Matthew 4 - WEB (Kannada)
1 Then Jesus was led up by the Spirit into the wilderness to be tempted by the devil.1 ಆಗ ಯೇಸು ಸೈತಾನನಿಂದ ಶೋಧಿಸಲ್ಪಡು ವದಕ್ಕಾಗಿ ಆತ್ಮನಿಂದ ಅಡವಿಗೆ ನಡಿಸಲ್ಪಟ್ಟನು.
2 When he had fasted forty days and forty nights, he was hungry afterward.ಆತನು ನಾಲ್ವತ್ತು ದಿವಸ ಹಗಲಿರುಳು ಉಪವಾಸವಿದ್ದ ತರುವಾಯ ಹಸಿದನು.
3 The tempter came and said to him, "If you are the Son of God, command that these stones become bread."ಆಗ ಆ ಶೋಧಕನು ಆತನ ಬಳಿಗೆ ಬಂದು--ನೀನು ದೇವಕುಮಾರನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು.
4 But he answered, "It is written, 'Man shall not live by bread alone, but by every word that proceeds out of the mouth of God.'"ಆದರೆ ಆತನು ಪ್ರತ್ಯುತ್ತರವಾಗಿ--ಮನುಷ್ಯನು ರೊಟ್ಟಿ ಮಾತ್ರದಿಂದಲೇ ಜೀವಿಸುವದಿಲ್ಲ, ಆದರೆ ದೇವರ ಬಾಯೊಳಗಿಂದ ಹೊರಡುವ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು.
5 Then the devil took him into the holy city. He set him on the pinnacle of the temple,ತರುವಾಯ ಸೈತಾನನು ಆತನನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡುಹೋಗಿ ದೇವಾಲಯದ ಶಿಖರದ ಮೇಲೆ ನಿಲ್ಲಿಸಿ ಆತನಿಗೆ--
6 and said to him, "If you are the Son of God, throw yourself down, for it is written, 'He will give his angels charge concerning you.' and, 'On their hands they will bear you up, So that you don't dash your foot against a stone.'"ನೀನು ದೇವ ಕುಮಾರನಾಗಿದ್ದರೆ ನೀನಾಗಿಯೇ ಕೆಳಗೆ ದುಮುಕು; ಯಾಕಂದರೆ--ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸದಂತೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಅಪ್ಪಣೆ ಕೊಡುವನು; ಮತ್ತು ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದ
7 Jesus said to him, "Again, it is written, 'You shall not test the Lord, your God.'"ಯೇಸು ಅವನಿಗೆ -- ನೀನು ನಿನ್ನ ದೇವರಾದ ಕರ್ತನನ್ನು ಶೋಧಿಸಬಾರದೆಂದು ಬರೆದದೆ ಎಂದು ಹೇಳಿದನು.
8 Again, the devil took him to an exceedingly high mountain, and showed him all the kingdoms of the world, and their glory.ಮತ್ತೊಮ್ಮೆ ಸೈತಾನನು ಆತನನ್ನು ಅತ್ಯುನ್ನತವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ--
9 He said to him, "I will give you all of these things, if you will fall down and worship me."ನೀನು ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಾನು ನಿನಗೆ ಕೊಡುವೆನು ಅಂದನು.
10 Then Jesus said to him, "Get behind me,{TR and NU read "Go away" instead of "Get behind me"} Satan! For it is written, 'You shall worship the Lord your God, and him only shall you serve.'"ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
11 Then the devil left him, and behold, angels came and ministered to him.ಆಗ ಸೈತಾನನು ಆತನನ್ನು ಬಿಟ್ಟನು; ಮತ್ತು ಇಗೋ, ದೇವದೂತರು ಬಂದು ಆತನನ್ನು ಉಪಚರಿಸಿದರು.
12 Now when Jesus heard that John was delivered up, he withdrew into Galilee.ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟಿದ್ದಾನೆಂದು ಯೇಸು ಕೇಳಿ ಗಲಿಲಾಯಕ್ಕೆ ಹೊರಟುಹೋದನು.
