Matthew 21 - BBE (Kannada)
1 And when they were near Jerusalem, and had come to Beth-phage, to the Mountain of Olives, Jesus sent two disciples,ಅವರು ಯೆರೂಸಲೇಮಿಗೆ ಸಮಾಪಿಸಿ ಎಣ್ಣೇ ಮರಗಳ ಗುಡ್ಡದ ಬೇತ್ಫಗೆಗೆ ಬಂದಾಗ ಯೇಸು ಇಬ್ಬರು ಶಿಷ್ಯರನ್ನು ಕಳುಹಿಸಿ ಅವರಿಗೆ--
2 Saying to them, Go into the little town in front of you, and straight away you will see an ass with a cord round her neck, and a young one with her; let them loose and come with them to me.ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ; ಆಗ ಒಂದು ಕತ್ತೆಯು ತನ್ನ ಮರಿಯೊಂದಿಗೆ ಕಟ್ಟಲ್ಪಟ್ಟಿರುವದನ್ನು ನೀವು ತಕ್ಷಣವೇ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತಕ್ಕೊಂಡು ಬನ್ನಿರಿ.
3 And if anyone says anything to you, you will say, The Lord has need of them; and straight away he will send them.ಮತ್ತು ಯಾವನಾದರೂ ನಿಮಗೆ ಏನಾದರೂ ಹೇಳಿದರೆ ನೀವು ಅವನಿಗೆ--ಅವು ಕರ್ತನಿಗೆ ಬೇಕಾಗಿವೆ ಎಂದು ಹೇಳಿರಿ; ಆಗ ಅವನು ಅವುಗಳನ್ನು ಕೂಡಲೆ ಕಳುಹಿಸುವನು ಎಂದು ಹೇಳಿದನು.
4 Now this took place so that these words of the prophet might come true,ಇದೆಲ್ಲವೂ ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರು ವಂತೆ ಆಯಿತು; ಅದೇನಂದರೆ--
5 Say to the daughter of Zion, See, your King comes to you, gentle and seated on an ass, and on a young ass.ಇಗೋ, ನಿನ್ನ ಅರಸನು ಸಾತ್ವಿಕನು, ಆತನು ಕತ್ತೆಯನ್ನೂ ಕತ್ತೆಯ ಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ ಎಂದು ಚೀಯೋನ್ ಕುಮಾರ್ತೆಗೆ ಹೇಳಿರಿ ಎಂಬದೇ.
6 And the disciples went and did as Jesus had given them orders,ಆಗ ಶಿಷ್ಯರು ಹೊರಟುಹೋಗಿ ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿದರು.
7 And got the ass and the young one, and put their clothing on them, and he took his seat on it.ಮತ್ತು ಅವರು ಕತ್ತೆಯನ್ನೂ ಅದರ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ವಸ್ತ್ರಗಳನ್ನು ಹಾಕಿ ಆತನನ್ನು ಆದರ ಮೇಲೆ ಕೂಡ್ರಿಸಿದರು.
8 And all the people put their clothing down in the way; and others got branches from the trees, and put them down in the way.ಆಗ ಅತಿ ದೊಡ್ಡ ಜನರ ಸಮೂಹವು ತಮ್ಮ ವಸ್ತ್ರಗಳನ್ನು ದಾರಿಯಲ್ಲಿ ಹಾಸಿದರು; ಬೇರೆಯವರು ಮರಗಳಿಂದ ಕೊಂಬೆಗಳನ್ನು ಕತ್ತರಿಸಿ ದಾರಿಯಲ್ಲಿ ಹರಡಿದರು.
9 And those who went before him, and those who came after, gave loud cries, saying, Glory to the Son of David: A blessing on him who comes in the name of the Lord: Glory in the highest.ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.
10 And when he came into Jerusalem, all the town was moved, saying, Who is this?ಆತನು ಯೆರೂಸಲೇಮಿಗೆ ಬಂದಾಗ ಪಟ್ಟಣ ವೆಲ್ಲಾ ಕದಲಿ--ಈತನು ಯಾರು ಎಂದು ಕೇಳಿದರು.
11 And the people said, This is the prophet Jesus, from Nazareth of Galilee.ಅದಕ್ಕೆ ಜನರ ಸಮೂಹವು --ಈತನು ಗಲಿಲಾಯ ದ ನಜರೇತಿನ ಪ್ರವಾದಿಯಾದ ಯೇಸುವು ಎಂದು ಹೇಳಿದರು.
12 And Jesus went into the Temple and sent out all who were trading there, overturning the tables of the money-changers and the seats of those trading in doves.ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಕ್ರಯ ವಿಕ್ರಯ ಮಾಡುವವರನ್ನೆಲ್ಲಾ ಹೊರಗೆ ಹಾಕಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿ ವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿ ದನು.
