Bible

Matthew 27 - DBY (Kannada)

1 And when it was morning all the chief priests and the elders of the people took counsel against Jesus so that they might put him to death.ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.

2 And having bound him they led him away, and delivered him up to Pontius Pilate, the governor.ಮತ್ತು ಅವರು ಆತನನ್ನು ಕಟ್ಟಿ ತೆಗೆದುಕೊಂಡು ಹೋಗಿ ಅಧಿಪತಿಯಾದ ಪೊಂತ್ಯ ಪಿಲಾತನಿಗೆ ಒಪ್ಪಿಸಿದರು.

3 Then Judas, who delivered him up, seeing that he had been condemned, filled with remorse, returned the thirty pieces of silver to the chief priests and the elders,ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾದದ್ದನ್ನು ನೋಡಿ ಪಶ್ಚಾ ತ್ತಾಪಪಟ್ಟು ಆ ಮೂವತ್ತು ಬೆಳ್ಳಿಯ ನಾಣ್ಯಗಳನು ತಿರಿಗಿ ಪ್ರಧಾನ ಯಾಜಕರ ಮತ್ತು ಹಿರಿಯರ ಬಳಿಗೆ ತಂದು

4 saying, I have sinned [in] having delivered up guiltless blood. But they said, What is that to us? see *thou* [to that].ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು.

5 And having cast down the pieces of silver in the temple, he left the place, and went away and hanged himself.ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು.

6 And the chief priests took the pieces of silver and said, It is not lawful to cast them into the Corban, since it is [the] price of blood.ಆಗ ಪ್ರಧಾನ ಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು--ಇವುಗಳನ್ನು ಬೊಕ್ಕಸದಲ್ಲಿ ಹಾಕು ವದು ನ್ಯಾಯವಲ್ಲ; ಯಾಕಂದರೆ ಅದು ರಕ್ತದಕ್ರಯ ವಾಗಿದೆ ಅಂದರು.

7 And having taken counsel, they bought with them the field of the potter for a burying-ground for strangers.ಅವರು ಆಲೋಚನೆ ಮಾಡಿ ಪರದೇಶಿಗಳನ್ನು ಹೂಣಿಡುವದಕ್ಕೆ ಆ ಹಣದಿಂದ ಕುಂಬಾರನ ಹೊಲವನ್ನು ಕೊಂಡುಕೊಂಡರು.

8 Wherefore that field has been called Blood-field unto this day.ಈ ಕಾರಣದಿಂದ ಆ ಹೊಲವು ರಕ್ತದ ಹೊಲವೆಂದು ಈ ದಿನದ ವರೆಗೆ ಕರೆಯಲ್ಪಟ್ಟಿದೆ.

9 Then was fulfilled that which was spoken through Jeremias the prophet, saying, And I took the thirty pieces of silver, the price of him that was set a price on, whom [they who were] of the sons of Israel had set a price on,ಆಗ ಪ್ರವಾದಿಯಾದ ಯೆರೆವಿಾಯನು ಹೇಳಿದ ಮಾತು ನೆರವೇರಿತು; ಅದೇನಂದರೆ--ಇಸ್ರಾಯೇಲಿನ ಮಕ್ಕಳಲ್ಲಿ ಅವರು ಬೆಲೆ ಕಟ್ಟಿದವನ ಬೆಲೆಯಾದ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ತಕ್ಕೊಂಡು

10 and they gave them for the field of the potter, according as [the] Lord commanded me.ಕರ್ತನು ನನಗಾಗಿ ನೇಮಿಸಿದ ಹಾಗೆ ಅವುಗಳನ್ನು ಕುಂಬಾರನ ಹೊಲಕ್ಕಾಗಿ ಕೊಟ್ಟರು ಎಂಬದು.

11 But Jesus stood before the governor. And the governor questioned him, saying, Art *thou* the King of the Jews? And Jesus said to him, Thou sayest.ಯೇಸು ಅಧಿಪತಿಯ ಮುಂದೆ ನಿಂತಿದ್ದನು; ಆಗ ಆ ಅಧಿಪತಿಯು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಯೇಸು ಅವನಿಗೆ--ನೀನೇ ಹೇಳುತ್ತೀ ಅಂದನು.

