನೂ ಜನರ ಸಂಗಡ ಮಾತನಾಡು ತ್ತಿದ್ದಾಗ ಇಗೋ, ಆತನ ತಾಯಿಯೂ ಆತನ ಸಹೋದರರೂ ಆತನೊಂದಿಗೆ ಮಾತನಾಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದರು.

47 Then one said unto him, Behold, thy mother and thy brethren are standing without, seeking to speak to thee.ಆಗ ಒಬ್ಬನು ಆತನಿಗೆ--ಇಗೋ, ನಿನ್ನ ತಾಯಿಯೂ ನಿನ್ನ ಸಹೋ ದರರೂ ನಿನ್ನೊಂದಿಗೆ ಮಾತನಾಡಲು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ ಅಂದನು.

48 But he answering said to him that spoke to him, Who is my mother, and who are my brethren?ಅದಕ್ಕೆ ಆತನು ತನಗೆ ಹೇಳಿದವನಿಗೆ ಪ್ರತ್ಯುತ್ತರವಾಗಿ--ನನ್ನ ತಾಯಿ ಯಾರು? ಮತ್ತು ನನ್ನ ಸಹೋದರರು ಯಾರು? ಎಂದು ಹೇಳಿ ಶಿಷ್ಯರ ಕಡೆಗೆ ತನ್ನ ಕೈಚಾಚಿ--

49 And, stretching out his hand to his disciples, he said, Behold my mother and my brethren;ಇಗೋ, ನನ್ನ ತಾಯಿಯು ಮತ್ತು ನನ್ನ ಸಹೋದರರು!

50 for whosoever shall do the will of my Father who is in [the] heavens, he is my brother, and sister, and mother.ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು.

Kannada Bible