Matthew 14 - ASV (Kannada)
1 At that season Herod the tetrarch heard the report concerning Jesus,ಆ ಕಾಲದಲ್ಲಿ ಚತುರಾಧಿಪತಿಯಾದ ಹೆರೋದನು ಯೇಸುವಿನ ಕೀರ್ತಿಯನ್ನು ಕೇಳಿ ತನ್ನ ಸೇವಕರಿಗೆ --
2 and said unto his servants, This is John the Baptist; he is risen from the dead; and therefore do these powers work in him.ಇವನು ಬಾಪ್ತಿಸ್ಮ ಮಾಡಿಸುವ ಯೋಹಾನನೇ; ಈಗ ಇವನು ಸತ್ತವರೊಳಗಿಂದ ಎದ್ದಿದ್ದಾನೆ; ಆದದರಿಂದಲೇ ಮಹತ್ಕಾರ್ಯಗಳು ಇವನಲ್ಲಿ ತೋರಿಬರುತ್ತವೆ ಎಂದು ಹೇಳಿದನು.
3 For Herod had laid hold on John, and bound him, and put him in prison for the sake of Herodias, his brother Philip's wife.ಯಾಕಂದರೆ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾಗಿದ್ದ ಹೆರೋದ್ಯಳ ನಿಮಿತ್ತವಾಗಿ ಯೋಹಾನನನ್ನು ಹಿಡಿದು ಕಟ್ಟಿ ಸೆರೆಯಲ್ಲಿ ಹಾಕಿದ್ದನು.
4 For John said unto him, It is not lawful for thee to have her.ಯಾಕಂದರೆ ಯೋಹಾನನು--ನೀನು ಅವಳನ್ನು ಇಟ್ಟುಕೊಂಡಿರುವದು ನಿನಗೆ ನ್ಯಾಯವಲ್ಲ ಎಂದು ಅವನಿಗೆ ಹೇಳಿದ್ದನು.
5 And when he would have put him to death, he feared the multitude, because they counted him as a prophet.ಆದದರಿಂದ ಅವನು ಯೋಹಾನನನ್ನು ಕೊಲ್ಲಬೇಕೆಂದಿದ್ದಾಗ ಜನ ಸಮೂಹಕ್ಕೆ ಭಯಪಟ್ಟನು; ಯಾಕಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.
6 But when Herod's birthday came, the daughter of Herodias danced in the midst, and pleased Herod.ಆದರೆ ಹೆರೋದನ ಹುಟ್ಟಿದ ದಿನವು ಆಚರಿಸಲ್ಪಟ್ಟಾಗ ಹೆರೋದ್ಯಳ ಮಗಳು ಅವರ ಮುಂದೆ ನಾಟ್ಯವಾಡಿ ಹೆರೋದನನ್ನು ಮೆಚ್ಚಿಸಿದಳು.
7 Whereupon he promised with an oath to give her whatsoever she should ask.ಆದದರಿಂದ ಅವಳು ಏನು ಕೇಳಿಕೊಂಡರೂ ಅವಳಿಗೆ ಕೊಡುವೆನೆಂದು ಅವನು ಆಣೆಯಿಟ್ಟು ವಾಗ್ದಾನಮಾಡಿದನು.
8 And she, being put forward by her mother, saith, Give me here on a platter the head of John the Baptist.ಅವಳು ತನ್ನ ತಾಯಿಯಿಂದ ಮೊದಲೇ ಕಲಿಸಲ್ಪಟ್ಟವಳಾಗಿ-- ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಪರಾ ತಿನಲ್ಲಿ ಇಲ್ಲಿಯೇ ನನಗೆ ಕೊಡು ಎಂದು ಹೇಳಿದಳು.
