Matthew 4 - ASV (Kannada)
1 Then was Jesus led up of the Spirit into the wilderness to be tempted of the devil.1 ಆಗ ಯೇಸು ಸೈತಾನನಿಂದ ಶೋಧಿಸಲ್ಪಡು ವದಕ್ಕಾಗಿ ಆತ್ಮನಿಂದ ಅಡವಿಗೆ ನಡಿಸಲ್ಪಟ್ಟನು.
2 And when he had fasted forty days and forty nights, he afterward hungered.ಆತನು ನಾಲ್ವತ್ತು ದಿವಸ ಹಗಲಿರುಳು ಉಪವಾಸವಿದ್ದ ತರುವಾಯ ಹಸಿದನು.
3 And the tempter came and said unto him, If thou art the Son of God, command that these stones become bread.ಆಗ ಆ ಶೋಧಕನು ಆತನ ಬಳಿಗೆ ಬಂದು--ನೀನು ದೇವಕುಮಾರನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು.
4 But he answered and said, It is written, Man shall not live by bread alone, but by every word that proceedeth out of the mouth of God.ಆದರೆ ಆತನು ಪ್ರತ್ಯುತ್ತರವಾಗಿ--ಮನುಷ್ಯನು ರೊಟ್ಟಿ ಮಾತ್ರದಿಂದಲೇ ಜೀವಿಸುವದಿಲ್ಲ, ಆದರೆ ದೇವರ ಬಾಯೊಳಗಿಂದ ಹೊರಡುವ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು.
5 Then the devil taketh him into the holy city; and he set him on the pinnacle of the temple,ತರುವಾಯ ಸೈತಾನನು ಆತನನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡುಹೋಗಿ ದೇವಾಲಯದ ಶಿಖರದ ಮೇಲೆ ನಿಲ್ಲಿಸಿ ಆತನಿಗೆ--
6 and saith unto him, If thou art the Son of God, cast thyself down: for it is written, He shall give his angels charge concerning thee: and, On their hands they shall bear thee up, Lest haply thou dash thy foot against a stone.ನೀನು ದೇವ ಕುಮಾರನಾಗಿದ್ದರೆ ನೀನಾಗಿಯೇ ಕೆಳಗೆ ದುಮುಕು; ಯಾಕಂದರೆ--ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸದಂತೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಅಪ್ಪಣೆ ಕೊಡುವನು; ಮತ್ತು ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದ
7 Jesus said unto him, Again it is written, Thou shalt not make trial of the Lord thy God.ಯೇಸು ಅವನಿಗೆ -- ನೀನು ನಿನ್ನ ದೇವರಾದ ಕರ್ತನನ್ನು ಶೋಧಿಸಬಾರದೆಂದು ಬರೆದದೆ ಎಂದು ಹೇಳಿದನು.
8 Again, the devil taketh him unto an exceeding high mountain, and showeth him all the kingdoms of the world, and the glory of them;ಮತ್ತೊಮ್ಮೆ ಸೈತಾನನು ಆತನನ್ನು ಅತ್ಯುನ್ನತವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ--
9 and he said unto him, All these things will I give thee, if thou wilt fall down and worship me.ನೀನು ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಾನು ನಿನಗೆ ಕೊಡುವೆನು ಅಂದನು.
10 Then saith Jesus unto him, Get thee hence, Satan: for it is written, Thou shalt worship the Lord thy God, and him only shalt thou serve.ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
11 Then the devil leaveth him; and behold, angels came and ministered unto him.ಆಗ ಸೈತಾನನು ಆತನನ್ನು ಬಿಟ್ಟನು; ಮತ್ತು ಇಗೋ, ದೇವದೂತರು ಬಂದು ಆತನನ್ನು ಉಪಚರಿಸಿದರು.
12 Now when he heard that John was delivered up, he withdrew into Galilee;ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟಿದ್ದಾನೆಂದು ಯೇಸು ಕೇಳಿ ಗಲಿಲಾಯಕ್ಕೆ ಹೊರಟುಹೋದನು.
