Matthew 22 - BBE (Kannada)
1 And Jesus, talking to them again in stories, said:ಯೇಸು ತಿರಿಗಿ ಸಾಮ್ಯ ರೂಪವಾಗಿ ಅವರ ಕೂಡ ಮಾತನಾಡುತ್ತಾ--
2 The kingdom of heaven is like a certain king, who made a feast when his son was married,ಪರಲೋಕ ರಾಜ್ಯವು ತನ್ನ ಮಗನ ಮದುವೆ ಮಾಡಿದ ಒಬ್ಬಾನೊಬ್ಬ ಅರಸನಿಗೆ ಹೋಲಿಕೆಯಾಗಿದೆ.
3 And sent out his servants to get in the guests to the feast: and they would not come.ಅವನು ಮದುವೆಗೆ ಬರ ಹೇಳಿದವರನ್ನು ಕರೆಯು ವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು; ಆದರೆ ಅವರು ಬರಲೊಲ್ಲದೆ ಇದ್ದರು.
4 Again he sent out other servants, with orders to say to the guests, See, I have made ready my feast: my oxen and my fat beasts have been put to death, and all things are ready: come to the feast.ಅವನು ತಿರಿಗಿ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ--ಇಗೋ, ನಾನು ಔತಣವನ್ನು ಸಿದ್ಧಮಾಡಿದ್ದೇನೆ, ನನ್ನ ಎತ್ತುಗಳೂ ಕೊಬ್ಬಿದ ಪಶುಗಳೂ ಕೊಯ್ಯಲ್ಪಟ್ಟಿವೆ ಮತ್ತು ಎಲ್ಲವು ಗಳು ಸಿದ್ಧವಾಗಿವೆ; ಮದುವೆಗೆ ಬನ್ನಿರಿ ಎಂದು ಕರೆಯಲ್ಪಟ್ಟವರಿಗೆ ಹೇಳಿರಿ ಅಂದನು.
5 But they gave no attention, and went about their business, one to his farm, another to his trade:ಕರೆಯಲ್ಪಟ್ಟವರು ಅದನ್ನು ಅಲಕ್ಷ್ಯಮಾಡಿ ಒಬ್ಬನು ತನ್ನ ಹೊಲಕ್ಕೂ ಇನ್ನೊಬ್ಬನು ತನ್ನ ವ್ಯಾಪಾರಕ್ಕೂ ಹೊರಟುಹೋದರು.
6 And the rest put violent hands on his servants, and did evil to them, and put them to death.ಉಳಿದವರು ಅವನ ಸೇವಕರನ್ನು ಹಿಡಿದು ಅವಮಾನ ಪಡಿಸಿ ಅವರನ್ನು ಕೊಂದುಹಾಕಿದರು.
7 But the king was angry; and he sent his armies, and those who had put his servants to death he gave to destruction, burning down their town with fire.ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
8 Then he said to his servants, The feast is ready but the guests were not good enough.ತರುವಾಯ ಅವನು ತನ್ನ ಸೇವಕರಿಗೆ--ಮದುವೆಯು ಸಿದ್ಧವಾಗಿದೆ ಸರಿ, ಆದರೆ ಕರೆಯಲ್ಪಟ್ಟವರು ಯೋಗ್ಯರಾಗಿರಲಿಲ್ಲ.
9 Go then to the cross-roads, and get all those whom you see to come to the bride-feast.ಆದದರಿಂದ ನೀವು ಹೆದ್ದಾರಿಗಳಿಗೆ ಹೊರಟುಹೋಗಿ ಕಂಡವರನ್ನೆಲ್ಲಾ ಮದುವೆಗೆ ಕರೆಯಿರಿ ಅಂದನು.
10 And those servants went out into the streets, and got together all those whom they came across, bad and good: and the feast was full of guests.ಆಗ ಆ ಸೇವಕರು ಹೆದ್ದಾರಿಗಳಿಗೆ ಹೋಗಿ ತಾವು ಕಂಡವರ ನ್ನೆಲ್ಲಾ ಅಂದರೆ ಕೆಟ್ಟವರನ್ನೂ ಒಳ್ಳೆಯವರನ್ನೂ ಒಟ್ಟು ಗೂಡಿಸಿದರು; ಹೀಗೆ ಮದುವೆಗೆ ಅತಿಥಿಗಳು ತುಂಬಿ ಕೊಂಡರು.