9 And the king was grieved; but for the sake of his oaths, and of them that sat at meat with him, he commanded it to be given;ಆಗ ಅರಸನು ದುಃಖಪಟ್ಟಾಗ್ಯೂ ತನ್ನ ಆಣೆಯ ನಿಮಿತ್ತದಿಂದಲೂ ತನ್ನೊಂದಿಗೆ ಊಟಕ್ಕೆ ಕೂತಿದ್ದವರ ನಿಮಿತ್ತದಿಂದಲೂ ಅದನ್ನು ಅವಳಿಗೆ ಕೊಡುವಂತೆ ಅಪ್ಪಣೆಕೊಟ್ಟನು.
10 and he sent and beheaded John in the prison.ಮತ್ತು ಅವನು (ಆಳುಗಳನ್ನು) ಕಳುಹಿಸಿ ಸೆರೆಯಲ್ಲಿ ಯೋಹಾನನ ತಲೆಯನ್ನು ಹೊಯಿಸಿದನು.
11 And his head was brought on a platter, and given to the damsel: and she brought it to her mother.ಇದಲ್ಲದೆ ಅವನ ತಲೆಯನ್ನು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತಂದಳು.
12 And his disciples came, and took up the corpse, and buried him; and they went and told Jesus.ಆಗ ಅವನ ಶಿಷ್ಯರು ಬಂದು ದೇಹವನ್ನೆತ್ತಿಕೊಂಡು ಹೂಣಿಟ್ಟು ಹೋಗಿ ಯೇಸುವಿಗೆ ತಿಳಿಸಿದರು.
13 Now when Jesus heard `it', he withdrew from thence in a boat, to a desert place apart: and when the multitudes heard `thereof,' they followed him on foot from the cities.ಯೇಸು ಆ ವಿಷಯವನ್ನು ಕೇಳಿದಾಗ ದೋಣಿ ಯನ್ನು ಹತ್ತಿ ಅಲ್ಲಿಂದ ವಿಂಗಡವಾಗಿ ಅರಣ್ಯ ಸ್ಥಳಕ್ಕೆ ಹೊರಟುಹೋದನು. ಇದನ್ನು ಕೇಳಿ ಜನರು ಪಟ್ಟಣ ಗಳಿಂದ ಕಾಲು ನಡಿಗೆಯಾಗಿ ಆತನನ್ನು ಹಿಂಬಾಲಿ ಸಿದರು.
14 And he came forth, and saw a great multitude, and he had compassion on them, and healed their sick.ಆಗ ಯೇಸು ಹೊರಟುಹೋಗಿ ಜನರ ಮಹಾಸಮೂಹವನ್ನು ಕಂಡು ಅವರ ಮೇಲೆ ಕನಿಕರ ಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.
15 And when even was come, the disciples came to him, saying, The place is desert, and the time is already past; send the multitudes away, that they may go into the villages, and buy themselves food.ಸಾಯಂಕಾಲವಾದಾಗ ಆತನ ಶಿಷ್ಯರು ಆತನ ಬಳಿಗೆ ಬಂದು--ಇದು ಅಡವಿಯ ಸ್ಥಳ, ಸಮಯವು ದಾಟಿತು; ಜನರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರವನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿಬಿಡು ಅಂದರು.
16 But Jesus said unto them, They have no need to go away; give ye them to eat.ಆದರೆ ಯೇಸು ಅವ ರಿಗೆ--ಅವರು ಹೋಗುವದು ಅವಶ್ಯವಿಲ್ಲ; ಅವರು ಊಟಮಾಡುವದಕ್ಕೆ ನೀವೇ ಕೊಡಿರಿ ಎಂದು ಹೇಳಿದನು.
17 And they say unto him, We have here but five loaves, and two fishes.ಅವರು ಆತನಿಗೆ--ನಮ್ಮ ಹತ್ತಿರ ಐದು ರೊಟ್ಟಿ ಎರಡು ಮಾನುಗಳು ಮಾತ್ರ ಇವೆ ಎಂದು ಹೇಳಿದರು.
