Bible

Matthew 12 - YLT (Kannada)

1 At that time did Jesus go on the sabbaths through the corn, and his disciples were hungry, and they began to pluck ears, and to eat,ಆ ಸಮಯದಲ್ಲಿ ಯೇಸು ಸಬ್ಬತ್‌ ದಿನದಲ್ಲಿ ಪೈರಿನ ಹೊಲವನು ಹಾದುಹೋಗುತ್ತಿದ್ದಾಗ ಆತನ ಶಿಷ್ಯರು ಹಸಿದಿ ದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು.

2 and the Pharisees having seen, said to him, `Lo, thy disciples do that which it is not lawful to do on a sabbath.'ಆದರೆ ಫರಿಸಾಯರು ಅದನ್ನು ನೋಡಿ ಆತನಿಗೆ--ಇಗೋ, ನಿನ್ನ ಶಿಷ್ಯರು ಸಬ್ಬತ್‌ದಿನದಲ್ಲಿ ಮಾಡ ಬಾರದ್ದನ್ನು ಮಾಡುತ್ತಾರೆ ಅಂದರು.

3 And he said to them, `Did ye not read what David did, when he was hungry, himself and those with him --ಅದಕ್ಕೆ ಆತನು ಅವರಿಗೆ--ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂದು ನೀವು ಓದಲಿಲ್ಲವೋ?

4 how he went into the house of God, and the loaves of the presentation did eat, which it is not lawful to him to eat, nor to those with him, except to the priests alone?ಅವನು ದೇವರ ಮನೆ ಯೊಳಗೆ ಪ್ರವೇಶಿಸಿ ಯಾಜಕರೇ ಹೊರತು ತಾನಾಗಲೀ ತನ್ನ ಕೂಡ ಇದ್ದವರಾಗಲೀ ತಿನ್ನಬಾರದಾಗಿದ್ದ ಸಮ್ಮುಖ ರೊಟ್ಟಿಯನ್ನು ಹೇಗೆ ತಿಂದನು?

5 `Or did ye not read in the Law, that on the sabbaths the priests in the temple do profane the sabbath, and are blameless?ಇದಲ್ಲದೆ ಸಬ್ಬತ್‌ ದಿನಗಳಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ತನ್ನು ಅಪವಿತ್ರಪಡಿಸಿದರೂ ನಿರಪರಾಧಿಗಳಾಗಿದ್ದಾ ರೆಂದು ನೀವು ನ್ಯಾಯಪ್ರಮಾಣದಲ್ಲಿ ಓದಲಿಲ್ಲವೇ?

6 and I say to you, that a greater than the temple is here;ಆದರೆ ನಾನು ನಿಮಗೆ ಹೇಳುವದೇನಂದರೆ-- ದೇವಾಲಯಕ್ಕಿಂತಲೂ ದೊಡ್ಡವನು ಈ ಸ್ಥಳದಲ್ಲಿ ಇದ್ದಾನೆ.

7 and if ye had known what is: Kindness I will, and not sacrifice -- ye had not condemned the blameless,ಆದರೆ--ನನಗೆ ಯಜ್ಞವಲ್ಲ, ಕರುಣೆಯೇ ಬೇಕು ಎಂಬದರ ಅರ್ಥವನ್ನು ನೀವು ತಿಳಿದಿದ್ದರೆ ನಿರಪರಾಧಿಗಳನ್ನು ಅಪರಾಧಿಗಳೆಂದು ತೀರ್ಪುಮಾಡು ತ್ತಿದ್ದಿಲ್ಲ.

8 for the son of man is lord even of the sabbath.'ಯಾಕಂದರೆ ಮನುಷ್ಯ ಕುಮಾರನು ಸಬ್ಬತ್‌ ದಿನಕ್ಕೂ ಒಡೆಯನಾಗಿದ್ದಾನೆ ಎಂದು ಹೇಳಿದನು.

9 And having departed thence, he went to their synagogue,ತರುವಾಯ ಆತನು ಅಲ್ಲಿಂದ ಹೊರಟು ಅವರ ಸಭಾಮಂದಿರದೊಳಕ್ಕೆ ಹೋದನು.

10 and lo, there was a man having the hand withered, and they questioned him, saying, `Is it lawful to heal on the sabbaths?' that they might accuse him.ಇಗೋ, ಅಲ್ಲಿ ಕೈ ಬತ್ತಿದ್ದ ಒಬ್ಬ ಮನುಷ್ಯನಿದ್ದನು. ಆಗ ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಆತನಿಗೆ-- ಸಬ್ಬತ್‌ ದಿನಗಳಲ್ಲಿ ಸ್ವಸ್ಥ ಮಾಡುವದು ನ್ಯಾಯವೋ ಎಂದು ಕೇಳಿದರು.

