Bible

Matthew 21 - YLT (Kannada)

1 And when they came nigh to Jerusalem, and came to Bethphage, unto the mount of the Olives, then Jesus sent two disciples,ಅವರು ಯೆರೂಸಲೇಮಿಗೆ ಸಮಾಪಿಸಿ ಎಣ್ಣೇ ಮರಗಳ ಗುಡ್ಡದ ಬೇತ್ಫಗೆಗೆ ಬಂದಾಗ ಯೇಸು ಇಬ್ಬರು ಶಿಷ್ಯರನ್ನು ಕಳುಹಿಸಿ ಅವರಿಗೆ--

2 saying to them, `Go on to the village over-against you, and immediately ye shall find an ass bound, and a colt with her -- having loosed, bring ye to me;ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ; ಆಗ ಒಂದು ಕತ್ತೆಯು ತನ್ನ ಮರಿಯೊಂದಿಗೆ ಕಟ್ಟಲ್ಪಟ್ಟಿರುವದನ್ನು ನೀವು ತಕ್ಷಣವೇ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತಕ್ಕೊಂಡು ಬನ್ನಿರಿ.

3 and if any one may say anything to you, ye shall say, that the lord hath need of them, and immediately he will send them.'ಮತ್ತು ಯಾವನಾದರೂ ನಿಮಗೆ ಏನಾದರೂ ಹೇಳಿದರೆ ನೀವು ಅವನಿಗೆ--ಅವು ಕರ್ತನಿಗೆ ಬೇಕಾಗಿವೆ ಎಂದು ಹೇಳಿರಿ; ಆಗ ಅವನು ಅವುಗಳನ್ನು ಕೂಡಲೆ ಕಳುಹಿಸುವನು ಎಂದು ಹೇಳಿದನು.

4 And all this came to pass, that it might be fulfilled that was spoken through the prophet, saying,ಇದೆಲ್ಲವೂ ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರು ವಂತೆ ಆಯಿತು; ಅದೇನಂದರೆ--

5 `Tell ye the daughter of Zion, Lo, thy king doth come to thee, meek, and mounted on an ass, and a colt, a foal of a beast of burden.'ಇಗೋ, ನಿನ್ನ ಅರಸನು ಸಾತ್ವಿಕನು, ಆತನು ಕತ್ತೆಯನ್ನೂ ಕತ್ತೆಯ ಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ ಎಂದು ಚೀಯೋನ್‌ ಕುಮಾರ್ತೆಗೆ ಹೇಳಿರಿ ಎಂಬದೇ.

6 And the disciples having gone and having done as Jesus commanded them,ಆಗ ಶಿಷ್ಯರು ಹೊರಟುಹೋಗಿ ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿದರು.

7 brought the ass and the colt, and did put on them their garments, and set `him' upon them;ಮತ್ತು ಅವರು ಕತ್ತೆಯನ್ನೂ ಅದರ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ವಸ್ತ್ರಗಳನ್ನು ಹಾಕಿ ಆತನನ್ನು ಆದರ ಮೇಲೆ ಕೂಡ್ರಿಸಿದರು.

8 and the very great multitude spread their own garments in the way, and others were cutting branches from the trees, and were strewing in the way,ಆಗ ಅತಿ ದೊಡ್ಡ ಜನರ ಸಮೂಹವು ತಮ್ಮ ವಸ್ತ್ರಗಳನ್ನು ದಾರಿಯಲ್ಲಿ ಹಾಸಿದರು; ಬೇರೆಯವರು ಮರಗಳಿಂದ ಕೊಂಬೆಗಳನ್ನು ಕತ್ತರಿಸಿ ದಾರಿಯಲ್ಲಿ ಹರಡಿದರು.

9 and the multitudes who were going before, and who were following, were crying, saying, `Hosanna to the Son of David, blessed is he who is coming in the name of the Lord; Hosanna in the highest.'ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.

