Matthew 13 - ASV (Kannada)
1 On that day went Jesus out of the house, and sat by the sea side.ಅದೇ ದಿನದಲ್ಲಿ ಯೇಸು ಆ ಮನೆಯಿಂ ಹೊರಟುಹೋಗಿ ಸಮುದ್ರದ ಬಳಿಯಲಿ ಕೂತುಕೊಂಡನು.
2 And there were gathered unto him great multitudes, so that he entered into a boat, and sat; and all the multitude stood on the beach.ಆಗ ಜನರ ದೊಡ್ಡ ಸಮೂಹಗಳು ಆತನ ಬಳಿಗೆ ಕೂಡಿ ಬಂದದ್ದರಿಂದ ಆತನು ದೋಣಿ ಯನ್ನು ಹತ್ತಿ ಕೂತುಕೊಂಡನು. ಮತ್ತು ಆ ಸಮೂಹ ದವರೆಲ್ಲಾ ದಡದ ಮೇಲೆ ನಿಂತಿದ್ದರು.
3 And he spake to them many things in parables, saying, Behold, the sower went forth to sow;ಆಗ ಆತನು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದೇನಂದರೆ--ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟನು.
4 and as he sowed, some `seeds' fell by the way side, and the birds came and devoured them:ಅವನು ಬಿತ್ತಿದಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು; ಆಗ ಪಕ್ಷಿಗಳು ಬಂದು ಅವು ಗಳನ್ನು ನುಂಗಿಬಿಟ್ಟವು.
5 and others fell upon the rocky places, where they had not much earth: and straightway they sprang up, because they had no deepness of earth:ಕೆಲವು ಬಹಳ ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು; ಅಲ್ಲಿ ಆಳವಾದ ಮಣ್ಣು ಇಲ್ಲದ್ದರಿಂದ ತಕ್ಷಣವೇ ಅವು ಮೊಳೆತವು;
6 and when the sun was risen, they were scorched; and because they had no root, they withered away.ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಅವುಗಳಿಗೆ ಬೇರು ಇಲ್ಲದ್ದರಿಂದ ಒಣಗಿಹೋದವು.
7 And others fell upon the thorns; and the thorns grew up and choked them:ಮತ್ತು ಕೆಲವು ಮುಳ್ಳುಗಳಲ್ಲಿ ಬಿದ್ದವು; ಆಗ ಆ ಮುಳ್ಳುಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.
8 and others fell upon the good ground, and yielded fruit, some a hundredfold, some sixty, some thirty.ಆದರೆ ಬೇರೆಯವುಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು ಕೆಲವು ಮೂವತ್ತರಷ್ಟು ಫಲಕೊಟ್ಟವು.
9 He that hath ears, let him hear.ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
10 And the disciples came, and said unto him, Why speakest thou unto them in parables?ತರುವಾಯ ಶಿಷ್ಯರು ಬಂದು ಆತನಿಗೆ--ನೀನು ಸಾಮ್ಯಗಳಲ್ಲಿ ಅವರೊಂದಿಗೆ ಯಾಕೆ ಮಾತನಾಡುತ್ತೀ ಎಂದು ಕೇಳಲು
11 And he answered and said unto them, Unto you it is given to know the mysteries of the kingdom of heaven, but to them it is not given.ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.
12 For whosoever hath, to him shall be given, and he shall have abundance: but whosoever hath not, from him shall be taken away even that which he hath.ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಮತ್ತು ಅವನಿಗೆ ಹೆಚ್ಚು ಸಮೃದ್ಧಿಯಾಗುವದು; ಆದರೆ ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು.
13 Therefore speak I to them in parables; because seeing they see not, and hearing they hear not, neither do they understand.ಆದದರಿಂದ ನಾನು ಅವರಿಗೆ ಸಾಮ್ಯಗಳಲ್ಲಿ ಮಾತ ನಾಡುತ್ತೇನೆ; ಯಾಕಂದರೆ ಅವರು ನೋಡಿದರೂ ಕಾಣುವದಿಲ್ಲ ಮತ್ತು ಕೇಳಿದರೂ ತಿಳುಕೊಳ್ಳುವದಿಲ್ಲ; ಇಲ್ಲವೆ ಅವರು ಗ್ರಹಿಸುವದು ಇಲ್ಲ
14 And unto them is fulfilled the prophecy of Isaiah, which saith, By hearing ye shall hear, and shall in no wise understand; And seeing ye shall see, and shall in no wise perceive:ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ.