11 But when the king came in to see the guests, he saw there a man who had not on a guest's robe;ತರುವಾಯ ಅರಸನು ಅತಿಥಿಗಳನ್ನು ನೋಡುವದಕ್ಕಾಗಿ ಒಳಗೆ ಬಂದು ಮದುವೆಯ ಉಡು ಪಿಲ್ಲದೆ ಇದ್ದ ಒಬ್ಬ ಮನುಷ್ಯನನ್ನು ಅಲ್ಲಿ ಕಂಡನು.
12 And he says to him, Friend, how came you in here not having a guest's robe? And he had nothing to say.ಅವನು ಆ ಮನುಷ್ಯನಿಗೆ--ಸ್ನೇಹಿತನೇ, ಮದುವೆಯ ಉಡುಪಿಲ್ಲದೆ ನೀನು ಒಳಗೆ ಹೇಗೆ ಬಂದಿ ಎಂದು ಕೇಳಲು ಅವನು ಸುಮ್ಮನಿದ್ದನು.
13 Then the king said to the servants, Put cords round his hands and feet and put him out into the dark; there will be weeping and cries of sorrow.ತರುವಾಯ ಅರಸನು ಸೇವಕರಿಗೆ--ಅವನ ಕೈ ಕಾಲುಗಳನ್ನು ಕಟ್ಟಿ ತಕ್ಕೊಂಡು ಹೋಗಿ ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು.
14 For out of all to whom the good news has come, only a small number will get salvation.ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಅಂದನು.
15 Then the Pharisees went and had a meeting to see how they might make use of his words to take him.ಆಗ ಫರಿಸಾಯರು ಹೊರಟುಹೋಗಿ ಆತನನ್ನು ಮಾತಿನಲ್ಲಿ ಹೇಗೆ ಸಿಕ್ಕಿಸಬೇಕೆಂದು ಆಲೋಚನೆ ಮಾಡಿಕೊಂಡರು.
16 And they sent to him their disciples, with the Herodians, saying, Master, we see that you are true, and that you are teaching the true way of God, and have no fear of anyone, because you have no respect for a man's position.ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು
17 Give us, then, your opinion of this: Is it right to give tax to Caesar, or not?ಆದದರಿಂದ-- ಕೈಸರನಿಗೆ ಕಪ್ಪವನ್ನು ಕೊಡುವದು ನ್ಯಾಯವೋ ನ್ಯಾಯವಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು.
18 But Jesus saw their trick and said, Oh false ones, why are you attempting to put me in the wrong?ಯೇಸು ಅವರ ಕೆಟ್ಟತನವನ್ನು ತಿಳಿದು ಕೊಂಡವನಾಗಿ--ಕಪಟಿಗಳೇ, ನೀವು ನನ್ನನ್ನು ಯಾಕೆ ಶೋಧಿಸುತ್ತೀರಿ?
19 Let me see the tax money. And they gave him a penny.ತೆರಿಗೆಯ ನಾಣ್ಯವನ್ನು ನನಗೆ ತೋರಿಸಿರಿ ಅಂದನು. ಆಗ ಅವರು ಒಂದು ಪಾವಲಿ ಯನ್ನು ತಂದುಕೊಟ್ಟರು.
20 And he said to them, Whose is this image and name on it?ಆತನು ಅವರಿಗೆ--ಈ ರೂಪವೂ ಮೇಲ್ಬರಹವೂ ಯಾರದು ಎಂದು ಕೇಳಿ ದನು.
21 They say to him, Caesar's. Then he said to them, Give to Caesar the things which are Caesar's, and to God the things which are God's.ಅದಕ್ಕೆ ಅವರು ಆತನಿಗೆ--ಕೈಸರನದು ಅಂದರು. ಆಗ ಆತನು ಅವರಿಗೆ-ಕೈಸರನದವುಗಳನ್ನು ಕೈಸರನಿಗೆ ಕೊಡಿರಿ; ದೇವರವುಗಳನ್ನು ದೇವರಿಗೆ ಕೊಡಿರಿ ಅಂದನು.