18 And he said, Bring them hither to me.ಆತನು--ಅವುಗಳನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು.
19 And he commanded the multitudes to sit down on the grass; and he took the five loaves, and the two fishes, and looking up to heaven, he blessed, and brake and gave the loaves to the disciples, and the disciples to the multitudes.ಜನ ಸಮೂಹವು ಹುಲ್ಲಿನಮೇಲೆ ಕೂತುಕೊಳ್ಳಬೇಕೆಂದು ಆತನು ಅಪ್ಪಣೆಕೊಟ್ಟು ಆ ಐದು ರೊಟ್ಟಿ ಎರಡು ಮಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಮುರಿದು ಆ ರೊಟ್ಟಿಗಳನ್ನು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
20 And they all ate, and were filled: and they took up that which remained over of the broken pieces, twelve baskets full.ಅವರೆಲ್ಲರೂ ತಿಂದು ತೃಪ್ತರಾದರು; ಮತ್ತು ಅವರು ಉಳಿದ ತುಂಡುಗಳನ್ನು ಕೂಡಿಸಿ ಹನ್ನೆ ರಡು ಪುಟ್ಟಿಗಳಲ್ಲಿ ತುಂಬಿಸಿದರು.
21 And they that did eat were about five thousand men, besides women and children.ಊಟ ಮಾಡಿ ದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಇದ್ದರು.
22 And straightway he constrained the disciples to enter into the boat, and to go before him unto the other side, till he should send the multitudes away.ಕೂಡಲೆ ಯೇಸು ತಾನು ಜನಸಮೂಹಗಳನ್ನು ಕಳುಹಿಸಿ ಬಿಡುವಷ್ಟರೊಳಗಾಗಿ ತನ್ನ ಶಿಷ್ಯರು ದೋಣಿ ಯನ್ನು ಹತ್ತಿ ತನಗಿಂತ ಮುಂಚೆ ಆಚೇ ದಡಕ್ಕೆ ಹೋಗ ಬೇಕೆಂದು ಅವರನ್ನು ಒತ್ತಾಯ ಮಾಡಿದನು.
23 And after he had sent the multitudes away, he went up into the mountain apart to pray: and when even was come, he was there alone.ಆತನು ಜನಸಮೂಹಗಳನ್ನು ಕಳುಹಿಸಿದ ಮೇಲೆ ಪ್ರಾರ್ಥನೆ ಮಾಡಲು ಏಕಾಂತವಾಗಿ ಗುಡ್ಡದ ಮೇಲೆ ಹೋದನು; ಸಾಯಂಕಾಲವಾದಾಗ ಆತನೊಬ್ಬನೇ ಅಲ್ಲಿ ಇದ್ದನು.
24 But the boat was now in the midst of the sea, distressed by the waves; for the wind was contrary.ಆಗ ದೋಣಿಯು ಸಮುದ್ರದ ಮಧ್ಯದಲ್ಲಿದ್ದು ತೆರೆಗಳಿಂದ ಬಡಿಯಲ್ಪಡುತ್ತಿತ್ತು; ಯಾಕಂದರೆ ಗಾಳಿಯು ಎದುರಾಗಿತ್ತು.
25 And in the fourth watch of the night he came unto them, walking upon the sea.ಮತ್ತು ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಹೋದನು.
26 And when the disciples saw him walking on the sea, they were troubled, saying, It is a ghost; and they cried out for fear.ಆತನು ಸಮುದ್ರದ ಮೇಲೆ ನಡೆಯುವದನ್ನು ಶಿಷ್ಯರು ನೋಡಿ ಕಳವಳಪಟ್ಟು--ಇದು ಭೂತ ಎಂದು ಭೀತಿಯಿಂದ ಕೂಗಿ ಕೊಂಡರು.