12 And when he was accused of the chief priests and the elders, he answered nothing.ಆಗ ಪ್ರಧಾನ ಯಾಜಕರೂ ಹಿರಿಯರೂ ಆತನ ಮೇಲೆ ದೂರು ಹೇಳುತ್ತಿರುವಾಗ ಆತನು ಏನು ಉತ್ತರ ಕೊಡಲಿಲ್ಲ.

13 Then says Pilate to him, Hearest thou not how many things they witness against thee?ಆಗ ಪಿಲಾತನು ಆತನಿಗೆ--ನಿನಗೆ ವಿರೋಧವಾಗಿ ಇವರು ಇಷ್ಟು ದೂರು ಹೇಳುವದನ್ನು ನೀನು ಕೇಳುವದಿಲ್ಲವೋ ಅಂದನು.

14 And he answered him not so much as one word, so that the governor wondered exceedingly.ಆತನು ಒಂದು ಮಾತಿಗಾದರೂ ಅವನಿಗೆ ಉತ್ತರಕೊಡದೆ ಇದ್ದದರಿಂದ ಅಧಿಪತಿಯು ಅತ್ಯಾಶ್ಚರ್ಯಪಟ್ಟನು.

15 Now at [the] feast the governor was accustomed to release one prisoner to the crowd, whom they would.ಆ ಹಬ್ಬದಲ್ಲಿ ಜನರು ಇಷ್ಟಪಡುವ ಒಬ್ಬ ಸೆರೆಯವನನ್ನು ಅಧಿಪತಿಯು ಬಿಟ್ಟುಬಿಡುವ ಪದ್ಧತಿ ಯಿತ್ತು.

16 And they had then a notable prisoner, named Barabbas.ಆ ಸಮಯದಲ್ಲಿ ಬರಬ್ಬನೆಂಬ ಪ್ರಸಿದ್ಧನಾದ ಸೆರೆಯವನೊಬ್ಬನು ಅವರಲ್ಲಿ ಇದ್ದನು.

17 They therefore being gathered together, Pilate said to them, Whom will ye that I release to you, Barabbas, or Jesus who is called Christ?ಆದದ ರಿಂದ ಅವರು ಕೂಡಿಬಂದಿದ್ದಾಗ ಪಿಲಾತನು ಅವರಿಗೆ--ನಿಮಗೆ ಯಾರನ್ನು ಬಿಟ್ಟುಕೊಡ ಬೇಕನ್ನುತ್ತೀರಿ? ಬರಬ್ಬನನ್ನೋ? ಇಲ್ಲವೆ ಕ್ರಿಸ್ತನನ್ನಿಸಿಕೊಳ್ಳುವ ಯೇಸು ವನ್ನೋ ಎಂದು ಕೇಳಿದನು.

18 For he knew that they had delivered him up through envy.ಯಾಕಂದರೆ ಆತನನ್ನು ಅವರು ಹೊಟ್ಟೇಕಿಚ್ಚಿನಿಂದ ಹಿಡುಕೊಟ್ಟಿದ್ದಾರೆಂದು ಅವನಿಗೆ ಗೊತ್ತಿತ್ತು.

19 But, as he was sitting on the judgment-seat, his wife sent to him, saying, Have thou nothing to do with that righteous [man]; for I have suffered to-day many things in a dream because of him.ಅವನು ನ್ಯಾಯಾಸನದ ಮೇಲೆ ಕೂತಿದ್ದಾಗ ಅವನ ಹೆಂಡತಿಯು ಅವ ನಿಗೆ--ನೀನು ಆ ನೀತಿವಂತನ ಗೊಡವೆಗೆ ಹೋಗ ಬೇಡ; ಯಾಕಂದರೆ ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ ಎಂದು ಹೇಳಿಕಳುಹಿಸಿದಳು.

20 But the chief priests and the elders persuaded the crowds that they should beg for Barabbas, and destroy Jesus.ಆದರೆ ಪ್ರಧಾನ ಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸು ವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹ ವನ್ನು ಒಡಂಬಡಿಸಿದರು.

