Bible

Matthew 24 - BBE (Kannada)

1 And Jesus went out of the Temple, and on the way his disciples came to him, pointing out the buildings of the Temple.1 ತರುವಾಯ ಯೇಸು ದೇವಾಲಯದಿಂದ ಹೊರಟುಹೋದ ಮೇಲೆ ಆತನ ಶಿಷ್ಯರು ಆ ದೇವಾಲಯದ ಕಟ್ಟಡಗಳನ್ನು ತೋರಿಸುವದಕ್ಕಾಗಿ ಆತನ ಬಳಿಗೆ ಬಂದರು.

2 But he, answering, said to them, See you not all these things? truly I say to you that here there will not be one stone resting on another, which will not be pulled down.ಆಗ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ನೋಡುತ್ತೀರಲ್ಲಾ. ಎಲ್ಲಾ ಕೆಡವ ಲ್ಪಡದು ಕಲ್ಲಿನ ಮೇಲೆ ಕಲ್ಲು ಒಂದು ಇಲ್ಲಿ ಬಿಡಲ್ಪ ಡುವದಿಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳು ತ್ತೇನೆ ಅಂದನು.

3 And while he was seated on the Mountain of Olives, the disciples came to him privately, saying, Make clear to us, when will these things be? and what will be the sign of your coming and of the end of the world?ಆತನು ಎಣ್ಣೇಮರಗಳ ಗುಡ್ಡದ ಮೇಲೆ ಕೂತುಕೊಂಡಾಗ ಶಿಷ್ಯರು ಪ್ರತ್ಯೇಕವಾಗಿ ಆತನ ಬಳಿಗೆ ಬಂದು--ಇವು ಯಾವಾಗ ಆಗುವವು? ಮತ್ತು ನಿನ್ನ ಬರೋಣಕ್ಕೂ ಲೋಕವು ಅಂತ್ಯವಾಗುವದಕ್ಕೂ ಸೂಚನೆ ಏನು? ನಮಗೆ ಹೇಳು ಎಂದು ಕೇಳಿದರು.

4 And Jesus said to them in answer, Take care that you are not tricked.ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಯಾವನಾ ದರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆ ಯಿಂದಿರ್ರಿ.

5 For people will come in my name, saying, I am the Christ; and a number will be turned from the true way through them.ಯಾಕಂದರೆ ನನ್ನ ಹೆಸರಿನಲ್ಲಿ ಅನೇಕರು ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.

6 And news will come to you of wars and talk of wars: do not be troubled, for these things have to be; but it is still not the end.ಯುದ್ಧಗಳನ್ನೂ ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಿರಿ. ಕಳವಳಗೊಳ್ಳದಂತೆ ನೀವು ನೋಡಿಕೊಳ್ಳಿರಿ; ಯಾಕಂದರೆ ಇವೆಲ್ಲವುಗಳು ಸಂಭವಿಸುವದು ಅಗತ್ಯ; ಆದರೆ ಇದು ಇನ್ನೂ ಅಂತ್ಯವಲ್ಲ.

7 For nation will be moved against nation, and kingdom against kingdom, and men will be without food, and the earth will be shaking in different places;ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಅಲ್ಲಲ್ಲಿ ಬರಗಳು, ಘೋರವ್ಯಾಧಿಗಳು ಮತ್ತು ಭೂಕಂಪಗಳು ಆಗುವವು.

8 But all these things are the first of the troubles.ಇವೆಲ್ಲವುಗಳು ಸಂಕಟಗಳ ಆರಂಭವು.

9 Then they will be cruel to you, and will put you to death: and you will be hated by all nations because of my name.ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು.

10 And numbers of people will be turned from the right way, and will give one another up and have hate for one another.ಆಗ ಅನೇಕರು ಅಭ್ಯಂತರಪಟ್ಟು ಒಬ್ಬರನ್ನೊಬ್ಬರು ಹಿಡುಕೊಡುವರು ಮತ್ತು ಒಬ್ಬರನ್ನೊಬ್ಬರು ಹಗೆಮಾಡು ವರು.

11 And a number of false prophets will come, causing error.ಇದಲ್ಲದೆ ಬಹುಮಂದಿ ಸುಳ್ಳು ಪ್ರವಾದಿಗಳು ಎದ್ದು ಅನೇಕರನ್ನು ಮೋಸಗೊಳಿ ಸುವರು.