15 For this people's heart is waxed gross, And their ears are dull of hearing, And their eyes they have closed; Lest haply they should perceive with their eyes, And hear with their ears, And understand with their heart, And should turn again, And I should heal them.ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ
16 But blessed are your eyes, for they see; and your ears, for they hear.ಆದರೆ ನಿಮ್ಮ ಕಣ್ಣುಗಳು ನೋಡುವದ ರಿಂದಲೂ ನಿಮ್ಮ ಕಿವಿಗಳು ಕೇಳುವದರಿಂದಲೂ ಅವು ಧನ್ಯವಾದವುಗಳೇ.
17 For verily I say unto you, that many prophets and righteous men desired to see the things which ye see, and saw them not; and to hear the things which ye hear, and heard them not.ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನೀವು ನೋಡುವಂಥವುಗಳನ್ನು ಮತ್ತು ಕೇಳುವಂಥವುಗಳನ್ನು ಅನೇಕ ಪ್ರವಾದಿಗಳು ಮತ್ತು ನೀತಿವಂತರು ನೋಡುವದಕ್ಕೂ ಕೇಳುವದಕ್ಕೂ ಅಪೇಕ್ಷಿಸಿದರು; ಆದರೆ ಅವರು ನೋಡಲಿಲ್ಲ ಮತ್ತು ಕೇಳಲಿಲ್ಲ.
18 Hear then ye the parable of the sower.ಆದದರಿಂದ ಬಿತ್ತುವವನ ಸಾಮ್ಯದ ವಿಷಯವಾಗಿ ನೀವು ಕೇಳಿರಿ:
19 When any one heareth the word of the kingdom, and understandeth it not, `then' cometh the evil `one', and snatcheth away that which hath been sown in his heart. This is he that was sown by the way side.ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.
20 And he that was sown upon the rocky places, this is he that heareth the word, and straightway with joy receiveth it;ಮತ್ತು ಬಂಡೆಯ ಸ್ಥಳಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಅಂಗೀಕರಿಸುತ್ತಾನೆ;
21 yet hath he not root in himself, but endureth for a while; and when tribulation or persecution ariseth because of the word, straightway he stumbleth.ಆದರೂ ಅವನಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇರುವನು; ಯಾಕಂದರೆ ವಾಕ್ಯಕ್ಕಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ ತಕ್ಷಣವೇ ಅವನು ಅಭ್ಯಂತರ ಪಡುವನು.
22 And he that was sown among the thorns, this is he that heareth the word; and the care of the world, and the deceitfulness of riches, choke the word, and he becometh unfruitful.ಮುಳ್ಳುಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಸಹ ಇವನೇ; ಇವನು ವಾಕ್ಯವನ್ನು ಕೇಳುತ್ತಾನೆ; ಆದರೆ ಈ ಪ್ರಪಂಚದ ಚಿಂತೆಯೂ ಐಶ್ವರ್ಯದ ಮೋಸವೂ ವಾಕ್ಯವನ್ನು ಅಡಗಿಸುವ ದರಿಂದ ಅವನು ಫಲ ಕೊಡಲಾರನು.
23 And he that was sown upon the good ground, this is he that heareth the word, and understandeth it; who verily beareth fruit, and bringeth forth, some a hundredfold, some sixty, some thirty.ಆದರೆ ಒಳ್ಳೇ ಭೂಮಿಯಲ್ಲಿ ಬೀಜ ವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯ ವನ್ನು ಕೇಳಿ ಅದನು ಗ್ರಹಿಸುತ್ತಾನೆ; ಇವನೇ ಫಲಫಲಿ ಸುವವನಾಗಿ ನೂರರಷ್ಟು ಅರವತ್ತರಷ್ಟು ಮತ್ತು ಮೂವತ್ತರಷ್ಟು ಫಲವನ್ನು ಕೊಡುತ್ತಾನೆ.
24 Another parable set he before them, saying, The kingdom of heaven is likened unto a man that sowed good seed in his field:ಆತನು ಮತ್ತೊಂದು ಸಾಮ್ಯವನ್ನು ಹೇಳಿದ್ದೇ ನಂದರೆ--ಪರಲೋಕ ರಾಜ್ಯವು ಒಳ್ಳೇ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆ ಯಾಗಿದೆ.
25 but while men slept, his enemy came and sowed tares also among the wheat, and went away.ಹೇಗಂದರೆ ಜನರು ನಿದ್ರೆ ಮಾಡುತ್ತಿದ್ದಾಗ ಅವನ ವೈರಿಯು ಬಂದು ಗೋದಿಯ ನಡುವೆ ಹಣಜಿ ಯನ್ನು ಬಿತ್ತಿ ಹೊರಟು ಹೋದನು.