13 and leaving Nazareth, he came and dwelt in Capernaum, which is by the sea, in the borders of Zebulun and Naphtali:ಮತ್ತು ಆತನು ನಜರೇತನ್ನು ಬಿಟ್ಟು ಜೆಬುಲೋನ್, ನೆಫ್ತಲೀಮ್ ಮೇರೆಗಳ ಸಮುದ್ರತೀರದಲ್ಲಿರುವ ಕಪೆರ್ನೌಮಿಗೆ ಬಂದು ಅಲ್ಲಿ ವಾಸಿಸಿದನು.
14 that it might be fulfilled which was spoken through Isaiah the prophet, saying,ಹೀಗೆ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಇದಾಯಿತು; ಅದೇನಂದರೆ--
15 The land of Zebulun and the land of Naphtali, Toward the sea, beyond the Jordan, Galilee of the Gentiles,ಯೊರ್ದನಿನ ಆಚೆ ಸಮುದ್ರದ ಮಾರ್ಗದಲ್ಲಿರುವ ಜೆಬುಲೋನ್ ಪ್ರಾಂತ್ಯದಲ್ಲಿಯೂ ನೆಫ್ತಲೀಮ್ ಪ್ರಾಂತ್ಯ ಮತ್ತು ಅನ್ಯಜನರ ಗಲಿಲಾಯದಲ್ಲಿಯೂ
16 The people that sat in darkness Saw a great light, And to them that sat in the region and shadow of death, To them did light spring up.ಕತ್ತಲೆಯಲ್ಲಿ ಕೂತಿದ್ದ ಜನರು ದೊಡ್ಡ ಬೆಳಕನ್ನು ಕಂಡರು; ಮತ್ತು ಮರಣದ ನೆರಳಿನಲ್ಲಿ ಕೂತಿದ್ದ ಆ ಪ್ರಾಂತ್ಯದವರಿಗೆ ಬೆಳಕು ಉದಯವಾಯಿತು ಎಂಬದೇ.
17 From that time began Jesus to preach, and to say, Repent ye; for the kingdom of heaven is at hand.ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.
18 And walking by the sea of Galilee, he saw two brethren, Simon who is called Peter, and Andrew his brother, casting a net into the sea; for they were fishers.ಮತ್ತು ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರು ಸಮುದ್ರ ದಲ್ಲಿ ಬಲೆ ಬೀಸುವದನ್ನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
19 And he saith unto them, Come ye after me, and I will make you fishers of men.ಆಗ ಆತನು ಅವರಿಗೆ-- ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಾನು ನಿಮ್ಮನ್ನು ಮಾಡುವೆನು ಅಂದನು.
20 And they straightway left the nets, and followed him.ಅವರು ತಕ್ಷಣವೇ ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
21 And going on from thence he saw two other brethren, James the `son' of Zebedee, and John his brother, in the boat with Zebedee their father, mending their nets; and he called them.ಆತನು ಅಲ್ಲಿಂದ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬ ಅವನ ಸಹೋದರನಾದ ಯೋಹಾನ ಎಂಬ ಬೇರೆ ಇಬ್ಬರು ಸಹೋದರರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿ ಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡು ಅವರನ್ನು ಕರೆದನು.
22 And they straightway left the boat and their father, and followed him.ಅವರು ತಕ್ಷಣವೇ ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಆತನನ್ನು ಹಿಂಬಾಲಿಸಿದರು.
23 And Jesus went about in all Galilee, teaching in their synagogues, and preaching the gospel of the kingdom, and healing all manner of disease and all manner of sickness among the people.ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.
24 And the report of him went forth into all Syria: and they brought unto him all that were sick, holden with divers diseases and torments, possessed with demons, and epileptic, and palsied; and he healed them.ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.
25 And there followed him great multitudes from Galilee and Decapolis and Jerusalem and Judaea and `from' beyond the Jordan.ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
Kannada Bible