21 And the governor answering said to them, Which of the two will ye that I release unto you? And they said, Barabbas.ಅಧಿಪತಿಯು ಪ್ರತ್ಯುತ್ತರ ವಾಗಿ ಅವರಿಗೆ--ಈ ಇಬ್ಬರಲ್ಲಿ ನಿಮಗೆ ಯಾರನ್ನು ಬಿಟ್ಟು ಕೊಡಬೇಕನ್ನುತ್ತೀರಿ ಅನ್ನಲು ಅವರು--ಬರಬ್ಬನನ್ನು ಅಂದರು.

22 Pilate says to them, What then shall I do with Jesus, who is called Christ? They all say, Let him be crucified.ಪಿಲಾತನು ಅವರಿಗೆ--ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಅನ್ನಲು ಅವರೆಲ್ಲರೂ--ಅವನನ್ನು ಶಿಲುಬೆಗೆ ಹಾಕಿಸು ಎಂದು ಅವನಿಗೆ ಹೇಳಿದರು.

23 And the governor said, What evil then has he done? But they cried more than ever, saying, Let him be crucified.ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು.

24 And Pilate, seeing that it availed nothing, but that rather a tumult was arising, having taken water, washed his hands before the crowd, saying, I am guiltless of the blood of this righteous one: see *ye* [to it].ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು.

25 And all the people answering said, His blood [be] on us and on our children.ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.

26 Then he released to them Barabbas; but Jesus, having scourged [him], he delivered up that he might be crucified.ಆಗ ಅವನು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವಂತೆ ಒಪ್ಪಿಸಿದನು.

27 Then the soldiers of the governor, having taken Jesus with [them] to the praetorium, gathered against him the whole band,ತರುವಾಯ ಅಧಿಪತಿಯ ಸೈನಿಕರು ಯೇಸುವನ್ನು ಸಾಮಾನ್ಯವಾದ ಕೋಣೆಯೊಳಕ್ಕೆ ತೆಗೆದುಕೊಂಡು ಹೋಗಿ ಸೈನಿಕರ ಪೂರ್ಣ ತಂಡವನ್ನು ಆತನ ಮುಂದೆ ಕೂಡಿಸಿದರು.

28 and having taken off his garment, put on him a scarlet cloak;ಮತ್ತು ಅವರು ಆತನ ಬಟ್ಟೆಗಳನ್ನು ತೆಗೆದು ರಕ್ತವರ್ಣದ ನಿಲುವಂಗಿಯನ್ನು ಆತನಿಗೆ ತೊಡಿಸಿದರು.

29 and having woven a crown out of thorns, they put it on his head, and a reed in his right hand; and, bowing the knee before him, they mocked him, saying, Hail, King of the Jews!ತರುವಾಯ ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು ಅದನ್ನು ಆತನ ತಲೆಯ ಮೇಲಿಟ್ಟು ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಆತನ ಮುಂದೆ ಮೊಣಕಾಲೂರಿ--ಯೆಹೂದ್ಯರ ಅರಸನೇ, ವಂದನೆ ಎಂದು ಹೇಳಿ ಆತನನ್ನು ಹಾಸ್ಯಮಾಡಿದರು.

30 And having spit upon him, they took the reed and beat [him] on his head.ಅವರು ಆತನ ಮೇಲೆ ಉಗುಳಿ ಆ ಬೆತ್ತವನ್ನು ತಕ್ಕೊಂಡು ಆತನ ತಲೆಯ ಮೇಲೆ ಹೊಡೆದರು.

31 And when they had mocked him, they took the cloak off him, and put his own clothes on him, and led him away to crucify.ಅವರು ಆತನಿಗೆ ಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ಆತ ನಿಂದ ತೆಗೆದು ಆತನ ಸ್ವಂತವಸ್ತ್ರವನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವದಕ್ಕಾಗಿ ತಕ್ಕೊಂಡು ಹೋದರು.

32 And as they went forth they found a man of Cyrene, Simon by name; him they compelled to go [with them] that he might bear his cross.ಅವರು ಹೊರಗೆ ಬರುತ್ತಿರುವಾಗ ಕುರೇನ್ಯನಾದ ಸೀಮೋನನೆಂಬ ಮನುಷ್ಯನನ್ನು ಕಂಡು ಆತನ ಶಿಲುಬೆಯನ್ನು ಹೊರುವಂತೆ ಅವನನ್ನು ಬಲವಂತ ಮಾಡಿದರು.