26 But when the blade sprang up and brought forth fruit, then appeared the tares also.ಅದು ಮೊಳೆತು ಫಲಕೊಟ್ಟಾಗ ಹಣಜಿ ಸಹ ಕಾಣಿಸಿ ಕೊಂಡಿತು.
27 And the servants of the householder came and said unto him, Sir, didst thou not sow good seed in thy field? whence then hath it tares?ಆದದರಿಂದ ಮನೇಯಜಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ--ಅಯ್ಯಾ, ನೀನು ನಿನ್ನ ಹೊಲದಲ್ಲಿ ಒಳ್ಳೇ ಬೀಜವನ್ನು ಬಿತ್ತಿದಿ ಯಲ್ಲಾ? ಹಾಗಾದರೆ ಈ ಹಣಜಿಯು ಎಲ್ಲಿಂದ ಬಂತು ಎಂದು ಕೇಳಿದರು.
28 And he said unto them, An enemy hath done this. And the servants say unto him, Wilt thou then that we go and gather them up?ಅವನು ಅವರಿಗೆ--ಒಬ್ಬ ವೈರಿ ಯು ಇದನ್ನು ಮಾಡಿದ್ದಾನೆ ಅಂದನು. ಆದರೆ ಸೇವಕರು ಅವನಿಗೆ--ಹಾಗಾದರೆ ನಾವು ಹೋಗಿ ಅವುಗಳನ್ನು ಕೂಡಿಸುವಂತೆ ನೀನು ಇಷ್ಟಪಡುತ್ತೀಯೋ ಎಂದು ಕೇಳಿದರು.
29 But he saith, Nay; lest haply while ye gather up the tares, ye root up the wheat with them.ಆದರೆ ಅವನು--ಬೇಡ, ನೀವು ಹಣಜಿಯನ್ನು ಕೂಡಿಸುವಾಗ ಅವುಗಳೊಂದಿಗೆ ಗೋದಿಯನ್ನೂ ಕಿತ್ತೀರಿ.
30 Let both grow together until the harvest: and in the time of the harvest I will say to the reapers, Gather up first the tares, and bind them in bundles to burn them; but gather the wheat into my barn.ಸುಗ್ಗೀಕಾಲದ ವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ--ಮೊದಲು ಹಣಜಿಯನ್ನು ಕೂಡಿಸಿ ಅದನ್ನು ಸುಡುವದಕ್ಕೆ ಹೊರೆ ಕಟ್ಟಿರಿ; ಆದರೆ ಗೋದಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು ಅಂದನು.
31 Another parable set he before them, saying, The kingdom of heaven is like unto a grain of mustard seed, which a man took, and sowed in his field:ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಮನುಷ್ಯನು ತಕ್ಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದ ಸಾಸಿವೆ ಕಾಳಿಗೆ ಪರಲೋಕರಾಜ್ಯವು ಹೋಲಿಕೆಯಾಗಿದೆ.
32 which indeed is less than all seeds; but when it is grown, it is greater than the herbs, and becometh a tree, so that the birds of the heaven come and lodge in the branches thereof.ಅದು ಎಲ್ಲಾ ಬೀಜಗಳಿಗಿಂತಲೂ ಚಿಕ್ಕದಾದದ್ದೇ ನಿಜ; ಆದರೆ ಅದು ಬೆಳೆದಾಗ ಎಲ್ಲಾ ಸಸಿಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ವಾಸಮಾಡುತ್ತವೆ.
33 Another parable spake he unto them; The kingdom of heaven is like unto leaven, which a woman took, and hid in three measures of meal, till it was all leavened.ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲಾ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಪರಲೋಕ ರಾಜ್ಯವು ಹೋಲಿಕೆಯಾಗಿದೆ.
34 All these things spake Jesus in parables unto the multitudes; and without a parable spake he nothing unto them:ಯೇಸು ಇವೆಲ್ಲವುಗಳನ್ನು ಜನಸಮೂಹ ದೊಂದಿಗೆ ಸಾಮ್ಯಗಳಲ್ಲಿ ಮಾತನಾಡಿದನು; ಸಾಮ್ಯ ವಿಲ್ಲದೆ ಆತನು ಅವರೊಂದಿಗೆ ಮಾತನಾಡಲಿಲ್ಲ.