13 And he said to them, It is in the Writings, My house is to be named a house of prayer, but you are making it a hole of thieves.ಆತನು ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದಾಗಿ ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
14 And the blind and the broken in body came to him in the Temple, and he made them well.ಆಗ ಕುರುಡರು ಮತ್ತು ಕುಂಟರು ದೇವಾಲಯ ದಲ್ಲಿ ಆತನ ಬಳಿಗೆ ಬಂದರು; ಆತನು ಅವರನ್ನು ಸ್ವಸ್ಥ ಮಾಡಿದನು.
15 But when the chief priests and the scribes saw the works of power which he did, and the children crying out in the Temple, Glory to the son of David, they were angry and said to him,ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯ ದಲ್ಲಿ--ದಾವೀದನ ಕುಮಾರನಿಗೆ ಹೊಸನ್ನ ಎಂದು ಕೂಗುವದನ್ನು ಪ್ರಧಾನ ಯಾಜಕರೂ ಶಾಸ್ತ್ರಿಗಳೂ ನೋಡಿ ಕೋಪಗೊಂಡು ಆತನಿಗೆ--
16 Have you any idea what these are saying? And Jesus said to them, Yes: have you not seen in the Writings, From the lips of children and babies at the breast you have made your praise complete?ಇವರು ಹೇಳುವದೇನೆಂದು ನೀನು ಕೇಳುತ್ತೀಯೋ ಎಂದು ಕೇಳಿದ್ದಕ್ಕೆ ಯೇಸು ಅವರಿಗೆ -- ಹೌದು, ಸಣ್ಣ ಮಕ್ಕಳ ಮತ್ತು ಮೊಲೇಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ ಅಂದನು.
17 And he went away from them, and went out of the town to Bethany, and was there for the night.ಆತನು ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಹೋಗಿ ಅಲ್ಲಿ ಇಳುಕೊಂಡನು.
18 Now in the morning when he was coming back to the town, he had a desire for food.ಬೆಳಿಗ್ಗೆ ಪಟ್ಟಣಕ್ಕೆ ಹಿಂದಿರುಗಿ ಬರುತ್ತಿದ್ದಾಗ ಆತನು ಹಸಿದಿದ್ದನು.
19 And seeing a fig-tree by the wayside, he came to it, and saw nothing on it but leaves only; and he said to it, Let there be no fruit from you from this time forward for ever. And straight away the fig-tree became dry and dead.ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ. ಆಗ ಆತನು ಅದಕ್ಕೆ--ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು. ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು.
20 And when the disciples saw it they were surprised, saying, How did the fig-tree become dry in so short a time?ಶಿಷ್ಯರು ಅದನ್ನು ನೋಡಿ ಆಶ್ಚರ್ಯ ದಿಂದ --ಎಷ್ಟು ಬೇಗನೆ ಈ ಅಂಜೂರದ ಮರವು ಒಣಗಿಹೋಯಿತಲ್ಲಾ ಎಂದು ಹೇಳಿದನು.
21 And Jesus in answer said to them, Truly I say to you, If you have faith, without doubting, not only may you do what has been done to the fig-tree, but even if you say to this mountain, Be taken up and put into the sea, it will be done.ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನಿಮ್ಮಲ್ಲಿ ನಂಬಿಕೆಯಿದ್ದು ಮತ್ತು ಸಂದೇಹ ಪಡದೆಹೋದರೆ ಈ ಅಂಜೂರದ ಮರಕ್ಕೆ ಮಾಡಿದಂತೆ ಮಾಡುವದಲ್ಲದೆ ನೀವು ಈ ಗುಡ್ಡಕ್ಕೆ --ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೂ ಅದು ಆಗುವ
22 And all things, whatever you make request for in prayer, having faith, you will get.ನೀವು ನಂಬುವವ ರಾಗಿ ಪ್ರಾರ್ಥನೆಯಲ್ಲಿ ಏನೇನೂ ಕೇಳುವಿರೋ ಅವುಗಳನ್ನೆಲ್ಲಾ ಹೊಂದುವಿರಿ ಅಂದನು.
23 And when he had come into the Temple, the chief priests and those in authority over the people came to him while he was teaching, and said, By what authority do you do these things? and who gave you this authority?ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು.
24 And Jesus said to them in answer, I will put one question to you, and if you give me the answer, I will say by what authority I do these things.ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ವಿಷಯ ನಿಮ್ಮನ್ನು ಕೇಳುತ್ತೇನೆ; ಅದನ್ನು ನೀವು ನನಗೆ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇ ನೆಂದು ನಿಮಗೆ ಹೇಳುವೆನು ಎಂದು ಹೇಳಿ--ಯೋಹಾನನ ಬಾಪ್ತಿಸ್ಮವು ಎಲ್ಲಿಂದ ಬಂತು?
25 The baptism of John, where did it come from? from heaven or from men? And they were reasoning among themselves, saying, If we say, From heaven; he will say to us, Why then did you not have faith in him?ಪರ ಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದಾಗ ಅವರು ತಮ್ಮತಮ್ಮೊಳಗೆ ತರ್ಕಿ ಸುತ್ತಾ--ಪರಲೋಕದಿಂದ ಎಂದು ಹೇಳಿದರೆ ಆತನು ನಮಗೆ--ನೀವು ಅವನನ್ನು ಯಾಕೆ ನಂಬಲಿಲ್ಲ ಎಂದು ಹೇಳಾನು.
