Matthew 21 - ASV (Kannada)
1 And when they drew nigh unto Jerusalem, and came unto Bethphage, unto the mount of Olives, then Jesus sent two disciples,ಅವರು ಯೆರೂಸಲೇಮಿಗೆ ಸಮಾಪಿಸಿ ಎಣ್ಣೇ ಮರಗಳ ಗುಡ್ಡದ ಬೇತ್ಫಗೆಗೆ ಬಂದಾಗ ಯೇಸು ಇಬ್ಬರು ಶಿಷ್ಯರನ್ನು ಕಳುಹಿಸಿ ಅವರಿಗೆ--
2 saying unto them, Go into the village that is over against you, and straightway ye shall find an ass tied, and a colt with her: loose `them', and bring `them' unto me.ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ; ಆಗ ಒಂದು ಕತ್ತೆಯು ತನ್ನ ಮರಿಯೊಂದಿಗೆ ಕಟ್ಟಲ್ಪಟ್ಟಿರುವದನ್ನು ನೀವು ತಕ್ಷಣವೇ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತಕ್ಕೊಂಡು ಬನ್ನಿರಿ.
3 And if any one say aught unto you, ye shall say, The Lord hath need of them; and straightway he will send them.ಮತ್ತು ಯಾವನಾದರೂ ನಿಮಗೆ ಏನಾದರೂ ಹೇಳಿದರೆ ನೀವು ಅವನಿಗೆ--ಅವು ಕರ್ತನಿಗೆ ಬೇಕಾಗಿವೆ ಎಂದು ಹೇಳಿರಿ; ಆಗ ಅವನು ಅವುಗಳನ್ನು ಕೂಡಲೆ ಕಳುಹಿಸುವನು ಎಂದು ಹೇಳಿದನು.
4 Now this is come to pass, that it might be fulfilled which was spoken through the prophet, saying,ಇದೆಲ್ಲವೂ ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರು ವಂತೆ ಆಯಿತು; ಅದೇನಂದರೆ--
5 Tell ye the daughter of Zion, Behold, thy King cometh unto thee, Meek, and riding upon an ass, And upon a colt the foal of an ass.ಇಗೋ, ನಿನ್ನ ಅರಸನು ಸಾತ್ವಿಕನು, ಆತನು ಕತ್ತೆಯನ್ನೂ ಕತ್ತೆಯ ಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ ಎಂದು ಚೀಯೋನ್ ಕುಮಾರ್ತೆಗೆ ಹೇಳಿರಿ ಎಂಬದೇ.
6 And the disciples went, and did even as Jesus appointed them,ಆಗ ಶಿಷ್ಯರು ಹೊರಟುಹೋಗಿ ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿದರು.
7 and brought the ass, and the colt, and put on them their garments; and he sat thereon.ಮತ್ತು ಅವರು ಕತ್ತೆಯನ್ನೂ ಅದರ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ವಸ್ತ್ರಗಳನ್ನು ಹಾಕಿ ಆತನನ್ನು ಆದರ ಮೇಲೆ ಕೂಡ್ರಿಸಿದರು.
8 And the most part of the multitude spread their garments in the way; and others cut branches from the trees, and spread them in the way.ಆಗ ಅತಿ ದೊಡ್ಡ ಜನರ ಸಮೂಹವು ತಮ್ಮ ವಸ್ತ್ರಗಳನ್ನು ದಾರಿಯಲ್ಲಿ ಹಾಸಿದರು; ಬೇರೆಯವರು ಮರಗಳಿಂದ ಕೊಂಬೆಗಳನ್ನು ಕತ್ತರಿಸಿ ದಾರಿಯಲ್ಲಿ ಹರಡಿದರು.
9 And the multitudes that went before him, and that followed, cried, saying, Hosanna to the son of David: Blessed `is' he that cometh in the name of the Lord; Hosanna in the highest.ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.
10 And when he was come into Jerusalem, all the city was stirred, saying, Who is this?ಆತನು ಯೆರೂಸಲೇಮಿಗೆ ಬಂದಾಗ ಪಟ್ಟಣ ವೆಲ್ಲಾ ಕದಲಿ--ಈತನು ಯಾರು ಎಂದು ಕೇಳಿದರು.
11 And the multitudes said, This is the prophet, Jesus, from Nazareth of Galilee.ಅದಕ್ಕೆ ಜನರ ಸಮೂಹವು --ಈತನು ಗಲಿಲಾಯ ದ ನಜರೇತಿನ ಪ್ರವಾದಿಯಾದ ಯೇಸುವು ಎಂದು ಹೇಳಿದರು.
12 And Jesus entered into the temple of God, and cast out all them that sold and bought in the temple, and overthrew the tables of he money-changers, and the seats of them that sold the doves;ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಕ್ರಯ ವಿಕ್ರಯ ಮಾಡುವವರನ್ನೆಲ್ಲಾ ಹೊರಗೆ ಹಾಕಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿ ವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿ ದನು.
13 and he saith unto them, It is written, My house shall be called a house of prayer: but ye make it a den of robbers.ಆತನು ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದಾಗಿ ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
14 And the blind and the lame came to him in the temple; and he healed them.ಆಗ ಕುರುಡರು ಮತ್ತು ಕುಂಟರು ದೇವಾಲಯ ದಲ್ಲಿ ಆತನ ಬಳಿಗೆ ಬಂದರು; ಆತನು ಅವರನ್ನು ಸ್ವಸ್ಥ ಮಾಡಿದನು.
15 But when the chief priests and the scribes saw the wonderful things that he did, and the children that were crying in the temple and saying, Hosanna to the son of David; they were moved with indignation,ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯ ದಲ್ಲಿ--ದಾವೀದನ ಕುಮಾರನಿಗೆ ಹೊಸನ್ನ ಎಂದು ಕೂಗುವದನ್ನು ಪ್ರಧಾನ ಯಾಜಕರೂ ಶಾಸ್ತ್ರಿಗಳೂ ನೋಡಿ ಕೋಪಗೊಂಡು ಆತನಿಗೆ--
16 and said unto him, Hearest thou what these are saying? And Jesus saith unto them, Yea: did ye never read, Out of the mouth of babes and sucklings thou has perfected praise?ಇವರು ಹೇಳುವದೇನೆಂದು ನೀನು ಕೇಳುತ್ತೀಯೋ ಎಂದು ಕೇಳಿದ್ದಕ್ಕೆ ಯೇಸು ಅವರಿಗೆ -- ಹೌದು, ಸಣ್ಣ ಮಕ್ಕಳ ಮತ್ತು ಮೊಲೇಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ ಅಂದನು.
17 And he left them, and went forth out of the city to Bethany, and lodged there.ಆತನು ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಹೋಗಿ ಅಲ್ಲಿ ಇಳುಕೊಂಡನು.
18 Now in the morning as he returned to the city, he hungered.ಬೆಳಿಗ್ಗೆ ಪಟ್ಟಣಕ್ಕೆ ಹಿಂದಿರುಗಿ ಬರುತ್ತಿದ್ದಾಗ ಆತನು ಹಸಿದಿದ್ದನು.
19 And seeing a fig tree by the way side, he came to it, and found nothing thereon, but leaves only; and he saith unto it, Let there be no fruit from thee henceforward for ever. And immediately the fig tree withered away.ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ. ಆಗ ಆತನು ಅದಕ್ಕೆ--ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು. ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು.
20 And when the disciples saw it, they marvelled, saying, How did the fig tree immediately wither away?ಶಿಷ್ಯರು ಅದನ್ನು ನೋಡಿ ಆಶ್ಚರ್ಯ ದಿಂದ --ಎಷ್ಟು ಬೇಗನೆ ಈ ಅಂಜೂರದ ಮರವು ಒಣಗಿಹೋಯಿತಲ್ಲಾ ಎಂದು ಹೇಳಿದನು.
21 And Jesus answered and said unto them, Verily I say unto you, If ye have faith, and doubt not, ye shall not only do what is done to the fig tree, but even if ye shall say unto this mountain, Be thou taken up and cast into the sea, it shall be done.ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನಿಮ್ಮಲ್ಲಿ ನಂಬಿಕೆಯಿದ್ದು ಮತ್ತು ಸಂದೇಹ ಪಡದೆಹೋದರೆ ಈ ಅಂಜೂರದ ಮರಕ್ಕೆ ಮಾಡಿದಂತೆ ಮಾಡುವದಲ್ಲದೆ ನೀವು ಈ ಗುಡ್ಡಕ್ಕೆ --ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೂ ಅದು ಆಗುವ
22 And all things, whatsoever ye shall ask in prayer, believing, ye shall receive.ನೀವು ನಂಬುವವ ರಾಗಿ ಪ್ರಾರ್ಥನೆಯಲ್ಲಿ ಏನೇನೂ ಕೇಳುವಿರೋ ಅವುಗಳನ್ನೆಲ್ಲಾ ಹೊಂದುವಿರಿ ಅಂದನು.
23 And when he was come into the temple, the chief priests and the elders of the people came unto him as he was teaching, and said, By what authority doest thou these things? and who gave thee this authority?ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು.
24 And Jesus answered and said unto them, I also will ask you one question, which if ye tell me, I likewise will tell you by what authority I do these things.ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ವಿಷಯ ನಿಮ್ಮನ್ನು ಕೇಳುತ್ತೇನೆ; ಅದನ್ನು ನೀವು ನನಗೆ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇ ನೆಂದು ನಿಮಗೆ ಹೇಳುವೆನು ಎಂದು ಹೇಳಿ--ಯೋಹಾನನ ಬಾಪ್ತಿಸ್ಮವು ಎಲ್ಲಿಂದ ಬಂತು?
25 The baptism of John, whence was it? from heaven or from men? And they reasoned with themselves, saying, If we shall say, From heaven; he will say unto us, Why then did ye not believe him?ಪರ ಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದಾಗ ಅವರು ತಮ್ಮತಮ್ಮೊಳಗೆ ತರ್ಕಿ ಸುತ್ತಾ--ಪರಲೋಕದಿಂದ ಎಂದು ಹೇಳಿದರೆ ಆತನು ನಮಗೆ--ನೀವು ಅವನನ್ನು ಯಾಕೆ ನಂಬಲಿಲ್ಲ ಎಂದು ಹೇಳಾನು.