10 And he having entered into Jerusalem, all the city was moved, saying, `Who is this?'ಆತನು ಯೆರೂಸಲೇಮಿಗೆ ಬಂದಾಗ ಪಟ್ಟಣ ವೆಲ್ಲಾ ಕದಲಿ--ಈತನು ಯಾರು ಎಂದು ಕೇಳಿದರು.

11 And the multitudes said, `This is Jesus the prophet, who `is' from Nazareth of Galilee.'ಅದಕ್ಕೆ ಜನರ ಸಮೂಹವು --ಈತನು ಗಲಿಲಾಯ ದ ನಜರೇತಿನ ಪ್ರವಾದಿಯಾದ ಯೇಸುವು ಎಂದು ಹೇಳಿದರು.

12 And Jesus entered into the temple of God, and did cast forth all those selling and buying in the temple, and the tables of the money-changers he overturned, and the seats of those selling the doves,ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಕ್ರಯ ವಿಕ್ರಯ ಮಾಡುವವರನ್ನೆಲ್ಲಾ ಹೊರಗೆ ಹಾಕಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿ ವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿ ದನು.

13 and he saith to them, `It hath been written, My house a house of prayer shall be called, but ye did make it a den of robbers.'ಆತನು ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದಾಗಿ ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.

14 And there came to him blind and lame men in the temple, and he healed them,ಆಗ ಕುರುಡರು ಮತ್ತು ಕುಂಟರು ದೇವಾಲಯ ದಲ್ಲಿ ಆತನ ಬಳಿಗೆ ಬಂದರು; ಆತನು ಅವರನ್ನು ಸ್ವಸ್ಥ ಮಾಡಿದನು.

15 and the chief priests and the scribes having seen the wonderful things that he did, and the children crying in the temple, and saying, `Hosanna to the Son of David,' were much displeased;ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯ ದಲ್ಲಿ--ದಾವೀದನ ಕುಮಾರನಿಗೆ ಹೊಸನ್ನ ಎಂದು ಕೂಗುವದನ್ನು ಪ್ರಧಾನ ಯಾಜಕರೂ ಶಾಸ್ತ್ರಿಗಳೂ ನೋಡಿ ಕೋಪಗೊಂಡು ಆತನಿಗೆ--

16 and they said to him, `Hearest thou what these say?' And Jesus saith to them, `Yes, did ye never read, that, Out of the mouth of babes and sucklings Thou didst prepare praise?'ಇವರು ಹೇಳುವದೇನೆಂದು ನೀನು ಕೇಳುತ್ತೀಯೋ ಎಂದು ಕೇಳಿದ್ದಕ್ಕೆ ಯೇಸು ಅವರಿಗೆ -- ಹೌದು, ಸಣ್ಣ ಮಕ್ಕಳ ಮತ್ತು ಮೊಲೇಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ ಅಂದನು.

17 And having left them, he went forth out of the city to Bethany, and did lodge there,ಆತನು ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಹೋಗಿ ಅಲ್ಲಿ ಇಳುಕೊಂಡನು.

18 and in the morning turning back to the city, he hungered,ಬೆಳಿಗ್ಗೆ ಪಟ್ಟಣಕ್ಕೆ ಹಿಂದಿರುಗಿ ಬರುತ್ತಿದ್ದಾಗ ಆತನು ಹಸಿದಿದ್ದನು.

19 and having seen a certain fig-tree on the way, he came to it, and found nothing in it except leaves only, and he saith to it, `No more from thee may fruit be -- to the age;' and forthwith the fig-tree withered.ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ. ಆಗ ಆತನು ಅದಕ್ಕೆ--ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು. ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು.

20 And the disciples having seen, did wonder, saying, `How did the fig-tree forthwith wither?'ಶಿಷ್ಯರು ಅದನ್ನು ನೋಡಿ ಆಶ್ಚರ್ಯ ದಿಂದ --ಎಷ್ಟು ಬೇಗನೆ ಈ ಅಂಜೂರದ ಮರವು ಒಣಗಿಹೋಯಿತಲ್ಲಾ ಎಂದು ಹೇಳಿದನು.