22 And hearing it, they were full of wonder, and went away from him.ಇವುಗಳನ್ನು ಅವರು ಕೇಳಿದಾಗ ಆಶ್ಚರ್ಯಪಟ್ಟರು; ಮತ್ತು ಆತನನ್ನು ಬಿಟ್ಟು ಹೊರಟುಹೋದರು.
23 On the same day there came to him the Sadducees, who say that there is no coming back from the dead: and they put a question to him, saying,ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಅದೇ ದಿನದಲ್ಲಿ ಆತನ ಬಳಿಗೆ ಬಂದು--
24 Master, Moses said, If a man, at the time of his death, has no children, let his brother take his wife, and get a family for his brother;ಬೋಧ ಕನೇ, ಒಬ್ಬ ಮನುಷ್ಯನು ಮಕ್ಕಳಿಲ್ಲದೆ ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾಗಿ ತನ್ನ ಸಹೋದರನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.
25 Now there were among us seven brothers; and the first was married and at his death, having no seed, gave his wife to his brother;ಹೀಗಿರಲಾಗಿ ನಮ್ಮ ಕೂಡ ಏಳು ಮಂದಿ ಸಹೋದರರಿದ್ದರು; ಮೊದಲನೆ ಯವನು ಮದುವೆ ಮಾಡಿಕೊಂಡು ಸತ್ತನು; ಮತ್ತು ಸಂತಾನವಿಲ್ಲದ ಕಾರಣ ತನ್ನ ಹೆಂಡತಿಯನ್ನು ತನ್ನ ಸಹೋದರನಿಗೆ ಬಿಟ್ಟನು.
26 In the same way the second and the third, up to the seventh.ಅದರಂತೆಯೇ ಎರಡ ನೆಯವನು ಮತ್ತು ಮೂರನೆಯವನು ಹೀಗೆ ಏಳನೆಯ ವನವರೆಗೂ ಮಾಡಿದರು.
27 And last of all the woman came to her end.ಕಡೆಯದಾಗಿ ಆ ಸ್ತ್ರೀಯೂ ಸತ್ತಳು.
28 When they come back from the dead, then, whose wife will she be of the seven? because they all had her.ಆದದರಿಂದ ಪುನರುತ್ಥಾನದಲ್ಲಿ ಆ ಏಳು ಮಂದಿಯಲ್ಲಿ ಆಕೆಯು ಯಾರಿಗೆ ಹೆಂಡತಿ ಯಾಗಿರುವಳು? ಯಾಕಂದರೆ ಅವರೆಲ್ಲರೂ ಆಕೆಯನ್ನು ಮದುವೆಮಾಡಿಕೊಂಡಿದ್ದರಲ್ಲಾ ಎಂದು ಕೇಳಿದರು.
29 But Jesus said to them in answer, You are in error, not having knowledge of the Writings, or of the power of God.ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾಗಲೀ ದೇವರ ಶಕ್ತಿಯನ್ನಾಗಲೀ ತಿಳಿಯದೆ ತಪ್ಪುವವರಾಗಿದ್ದೀರಿ.
30 For when they come back from the dead there are no husbands and wives, but they are as the angels in heaven.ಯಾಕಂದರೆ ಪುನರುತ್ಥಾನದಲ್ಲಿ ಅವರು ಮದುವೆಯಾಗುವದಿಲ್ಲ ಮತ್ತು ಮದುವೆ ಮಾಡಿಕೊಡುವದೂ ಇಲ್ಲ; ಆದರೆ ಅವರು ಪರಲೋಕ ದಲ್ಲಿರುವ ದೇವದೂತರಂತೆ ಇರುತ್ತಾರೆ.
31 But about the dead coming back to life, have you no knowledge of what was said to you by God in the Writings:ಆದರೆ ಸತ್ತವರ ಪುನರುತ್ಥಾನದ ವಿಷಯವಾಗಿ--
32 I am the God of Abraham, and the God of Isaac, and the God of Jacob? God is not the God of the dead but of the living.ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿಗಲ್ಲ ಎಂದು ಹೇಳಿದನು.