26 But if we shall say, From men; we fear the multitude; for all hold John as a prophet.ಮನುಷ್ಯರಿಂದ ಎಂದು ನಾವು ಹೇಳಿ ದರೆ ಜನರಿಗೆ ಭಯಪಡುತ್ತೇವೆ; ಯಾಕಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸು ತ್ತಾರೆ ಎಂದು ಅಂದುಕೊಂಡರು.
27 And they answered Jesus, and said, We know not. He also said unto them, Neither tell I you by what authority I do these things.ತರುವಾಯ ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳ ಲಾರೆವು ಅಂದರು. ಅದಕ್ಕೆ ಆತನು ಅವರಿಗೆ-- ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವದಿಲ್ಲ.
28 But what think ye? A man had two sons; and he came to the first, and said, Son, go work to-day in the vineyard.ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು.
29 And he answered and said, I will not: but afterward he repented himself, and went.ಅವನು ಪ್ರತ್ಯುತ್ತರವಾಗಿ--ನಾನು ಹೋಗುವದಿಲ್ಲ ಎಂದು ಹೇಳಿ ತರುವಾಯ ಪಶ್ಚಾ ತ್ತಾಪಪಟ್ಟು ಹೋದನು.
30 And he came to the second, and said likewise. And he answered and said, I `go', sir: and went not.ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ.
31 Which of the two did the will of his father? They say, The first. Jesus saith unto them, Verily I say unto you, that the publicans and the harlots go into the kingdom of God before you.ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.
32 For John came unto you in the way of righteousness, and ye believed him not; but the publicans and the harlots believed him: and ye, when ye saw it, did not even repent yourselves afterward, that ye might believe him.ಯಾಕಂದರೆ ಯೋಹಾನನು ನೀತಿಯ ಮಾರ್ಗದಲ್ಲಿ ನಿಮ್ಮ ಬಳಿಗೆ ಬಂದನು. ಮತ್ತು ನೀವು ಅವನನ್ನು ನಂಬಲಿಲ್ಲ; ಆದರೆ ಸುಂಕದವರೂ ಸೂಳೆಯರೂ ಅವನನ್ನು ನಂಬಿದರು; ನೀವು ಅದನ್ನು ನೋಡಿದ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.
33 Hear another parable: There was a man that was a householder, who planted a vineyard, and set a hedge about it, and digged a winepress in it, and built a tower, and let it out to husbandmen, and went into another country.ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು.
34 And when the season of the fruits drew near, he sent his servants to the husbandmen, to receive his fruits.ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು.
35 And the husbandmen took his servants, and beat one, and killed another, and stoned another.ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.
36 Again, he sent other servants more than the first: and they did unto them in like manner.ಅವನು ತಿರಿಗಿ ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು; ಅವರು ಅದೇ ರೀತಿಯಲ್ಲಿ ಅವರಿಗೂ ಮಾಡಿದರು.
37 But afterward he sent unto them his son, saying, They will reverence my son.ಆದರೆ ಅವನು-- ನನ್ನ ಮಗನನ್ನಾದರೂ ಅವರು ಸನ್ಮಾನಿ ಸಾರು ಎಂದು ಅಂದುಕೊಂಡು ಕಟ್ಟಕಡೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು.
38 But the husbandmen, when they saw the son, said among themselves, This is the heir; come, let us kill him, and take his inheritance.ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು.
39 And they took him, and cast him forth out of the vineyard, and killed him.ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು.
40 When therefore the lord of the vineyard shall come, what will he do unto those husbandmen?ಹೀಗಿರುವ ದರಿಂದ ದ್ರಾಕ್ಷೇ ತೋಟದ ಯಜಮಾನನು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡಾನು ಅಂದನು.
41 They say unto him, He will miserably destroy those miserable men, and will let out the vineyard unto other husbandmen, who shall render him the fruits in their seasons.ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.
42 Jesus saith unto them, Did ye never read in the scriptures, The stone which the builders rejected, The same was made the head of the corner; This was from the Lord, And it is marvelous in our eyes?ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?
43 Therefore say I unto you, The kingdom of God shall be taken away from you, and shall be given to a nation bringing forth the fruits thereof.ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.
44 And he that falleth on this stone shall be broken to pieces: but on whomsoever it shall fall, it will scatter him as dust.ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದು ಯಾವನ ಮೇಲೆ ಬೀಳುವದೋ ಅವನನ್ನು ಅರೆದು ಪುಡಿಪುಡಿ ಮಾಡುವದು ಅಂದನು.
45 And when the chief priests and the Pharisees heard his parables, they perceived that he spake of them.ಪ್ರಧಾನ ಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮ ವಿಷಯದಲ್ಲಿಯೇ ಆತನು ಅದನ್ನು ಹೇಳಿದನೆಂದು ಅವರು ತಿಳುಕೊಂಡರು.
46 And when they sought to lay hold on him, they feared the multitudes, because they took him for a prophet.ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.
Kannada Bible