33 And having come to a place called Golgotha, which means Place of a skull,ಆಮೇಲೆ ಅವರು ಗೊಲ್ಗೊಥಾ ಎಂದು ಕರೆಯಲ್ಪಟ್ಟ ಕಪಾಲವೆಂಬ ಸ್ಥಳಕ್ಕೆ ಬಂದರು.

34 they gave to him to drink vinegar mingled with gall; and having tasted [it], he would not drink.ಆಗ ಅವರು ಆತನಿಗೆ ಕಹಿಬೆರಸಿದ ಹುಳಿರಸವನ್ನು ಕುಡಿಯಕೊಟ್ಟರು; ಮತ್ತು ಆತನು ಅದನ್ನು ರುಚಿ ನೋಡಿ ಕುಡಿಯಲೊಲ್ಲದೆ ಇದ್ದನು.

35 And having crucified him, they parted his clothes amongst [themselves], casting lots.ತರುವಾಯ ಅವರು ಆತನನ್ನು ಶಿಲುಬೆಗೆ ಹಾಕಿದ ಮೇಲೆ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಹಂಚಿಕೊಂಡರು; ಇದು ಪ್ರವಾದಿಯ ಮುಖಾಂತರ ಹೇಳಲ್ಪಟ್ಟದ್ದು ನೆರವೇರುವಂತೆ ಆಯಿತು. ಅದೇನಂದರೆ--ಅವರು ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು; ಮತ್ತು ನನ್ನ ಅಂಗಿಗೋಸ್ಕರ ಚೀಟು ಹಾಕಿ

36 And sitting down, they kept guard over him there.ಮತ್ತು ಅವರು ಕೆಳಗೆ ಕೂತುಕೊಂಡು ಆತನನ್ನು ಕಾಯುತ್ತಿದ್ದರು.

37 And they set up over his head his accusation written: This is Jesus, the King of the Jews.ಇದಲ್ಲದೆ ಆತನ ತಲೆಯ ಮೇಲ್ಭಾಗದಲ್ಲಿ--ಇವನು ಯೆಹೂದ್ಯರ ಅರಸನಾದ ಯೇಸು ಎಂದು ಆತನ ವಿಷಯವಾದ ಅಪರಾಧವನ್ನು ಬರೆಯಿಸಿದರು.

38 Then are crucified with him two robbers, one on the right hand and one on the left.ಅಲ್ಲಿ ಒಬ್ಬನನ್ನು ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯ ಲ್ಲಿಯೂ ಇಬ್ಬರು ಕಳ್ಳರನ್ನು ಆತನೊಂದಿಗೆ ಶಿಲುಬೆಗೆ ಹಾಕಿದರು.

39 But the passers-by reviled him, shaking their headsಅಲ್ಲಿ ಹೋಗುತ್ತಿದ್ದವರು ಆತನನ್ನು ದೂಷಿಸಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ--

40 and saying, Thou that destroyest the temple and buildest it in three days, save thyself. If thou art Son of God, descend from the cross.ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು.

41 [And] in like manner the chief priests also, mocking, with the scribes and elders, said,ಅದೇ ಮೇರೆಗೆ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನಿಗೆ ಹಾಸ್ಯ ಮಾಡಿ--

42 He saved others, himself he cannot save. He is King of Israel: let him descend now from the cross, and we will believe on him.ಇವನು ಬೇರೆಯವರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.ಇವನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗಿಳಿದು ಬರಲಿ; ಆಗ ನಾವು ಅವನನ್ನು ನಂಬುವೆವು;

43 He trusted upon God; let him save him now if he will [have] him. For he said, I am Son of God.ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು.

44 And the robbers also who had been crucified with him cast the same reproaches on him.ಆತನ ಜೊತೆಗೆ ಶಿಲುಬೆಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಅದೇ ರೀತಿಯಾಗಿ ಆತನನ್ನು ನಿಂದಿಸಿದರು.

45 Now from [the] sixth hour there was darkness over the whole land until [the] ninth hour;ಆಗ ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು.