12 And because wrongdoing will be increased, the love of most people will become cold.ದುಷ್ಟತನ ಹೆಚ್ಚಾಗುವದರಿಂದ ಬಹಳ ಜನರ ಪ್ರೀತಿಯು ತಣ್ಣಗಾಗುವದು.

13 But he who goes through to the end will get salvation.ಆದರೆ ಕಡೇವರೆಗೆ ತಾಳುವವನೇ ರಕ್ಷಿಸಲ್ಪಡುವನು.

14 And this good news of the kingdom will be given through all the world for a witness to all nations; and then the end will come.ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವದು; ತರುವಾಯ ಅಂತ್ಯಬರುವದು.

15 When, then, you see in the holy place the unclean thing which makes destruction, of which word was given by Daniel the prophet (let this be clear to the reader),ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)

16 Then let those who are in Judaea go in flight to the mountains:ಯೂದಾಯದಲ್ಲಿ ದ್ದವರು ಬೆಟ್ಟಗಳಿಗೆ ಓಡಿ ಹೋಗಲಿ;

17 Let not him who is on the house-top go down to take anything out of his house:ಮಾಳಿಗೆಯ ಮೇಲಿರುವವನು ತನ್ನ ಮನೆಯೊಳಗಿಂದ ಏನಾದರೂ ತಕ್ಕೊಳ್ಳುವದಕ್ಕಾಗಿ ಕೆಳಗೆ ಇಳಿಯದಿರಲಿ;

18 And let not him who is in the field go back to get his coat.ಇಲ್ಲವೆ ಹೊಲದಲ್ಲಿರುವವನು ತನ್ನ ಬಟ್ಟೆಗಳನ್ನು ತಕ್ಕೊಳ್ಳುವ ದಕ್ಕಾಗಿ ಹಿಂತಿರುಗದೆ ಇರಲಿ.

19 But it will be hard for women who are with child and for those with babies at the breast in those days.ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆಕುಡಿಸುವ ಕೂಸುಗಳಿದ್ದ ವರಿಗೂ ಅಯ್ಯೋ!

20 And say a prayer that your flight may not be in the winter, or on a Sabbath.ಆದರೆ ನಿಮ್ಮ ಪಲಾಯನವು ಚಳಿಗಾಲದಲ್ಲಾಗಲೀ ಸಬ್ಬತ್ತಿನ ದಿನದಲ್ಲಾಗಲೀ ಆಗದಂತೆ ಪ್ರಾರ್ಥಿಸಿರಿ.

21 Because in those days there will be great sorrow, such as there has not been from the start of the world till now, or ever will be.ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ, ಆಮೇಲೆ ಎಂದಿಗೂ ಆಗುವದಿಲ್ಲ.

22 And if those days had not been made short there would have been no salvation for any, but because of the saints those days will be made short.ಆ ದಿವಸಗಳು ಕಡಿಮೆ ಮಾಡಲ್ಪಡದಿದ್ದರೆ ಯಾವನೂ ಉಳಿಯು ವದಿಲ್ಲ; ಆದರೆ ಆಯಲ್ಪಟ್ಟವರಿಗಾಗಿ ಆ ದಿವಸಗಳು ಕಡಿಮೆ ಮಾಡಲ್ಪಡುವವು.

23 Then if any man says to you, See, here is the Christ, or, Here; do not put faith in him;ಆಗ ಯಾರಾದರೂ ನಿಮಗೆ--ಇಗೋ, ಕ್ರಿಸ್ತನು ಇಲ್ಲಿದ್ದಾನೆ ಇಲ್ಲವೆ ಅಲ್ಲಿದ್ದಾನೆ ಎಂದು ಹೇಳಿದರೆ ಅದನ್ನು ನಂಬಬೇಡಿರಿ.

24 For there will come up false Christs, and false prophets, who will do great signs and wonders; so that if possible even the saints might be tricked.ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.