11 And he said to them, `What man shall be of you, who shall have one sheep, and if this may fall on the sabbaths into a ditch, will not lay hold on it and raise `it'?ಅದಕ್ಕಾತನು ಅವರಿಗೆ-- ನಿಮ್ಮಲ್ಲಿ ಯಾವನಿಗಾದರೂ ಒಂದು ಕುರಿಯಿರಲಾಗಿ ಅದು ಸಬ್ಬತ್‌ ದಿನದಲ್ಲಿ ಕುಣಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೆ ಇರುವನೇ?

12 How much better, therefore, is a man than a sheep? -- so that it is lawful on the sabbaths to do good.'ಹಾಗಾದರೆ ಕುರಿಗಿಂತಲೂ ಒಬ್ಬ ಮನುಷ್ಯನು ಎಷ್ಟೋ ಶ್ರೇಷ್ಠನಾಗಿದ್ದಾನಲ್ಲವೇ? ಆದದರಿಂದ ಸಬ್ಬತ್‌ ದಿನಗಳಲ್ಲಿ ಒಳ್ಳೆಯದನ್ನು ಮಾಡುವದು ನ್ಯಾಯವಾಗಿದೆ ಎಂದು ಹೇಳಿದನು.

13 Then saith he to the man, `Stretch forth thy hand,' and he stretched `it' forth, and it was restored whole as the other.ಆಗ ಆತನು ಆ ಮನುಷ್ಯನಿಗೆ--ನಿನ್ನ ಕೈಯನ್ನು ಮುಂದೆ ಚಾಚು ಅಂದನು. ಅವನು ಚಾಚಿದಾಗ ಅದು ಗುಣವಾಗಿ ಮತ್ತೊಂದರ ಹಾಗಾಯಿತು.

14 And the Pharisees having gone forth, held a consultation against him, how they might destroy him,ತರುವಾಯ ಫರಿಸಾ ಯರು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧವಾಗಿ ಆಲೋಚಿಸಲು ಹೊರಗೆ ಹೋದರು.

15 and Jesus having known, withdrew thence, and there followed him great multitudes, and he healed them all,ಆದರೆ ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು; ಮತ್ತು ದೊಡ್ಡ ಸಮೂಹಗಳು ಆತನನ್ನು ಹಿಂಬಾಲಿಸಿದರು. ಆಗ ಆತನು ಅವರೆಲ್ಲರನ್ನು ವಾಸಿ ಮಾಡಿದನು.

16 and did charge them that they might not make him manifest,ಯೇಸು ತನ್ನನ್ನು ಯಾರಿಗೂ ಪ್ರಕಟಿಸ ಬಾರದೆಂದು ಅವರಿಗೆ ಆಜ್ಞಾಪಿಸಿದನು;

17 that it might be fulfilled that was spoken through Isaiah the prophet, saying,ಹೀಗೆ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟಿದ್ದು ನೆರವೇರಿತು; ಅದೇನಂದರೆ--

18 `Lo, My servant, whom I did choose, My beloved, in whom My soul did delight, I will put My Spirit upon him, and judgment to the nations he shall declare,ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು; ನನ್ನ ಪ್ರಾಣವು ಬಹಳವಾಗಿ ಮೆಚ್ಚಿಕೊಂಡಿರುವ ನನ್ನ ಪ್ರಿಯನು; ನಾನು ಆತನ ಮೇಲೆ ನನ್ನ ಆತ್ಮನನ್ನು ಇರಿಸುವೆನು ಮತ್ತು ಆತನು ಅನ್ಯಜನಗಳಿಗೆ ನ್ಯಾಯವನ್ನು ತೋರಿ ಸುವನು.

19 he shall not strive nor cry, nor shall any hear in the broad places his voice,ಆತನು ಜಗಳವಾಡುವದಿಲ್ಲ, ಕೂಗಾಡು ವದೂ ಇಲ್ಲ; ಇಲ್ಲವೆ ಯಾವ ಮನುಷ್ಯನು ಬೀದಿಗಳಲ್ಲಿ ಆತನ ಸ್ವರವನ್ನು ಕೇಳಿಸಿಕೊಳ್ಳುವದೂ ಇಲ್ಲ.