26 But if we say, From men; we are in fear of the people, because all take John to be a prophet.ಮನುಷ್ಯರಿಂದ ಎಂದು ನಾವು ಹೇಳಿ ದರೆ ಜನರಿಗೆ ಭಯಪಡುತ್ತೇವೆ; ಯಾಕಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸು ತ್ತಾರೆ ಎಂದು ಅಂದುಕೊಂಡರು.
27 And they made answer and said, We have no idea. Then he said to them, And I will not say to you by what authority I do these things.ತರುವಾಯ ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳ ಲಾರೆವು ಅಂದರು. ಅದಕ್ಕೆ ಆತನು ಅವರಿಗೆ-- ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವದಿಲ್ಲ.
28 But how does it seem to you? A man had two sons; and he came to the first, and said, Son, go and do work today in the vine-garden.ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು.
29 And he said in answer, I will not: but later, changing his decision, he went.ಅವನು ಪ್ರತ್ಯುತ್ತರವಾಗಿ--ನಾನು ಹೋಗುವದಿಲ್ಲ ಎಂದು ಹೇಳಿ ತರುವಾಯ ಪಶ್ಚಾ ತ್ತಾಪಪಟ್ಟು ಹೋದನು.
30 And he came to the second and said the same. And he made answer and said, I go, sir: and went not.ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ.
31 Which of the two did his father's pleasure? They say, The first. Jesus said to them, Truly I say to you, that tax-farmers and loose women are going into the kingdom of God before you.ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.
32 For John came to you in the way of righteousness, and you had no faith in him, but the tax-farmers and the loose women had faith in him: and you, when you saw it, did not even have regret for your sins, so as to have faith in him.ಯಾಕಂದರೆ ಯೋಹಾನನು ನೀತಿಯ ಮಾರ್ಗದಲ್ಲಿ ನಿಮ್ಮ ಬಳಿಗೆ ಬಂದನು. ಮತ್ತು ನೀವು ಅವನನ್ನು ನಂಬಲಿಲ್ಲ; ಆದರೆ ಸುಂಕದವರೂ ಸೂಳೆಯರೂ ಅವನನ್ನು ನಂಬಿದರು; ನೀವು ಅದನ್ನು ನೋಡಿದ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.
33 Give ear to another story. A master of a house made a vine garden, and put a wall round it, and made a place for crushing out the wine, and made a tower, and let it out to field-workers, and went into another country.ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು.
34 And when the time for the fruit came near, he sent his servants to the workmen, to get the fruit.ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು.
35 And the workmen made an attack on his servants, giving blows to one, putting another to death, and stoning another.ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.
36 Again, he sent other servants more in number than the first: and they did the same to them.ಅವನು ತಿರಿಗಿ ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು; ಅವರು ಅದೇ ರೀತಿಯಲ್ಲಿ ಅವರಿಗೂ ಮಾಡಿದರು.
37 But after that he sent his son to them, saying, They will have respect for my son.ಆದರೆ ಅವನು-- ನನ್ನ ಮಗನನ್ನಾದರೂ ಅವರು ಸನ್ಮಾನಿ ಸಾರು ಎಂದು ಅಂದುಕೊಂಡು ಕಟ್ಟಕಡೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು.
38 But when the workmen saw the son, they said among themselves, This is he who will one day be the owner of the property; come, let us put him to death and take his heritage.ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು.
39 And they took him and, driving him out of the vine-garden, put him to death.ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು.
40 When, then, the lord of the vine-garden comes, what will he do to those workmen?ಹೀಗಿರುವ ದರಿಂದ ದ್ರಾಕ್ಷೇ ತೋಟದ ಯಜಮಾನನು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡಾನು ಅಂದನು.
41 They say to him, He will put those cruel men to a cruel death, and will let out the vine-garden to other workmen, who will give him the fruit when it is ready.ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.
42 Jesus says to them, Did you never see in the Writings, The stone which the builders put on one side, the same has been made the chief stone of the building: this was the Lord's doing, and it is a wonder in our eyes?ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?
43 For this reason I say to you, The kingdom of God will be taken away from you, and will be given to a nation producing the fruits of it.ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.
44 Any man falling on this stone will be broken, but he on whom it comes down will be crushed to dust.ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದು ಯಾವನ ಮೇಲೆ ಬೀಳುವದೋ ಅವನನ್ನು ಅರೆದು ಪುಡಿಪುಡಿ ಮಾಡುವದು ಅಂದನು.
45 And when his stories came to the ears of the chief priests and the Pharisees, they saw that he was talking of them.ಪ್ರಧಾನ ಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮ ವಿಷಯದಲ್ಲಿಯೇ ಆತನು ಅದನ್ನು ಹೇಳಿದನೆಂದು ಅವರು ತಿಳುಕೊಂಡರು.
46 And though they had a desire to take him, they were in fear of the people, because in their eyes he was a prophet.ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.
Kannada Bible