25 See, I have made it clear to you before it comes about.ಇಗೋ, ಮುಂದಾಗಿ ನಾನು ನಿಮಗೆ ಹೇಳಿದ್ದೇನೆ.

26 If, then, they say to you, See, he is in the waste land; go not out: See, he is in the inner rooms; put no faith in it.ಆದಕಾರಣ ಅವರು ನಿಮಗೆ--ಇಗೋ, ಆತನು ಅಡವಿಯಲ್ಲಿದ್ದಾನೆಂದು ಹೇಳಿದರೆ ಹೋಗಬೇಡಿರಿ; ಇಗೋ, ಆತನು ಗುಪ್ತವಾದ ಕೋಣೆಗಳಲ್ಲಿದ್ದಾನೆಂದು ಹೇಳಿದರೆ ಅದನ್ನು ನಂಬ ಬೇಡಿರಿ.

27 Because as in a thunderstorm the bright light coming from the east is seen even in the west; so will be the coming of the Son of man.ಯಾಕಂದರೆ ಮಿಂಚು ಪೂರ್ವದಿಂದ ಹೊರಟು ಬಂದು ಪಶ್ಚಿಮದವರೆಗೆ ಹೊಳೆಯು ವಂತೆಯೇ ಮನುಷ್ಯಕುಮಾರನ ಬರೋಣವೂ ಇರು ವದು.

28 Wherever the dead body is, there will the eagles come together.ಯಾಕಂದರೆ ಹೆಣ ಇದ್ದಲ್ಲಿ ಹದ್ದುಗಳು ಕೂಡಿಕೊಳ್ಳುವವು.

29 But straight away, after the trouble of those days, the sun will be made dark and the moon will not give her light and the stars will come down from heaven and the powers of heaven will be moved:ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು.

30 And then the sign of the Son of man will be seen in heaven: and then all the nations of the earth will have sorrow, and they will see the Son of man coming on the clouds of heaven with power and great glory.ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು.

31 And he will send out his angels with a great sound of a horn, and they will get his saints together from the four winds, from one end of heaven to the other.ತರುವಾಯ ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು; ಆಗ ಅವರು ಆತನಿಂದ ಆಯಲ್ಪಟ್ಟವರನ್ನು ನಾಲ್ಕು ದಿಕ್ಕುಗಳಿಂದ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.

32 Now take an example from the fig-tree: when her branch has become soft and puts out its leaves, you are certain that the summer is near;ಈಗ ಅಂಜೂರ ಮರದ ಸಾಮ್ಯದಿಂದ ಕಲಿ ಯಿರಿ; ಆದರ ಕೊಂಬೆಯು ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳಿದುಕೊಳ್ಳುವಿರಿ;

33 Even so, when you see all these things, you may be certain that he is near, even at the doors.ಅದರಂತೆಯೇ ನೀವು ಇವುಗಳನ್ನೆಲ್ಲಾ ನೋಡುವಾಗ ಅದು ಸವಿಾಪ ದಲ್ಲಿ ಬಾಗಲುಗಳಲ್ಲಿಯೇ ಇದೆಯೆಂದು ತಿಳು ಕೊಳ್ಳಿರಿ.

34 Truly I say to you, This generation will not come to an end till all these things are complete.ಇವೆಲ್ಲವುಗಳು ನೇರವೇರುವ ವರೆಗೆ ಈ ಸಂತತಿಯು ಅಳಿದುಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

35 Heaven and earth will come to an end, but my words will not come to an end.ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.

36 But of that day and hour no one has knowledge, not even the angels in heaven, or the Son, but the Father only.ಆದರೆ ಆ ದಿನವಾಗಲೀ ಗಳಿಗೆಯಾಗಲೀ ನನ್ನ ತಂದೆಗೆ ಮಾತ್ರವೇ ಹೊರತು ಮತ್ತಾರಿಗೂ ಪರಲೋಕದ ದೂತರಿಗೂ ತಿಳಿಯದು.

37 And as were the days of Noah, so will be the coming of the Son of man.ಆದರೆ ನೋಹನ ದಿವಸಗಳು ಇದ್ದಂತೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.

38 Because as in those days before the overflowing of the waters, they were feasting and taking wives and getting married, till the day when Noah went into the ark,ನೋಹನು ನಾವೆಯಲ್ಲಿ ಸೇರಿದ ದಿವಸದ ವರೆಗೆ ಪ್ರಳಯವು ಬರುವದಕ್ಕಿಂತ ಮುಂಚಿನ ಆ ದಿವಸಗಳಲ್ಲಿ ಜನರು ತಿನ್ನುತ್ತಾ ಕುಡಿಯುತ್ತಾ ಮದುವೆ ಮಾಡಿಕೊಳ್ಳುತ್ತಾ ಮದುವೆ ಮಾಡಿಕೊಡುತ್ತಾ ಇದ್ದರು.