20 a bruised reed he shall not break, and smoking flax he shall not quench, till he may put forth judgment to victory,ಆತನು ನ್ಯಾಯವನ್ನು ವಿಜಯಕ್ಕಾಗಿ ಕಳುಹಿಸುವವರೆಗೆ ಜಜ್ಜಿದ ದಂಟನ್ನು ಮುರಿಯುವದಿಲ್ಲ ಮತ್ತು ಹೊಗೆಯಾಡುವ ಬತ್ತಿಯನ್ನು ನಂದಿಸುವದಿಲ್ಲ.

21 and in his name shall nations hope.'ಮತ್ತು ಆತನ ಹೆಸರಿನಲ್ಲಿ ಅನ್ಯಜನರು ನಂಬಿಕೆಯಿಡುವರು ಎಂಬದೇ.

22 Then was brought to him a demoniac, blind and dumb, and he healed him, so that the blind and dumb both spake and saw.ಆಗ ಜನರು ದೆವ್ವ ಹಿಡಿದಿದ್ದವನೂ ಕುರುಡನೂ ಮೂಕನೂ ಆಗಿದ್ದವನನ್ನು ಆತನ ಬಳಿಗೆ ತಂದರು; ಮತ್ತು ಆತನು ಅವನನ್ನು ಸ್ವಸ್ಥಮಾಡಿದ್ದರಿಂದ ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ನೋಡಿದನು.

23 And all the multitudes were amazed, and said, `Is this the Son of David?'ಆಗ ಜನರೆಲ್ಲರು ವಿಸ್ಮಯ ಗೊಂಡವರಾಗಿ--ಈತನು ದಾವೀದನ ಕುಮಾರ ನಲ್ಲವೇ ಅಂದರು.

24 but the Pharisees having heard, said, `This one doth not cast out demons, except by Beelzeboul, ruler of the demons.'ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು.

25 And Jesus, knowing their thoughts, said to them, `Every kingdom having been divided against itself is desolated, and no city or house having been divided against itself, doth stand,ಆಗ ಯೇಸು ಅವರ ಆಲೋಚನೆ ಗಳನ್ನು ತಿಳಿದು ಅವರಿಗೆ--ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುತ್ತದೆ; ಮತ್ತು ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ಪಟ್ಟಣವಾಗಲೀ ಮನೆಯಾಗಲೀ ನಿಲ್ಲುವದಿಲ್ಲ.

26 and if the Adversary doth cast out the Adversary, against himself he was divided, how then doth his kingdom stand?ಇದಲ್ಲದೆ ಸೈತಾನನು ಸೈತಾನನನ್ನು ಹೊರಗೆ ಹಾಕಿದರೆ ಅವನು ತನಗೆ ವಿರೋಧವಾಗಿ ತಾನೇ ವಿಭಾಗಿಸಲ್ಪಟ್ಟಿದ್ದಾನೆ; ಹಾಗಾದರೆ ಅವನ ರಾಜ್ಯವು ಹೇಗೆ ನಿಂತೀತು?

27 `And if I, by Beelzeboul, do cast out the demons, your sons -- by whom do they cast out? because of this they -- they shall be your judges.ಮತ್ತು ಬೆಲ್ಜೆಬೂಲನಿಂದ ನಾನು ದೆವ್ವಗಳನ್ನು ಬಿಡಿಸಿದರೆ ನಿಮ್ಮ ಮಕ್ಕಳು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯತೀರಿಸುವರು.

28 `But if I, by the Spirit of God, do cast out the demons, then come already unto you did the reign of God.ಆದರೆ ನಾನು ದೇವರ ಆತ್ಮನಿಂದ ದೆವ್ವಗಳನ್ನು ಬಿಡಿಸಿದರೆ ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆಯಲ್ಲಾ.

29 `Or how is one able to go into the house of the strong man, and to plunder his goods, if first he may not bind the strong man? and then his house he will plunder.ಇಲ್ಲವೆ ಯಾವನಾದರೂ ಮೊದಲು ಬಲವುಳ್ಳ ಮನುಷ್ಯನನ್ನು ಕಟ್ಟಿಹಾಕದ ಹೊರತು ಅವನ ಮನೆ ಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳು ವದಕ್ಕಾದೀತೇ? ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವದಕ್ಕಾಗುವದು.

30 `He who is not with me is against me, and he who is not gathering with me, doth scatter.ನನ್ನ ಸಂಗಡ ಇರದ ವನು ನನಗೆ ವಿರೋಧವಾಗಿದ್ದಾನೆ; ಮತ್ತು ನನ್ನ ಸಂಗಡ ಕೂಡಿಸದವನು ಚದರಿಸುವವನಾಗಿದ್ದಾನೆ ಎಂದು ಹೇಳಿದನು.