46 but about the ninth hour Jesus cried out with a loud voice, saying, Eli, Eli, lama sabachthani? that is, My God, my God, why hast thou forsaken me?ಹೆಚ್ಚು ಕಡಿಮೆ ಒಂಭತ್ತನೆಯ ತಾಸಿನಲ್ಲಿ ಯೇಸು--ಏಲೀ, ಏಲೀ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟಿದ್ದೀ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.

47 And some of those who stood there, when they heard [it], said, This [man] calls for Elias.ಅಲ್ಲಿ ನಿಂತಿ ದ್ದವರಲ್ಲಿ ಕೆಲವರು ಇದನ್ನು ಕೇಳಿದಾಗ--ಇವನು ಎಲೀಯನನ್ನು ಕರೆಯುತ್ತಾನೆ ಅಂದರು.

48 And immediately one of them running and getting a sponge, having filled [it] with vinegar and fixed [it] on a reed, gave him to drink.ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಕ್ಕೊಂಡು ಅದನ್ನು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟನು.

49 But the rest said, Let be; let us see if Elias comes to save him.ಉಳಿದವ ರು--ಇರಲಿ ಬಿಡು, ಎಲೀಯನು ಬಂದು ಇವನನ್ನು ರಕ್ಷಿಸುವನೇನೋ ನಾವು ನೋಡೋಣ ಅಂದರು.

50 And Jesus, having again cried with a loud voice, gave up the ghost.ಯೇಸು ತಿರಿಗಿ ಮಹಾಶಬ್ದದಿಂದ ಕೂಗಿ ಆತ್ಮವನ್ನು ಒಪ್ಪಿಸಿಕೊಟ್ಟನು.

51 And lo, the veil of the temple was rent in two from the top to the bottom, and the earth was shaken, and the rocks were rent,ಆಗ ಇಗೋ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು; ಭೂಮಿಯು ಕಂಪಿಸಿತು; ಮತ್ತು ಬಂಡೆ ಗಳು ಸೀಳಿದವು;

52 and the tombs were opened; and many bodies of the saints fallen asleep arose,ಇದಲ್ಲದೆ ಸಮಾಧಿಗಳು ತೆರೆಯಲ್ಪಟ್ಟವು; ಮತ್ತು ನಿದ್ರೆಹೋದ ಅನೇಕ ಭಕ್ತರ ದೇಹಗಳು ಎದ್ದವು.

53 and going out of the tombs after his arising, entered into the holy city and appeared unto many.ಆತನು ಪುನರುತ್ಥಾ ನವಾದ ಮೇಲೆ ಅವರು ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.

54 But the centurion, and they who were with him on guard over Jesus, seeing the earthquake and the things that took place, feared greatly, saying, Truly this [man] was Son of God.ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು

55 And there were there many women beholding from afar off, who had followed Jesus from Galilee ministering to him,ಯೇಸುವನ್ನು ಗಲಿಲಾಯದಿಂದ ಹಿಂಬಾಲಿಸಿ ಆತನಿಗೆ ಸೇವೆ ಮಾಡಿದ ಅನೇಕ ಸ್ತ್ರೀಯರು ದೂರದಿಂದ ನೋಡುತ್ತಿದ್ದರು.

56 among whom was Mary of Magdala, and Mary the mother of James and Joses, and the mother of the sons of Zebedee.ಅವರಲ್ಲಿ ಮಗ್ದಲದ ಮರಿಯಳು ಯಾಕೋಬ ಮತ್ತು ಯೋಸೇಯ ಇವರ ತಾಯಿಯಾದ ಮರಿಯಳು ಮತ್ತು ಜೆಬೆದಾಯನ ಮಕ್ಕಳ ತಾಯಿಯು ಇದ್ದರು.

57 Now when even was come there came a rich man of Arimathaea, his name Joseph, who also himself was a disciple to Jesus.ಸಾಯಂಕಾಲವಾದಾಗ ಅರಿಮಥಾಯದ ವನಾದ ಯೋಸೇಫನೆಂಬ ಹೆಸರುಳ್ಳ ಐಶ್ವರ್ಯವಂತ ನಾದ ಒಬ್ಬ ಮನುಷ್ಯನು ಅಲ್ಲಿಗೆ ಬಂದನು. ಅವನು ಸಹ ಯೇಸುವಿನ ಶಿಷ್ಯನಾಗಿದ್ದನು.