39 And they had no care till the waters came and took them all away; so will be the coming of the Son of man.ಪ್ರಳಯವು ಬಂದು ಅವರನ್ನು ಬಡುಕೊಂಡು ಹೊಗುವವರೆಗೂ ಅವರಿಗೆ ತಿಳಿದಿರಲಿಲ್ಲ; ಹಾಗೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.

40 Then two men will be in the field; one is taken, and one let go;ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆಯಲ್ಪಡು ವನು; ಮತ್ತೊಬ್ಬನು ಬಿಡಲ್ಪಡುವನು.

41 Two women will be crushing grain; one is taken, and one let go.ಇಬ್ಬರು ಸ್ತ್ರೀಯರು ಬೀಸುತ್ತಿರುವಾಗ ಒಬ್ಬಳು ತೆಗೆಯಲ್ಪಡು ವಳು, ಮತ್ತೊಬ್ಬಳು ಬಿಡಲ್ಪಡುವಳು.

42 Be watching, then! for you have no knowledge on what day your Lord will come.ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರು ತ್ತಾನೋ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರ ವಾಗಿರ್ರಿ.

43 But be certain of this, that if the master of the house had had knowledge of the time when the thief was coming, he would have been watching, and would not have let his house be broken into.ಕಳ್ಳನು ಯಾವ ಗಳಿಗೆಯಲ್ಲಿ ಬರುತ್ತಾ ನೆಂದು ಮನೇ ಯಜಮಾನನು ತಿಳಿದಿದ್ದರೆ ಅವನು ತನ್ನ ಮನೆಯು ಕನ್ನಾಕೊರೆಯದಂತೆ ಕಾಯುತ್ತಿದ್ದ ನೆಂದು ನೀವು ತಿಳಿದುಕೊಳ್ಳಿರಿ.

44 Be ready then; for at a time which you have no thought of the Son of man will come.ಆದಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.

45 Who is the true and wise servant, whom his lord has put over those in his house, to give them their food at the right time?ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲ ದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ಅಧಿಕಾರಿಯೂ ನಂಬಿಗಸ್ತನೂ ಜ್ಞಾನಿಯೂ ಆದ ಸೇವಕನು ಯಾರು?

46 A blessing on that servant, who will be doing so when his lord comes.ಯಜಮಾನನು ಬಂದು ಯಾವ ಸೇವಕನು ಹಾಗೆ ಮಾಡುವದನ್ನು ನೋಡುವನೋ ಆ ಸೇವಕನೇ ಧನ್ಯನು.

47 Truly, I say to you, he will put him over all he has.ಅವನನ್ನು ಆತನು ತನ್ನ ಎಲ್ಲಾ ಆಸ್ತಿಯ ಮೇಲೆ ನೇಮಿಸುವನೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

48 But if that evil servant says in his heart, My lord is a long time in coming;ಆದರೆ ಆ ಕೆಟ್ಟ ಸೇವಕನು ತನ್ನ ಹೃದಯದಲ್ಲಿ--ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ ಎಂದು ಅಂದುಕೊಂಡು

49 And is cruel to the other servants, taking his pleasure with those who are overcome with wine;ತನ್ನ ಜೊತೇ ಸೇವಕರನ್ನು ಹೊಡೆಯುತ್ತಾ ಕುಡುಕರ ಸಂಗಡ ತಿನ್ನುವದಕ್ಕೂ ಕುಡಿಯುವದಕ್ಕೂ ಪ್ರಾರಂಭಿಸು ವದಾದರೆ

50 The lord of that servant will come in a day when he is not looking for him, and in an hour of which he has no knowledge,ಅವನು ನಿರೀಕ್ಷಿಸದೆ ಇರುವ ದಿನದಲ್ಲಿ ಇಲ್ಲವೆ ನೆನಸದ ಗಳಿಗೆಯಲ್ಲಿ ಆ ಸೇವಕನ ಯಜಮಾ ನನು ಬಂದು

51 And will have him cut in two, and will give him a part in the fate of the false ones: there will be weeping and cries of sorrow.ಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.

Kannada Bible