31 Because of this I say to you, all sin and evil speaking shall be forgiven to men, but the evil speaking of the Spirit shall not be forgiven to men.ಆದಕಾರಣ ನಾನು ನಿಮಗೆ ಹೇಳುವದೇ ನಂದರೆ-- ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ.

32 And whoever may speak a word against the Son of Man it shall be forgiven to him, but whoever may speak against the Holy Spirit, it shall not be forgiven him, neither in this age, nor in that which is coming.ಮನುಷ್ಯ ಕುಮಾರನಿಗೆ ವಿರೋಧವಾಗಿ ಯಾವನಾದರೂ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವದು; ಆದರೆ ಪರಿಶುದ್ಧಾ ತ್ಮನಿಗೆ ವಿರೋಧವಾಗಿ ಯಾವನಾದರೂ ಮಾತನಾ ಡಿದರೆ ಈ ಲೋಕದಲ್ಲಿಯಾಗಲೀ ಇಲ್ಲವೆ ಬರುವ ಲೋಕದಲ್ಲಿಯಾಗಲೀ ಅದು ಅವನಿಗೆ ಕ್ಷಮಿಸಲ್ಪಡು ವದಿಲ್ಲ.

33 `Either make the tree good, and its fruit good, or make the tree bad, and its fruit bad, for from the fruit is the tree known.ಮರವು ಒಳ್ಳೆಯದಾಗಿದ್ದರೆ ಅದರ ಫಲವೂ ಒಳ್ಳೆಯದೆಂದು ಎಣಿಸಿರಿ; ಇಲ್ಲವೇ ಮರವು ಕೆಟ್ಟದ್ದಾಗಿದ್ದರೆ ಅದರ ಫಲವೂ ಕೆಟ್ಟದ್ದೆಂದೆಣಿಸಿರಿ; ಯಾಕಂದರೆ ಮರವು ತನ್ನ ಫಲದಿಂದಲೇ ತಿಳಿಯಲ್ಪ ಡುವದು.

34 `Brood of vipers! how are ye able to speak good things -- being evil? for out of the abundance of the heart doth the mouth speak.ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.

35 The good man out of the good treasure of the heart doth put forth the good things, and the evil man out of the evil treasure doth put forth evil things.ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ.

36 `And I say to you, that every idle word that men may speak, they shall give for it a reckoning in a day of judgment;ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.

37 for from thy words thou shalt be declared righteous, and from thy words thou shalt be declared unrighteous.'ನೀನು ನಿನ್ನ ಮಾತುಗಳಿಂದಲೇ ನೀತಿವಂತನಾಗುವಿ ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯಾಗುವಿ ಎಂದು ಹೇಳಿದನು.

38 Then answered certain of the scribes and Pharisees, saying, `Teacher, we will to see a sign from thee.'ಆಗ ಶಾಸ್ತ್ರಿಗಳಲ್ಲಿ ಮತ್ತು ಫರಿಸಾಯರಲ್ಲಿ ಕೆಲ ವರು--ಗುರುವೇ, ನಿನ್ನಿಂದ ಒಂದು ಸೂಚಕಕಾರ್ಯ ವನ್ನು ನೋಡಬೇಕೆಂದಿದ್ದೇವೆ ಎಂದು ಕೇಳಿದ್ದಕ್ಕೆ

39 And he answering said to them, `A generation, evil and adulterous, doth seek a sign, and a sign shall not be given to it, except the sign of Jonah the prophet;ಆತನು ಪ್ರತ್ಯುತ್ತರವಾಗಿ ಅವರಿಗೆ--ವ್ಯಭಿಚಾರಿಣಿ ಯಾದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡು ಕುತ್ತದೆ; ಪ್ರವಾದಿಯಾದ ಯೋನನಲ್ಲಿ ಆದ ಸೂಚಕ ಕಾರ್ಯವೇ ಹೊರತು ಅದಕ್ಕೆ ಇನ್ಯಾವ ಸೂಚಕಕಾರ್ಯ ವೂ ಕೊಡಲ್ಪಡುವದಿಲ್ಲ.

40 for, as Jonah was in the belly of the fish three days and three nights, so shall the Son of Man be in the heart of the earth three days and three nights.ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.

41 `Men of Nineveh shall stand up in the judgment with this generation, and shall condemn it, for they reformed at the proclamation of Jonah, and lo, a greater than Jonah here!ನ್ಯಾಯವಿಚಾರಣೆಯಲ್ಲಿ ನಿನೆವೆಯ ಜನರು ಈ ಸಂತತಿಯೊಂದಿಗೆ ಎದ್ದು ಅವರನ್ನು ಖಂಡಿಸು ವರು; ಯಾಕಂದರೆ ಯೋನನು ಸಾರಿದಾಗ ಅವರು ಮಾನಸಾಂತರಪಟ್ಟರು; ಮತ್ತು ಇಗೋ, ಇಲ್ಲಿ ಯೋನ ನಿಗಿಂತಲೂ ದೊಡ್ಡವನಿದ್ದಾನೆ.