27 But straightway Jesus spake unto them, saying Be of good cheer; it is I; be not afraid.ಆದರೆ ಯೇಸು ತಕ್ಷಣವೇ ಮಾತನಾಡಿ ಅವರಿಗೆ--ಧೈರ್ಯವಾಗಿರ್ರಿ; ನಾನೇ, ಭಯಪಡಬೇಡಿರಿಅಂದನು.
28 And Peter answered him and said, Lord, if it be thou, bid me come unto the upon the waters.ಆಗ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನೇ ಆಗಿದ್ದರೆ ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರಲು ನನಗೆ ಅಪ್ಪಣೆಕೊಡು ಅಂದನು.
29 And he said, Come. And Peter went down from the boat, and walked upon the waters to come to Jesus.ಅದಕ್ಕಾತನು--ಬಾ ಅಂದನು. ಆಗ ಪೇತ್ರನು ದೋಣಿಯಿಂದ ಇಳಿದು ಯೇಸುವಿನ ಬಳಿಗೆ ಹೋಗು ವದಕ್ಕಾಗಿ ನೀರಿನ ಮೇಲೆ ನಡೆದನು.
30 But when he saw the wind, he was afraid; and beginning to sink, he cried out, saying, Lord, save me.ಆದರೆ ಬಲ ವಾದ ಗಾಳಿಯನ್ನು ನೋಡಿದಾಗ ಅವನು ಭಯಪಟ್ಟು ಮುಣುಗುತ್ತಾ--ಕರ್ತನೇ, ನನ್ನನ್ನು ರಕ್ಷಿಸು ಎಂದು ಕೂಗಿ ಹೇಳಿದನು.
31 And immediately Jesus stretched forth his hand, and took hold of him, and saith unto him, O thou of little faith, wherefore didst thou doubt?ತಕ್ಷಣವೇ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು--ಓ ಅಲ್ಪ ವಿಶ್ವಾಸಿಯೇ, ನೀನು ಯಾಕೆ ಸಂದೇಹಪಟ್ಟೆ ಎಂದು ಅವನಿಗೆ ಹೇಳಿದನು.
32 And when they were gone up into the boat, the wind ceased.ಅವರು ದೋಣಿಯೊಳಗೆ ಬಂದಾಗ ಗಾಳಿನಿಂತು ಹೋಯಿತು.
33 And they that were in the boat worshipped him, saying, Of a truth thou art the Son of God.ದೋಣಿಯಲ್ಲಿದ್ದವರು ಆತನ ಬಳಿಗೆ ಬಂದು ಆತನನ್ನು ಆರಾಧಿಸಿ--ನಿಜವಾಗಿಯೂ ನೀನು ದೇವಕುಮಾರನೇ ಎಂದು ಹೇಳಿದರು.
34 And when they had crossed over, they came to the land, unto Gennesaret.ಅವರು ದಾಟಿ ಗೆನೆಜರೇತ್ ಸೀಮೆಗೆ ಬಂದರು.
35 And when the men of that place knew him, they sent into all that region round about, and brought unto him all that were sick,ಆಗ ಅಲ್ಲಿದ್ದ ಜನರು ಆತನ ಗುರುತು ಹಿಡಿದು ಸುತ್ತ ಮುತ್ತಲಿನ ಸೀಮೆಗೆಲ್ಲಾ ಹೇಳಿಕಳುಹಿಸಿ ರೋಗಿಗಳ ನ್ನೆಲ್ಲಾ ಆತನ ಬಳಿಗೆ ತಂದರು.
36 and they besought him that they might only touch the border of his garment: and as many as touched were made whole.ಅವರು ಆತನ ಉಡು ಪಿನ ಅಂಚನ್ನಾದರೂ ಮುಟ್ಟುವಂತೆ ಆತನನ್ನು ಬೇಡಿ ಕೊಂಡರು; ಮತ್ತು ಯಾರಾರು ಮುಟ್ಟಿದರೋ ಅವರು ಸಂಪೂರ್ಣವಾಗಿ ಸ್ವಸ್ಥರಾದರು.
Kannada Bible