21 And Jesus answering said to them, `Verily I say to you, If ye may have faith, and may not doubt, not only this of the fig-tree shall ye do, but even if to this mount ye may say, Be lifted up and be cast into the sea, it shall come to pass;ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನಿಮ್ಮಲ್ಲಿ ನಂಬಿಕೆಯಿದ್ದು ಮತ್ತು ಸಂದೇಹ ಪಡದೆಹೋದರೆ ಈ ಅಂಜೂರದ ಮರಕ್ಕೆ ಮಾಡಿದಂತೆ ಮಾಡುವದಲ್ಲದೆ ನೀವು ಈ ಗುಡ್ಡಕ್ಕೆ --ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೂ ಅದು ಆಗುವ

22 and all -- as much as ye may ask in the prayer, believing, ye shall receive.'ನೀವು ನಂಬುವವ ರಾಗಿ ಪ್ರಾರ್ಥನೆಯಲ್ಲಿ ಏನೇನೂ ಕೇಳುವಿರೋ ಅವುಗಳನ್ನೆಲ್ಲಾ ಹೊಂದುವಿರಿ ಅಂದನು.

23 And he having come to the temple, there came to him when teaching the chief priests and the elders of the people, saying, `By what authority dost thou do these things? and who gave thee this authority?'ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು.

24 And Jesus answering said to them, `I will ask you -- I also -- one word, which if ye may tell me, I also will tell you by what authority I do these things;ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ವಿಷಯ ನಿಮ್ಮನ್ನು ಕೇಳುತ್ತೇನೆ; ಅದನ್ನು ನೀವು ನನಗೆ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇ ನೆಂದು ನಿಮಗೆ ಹೇಳುವೆನು ಎಂದು ಹೇಳಿ--ಯೋಹಾನನ ಬಾಪ್ತಿಸ್ಮವು ಎಲ್ಲಿಂದ ಬಂತು?

25 the baptism of John, whence was it? -- from heaven, or from men?' And they were reasoning with themselves, saying, `If we should say, From heaven; he will say to us, Wherefore, then, did ye not believe him?ಪರ ಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದಾಗ ಅವರು ತಮ್ಮತಮ್ಮೊಳಗೆ ತರ್ಕಿ ಸುತ್ತಾ--ಪರಲೋಕದಿಂದ ಎಂದು ಹೇಳಿದರೆ ಆತನು ನಮಗೆ--ನೀವು ಅವನನ್ನು ಯಾಕೆ ನಂಬಲಿಲ್ಲ ಎಂದು ಹೇಳಾನು.

26 and if we should say, From men, we fear the multitude, for all hold John as a prophet.'ಮನುಷ್ಯರಿಂದ ಎಂದು ನಾವು ಹೇಳಿ ದರೆ ಜನರಿಗೆ ಭಯಪಡುತ್ತೇವೆ; ಯಾಕಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸು ತ್ತಾರೆ ಎಂದು ಅಂದುಕೊಂಡರು.

27 And answering Jesus they said, `We have not known.' He said to them -- he also -- `Neither do I tell you by what authority I do these things.ತರುವಾಯ ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳ ಲಾರೆವು ಅಂದರು. ಅದಕ್ಕೆ ಆತನು ಅವರಿಗೆ-- ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವದಿಲ್ಲ.

28 `And what think ye? A man had two children, and having come to the first, he said, Child, go, to-day be working in my vineyard.'ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು.

29 And he answering said, `I will not,' but at last, having repented, he went.ಅವನು ಪ್ರತ್ಯುತ್ತರವಾಗಿ--ನಾನು ಹೋಗುವದಿಲ್ಲ ಎಂದು ಹೇಳಿ ತರುವಾಯ ಪಶ್ಚಾ ತ್ತಾಪಪಟ್ಟು ಹೋದನು.