42 `A queen of the south shall rise up in the judgment with this generation, and shall condemn it, for she came from the ends of the earth to hear the wisdom of Solomon, and lo, a greater than Solomon here!ನ್ಯಾಯವಿಚಾರಣೆ ಯಲ್ಲಿ ದಕ್ಷಿಣದ ರಾಣಿಯು ಈ ಸಂತತಿಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿ ಯ ಕಟ್ಟಕಡೆಯಿಂದ ಬಂದಳು; ಇಗೋ, ಇಲ್ಲಿ ಸೊಲೊ ಮೋನನಿಗಿಂತಲೂ ದೊಡ್ಡವನಿದ್ದಾನೆ.

43 `And, when the unclean spirit may go forth from the man, it doth walk through dry places seeking rest, and doth not find;ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ತಿರುಗಾಡಿದರೂ ಅದನ್ನು ಕಂಡುಕೊಳ್ಳಲಿಲ್ಲ.

44 then it saith, I will turn back to my house whence I came forth; and having come, it findeth `it' unoccupied, swept, and adorned:ಆಗ ಅದು--ನಾನು ಹೊರಟುಬಂದ ನನ್ನ ಮನೆಗೆ ಹಿಂತಿರುಗುವೆನು ಎಂದು ಅಂದುಕೊಂಡು ಬಂದು ಅದು ಬರಿದಾಗಿಯೂ ಗುಡಿಸಿ ಅಲಂಕರಿಸಲ್ಪಟ್ಟದ್ದಾ ಗಿಯೂ ಇರುವದನ್ನು ಕಂಡಿತು.

45 then doth it go, and take with itself seven other spirits more evil than itself, and having gone in they dwell there, and the last of that man doth become worse than the first; so shall it be also to this evil generation.'ತರುವಾಯ ಅದು ಹೋಗಿ ತನಗಿಂತ ಕೆಟ್ಟವುಗಳಾಗಿರುವ ಬೇರೆ ಏಳು ಆತ್ಮಗಳನ್ನು ಕರಕೊಂಡು ಅವು ಅದರೊಳಗೆ ಪ್ರವೇಶಿಸಿ ವಾಸಮಾಡುತ್ತವೆ; ಹೀಗೆ ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತಲೂ ಕೆಟ್ಟದ್ದಾಗಿರುವದು. ಅದರಂತೆಯೇ ಈ ಕೆಟ್ಟ ಸಂತತಿಗೂ ಆಗುವದು ಎಂದು ಹೇಳಿದನು.

46 And while he was yet speaking to the multitudes, lo, his mother and brethren had stood without, seeking to speak to him,ಆತನು ಇನ್ನೂ ಜನರ ಸಂಗಡ ಮಾತನಾಡು ತ್ತಿದ್ದಾಗ ಇಗೋ, ಆತನ ತಾಯಿಯೂ ಆತನ ಸಹೋದರರೂ ಆತನೊಂದಿಗೆ ಮಾತನಾಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದರು.

47 and one said to him, `Lo, thy mother and thy brethren do stand without, seeking to speak to thee.'ಆಗ ಒಬ್ಬನು ಆತನಿಗೆ--ಇಗೋ, ನಿನ್ನ ತಾಯಿಯೂ ನಿನ್ನ ಸಹೋ ದರರೂ ನಿನ್ನೊಂದಿಗೆ ಮಾತನಾಡಲು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ ಅಂದನು.

48 And he answering said to him who spake to him, `Who is my mother? and who are my brethren?'ಅದಕ್ಕೆ ಆತನು ತನಗೆ ಹೇಳಿದವನಿಗೆ ಪ್ರತ್ಯುತ್ತರವಾಗಿ--ನನ್ನ ತಾಯಿ ಯಾರು? ಮತ್ತು ನನ್ನ ಸಹೋದರರು ಯಾರು? ಎಂದು ಹೇಳಿ ಶಿಷ್ಯರ ಕಡೆಗೆ ತನ್ನ ಕೈಚಾಚಿ--

49 And having stretched forth his hand toward his disciples, he said, `Lo, my mother and my brethren!ಇಗೋ, ನನ್ನ ತಾಯಿಯು ಮತ್ತು ನನ್ನ ಸಹೋದರರು!

50 for whoever may do the will of my Father who is in the heavens, he is my brother, and sister, and mother.'ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು.

Kannada Bible