58 *He*, going to Pilate, begged the body of Jesus. Then Pilate commanded the body to be given up.ಅವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿಕೊಂಡನು. ಆಗ ಪಿಲಾತನು ಆ ದೇಹವನ್ನು (ಅವನಿಗೆ) ಒಪ್ಪಿಸುವದಕ್ಕೆ ಅಪ್ಪಣೆಕೊಟ್ಟನು.

59 And Joseph having got the body, wrapped it in a clean linen cloth,ಯೋಸೇಫನು ಆ ದೇಹವನ್ನು ತಕ್ಕೊಂಡ ಮೇಲೆ ಅದನ್ನು ಶುದ್ಧವಾದ ನಾರುಮಡಿ ಬಟ್ಟೆಯಲ್ಲಿ ಸುತಿ

60 and laid it in his new tomb which he had hewn in the rock; and having rolled a great stone to the door of the tomb, went away.ಬಂಡೆಯಲ್ಲಿ ತಾನು ತೋಡಿದ್ದ ತನ್ನ ಹೊಸ ಸಮಾಧಿಯಲ್ಲಿ ಅದನ್ನು ಇಟ್ಟು ಆ ಸಮಾಧಿಯ ಬಾಗಲಿಗೆ ದೊಡ್ಡದೊಂದು ಕಲ್ಲನ್ನು ಉರುಳಿಸಿ ಹೊರಟುಹೋದನು.

61 But Mary of Magdala was there, and the other Mary, sitting opposite the sepulchre.ಅಲ್ಲಿ ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಆ ಸಮಾಧಿಗೆ ಎದುರಾಗಿ ಕೂತುಕೊಂಡಿದ್ದರು.

62 Now on the morrow, which is after the preparation, the chief priests and the Pharisees came together to Pilate,ಮರುದಿನ ಅಂದರೆ ಸೌರಣೆಯ ದಿನ ಕಳೆದ ಮೇಲೆ ಪ್ರಧಾನಯಾಜಕರು ಮತ್ತು ಫರಿಸಾಯರು ಒಟ್ಟಾಗಿ ಪಿಲಾತನ ಬಳಿಗೆ ಬಂದು--

63 saying, Sir, we have called to mind that that deceiver said when he was still alive, After three days I arise.ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ.

64 Command therefore that the sepulchre be secured until the third day, lest his disciples should come and steal him away, and say to the people, He is risen from the dead; and the last error shall be worse than the first.ಅವನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದುಕೊಂಡು ಹೋಗಿ--ಅವನು ಸತ್ತವರೊ ಳಗಿಂದ ಎದ್ದಿದ್ದಾನೆ ಎಂದು ಜನರಿಗೆ ಹೇಳಿದರೆ ಕೊನೆಯ ತಪ್ಪು ಮೊದಲನೆಯದಕ್ಕಿಂತಲೂ ಕೆಟ್ಟದ್ದಾಗು ವದು. ಆದಕಾರಣ ಮೂರನೆಯ ದಿನದ ವರೆಗೆ ಸಮಾಧಿಯನ್ನು ಭದ್ರಪಡಿಸುವಂತೆ ಅಪ್ಪಣೆ ಕೊಡ ಬೇಕು ಅಂ

65 And Pilate said to them, Ye have a watch: go, secure it as well as ye know how.ಪಿಲಾತನು ಅವರಿಗೆ--ಕಾವಲು ಗಾರರು ನಿಮಗೆ ಇದ್ದಾರಲ್ಲಾ, ನೀವು ಹೋಗಿ ನಿಮಗೆ ಸಾಧ್ಯವಾದ ಮಟ್ಟಿಗೆ ಅದನ್ನು ಭದ್ರಪಡಿಸಿರಿ ಅಂದನು.

66 And they went and secured the sepulchre, having sealed the stone, with the watch [besides].ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ ಕಾವಲನ್ನು ಇಟ್ಟರು.

Kannada Bible