33 And the people hearing it were surprised at his teaching.ಜನ ಸಮೂಹದವರು ಇದನ್ನು ಕೇಳಿ ಆತನ ಬೋಧನೆಗೆ ವಿಸ್ಮಯಗೊಂಡರು.
34 But the Pharisees, hearing how the mouths of the Sadducees had been stopped, came together;ಆದರೆ ಆತನು ಸದ್ದುಕಾಯರ ಬಾಯನ್ನು ಮುಚ್ಚಿದನೆಂದು ಫರಿಸಾಯರು ಕೇಳಿರಿ ಅಲ್ಲಿಗೆ ಕೂಡಿಬಂದರು.
35 And one of them, a teacher of the law, put a question to him, testing him, and saying,ಅವರಲ್ಲಿ ನ್ಯಾಯಶಾಸ್ತ್ರಿಯಾಗಿದ್ದ ಒಬ್ಬನು ಆತನನ್ನು ಶೋಧಿಸುವದಕ್ಕಾಗಿ--
36 Master, which is the chief rule in the law?ಬೋಧಕ ನೇ, ನ್ಯಾಯ ಪ್ರಮಾಣದಲ್ಲಿ ದೊಡ್ಡ ಆಜ್ಞೆ ಯಾವದು ಎಂದು ಆತನನ್ನು ಪ್ರಶ್ನಿಸಿದನು.
37 And he said to him, Have love for the Lord your God with all your heart, and with all your soul, and with all your mind.ಯೇಸು ಅವ ನಿಗೆ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸಬೇಕು.
38 This is the first and greatest rule.ಈ ಆಜ್ಞೆಯು ಮೊದಲನೆಯದೂ ದೊಡ್ಡದೂ ಆಗಿದೆ. ಅದರಂತೆ--
39 And a second like it is this, Have love for your neighbour as for yourself.ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕೆಂಬದು ಎರಡನೆಯದು.
40 On these two rules all the law and the prophets are based.ನ್ಯಾಯ ಪ್ರಮಾಣವೆಲ್ಲವೂ ಪ್ರವಾದನೆಗಳೂ ಈ ಎರಡು ಆಜ್ಞೆಗಳ ಮೇಲೆ ಆಧಾರಗೊಂಡಿವೆ ಅಂದನು.
41 Now while the Pharisees were together, Jesus put a question to them, saying,ಫರಿಸಾಯರು ಕೂಡಿ ಬಂದಿರುವಾಗ ಯೇಸು ಅವರಿಗೆ--
42 What is your opinion of the Christ? whose son is he? They say to him, The Son of David.ಕ್ರಿಸ್ತನ ವಿಷಯ ವಾಗಿ ನೀವು ಏನು ನೆನಸುತ್ತೀರಿ? ಆತನು ಯಾರ ಮಗನು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ದಾವೀದನಕುಮಾರನು ಅಂದರು.
43 He says to them, How then does David in the Spirit give him the name of Lord, saying,ಆತನು ಅವ ರಿಗೆ--ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ ಕರ್ತನೆಂದು ಕರೆದು--ಕರ್ತನು ನನ್ನ ಕರ್ತನಿಗೆ--
44 The Lord said to my Lord, Be seated at my right hand, till I put under your feet all those who are against you?ನಾನು ನಿನ್ನ ವಿರೋಧಿಗಳನ್ನು ಪಾದಪೀಠವಾಗಿ ಮಾಡುವ ವರೆಗೆ ನನ್ನ ಬಲಗಡೆಯಲ್ಲಿ ಕೂತು ಕೊಂಡಿರು ಎಂದು ಹೇಳಿದನಲ್ಲಾ.
45 If David then gives him the name of Lord, how is he his son?ದಾವೀದನು ಆತನನ್ನು ಕರ್ತನೆಂದು ಕರೆಯುವದಾದರೆ ಆತನು ದಾವೀದನ ಮಗನಾಗುವದು ಹೇಗೆ ಎಂದು ಕೇಳಿದನು.
46 And no one was able to give him an answer, and so great was their fear of him, that from that day no one put any more questions to him.ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.
Kannada Bible