30 `And having come to the second, he said in the same manner, and he answering said, I `go', sir, and went not;ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ.

31 which of the two did the will of the father?' They say to him, `The first.' Jesus saith to them, `Verily I say to you, that the tax-gatherers and the harlots do go before you into the reign of God,ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.

32 for John came unto you in the way of righteousness, and ye did not believe him, and the tax-gatherers and the harlots did believe him, and ye, having seen, repented not at last -- to believe him.ಯಾಕಂದರೆ ಯೋಹಾನನು ನೀತಿಯ ಮಾರ್ಗದಲ್ಲಿ ನಿಮ್ಮ ಬಳಿಗೆ ಬಂದನು. ಮತ್ತು ನೀವು ಅವನನ್ನು ನಂಬಲಿಲ್ಲ; ಆದರೆ ಸುಂಕದವರೂ ಸೂಳೆಯರೂ ಅವನನ್ನು ನಂಬಿದರು; ನೀವು ಅದನ್ನು ನೋಡಿದ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.

33 `Hear ye another simile: There was a certain man, a householder, who planted a vineyard, and did put a hedge round it, and digged in it a wine-press, and built a tower, and gave it out to husbandmen, and went abroad.ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು.

34 `And when the season of the fruits came nigh, he sent his servants unto the husbandmen, to receive the fruits of it,ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು.

35 and the husbandmen having taken his servants, one they scourged, and one they killed, and one they stoned.ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.

36 `Again he sent other servants more than the first, and they did to them in the same manner.ಅವನು ತಿರಿಗಿ ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು; ಅವರು ಅದೇ ರೀತಿಯಲ್ಲಿ ಅವರಿಗೂ ಮಾಡಿದರು.

37 `And at last he sent unto them his son, saying, They will reverence my son;ಆದರೆ ಅವನು-- ನನ್ನ ಮಗನನ್ನಾದರೂ ಅವರು ಸನ್ಮಾನಿ ಸಾರು ಎಂದು ಅಂದುಕೊಂಡು ಕಟ್ಟಕಡೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು.

38 and the husbandmen having seen the son, said among themselves, This is the heir, come, we may kill him, and may possess his inheritance;ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು.

39 and having taken him, they cast `him' out of the vineyard, and killed him;ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು.

40 whenever therefore the lord of the vineyard may come, what will he do to these husbandmen?'ಹೀಗಿರುವ ದರಿಂದ ದ್ರಾಕ್ಷೇ ತೋಟದ ಯಜಮಾನನು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡಾನು ಅಂದನು.

41 They say to him, `Evil men -- he will evilly destroy them, and the vineyard will give out to other husbandmen, who will give back to him the fruits in their seasons.'ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.

42 Jesus saith to them, `Did ye never read in the Writings, A stone that the builders disallowed, it became head of a corner; from the Lord hath this come to pass, and it is wonderful in our eyes.ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?

43 `Because of this I say to you, that the reign of God shall be taken from you, and given to a nation bringing forth its fruit;ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.

44 and he who is falling on this stone shall be broken, and on whomsoever it may fall it will crush him to pieces.'ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದು ಯಾವನ ಮೇಲೆ ಬೀಳುವದೋ ಅವನನ್ನು ಅರೆದು ಪುಡಿಪುಡಿ ಮಾಡುವದು ಅಂದನು.

45 And the chief priests and the Pharisees having heard his similes, knew that of them he speaketh,ಪ್ರಧಾನ ಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮ ವಿಷಯದಲ್ಲಿಯೇ ಆತನು ಅದನ್ನು ಹೇಳಿದನೆಂದು ಅವರು ತಿಳುಕೊಂಡರು.

46 and seeking to lay hold on him, they feared the multitudes, seeing they were holding him as a prophet.ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.

Kannada Bible