35 that it might be fulfilled which was spoken through the prophet, saying, I will open my mouth in parables; I will utter things hidden from the foundation of the world.ಹೀಗೆ--ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು; ಲೋಕದ ಅಸ್ತಿವಾರದಿಂದ ಮರೆಯಾಗಿ ಇಡಲ್ಪಟ್ಟವುಗಳನ್ನು ನಾನು ಹೊರಪಡಿಸುವೆನು ಎಂದು ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರಿತು.
36 Then he left the multitudes, and went into the house: and his disciples came unto him, saying, Explain unto us the parable of the tares of the field.ತರುವಾಯ ಯೇಸು ಜನಸಮೂಹವನ್ನು ಕಳು ಹಿಸಿಬಿಟ್ಟು ಮನೆಯೊಳಕ್ಕೆ ಹೋದನು; ಆಗ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಹೊಲದ ಹಣಜಿಯ ಸಾಮ್ಯವನ್ನು ನಮಗೆ ವಿವರಿಸು ಅಂದರು.
37 And he answered and said, He that soweth the good seed is the Son of man;ಆತನು ಪ್ರತ್ಯುತ್ತರವಾಗಿ ಅವರಿಗೆ-- ಒಳ್ಳೇ ಬೀಜ ಬಿತ್ತುವ ವನು ಮನುಷ್ಯಕುಮಾರನು;
38 and the field is the world; and the good seed, these are the sons of the kingdom; and the tares are the sons of the evil `one';ಹೊಲವು ಈ ಲೋಕ; ಒಳ್ಳೇ ಬೀಜವು ರಾಜ್ಯದ ಮಕ್ಕಳಾಗಿದ್ದಾರೆ; ಆದರೆ ಹಣಜಿಯು ಕೆಡುಕನ ಮಕ್ಕಳಾಗಿದ್ದಾರೆ.
39 and the enemy that sowed them is the devil: and the harvest is the end of the world; and the reapers are angels.ಅದನ್ನು ಬಿತ್ತಿದ ವೈರಿಯು ಸೈತಾನನೇ; ಸುಗ್ಗೀ ಕಾಲವು ಲೋಕದ ಅಂತ್ಯವಾಗಿದೆ; ಮತ್ತು ಕೊಯ್ಯುವವರು ದೂತರೇ.
40 As therefore the tares are gathered up and burned with fire; so shall it be in the end of the world.ಹೇಗೆ ಹಣಜಿಯನ್ನು ಕೂಡಿಸಿ ಬೆಂಕಿಯಲ್ಲಿ ಸುಡು ವರೋ ಹಾಗೆಯೇ ಈ ಲೋಕಾಂತ್ಯದಲ್ಲಿ ಆಗುವದು.
41 The Son of man shall send forth his angels, and they shall gather out of his kingdom all things that cause stumbling, and them that do iniquity,ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು;
42 and shall cast them into the furnace of fire: there shall be the weeping and the gnashing of teeth.ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
43 Then shall the righteous shine forth as the sun in the kingdom of their Father. He that hath ears, let him hear.ತರುವಾಯ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
44 The kingdom of heaven is like unto a treasure hidden in the field; which a man found, and hid; and in his joy he goeth and selleth all that he hath, and buyeth that field.ಪರಲೋಕರಾಜ್ಯವು ಹೊಲದಲ್ಲಿ ಬಚ್ಚಿಟ್ಟಿದ ಸಂಪತ್ತಿಗೆ ಹೋಲಿಕೆಯಾಗಿದೆ; ಅದನ್ನು ಒಬ್ಬ ಮನು ಷ್ಯನು ಕಂಡುಕೊಂಡು ಬಚ್ಚಿಟ್ಟು ಅದರ ಸಂತೋಷದ ನಿಮಿತ್ತ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.
45 Again, the kingdom of heaven is like unto a man that is a merchant seeking goodly pearls:ಪರಲೋಕರಾಜ್ಯವು ಒಳ್ಳೇ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ.
46 and having found one pearl of great price, he went and sold all that he had, and bought it.ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಅದನ್ನು ಕೊಂಡುಕೊಂಡನು.
47 Again, the kingdom of heaven is like unto a net, that was cast into the sea, and gathered of every kind:ಪರಲೋಕರಾಜ್ಯವು ಸಮುದ್ರದಲ್ಲಿ ಬೀಸಲ್ಪಟ್ಟು ಎಲ್ಲಾ ತರವಾದದ್ದನ್ನು (ಮಾನುಗಳನ್ನು) ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ.