13 Leaving Nazareth, he came and lived in Capernaum, which is by the sea, in the region of Zebulun and Naphtali,ಮತ್ತು ಆತನು ನಜರೇತನ್ನು ಬಿಟ್ಟು ಜೆಬುಲೋನ್, ನೆಫ್ತಲೀಮ್ ಮೇರೆಗಳ ಸಮುದ್ರತೀರದಲ್ಲಿರುವ ಕಪೆರ್ನೌಮಿಗೆ ಬಂದು ಅಲ್ಲಿ ವಾಸಿಸಿದನು.
14 that it might be fulfilled which was spoken through Isaiah the prophet, saying,ಹೀಗೆ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಇದಾಯಿತು; ಅದೇನಂದರೆ--
15 "The land of Zebulun and the land of Naphtali, Toward the sea, beyond the Jordan, Galilee of the Gentiles,ಯೊರ್ದನಿನ ಆಚೆ ಸಮುದ್ರದ ಮಾರ್ಗದಲ್ಲಿರುವ ಜೆಬುಲೋನ್ ಪ್ರಾಂತ್ಯದಲ್ಲಿಯೂ ನೆಫ್ತಲೀಮ್ ಪ್ರಾಂತ್ಯ ಮತ್ತು ಅನ್ಯಜನರ ಗಲಿಲಾಯದಲ್ಲಿಯೂ
16 The people who sat in darkness saw a great light, To those who sat in the region and shadow of death, To them light has dawned."ಕತ್ತಲೆಯಲ್ಲಿ ಕೂತಿದ್ದ ಜನರು ದೊಡ್ಡ ಬೆಳಕನ್ನು ಕಂಡರು; ಮತ್ತು ಮರಣದ ನೆರಳಿನಲ್ಲಿ ಕೂತಿದ್ದ ಆ ಪ್ರಾಂತ್ಯದವರಿಗೆ ಬೆಳಕು ಉದಯವಾಯಿತು ಎಂಬದೇ.
17 From that time, Jesus began to preach, and to say, "Repent! For the Kingdom of Heaven is at hand."ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.
18 Walking by the sea of Galilee, he{TR reads "Jesus" instead of "he"} saw two brothers: Simon, who is called Peter, and Andrew, his brother, casting a net into the sea; for they were fishermen.ಮತ್ತು ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರು ಸಮುದ್ರ ದಲ್ಲಿ ಬಲೆ ಬೀಸುವದನ್ನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
19 He said to them, "Come after me, and I will make you fishers for men."ಆಗ ಆತನು ಅವರಿಗೆ-- ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಾನು ನಿಮ್ಮನ್ನು ಮಾಡುವೆನು ಅಂದನು.
20 They immediately left their nets and followed him.ಅವರು ತಕ್ಷಣವೇ ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
21 Going on from there, he saw two other brothers, James the son of Zebedee, and John his brother, in the boat with Zebedee their father, mending their nets. He called them.ಆತನು ಅಲ್ಲಿಂದ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬ ಅವನ ಸಹೋದರನಾದ ಯೋಹಾನ ಎಂಬ ಬೇರೆ ಇಬ್ಬರು ಸಹೋದರರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿ ಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡು ಅವರನ್ನು ಕರೆದನು.
22 They immediately left the boat and their father, and followed him.ಅವರು ತಕ್ಷಣವೇ ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಆತನನ್ನು ಹಿಂಬಾಲಿಸಿದರು.
23 Jesus went about in all Galilee, teaching in their synagogues, preaching the Gospel of the Kingdom, and healing every disease and every sickness among the people.ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.
24 The report about him went out into all Syria. They brought to him all who were sick, afflicted with various diseases and torments, possessed with demons, epileptics, and paralytics; and he healed them.ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.
25 Great multitudes from Galilee, Decapolis, Jerusalem, Judea and from beyond the Jordan followed him.ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
Kannada Bible