48 which, when it was filled, they drew up on the beach; and they sat down, and gathered the good into vessels, but the bad they cast away.ಅದು ತುಂಬಿದಾಗ ಅವರು ಅದನ್ನು ದಡಕ್ಕೆ ಎಳೆದು ಕೂತುಕೊಂಡು ಒಳ್ಳೆಯವುಗಳನ್ನು ಪಾತ್ರೆಗಳಲ್ಲಿ ತುಂಬಿಸಿ ಕೆಟ್ಟವುಗಳನ್ನು ಹೊರಗೆ ಬಿಸಾಡಿದರು.
49 So shall it be in the end of the world: the angels shall come forth, and sever the wicked from among the righteous,ಹಾಗೆಯೇ ಲೋಕಾಂತ್ಯ ದಲ್ಲಿ ಇರುವದು; ದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸುವರು.
50 and shall cast them into the furnace of fire: there shall be the weeping and the gnashing of teeth.ಮತ್ತು ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು ಎಂದು ಹೇಳಿದನು.
51 Have ye understood all these things? They say unto him, Yea.ಇದಲ್ಲದೆ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ಗ್ರಹಿಸಿದ್ದೀರಾ ಎಂದು ಕೇಳಿದ್ದಕ್ಕೆ ಅವರು ಆತ ನಿಗೆ--ಕರ್ತನೇ, ಹೌದು ಎಂದು ಹೇಳಿದರು.
52 And he said unto them, Therefore every scribe who hath been made a disciple to the kingdom of heaven is like unto a man that is a householder, who bringeth forth out of his treasure things new and old.ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.
53 And it came to pass, when Jesus had finished these parables, he departed thence.ಈ ಸಾಮ್ಯಗಳನ್ನು ಮುಗಿಸಿದ ತರುವಾಯ ಯೇಸು ಅಲ್ಲಿಂದ ಹೊರಟುಹೋದನು.
54 And coming into his own country he taught them in their synagogue, insomuch that they were astonished, and said, Whence hath this man this wisdom, and these mighty works?ಆತನು ತನ್ನ ಸ್ವಂತ ದೇಶಕ್ಕೆ ಬಂದು ಅವರ ಸಭಾಮಂದಿರ ದಲ್ಲಿ ಅವರಿಗೆ ಬೋಧಿಸಿದ್ದರಿಂದ ಅವರು ವಿಸ್ಮಯ ಗೊಂಡು--ಈ ಜ್ಞಾನವೂ ಈ ಮಹತ್ಕಾರ್ಯಗಳೂ ಈತನಿಗೆ ಎಲ್ಲಿಂದ ಬಂದಿದ್ದಾವು?
55 Is not this the carpenter's son? is not his mother called Mary? and his brethren, James, and Joseph, and Simon, and Judas?ಈತನು ಬಡಗಿ ಯ ಮಗನಲ್ಲವೇ? ಮರಿಯಳೆಂದು ಕರೆಯಲ್ಪಡು ವವಳು ಈತನ ತಾಯಿಯಲ್ಲವೇ? ಮತ್ತು ಯಾಕೋಬ, ಯೋಸೇಫ, ಸೀಮೋನ, ಯೂದ ಈತನ ಸಹೋದರ ರಲ್ಲವೇ?
56 And his sisters, are they not all with us? Whence then hath this man all these things?ಈತನ ಸಹೋದರಿಯರೆಲ್ಲರೂ ನಮ್ಮೊಂ ದಿಗೆ ಇದ್ದಾರಲ್ಲವೇ? ಹಾಗಾದರೆ ಇವೆಲ್ಲವುಗಳು ಈ ಮನುಷ್ಯನಿಗೆ ಎಲ್ಲಿಂದ ಬಂದಿದ್ದಾವೆಂದು ಅಂದು ಕೊಂಡರು.
57 And they were offended in him. But Jesus said unto them, A prophet is not without honor, save in his own country, and in his own house.ಅವರು ಆತನ ವಿಷಯದಲ್ಲಿ ಅಭ್ಯಂತರ ಪಟ್ಟರು. ಆದರೆ ಯೇಸು ಅವರಿಗೆ--ಪ್ರವಾದಿಗೆ ಮತ್ತೆಲ್ಲಿಯಾದರೂ ಸನ್ಮಾನವಿದೆ, ಆದರೆ ತನ್ನ ಸ್ವಂತ ದೇಶದಲ್ಲಿ ತನ್ನ ಸ್ವಂತ ಮನೆಯಲ್ಲಿ ಮಾತ್ರ ಇಲ್ಲ ಅಂದನು.
58 And he did not many mighty works there because of their unbelief.ಆತನು ಅವರ ಅಪನಂಬಿಕೆಯ ದೆಸೆ ಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ನಡಿಸಲಿಲ್ಲ.
Kannada Bible